Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಪ್ರತಿಭಾ ಕಾರಂಜಿಯಲ್ಲಿ ಮನಸೆಳೆದ ಬೇಡರ ಕಣ್ಣಪ್ಪ ಪಾತ್ರ|nagara news

ಹೊಸನಗರ : ನಗರ ಹೋಬಳಿ ನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪ್ರತಿಭಾ ಕಾರಂಜಿಯಲ್ಲಿ ಬೇಡರ ಕಣ್ಣಪ್ಪ ಪಾತ್ರ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿತ್ತು. ಕಾರ್ಯಕ್ರಮದಲ್ಲಿ ನಗರ ಕ್ಲಸ್ಟರ್ ವಿಭಾಗದ ವಿದ್ಯಾರ್ಥಿಗಳು ಹಲವು ರೀತಿಯಲ್ಲಿ ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಿದರು.ಈ ಸಂಧರ್ಭದಲ್ಲಿ ನಗರ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿ ಅನೀಶ್ವ ಆರ್ ಪ್ರದರ್ಶನ ಮಾಡಿರುವ ಬೇಡರ ಕಣ್ಣಪ್ಪ ಪಾತ್ರ ಕಾರ್ಯಕ್ರಮದ ಮೆರಗು ಹೆಚ್ಚಿಸಿತ್ತು. ಉತ್ತಮ ತರಬೇತಿ ನೀಡಿ ಗ್ರಾಮೀಣ ವಿದ್ಯಾರ್ಥಿಗಳ ಪ್ರತಿಭೆಯನ್ನು ಪ್ರದರ್ಶಿಸಲು ಕಾರಣೀಕರ್ತರಾದ ಶಿಕ್ಷಕರು,ಶಾಲಾಭಿವೃದ್ದಿ ಸಮಿತಿಗೆ…

Read More

ರಿಪ್ಪನ್‌ಪೇಟೆ ಕಟ್ಟಡ ಕಾರ್ಮಿಕ ಸಂಘದಿಂದ ಮೇಲಿನ ಸಂಪಳ್ಳಿಯ ಬಡ ಮಹಿಳೆಗೆ ಆರ್ಥಿಕ ನೆರವು|rpet news

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಡ ಮಹಿಳೆಯ ಕುಟುಂಬಕ್ಕೆ ರಿಪ್ಪನ್‌ಪೇಟೆಯ ಕಟ್ಟಡ ಕಾರ್ಮಿಕ ಸಂಘದವರು ಆರ್ಥಿಕ ನೆರವು ನೀಡಿದ್ದಾರೆ. ಗೃಹಲಕ್ಷ್ಮಿಯರ ರಾಜ್ಯದಲ್ಲೊಬ್ಬಳು ನತದೃಷ್ಟ ಲಕ್ಷ್ಮಿ ಎಂಬ ಅಡಿಬರಹದಲ್ಲಿ ಪೋಸ್ಟ್ ಮ್ಯಾನ್ ನ್ಯೂಸ್ ನಲ್ಲಿ ಇತ್ತೀಚೆಗೆ ವಿಸ್ಕೃತವಾದ ವರದಿ ಮಾಡಲಾಗಿತ್ತಿ ಈ ವರದಿಯನ್ನು ಗಮನಿಸಿದ ರಿಪ್ಪನ್‌ಪೇಟೆಯ ಕಟ್ಟಡ ಕಾರ್ಮಿಕ ಸಂಘದವರು ಮಹಿಳೆಯನ್ನು ಸಂಪರ್ಕಿಸಿ ನೆರವು ನೀಡಿದ್ದಾರೆ. ನಗದು ಪರಿಹಾರವನ್ನು ನೀಡುವುದರ ಜತೆಗೆ ದಿನಸಿ ವಸ್ತುಗಳ ಕಿಟ್ ಸಹ ನೀಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ…

