Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ರಿಪ್ಪನ್‌ಪೇಟೆ : ಚಲಿಸುತಿದ್ದ ಖಾಸಗಿ ಬಸ್ ನಿಂದ ಮಗುವಿನೊಂದಿಗೆ ಕೆಳಗೆ ಬಿದ್ದ ವ್ಯಕ್ತಿ – ಮೆಗ್ಗಾನ್ ಗೆ ರವಾನೆ|accident

ರಿಪ್ಪನ್‌ಪೇಟೆ : ಚಲಿಸುತಿದ್ದ ಖಾಸಗಿ ಬಸ್ ನಿಂದ ಮಗುವಿನೊಂದಿಗೆ ಕೆಳಗೆ ಬಿದ್ದ ವ್ಯಕ್ತಿ – ಮೆಗ್ಗಾನ್ ಗೆ ರವಾನೆ ರಿಪ್ಪನ್‌ಪೇಟೆ :  ಚಲಿಸುತ್ತಿದ್ದ ಬಸ್‌ನಿಂದ ಮಗುವಿನೊಂದಿಗೆ ಕೆಳಗೆ ಬಿದ್ದ ವ್ಯಕ್ತಿಯೊಬ್ಬ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಕೋಡೂರು ಸಮೀಪದ ಶಾಂತಪುರದಲ್ಲಿ ಈ ಘಟನೆ ನಡೆದಿದೆ. ಬಸ್‌ನಲ್ಲಿ ಅಧಿಕ ಜನರಿದ್ದು ತಿರುವಿನಲ್ಲಿ ಚಾಲಕ ಅತಿವೇಗದಲ್ಲಿ ಬಸ್ ಚಲಾಯಿಸಿದ್ದರಿಂದ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಹೊಸನಗರದಿಂದ ಶಿವಮೊಗ್ಗ ಕಡೆ ಹೊರಟಿದ್ದ ಗುರುಶಕ್ತಿ ಬಸ್‌ ಗೆ ಕೀಳಂಬಿ ನಿಲ್ದಾಣದಲ್ಲಿ ಮಗುವಿನೊಂದಿಗೆ…

Read More

ಅಮ್ಮನಘಟ್ಟ ಜಾತ್ರಾ ಮಹೋತ್ಸವಕ್ಕೆ ನಿರೀಕ್ಷೆಗೂ ಮೀರಿ ಹರಿದು ಬಂದ ಜನಸಾಗರ|ammanaghatta

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪುರಾಣ ಪ್ರಸಿದ್ದ ಏಕಶೀಲೆಯ ಹೆಬ್ಬಂಡೆಯಲ್ಲಿ ವಿರಾಜಮಾನವಾಗಿ ಕಂಗೊಳಿಸುತ್ತಾ ಬೇಡಿ ಬರುವ ಭಕ್ತರ ಇಷ್ಟಾರ್ಥಗಳನ್ನು ಪರಿಹರಿಸುವ ಶ್ರೀ ಜೇನುಕಲ್ಲಮ್ಮ ದೇವಿಯ ದರ್ಶನಕ್ಕೆ ಇಂದು 3ನೇ ಜಾತ್ರೋತ್ಸವದ ಹಿನ್ನೆಲೆಯಲ್ಲಿ ಭಕ್ತರ ದಂಡೇ ಹರಿದು ಬರುತ್ತಿದೆ. ಬೆಳಗ್ಗೆ 06 ಗಂಟೆಯಿಂದಲೇ ದೇವಿ ದರ್ಶನಕ್ಕೆ ಭಕ್ತರು ಆಗಮಿಸುತ್ತಿದ್ದು 08 ಗಂಟೆ ಹೊತ್ತಿಗೆ ಒಂದು ಕಿ.ಮೀ. ಗೂ ಅಧಿಕ ದೂರದಿಂದ ಸರತಿ ಸಾಲಿನಲ್ಲಿ ನಿಂತಿರುವ ದೃಶ್ಯ ಕಂಡುಬಂದಿತು. ಕಿರಿದಾದ ರಸ್ತೆ ಹಾಗೂ ಪಾರ್ಕಿಂಗ್ ವ್ಯವಸ್ಥೆಗೆ ಸ್ಥಳಾವಕಾಶದ ಕೊರತೆ ಇರುವುದರಿಂದ…

