Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಶಿವಮೊಗ್ಗದ ಇಂಜಿನಿಯರ್ ಪತ್ನಿಯ ಕೊಲೆ!!! – ನಡೆದಿದ್ದೇನು…!!???

ಶಿವಮೊಗ್ಗ ನಗರದ ವಿಜಯನಗರದಲ್ಲಿ ಮಹಿಳೆಯ ಕೊಲೆ ಪ್ರಕರಣ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಘಟನೆಯಲ್ಲಿ ಕಾರು ಚಾಲಕನ ನಡೆ ಬಗ್ಗೆ ತುಂಗಾನಗರ ಪೊಲೀಸರು ಅನುಮಾನ ಮೂಡಿಸಿದೆಯಷ್ಟೆ ಅಲ್ಲದೆ , ಮನೆ ಸಮೀಪ ಕೆಲ ವ್ಯಕ್ತಿಗಳು ಓಡಾಡಿರುವುದರ ಬಗ್ಗೆ ಮಾಹಿತಿ ಲಭ್ಯವಾಗಿದೆ.  ತುಂಗಾನಗರ ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ಬರುವ ವಿಜಯ ನಗರದ 2 ನೇ ತಿರುವಿನಲ್ಲಿರುವ ಮನೆಯಲ್ಲಿ   ಕಮಲಮ್ಮ 54 ವರ್ಷದ ಮಹಿಳೆಯನ್ನು ಕೊಲೆ ಮಾಡಲಾಗಿದೆ. ಬಾಯಿಗೆ ಬಟ್ಟೆ ತುರುಕಿ ಉಸಿರುಗಟ್ಟಿಸಿ ಹತ್ಯೆ ಮಾಡಿರುವ ಬಗ್ಗೆ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ….

Read More

ಕಾಂಗ್ರೆಸ್ ಸರ್ಕಾರ 10 ಕೆ ಜಿ ಅಕ್ಕಿ ವಿತರಣೆ ಮಾಡದಿದ್ದರೆ ಜನ ಒಪ್ಪಲ್ಲ – ಬಿ ಎಸ್ ಯಡಿಯೂರಪ್ಪ

ಶಿವಮೊಗ್ಗ : ಅಕ್ಕಿ ವಿತರಣೆ ರಾಜ್ಯ ಸರ್ಕಾರದ ಜವಾಬ್ದಾರಿ, ಎಲ್ಲಿಯಾದರೂ ಖರೀದಿ ಮಾಡಿ ಕೊಡಲಿ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ. ಅಕ್ಕಿ ವಿತರಣೆ ಗೊಂದಲ ವಿಚಾರವಾಗಿ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ಕಿ ವಿತರಣೆ ವಿಚಾರದಲ್ಲಿ ಕಾಂಗ್ರೆಸ್ ಉದ್ದೇಶಪೂರ್ವಕವಾಗಿ ಗೊಂದಲ ಸೃಷ್ಟಿಸುತ್ತಿದೆ. ಈಗಾಗಲೇ ಕೇಂದ್ರ ಸರ್ಕಾರ 5 ಕೆಜಿ ಅಕ್ಕಿ ಉಚಿತವಾಗಿ ಕೊಡುತ್ತಿದೆ. ಹೆಚ್ಚುವರಿಯಾಗಿ ಅಕ್ಕಿ ಕೊಡಲು ಕೇಂದ್ರ ಒಪ್ಪಿರಲಿಲ್ಲ. ಅದು ರಾಜ್ಯ ಸರ್ಕಾರದ ಜವಾಬ್ದಾರಿ, ಎಲ್ಲಿಯಾದ್ರೂ ಖರೀದಿ ಮಾಡಿ…

Read More

ಆಗುಂಬೆ ಘಾಟ್ ನಲ್ಲಿ ಖಾಸಗಿ ಬಸ್ ಮತ್ತು ಬೈಕ್ ನಡುವೆ‌ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲೇ ಸಾವು|Accident

ಆಗುಂಬೆ ಘಾಟಿಯ 11 ನೇ ತಿರುವಿನಲ್ಲಿ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಆಗುಂಬೆ ಘಾಟ್ ನ 11 ನೇ ತಿರುವಿನ ಸಮೀಪದಲ್ಲಿ ತೀರ್ಥಹಳ್ಳಿ ಕಡೆಯಿಂದ ಹೆಬ್ರಿ ಕಡೆಗೆ ತೆರಳುತಿದ್ದ ಖಾಸಗಿ ಬಸ್ ಹಾಗೂ ಸೋಮೇಶ್ವರದಿಂದ ಆಗುಂಬೆ ಕಡೆಗೆ ಬರುತಿದ್ದ ಕೆಟಿಎಮ್ ಬೈಕ್ಬ್ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ…