Read More

ಶಿಕ್ಷಕರು ಉತ್ತಮ ಸಮಾಜ ನಿರ್ಮಾಣದ ಆಧಾರ ಸ್ತಂಭಗಳು: ಶಾಸಕ ಗೋಪಾಲಕೃಷ್ಣ ಬೇಳೂರು|gkb

ಹೊಸನಗರ : ಯಾವುದೇ ದೇಶ ಅಭಿವೃದ್ಧಿ ಹೊಂದಬೇಕಾದರೆ ಶಿಕ್ಷಕರ ಪಾತ್ರ ಮಹತ್ತರವಾಗಿದೆ. ಶಿಕ್ಷಕರು ಉತ್ತಮ ಸಮಾಜ ನಿರ್ಮಾಣದ ಆಧಾರ ಸ್ತಂಭಗಳು ಎಂದು ಹೊಸನಗರ-ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಆರ್ಯ ಈಡಿಗರ ಸಭಾ ಭವನದಲ್ಲಿ ಆಯೋಜಿಸಿದ್ದ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆ, ಶಿಕ್ಷಕರ ದಿನಾಚರಣೆ ಮತ್ತು ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮದ ಅಧ್ಯಕ್ಷತೆ ಮತ್ತು ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಹೊಸನಗರ ತಾಲೂಕಿನಲ್ಲಿ 41 ಪ್ರೌಢಶಾಲೆಗಳಲ್ಲಿ 17 ಶಾಲೆ 100% ಫಲಿತಾಂಶ ಜತೆ…

Read More

ಆನಂದಪುರ : ಅಪ್ರಾಪ್ತೆಯ ಮೇಲೆ ದೌರ್ಜನ್ಯ – ಪೋಕ್ಸೋ ಪ್ರಕರಣ ದಾಖಲು|Pocso

ಸಾಗರ : ಅಪ್ರಾಪ್ತೆಯ ಮೇಲೆ ದೌರ್ಜನ್ಯ ಎಸಗಿದ ಆರೋಪದಡಿ ತಾಲೂಕಿನ ಆನಂದಪುರ ಹೋಬಳಿಯ ಗ್ರಾಮವೊಂದರ 24 ವರ್ಷದ ಯುವಕನ ವಿರುದ್ಧ ಆನಂದಪುರ ಠಾಣೆಯಲ್ಲಿ ಮಂಗಳವಾರ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಬುಧವಾರ ತಾಲೂಕು ಕೇಂದ್ರದ ಡಿವೈಎಸ್‌ಪಿ ಕಚೇರಿಯಲ್ಲಿ ಗ್ರಾಮಸ್ಥರು ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿ ಮನವಿ ಸಲ್ಲಿಸಿದರು. ಮಂಗಳವಾರ ಸಂಜೆಯ ವೇಳೆ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಆರೋಪಿ ಯುವಕ ಅಪ್ರಾಪ್ತೆಯ ಮನೆಗೆ ಹೋಗಿ ಕುಡಿಯಲು ನೀರು ಕೇಳಿದ್ದಾನೆ. ಆಕೆ ನೀರು ತರಲು ಅಡುಗೆ ಮನೆಗೆ ಹೋದಾಗ ಆತನೂ ಹಿಂದಿನಿಂದ…

Read More

ಅನಧಿಕೃತ ರೈಲ್ವೆ ಟಿಕೆಟ್ ಬುಕ್ಕಿಂಗ್ – ಮೂವರು ಆರೋಪಿಗಳ ಬಂಧನ|arrested

ಅನಧಿಕೃತ ರೈಲ್ವೆ ಟಿಕೆಟ್ ಬುಕ್ಕಿಂಗ್ – ಮೂವರು ಆರೋಪಿಗಳ ಬಂಧನ|arrested ರೈಲ್ವೆ ಇಲಾಖೆಯ ಅನುಮತಿ ಇಲ್ಲದೆ ಅನಧಿಕೃತವಾಗಿ ಟಿಕೆಟ್ ಬುಕಿಂಗ್ ಮಾಡುತ್ತಿದ್ದ ಮೂವರು ಆರೋಪಿಗಳನ್ನು ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ಬಂಧಿಸಿದೆ. ತಾಳಗುಪ್ಪದ ಶ್ರೀ ರೇಣುಕಾ ಸೈಬರ್ ಸೆಂಟರ್​ನ ಗಣೇಶ್ ರಾಮ್ ನಾಯಕ್ (31), ಸಂವಹನ ಮೊಬೈಲ್ ಶಾಪ್​ನ ರೇವಣ್ಣಪ್ಪ (36) ಹಾಗೂ ಆರ್ಯ ಸೈಬರ್​ನ ಪ್ರಶಾಂತ್ ಹೆಗಡೆ (46) ಬಂಧಿತ ಆರೋಪಿಗಳು. ಮುಂಬರುವ ಹಬ್ಬಗಳ ಸಮಯದಲ್ಲಿ ಪ್ರಯಾಣಿಕರಿಗೆ ಆಗುವ ಅನಾನುಕೂಲತೆಯನ್ನು ಗಮನದಲ್ಲಿಟ್ಟುಕೊಂಡು ಮತ್ತು ಪ್ರಯಾಣಿಕರಿಗೆ ಆಗುವ ಶೋಷಣೆಯನ್ನು…