Read More

ಸಾಗರದ ಗಣಪತಿ ಕೆರೆ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ|accident

ಸಾಗರದ ಗಣಪತಿ ಕೆರೆ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಶಿವಮೊಗ್ಗ ಜಿಲ್ಲೆ ಸಾಗರ ಪಟ್ಟಣದ ಗಣಪತಿ ಕೆರೆ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿರುವ ಘಟನೆ ನಡೆದಿದೆ.  ನಿನ್ನೆ ರಾತ್ರಿ ಸಾಗರ ಪೇಟೆಯ ಗಣಪತಿ ಕೆರೆಯ ಬಳಿಯಲ್ಲಿ  ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಇಕೋ ಕಾರೊಂದು ಪಲ್ಟಿಯಾದ ಬಗ್ಗೆ ವರದಿಯಾಗಿದೆ. ಗಣಪತಿ ಕೆರೆಯ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದ್ದು, ಅದೃಷ್ಟಕ್ಕೆ ಯಾವುದೇ ಅಪಾಯ ಸಂಭವಿಸಿಲ್ಲ. ಇನ್ನೂ ಕಾರಿನಲ್ಲಿದ್ದವರಿಗೆ ಆದ ಗಾಯಗಳ ಬಗ್ಗೆ…

Read More

ಮೊಬೈಲ್ ವಿಚಾರಕ್ಕೆ ಯುವಕನಿಗೆ ಚೂರಿ ಇರಿತ – ಒಂಬತ್ತು ಮಂದಿ ವಶಕ್ಕೆ|crime-news

ಮೊಬೈಲ್ ವಿಚಾರಕ್ಕೆ ಯುವಕನಿಗೆ ಚೂರಿ ಇರಿತ – ಒಂಬತ್ತು ಮಂದಿ ವಶಕ್ಕೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಹೊಸಮನೆ ಪ್ರದೇಶದಲ್ಲಿ  ನಿನ್ನೆ ಯುವಕನೊಬ್ಬನಿಗೆ ಮಾರಕಾಸ್ತ್ರದಿಂದ ಇರಿಯಲಾಗಿದೆ. ಘಟನೆಯ ಸಂಬಂಧ 9 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಸ್​ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ. ಘಟನೆಯ ಹಿನ್ನಲೆ : ಭದ್ರಾವತಿಯ ಹೊಸಮನೆಯ ಹನುಮಂತನಗರದಲ್ಲಿ ಗಾರೆ ಕೆಲಸ ಮಾಡುವ ಯುವಕ ನಂದಾ ಎಂಬಾತ ತನ್ನ ಮೊಬೈಲ್​ವೊಂದನ್ನ ಅಡವಿಟ್ಟಿದನಂತೆ. ಅದನ್ನು ಬಿಡಿಸಿಕೊಳ್ಳಲು ಹೋಗಿದ್ದ ಸಂದರ್ಭದಲ್ಲಿ ,ಅಡವಿಟ್ಟುಕೊಂಡಿದ್ದವರು ಮೊಬೈಲ್ ಕೊಡಲು ನಿರಾಕರಿಸಿದ್ದಾರೆ. ಈ ಸಂಬಂಧ…

Read More

ನಿಂತಿದ್ದ KSRTC ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿ – ಮೂವರಿಗೆ ಗಾಯ|accident

ನಿಂತಿದ್ದ KSRTC ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿ – ಮೂವರಿಗೆ ಗಾಯ ಶಿವಮೊಗ್ಗ ಜಿಲ್ಲೆ ಸಾಗರ ಪಟ್ಟಣದ ಗಾಂಧಿನಗರ ಸರ್ಕಲ್​ನಲ್ಲಿ ನಿಂತಿದ್ದ KSRTC ಬಸ್​ಗೆ ಬೈಕ್​ ಡಿಕ್ಕಿಯಾಗಿ ಮೂವರು ಗಾಯಗೊಂಡಿರುವ ಘಟನೆ ನಡೆದಿದೆ. ಪಟ್ಟಣದ ಗಾಂಧಿನಗರ ಸರ್ಕಲ್​ ನಲ್ಲಿ ನಿಂತಿದ್ದ ಕೆಎಸ್​ಆರ್​ಟಿಸಿ ಬಸ್​ಗೆ ವೇಗದಿಂದ ಬಂದ ಬೈಕ್​ವೊಂದು ಹಿಂಬದಿಯಿಂದ ಡಿಕ್ಕಿಯಾಗಿ ಮೂವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಹಿಂಬದಿಯಿಂದ ಗುದ್ದಿದ ರಭಸಕ್ಕೆ ಬೈಕ್​ನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಘಟನೆ ಬೆನ್ನಲ್ಲೆ ಪೊಲೀಸರು ಸ್ಥಳಕ್ಕಾಗಮಿಸಿ ಬೈಕ್…