Read More

ಈಜಲು ತೆರಳಿದ್ದ ಖಾಸಗಿ ಕಾಲೇಜಿನ ಇಬ್ಬರು ಉಪನ್ಯಾಸಕರು ನೀರುಪಾಲು – ಓರ್ವನ ಶವ ಪತ್ತೆ|tunga

ತೀರ್ಥಹಳ್ಳಿ : ಇಲ್ಲಿನ ತೀರ್ಥಮತ್ತೂರಿನಲ್ಲಿ ಈಜಲು ಇಳಿದ ಇಬ್ಬರು ಪ್ರಾಧ್ಯಾಪಕರು ನೀರು ಪಾಲಾಗಿರುವ ಘಟನೆ ಇಂದು ನಡೆದಿದೆ. ತೀರ್ಥಮತ್ತೂರು ಬಳಿ 8-10 ಜನ ಪ್ರಾಧ್ಯಾಪಕರು ತುಂಗ ನದಿಗೆ ಇಳಿದಾಗ ಓರ್ವ ಪ್ರಾಧ್ಯಾಪಕರು ನೀರು ಪಾಲಾಗಿದ್ದು ಅವರನ್ನು ರಕ್ಷಿಸಲು ಮತ್ತೋರ್ವ ಪ್ರಾಧ್ಯಾಪಕರು ಮುಂದಾಗಿದ್ದು ಅವರೂ ಸಹ ನೀರು ಪಾಲಾಗಿದ್ದಾರೆ. ನಿಟ್ಟೆ ಕಾಲೇಜಿನ ಪ್ರಾಧ್ಯಾಪಕರಾದ ಪುನೀತ್ ಮತ್ತು ಬಾಲಾಜಿ ನೀರುಪಾಲಾದ ದುರ್ಧೈವಿಗಳಾಗಿದ್ದಾರೆ. ದಕ್ಷಿಣ ಕನ್ನಡದ ನಿಟ್ಟೆ ಕಾಲೇಜಿನ 8 ರಿಂದ ಹತ್ತು ಜನ ಪ್ರಾಧ್ಯಾಪಕರು ತೀರ್ಥಮತ್ತೂರಿನ ಯೋಗ ನರಸಿಂಹ ಮಠಕ್ಜೆ…

Read More

ತೀರ್ಥಹಳ್ಳಿ : ಅಶ್ಲೀಲ ವೀಡಿಯೋ ವೈರಲ್ ಪ್ರಕರಣ – ಯುವಕನ ಬಂಧನ|Arrested

ತೀರ್ಥಹಳ್ಳಿ : ಹಲವು ಯುವತಿಯರ ಜೊತೆಗೆ ಸಲುಗೆಯಿಂದ ಇದ್ದು, ವಿಡಿಯೋಗಳನ್ನು ರೆಕಾರ್ಡ್‌ ಮಾಡಿ ವೈರಲ್‌ ಮಾಡಿದ ಆರೋಪ ಸಂಬಂಧ ಯುವಕನ ವಿರುದ್ಧ ಪ್ರಕರಣ ದಾಖಲಾಗುತ್ತಿದೆ. ಈ ಸಂಬಂಧ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ತೀರ್ಥಹಳ್ಳಿಯ ಎಬಿವಿಪಿ ಸಂಘಟನೆಯ ನಾಯಕ ಕೆಲವು ಯುವತಿಯರ ಜೊತೆಗೆ ಸಲುಗೆಯಿಂದ ಇರುವ ವಿಡಿಯೋಗಳು ವೈರಲ್‌ ಆಗಿತ್ತು. ಇದರ ಬೆನ್ನಿಗೆ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಜಿಲ್ಲಾ ರಕ್ಷಣಾಧಿಕಾರಿ ವಾಟ್ಸಪ್‌ ಮೂಲಕ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಸಾಮಾಜಿಕ ಜಾಲತಾಣ…

Read More

ತೀರ್ಥಹಳ್ಳಿ : ವಿದ್ಯಾರ್ಥಿನಿಯ ಬೆತ್ತಲೆ ವಿಡಿಯೋ ಮಾಡಿ ಬ್ಲಾಕ್‌ಮೇಲ್: ABVP ಸಂಘಟನೆಯ ಅಧ್ಯಕ್ಷನ ಬಂಧನಕ್ಕೆ ಆಗ್ರಹ