Read More

ವರುಣನ ಕೃಫೆಗಾಗಿ ಮೂಲೆಗದ್ದೆ ಶ್ರೀಗಳಿಂದ ಮೌನ ಶಿವಜಪಾನುಷ್ಠಾನ ಪೂಜೆ|moolegadde

`ವರುಣನ ಕೃಫೆಗಾಗಿ ಮೂಲೆಗದ್ದೆ ಶ್ರೀಗಳಿಂದ ಮೌನ ಶಿವಜಪಾನುಷ್ಠಾನ ಪೂಜೆ’’ ರಿಪ್ಪನ್‌ಪೇಟೆ;-ಶ್ರಾವಣ ಮಾಸದಲ್ಲಿ ಶಿವಪೂಜೆಯೊಂದಿಗೆ ಶಿವಮಂತ್ರ ಪಠಣ ಮಾಡುವುದರಿಂದ ಪಾಪ ದೂರವಾಗಿ ಪುಣ್ಯಪ್ರಾಪ್ತಿಯಾಗುವುದೆಂದು ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮ ಮಠದ ಮ.ನಿ.ಪ್ರ.ಆಭಿನವ ಚನ್ನಬಸವ ಮಹಾಸ್ವಾಮಿಜಿ ಹೇಳಿದರು. ಅವರು ಸಮೀಪದ ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮ ಮಠದಲ್ಲಿ “ಶ್ರಾವಣ ಮಾಸದ ಅಂಗವಾಗಿ ಅಯೋಜಿಸಲಾದ ಶಿವಪೂಜೆ’’ ಕಾರ್ಯಕ್ರಮದೊಂದಿಗೆ ಮಳೆಯಿಲ್ಲದೇ ರೈತರು ಕಂಗಾಲಾಗಿದ್ದು ವರುಣನ ಕೃಫೆಗಾಗಿ ಶ್ರೀಗಳು ಮೌನಜಪಾನುಷ್ಟಾನ ಶಿವಪೂಜೆಯನ್ನು ನೆರವೇರಿಸಿದರು. ಈ ಪೂಜಾ ಕಾರ್ಯದಲ್ಲಿ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಭಾಗವಹಿಸಿ ದರ್ಶನಾಶೀರ್ವಾದ ಪಡೆದರು.

Read More

ರೈಲ್ವೆ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ಲಕ್ಷಾಂತರ ರೂಪಾಯಿ ವಂಚನೆ-ಹುಬ್ಬಳ್ಳಿಯಲ್ಲಿ ಪ್ರಮುಖ ಆರೋಪಿಯ ಬಂಧನ|arrested

ರೈಲ್ವೆ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ಲಕ್ಷಾಂತರ ರೂಪಾಯಿ ವಂಚನೆ-ಹುಬ್ಬಳ್ಳಿಯಲ್ಲಿ ಪ್ರಮುಖ ಆರೋಪಿಯ ಬಂಧನ ರೈಲ್ವೆ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ಲಕ್ಷಾಂತರ ರೂಪಾಯಿ ವಂಚಿಸಿದ ವ್ಯಕ್ತಿಯನ್ನು ಕಸಬಾಪೇಟ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ವಿಜಯಪುರ ಮೂಲದ ಪ್ರಶಾಂತ್ ದೇಶಪಾಂಡೆ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ.ಇನ್ನೊಬ ಆರೋಪಿಯಾದ ಶ್ವೇತಾ ಇನ್ನೂ ಪತ್ತೆಯಾಗಿಲ್ಲ. ಪ್ರಶಾಂತ್ ದೇಶಪಾಂಡೆ ಹಳೇಹುಬ್ಬಳ್ಳಿ ನೇಕಾರ ನಗರದ ವ್ಯಕ್ತಿಗೆ ರೈಲ್ವೆ ಇಲಾಖೆಯಲ್ಲಿ ಉನ್ನತ ಮಟ್ಟದ ಅಧಿಕಾರಿಗಳು ಪರಿಚಯವಿದ್ದಾರೆ. ಈಗಾಗಲೇ ಅನೇಕ ಜನರಿಗೆ ನೌಕರಿ ಕೊಡಿಸಿರುವುದಾಗಿ ಸುಳ್ಳು ನೇಮಕಾತಿ ಪತ್ರ ಮತ್ತು…