Read More

ಹೆದ್ದಾರಿಯಲ್ಲಿ ಮೂರು ಬೈಕ್ ಗಳ ನಡುವೆ ಡಿಕ್ಕಿ – ಮೂವರಿಗೆ ಗಂಭೀರ ಗಾಯ|accident

ಶಿವಮೊಗ್ಗದ ಆಯನೂರು ಸಮೀಪ ಮೂರು ಬೈಕ್​ಗಳ ನಡುವೆ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಓರ್ವ ಮಹಿಳೆ ಸೇರಿದಂತೆ ಮೂವರಿಗೆ ಗಾಯಗಳಾಗಿವೆ.  ಇವತ್ತು ಬೆಳಗ್ಗೆ ವೀರಣ್ಣನ ಬೆನವಳ್ಳಿ ಸಮೀಪ ಈ ಘಟನೆ ಸಂಭವಿಸಿದೆ. ಆಯನೂರು ಕಡೆಯಿಂದ ಶಿವಮೊಗ್ಗ ಕಡೆ ಬೈಕ್​ವೊಂದು ಬರುತ್ತಿತ್ತು. ಅದೇ ಸಂದರ್ಭದಲ್ಲಿ ಶಿವಮೊಗ್ಗದ ಕಡೆಯಿಂದ ಎರಡು ಬೈಕ್​ಗಳು ಆಯನೂರು ಕಡೆಗೆ ಹೋಗುತ್ತಿತ್ತು. ಈ ಮಧ್ಯೆ ಒಂದು ಬೈಕ್​ ಸವಾರ ಟರ್ನ್​ ತೆಗೆದುಕೊಂಡಿದ್ದಾನೆ ಎನ್ನಲಾಗಿದ್ದು, ಹಿಂದಿನಿಂದ ಬರುತ್ತಿದ್ದ ಬೈಕ್​ ಮುಂದಿನ ಬೈಕ್​ಗೆ ಡಿಕ್ಕಿ ಹೊಡೆದಿದೆ.  ಇದೇ ವೇಳೆ ಆಯನೂರು…

Read More

ರಿಪ್ಪನ್‌ಪೇಟೆ – ಡೆಂಗ್ಯೂ ಜ್ವರಕ್ಕೆ ನವವಿವಾಹಿತೆ ಬಲಿ|dengue

ರಿಪ್ಪನ್‌ಪೇಟೆ : ಡೆಂಗ್ಯೂ ಜ್ವರದಿಂದ ನವ ವಿವಾಹಿತೆಯೊಬ್ಬರು ಮೃತಪಟ್ಟಿರುವ ಘಟನೆ ಶಬರೀಶನಗರದಲ್ಲಿ ನಡೆದಿದೆ. ಮಧುರ (31) ಮೃತಪಟ್ಟ ಮಹಿಳೆ,ಕಳೆದ ಆರು ತಿಂಗಳ ಹಿಂದೆ ಶಬರೀಶನಗರದ ಮಂಜುನಾಥ್ ಎಂಬುವವರೊಂದಿಗೆ ವಿವಾಹವಾಗಿತ್ತು. ಕಳೆದೊಂದು ವಾರದಿಂದ ಡೆಂಗ್ಯೂ ಜ್ವರದ ಹಿನ್ನಲೆಯಲ್ಲಿ ಸಾಗರದ ಉಪವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಇವರು ನಿನ್ನೆ ಬೆಳಿಗ್ಗೆ ಡಿಸ್ಚಾರ್ಜ್ ಆಗಿ ತಾಯಿ ಮನೆಯಾದ ತಾಳಗುಪ್ಪಕ್ಕೆ ತೆರಳಿದ್ದಾರೆ ರಾತ್ರಿ ಸಮಯದಲ್ಲಿ ಮತ್ತೆ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಸಾಗರ ಆಸ್ಪತ್ರೆಗೆ ಕರೆತರಲಾಗಿತ್ತು ಆದರೆ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯುವಂತೆ…

Read More

ತೀರ್ಥಹಳ್ಳಿ ತಾಲ್ಲೂಕಿನ ಅರಳಸುರಳಿಯಲ್ಲಿ ಬೆಂಕಿ ಅವಘಡ – ಮೂವರ ಸಜೀವ ದಹನ,ಓರ್ವ ಗಂಭೀರ|fire accident