ಕಾಲೇಜು ವಿದ್ಯಾರ್ಥಿನಿಯೊಬ್ಬರ ಬೆತ್ತಲೆ ವಿಡಿಯೋ ಮಾಡಿ ಹಣಕ್ಕಾಗಿ ಬ್ಲಾಕ್‌ಮೇಲ್‌ ಮಾಡುತ್ತಿದ್ದ ಬಿಜೆಪಿಯ ವಿದ್ಯಾರ್ಥಿ ಸಂಘಟನೆಯಾದ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ)ನ ತೀರ್ಥಹಳ್ಳಿ ತಾಲೂಕು ಅಧ್ಯಕ್ಷನನ್ನು ಬಂಧಿಸಬೇಕೆಂದು ಎನ್‌ಎಸ್‌ಯುಐ ಒತ್ತಾಯಿಸಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕು ಎಬಿವಿಪಿ ಅಧ್ಯಕ್ಷ ಪ್ರತೀಕ್ ಎಂಬಾತ ಯುವತಿಯೊಬ್ಬಳಿಗೆ ವಿಡಿಯೋ ಕಾಲ್‌ ಮಾಡಿ ನಗ್ನಳಾಗುವಂತೆ ಒತ್ತಾಯಿಸಿದ್ದಾರೆ. ಅದನ್ನು ವಿಡಿಯೋ ಮಾಡಿ ಹಣ ನೀಡುವಂತೆ ಬ್ಲಾಕ್‌ ಮಾಡಿದ್ದಾನೆ. ಹಣ ಕೊಡದಿದ್ದಾಗ ವಾಟ್ಸಾಪ್ ಗುಂಪುಗಳಲ್ಲಿ ವಿಡಿಯೋ ಷೇರ್ ಮಾಡಿ ವಿಕೃತಿ ಮೆರೆದಿದ್ದಾನೆ ಎಂದು ಆರೋಪಿಸಲಾಗಿದೆ. ಈ…

Read More

ರಿಪ್ಪನ್‌ಪೇಟೆ ಠಾಣೆಯ ನೂತನ ಪಿಎಸ್‌ಐ ಅಗಿ ಎಸ್ ಪಿ ಪ್ರವೀಣ್ ಅಧಿಕಾರ ಸ್ವಿಕಾರ|PSI-RPET

ರಿಪ್ಪನ್‌ಪೇಟೆ ಠಾಣೆಯ“ನೂತನ ಪಿಎಸ್‌ಐ ಅಗಿ ಎಸ್.ಪಿ.ಪ್ರವೀಣ್ ಅಧಿಕಾರ ಸ್ವಿಕಾರ’’ ರಿಪ್ಪನ್‌ಪೇಟೆ;-ದಾವಣಗೆರೆ ಜಿಲ್ಲೆಯ ನ್ಯಾಮತಿ ಠಾಣೆಯಿಂದ ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿ ಬಂದ ಪಿಎಸ್‌ಐ ಪ್ರವೀಣ್ ಎಸ್ ಇಂದು ಅಧಿಕಾರ ಸ್ವೀಕಾರ ಮಾಡಿದರು. ಠಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿವಾನಂದ ಕೋಳಿ ಹೊಸನಗರ ಠಾಣೆಗೆ ವರ್ಗಾವಣೆಗೊಂಡಿದ್ದು ಆ ಸ್ಥಳಕ್ಕೆ ದಾವಣೆಗೆರೆ ಜಿಲ್ಲೆಯ ನ್ಯಾಮತಿ ಪೊಲೀಸ್‌ ಠಾಣೆಯ ಪಿಎಸ್‌ಐ ಪ್ರವೀಣ್ ಎಸ್ ವರ್ಗಾವಣೆಗೊಂಡಿದ್ದರು. ಆಧಿಕಾರ ಸ್ವೀಕಾರದ ನಂತರ  ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿ ಈ ಹಿಂದಿನ ಪಿಎಸ್‌ಐ ಶಿವಾನಂದಕೋಳಿಯವರು ಟ್ರಾಫಿಕ್ ಕಿರಿಕಿರಿಯನ್ನು ತಡೆಯುವಲ್ಲಿ…

Read More

ಸಾರ್ವಜನಿಕ ಸ್ಥಳದಲ್ಲಿ ಪೊಲೀಸರು ಥಳಿಸಿದ್ದಕ್ಕೆ ಯುವಕನ ಆತ್ಮಹತ್ಯೆ!?ಅಷ್ಟಕ್ಕೂ ನಡೆದಿದ್ದೇನು?? ದೂರಿನಲ್ಲಿ ಏನಿದೆ!?Crime-news

ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವಿಸಿ ಗಲಾಟೆ ಮಾಡುತ್ತಿದ್ದ ಯುವಕನನ್ನ 112 ಪೊಲೀಸರು ಠಾಣೆಗೆ ಕರೆತಂದು ಆತನ ಪೊಷಕರ ಜೊತೆ ಕಳುಹಿಸಿದ್ದ ಪ್ರಕರಣ ಈಗ ತಿರುವು ಪಡೆದುಕೊಂಡಿದ್ದು ಘಟನೆ ನಡೆದು ನಾಲ್ಕು ದಿನಗಳ ಬಳಿಕ ಯುವಕ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಮೃತನ ಪತ್ನಿ ಪೊಲೀಸರ ಟಾರ್ಚರ್ ಗೆ ಸಾವನ್ಬಪ್ಪಿರುವುದಾಗಿ ಆರೋಪಿಸಿ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಭಾನುವಾರ ರಾತ್ರಿ ಹೊಳೆಹೊನ್ನೂರಿನಲ್ಲಿ ಕುಡಿದು ಸಾರ್ವಜನಿಕ ಸ್ಥಳದಲ್ಲಿ ಗಲಾಟೆ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಜುನಾಥ್ ಎಂಬುವರನ್ನ 112 ಗೆ ಬಂದ ಕರೆಯ…

Read More

ಶಿವಮೊಗ್ಗ : ಮದುವೆಯಾಗುವುದಾಗಿ ನಂಬಿಸಿ ಯುವಕನಿಗೆ ಲಕ್ಷಾಂತರ ರೂ ವಂಚಿಸಿದ ನಟಿ – ಬಂಧನ|Arrested

ಶಿವಮೊಗ್ಗ : ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ ಆರೋಪದಲ್ಲಿ ಬೆಂಗಳೂರಿನ ಚಿತ್ರನಟಿ ಉಷಾ.ಆರ್ ಅವರನ್ನು ಬಂಧಿಸಲಾಗಿದೆ. ಶಿವಮೊಗ್ಗದ ಕಿರುತೆರೆ ನಟನಿಗೆ ವಂಚನೆ ಪ್ರಕರಣದಲ್ಲಿ ನಟಿಯನ್ನು ವಿನೋಬ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಟಿ ಉಷಾ ಎಂಬಾಕೆ ವಿರುದ್ಧ ವಾರೆಂಟ್‌ ಜಾರಿಯಾಗಿತ್ತು. ಬೆಂಗಳೂರಿನಲ್ಲಿ ನಟಿ  ಉಷಾಳನ್ನು ಬಂಧಿಸಿದ್ದ ವಿನೋಬನಗರ ಠಾಣೆ ಪೊಲೀಸರು, ಮೆಗ್ಗಾನ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದರು. ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. ನಟಿ ಉಷಾ ವಿರುದ್ಧ ಶಿವಮೊಗ್ಗದ ಶರವಣನ್‌ ಎಂಬಾತ ವಂಚನೆ ದೂರು ನೀಡಿದ್ದರು….

Read More

ಕಾಂಗ್ರೆಸ್ ಸರ್ಕಾರ ಹಿಂದೂ ಹಾಗೂ ಬಡವರ ವಿರೋಧಿ ಸರ್ಕಾರ – ಕೆ ಎಸ್ ಈಶ್ವರಪ್ಪ|KSE

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಒಂದು ತಿಂಗಳ ಒಳಗೆ ಹಿಂದೂ ಧರ್ಮ ವಿರೋಧಿ ಮತ್ತು ಬಡವರ ವಿರೋಧಿ ಸರ್ಕಾರ ಎಂದು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಮಾಜಿ ಸಚಿವ ಈಶ್ವರಪ್ಪ ವಾಗ್ದಾಳಿ ನಡೆಸಿದರು. ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಡವರಿಗೆ ಪ್ರತಿ ತಿಂಗಳಿಗೆ 10 ಕೆ ಜಿ ಅಕ್ಕಿ ಕೊಡುವುದಾಗಿ ಹೇಳಿ ಪ್ರಧಾನಿ ಮೋದಿ ಅಡ್ಡ ಬರ್ತಾ ಇದ್ದಾರೆ ಎಂಬ ಭಾವನೆಯನ್ನ ಕಾಂಗ್ರೆಸ್ ಆರೋಪಿಸುತ್ತಿದೆ. ಕೇಂದ್ರವನ್ನು ಕೇಳಿ ಕಾಂಗ್ರೆಸ್ ಗ್ಯಾರೆಂಟಿ ಘೋಷಣೆ ಮಾಡಿದ್ರಾ.ಎಂದು ಪ್ರಶ್ನಿಸಿದ ಈಶ್ವರಪ್ಪ ಬಡವರಿಗೆ ಮೋಸ ಆಗುತ್ತಿದೆ…

Read More
Exit mobile version