Read More

ಚಾಲಕನ ನಿಯಂತ್ರಣ ತಪ್ಪಿ ಮನೆ ಕಾಪೌಂಡ್ ಗೆ ಗುದ್ದಿದ ಗೂಡ್ಸ್ ಲಾರಿ|accident

ಚಾಲಕನ ನಿಯಂತ್ರಣ ತಪ್ಪಿ ಮನೆ ಕಾಪೌಂಡ್ ಗೆ ಗುದ್ದಿದ ಗೂಡ್ಸ್ ಲಾರಿ ತೀರ್ಥಹಳ್ಳಿ: ವಿ ಆರ್ ಎಲ್ ಗೂಡ್ಸ್ ಲಾರಿಯ ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡಿಗೆ ಗುದ್ದಿ ಮನೆಯ ಮುಂಭಾಗದ ಮಾಡು ಸಂಪೂರ್ಣ ನುಜ್ಜು ಗುಜ್ಜಾಗಿರುವ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ಪಟ್ಟಣದ ಸಮೀಪದ ದೊಡ್ಮನೆ ಕೇರಿಯ ಮೋಹನ್ ಎಂಬುವರ ಮನೆಯ ಕಾಂಪೌಂಡ್ ಗೆ ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಗುದ್ದಿದ ಪರಿಣಾಮ ಮನೆ ಮುಂಭಾಗ ನಿಲ್ಲಿಸಿದ್ದ ಇನೋವಾ ಕಾರಿನ ಹಿಂಭಾಗದ ಗ್ಲಾಸ್ ಒಡೆದು ಹೋಗಿ…

Read More

ರಿಪ್ಪನ್‌ಪೇಟೆ : ಪಾದಾಚಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ – ಓರ್ವ ಸಾವು|accident

ರಿಪ್ಪನ್‌ಪೇಟೆ : ಪಾದಾಚಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ – ಓರ್ವ ಸಾವು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ವಡಗೆರೆ ಗ್ರಾಮದ ರಾಮಕೃಷ್ಣ ಶಾಲೆ ಕ್ರಾಸ್ ಬಳಿಯಲ್ಲಿ ನಡೆದುಕೊಂಡು ಹೋಗುತಿದ್ದ ವ್ಯಕ್ತಿಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ವಡಗೆರೆ ನಿವಾಸಿ ನರಸಿಂಗ್(72) ಮೃತಪಟ್ಟ ದುರ್ಧೈವಿಯಾಗಿದ್ದಾರೆ. 1782023 ರ ರಾತ್ರಿ ರಾಮಕೃಷ್ಣ ಶಾಲೆ ಕ್ರಾಸ್ ಬಳಿಯಲ್ಲಿ ಪಕ್ಕದ ಮನೆಯಲ್ಲಿ ಟಿವಿ‌ ನೋಡಿಕೊಂಡು ಮನೆಗೆ ಹಿದಿರುಗುತಿದ್ದ ನರಸಿಂಗ್ ರವರಿಗೆ ಹಿಂಬದಿಯಿಂದ KA15X2968 ನೇ ನಂಬರಿನ ಬಜಾಜ್ ಸಿಟಿ…

Read More

ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿಷೇಧ ಹಿಂಪಡೆತ; ಸಂಚಾರಕ್ಕೆ ಅನುವು|agumbe

ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ನಿಷೇಧವನ್ನು ಹಿಂಪಡೆದು ಎಲ್ಲಾ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ ಮಲ್ಪೆ ರಸ್ತೆ ಆಗುಂಬೆ ಘಾಟಿಯಲ್ಲಿ 6, 7 ಮತ್ತು 11 ನೇ ತಿರುವಿನಲ್ಲಿ ಭಾರಿ ಮಳೆಯಿಂದಾಗಿ ಮತ್ತು ಭಾರೀ ವಾಹನಗಳ ಓಡಾಟದಿಂದ ಸಣ್ಣ ಬಿರುಕುಗಳು ಹಾಗೂ ಅಲ್ಲಲ್ಲಿ ರಸ್ತೆ ಕುಸಿತ ಕಂಡು ಬಂದ ಹಿನ್ನೆಲೆ ದಿ: 15.09.2023 ರವರೆಗೆ ಅಧಿಸೂಚಿಸಲಾಗಿದ್ದ ಭಾರೀ ವಾಹನ ಸಂಚಾರ ನಿಷೇಧವನ್ನು ಹಿಂಪಡೆದು ಸಂಚಾರಕ್ಕೆ ಅನುವು ಮಾಡಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ…

Read More
Exit mobile version