ತೀರ್ಥಹಳ್ಳಿ ತಾಲ್ಲೂಕಿನ ಅರಳಸುರಳಿಯಲ್ಲಿ ಬೆಂಕಿ ಅವಘಡ – ಮೂವರ ಸಜೀವ ದಹನ,ಓರ್ವ ಗಂಭೀರ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಅರಳಸುರಳಿ ಸಮೀಪದ ಕೆಕೋಡ್ ಎಂಬಲ್ಲಿ ಒಂದೇ ಕುಟುಂಬದ ಮೂವರು ಸಜೀವ ದಹನವಾದ ಮನಕಲಕುವ ಘಟನೆಯೊಂದು ಇಂದು ಬೆಳ್ಳಂಬೆಳಿಗ್ಗೆ ನಡೆದಿದೆ.ಘಟನೆಯಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆಯ ಒಳಗಿನ ಕೋಣೆಯೊಳಗೆ ಕಟ್ಟಿಗೆಗಳನ್ನು ಹಾಕಿಕೊಂಡು ಬೆಂಕಿ ಹಚ್ಚಿಕೊಂಡಿರುವ ಶಂಕೆ ವ್ಯಕ್ತವಾಗಿದೆ.  ಈ ಬೆಂಕಿ ದುರಂತದಲ್ಲಿ ಕುಟುಂಬದ ಹಿರಿಯರಾದ ಅರ್ಚಕ ವೃತ್ತಿಯಲ್ಲಿದ್ದ ರಾಘವೇಂದ್ರ ಕೆಕೋಡ್ (65), ಪತ್ನಿ ನಾಗರತ್ನಾ (55),…

Read More

ಗಾಂಜಾ ಮಾರಾಟ: ಇಬ್ಬರಿಗೆ ಎರಡು ವರ್ಷ ಕಾರಾಗೃಹ ಶಿಕ್ಷೆ|court news

ಗಾಂಜಾ ಮಾರಾಟ: ಇಬ್ಬರಿಗೆ ಎರಡು ವರ್ಷ ಕಾರಾಗೃಹ ಶಿಕ್ಷೆ ಶಿವಮೊಗ್ಗ : ಗಾಂಜಾ ಮಾರಾಟದಲ್ಲಿ ತೊಡಗಿದ್ದ ಇಬ್ಬರಿಗೆ ಇಲ್ಲಿನ  ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಎರಡು ವರ್ಷ ಕಠಿಣ ಶಿಕ್ಷೆ, ₹10 ಸಾವಿರ ದಂಡ ವಿಧಿಸಿದೆ. ಶಿವಮೊಗ್ಗದ ಬಾಪೂಜಿ ನಗರದ ನಿವಾಸಿ ರಾಹಿಲ್ ಖಾನ್ (22) ಹಾಗೂ ವಿನೋಬ ನಗರದ ನಿವಾಸಿ ರೋಹನ್ (19) ಶಿಕ್ಷೆಗೊಳಗಾದವರು. ಇಬ್ಬರೂ 2020ರ ಸೆಪ್ಟೆಂಬರ್ 5ರಂದು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗುರುಪುರ ಗ್ರಾಮದಲ್ಲಿ ಮಾದಕ ವಸ್ತು ಗಾಂಜಾ…

Read More

ಜಿಲ್ಲಾ ಪತ್ರಕರ್ತರ ಸಂಘದ ಪ್ರಶಸ್ತಿಗೆ ಪ್ರಜಾವಾಣಿ ವರದಿಗಾರ ರವಿ ನಾಗರಕೊಡಿಗೆ ಆಯ್ಕೆ|hosanagara

ಜಿಲ್ಲಾ ಪತ್ರಕರ್ತರ ಸಂಘದ ಪ್ರಶಸ್ತಿಗೆ ಪ್ರಜಾವಾಣಿ ವರದಿಗಾರ ರವಿ ನಾಗರಕೊಡಿಗೆ ಆಯ್ಕೆ ಹೊಸನಗರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಘಟಕ ಕೊಡಮಾಡುವ ವಿಶೇಷ ಪ್ರಶಸ್ತಿಗೆ ಹೊಸನಗರ ತಾಲೂಕಿನ ಪ್ರಜಾವಾಣಿ ವರದಿಗಾರ ರವಿ ನಾಗರಕೊಡಿಗೆ ಭಾಜನರಾಗಿದ್ದಾರೆ. ಚುಟುಕು, ಹನಿಗವನ ರಚನೆ ಮೂಲಕ ವಿದ್ಯಾರ್ಥಿ ದಿಸೆಯಲ್ಲೇ ಸಾಹಿತ್ಯ ಆಸಕ್ತಿ ಹೊಂದಿದ್ದ ನಾರವಿ ಕನ್ನಡ ಜನಾಂತರಂಗದ ಮೂಲಕ ಪತ್ರಿಕಾ ವರದಿಗಾರರಾಗಿ ಕೆಲಸ ಆರಂಭಿಸಿದರು. ಬಳಿಕ ವಿಜಯಕರ್ನಾಟಕ, ವಿಜಯವಾಣಿಯ ಬಳಿಕ ಪ್ರಸ್ತುತ ಪ್ರಜಾವಾಣಿಯ ಹೊಸನಗರ ತಾಲೂಕು ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹೊಸನಗರ…

Read More