Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಮಧು ಬಂಗಾರಪ್ಪ ನವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಆಗ್ರಹ|congress

ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷರಾದ ಮಧು ಬಂಗಾರಪ್ಪ ರವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿ ಕಂದಾಯ ಇಲಾಖೆಯ ಜವಾಬ್ದಾರಿ ನೀಡುವಂತೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಅಮೀರ್ ಹಂಜಾ ಒತ್ತಾಯಿಸಿದ್ದಾರೆ. ರಿಪ್ಪನ್‌ಪೇಟೆಯಲ್ಲಿ ಪತ್ರೀಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಮಲೆನಾಡು ಭಾಗಗಳ ಜ್ವಲಂತ ಸಮಸ್ಯೆಯಾದ ಭೂ ಹಕ್ಕಿನ ಸಮಸ್ಯೆ ಬಗ್ಗೆ ಬಂಗಾರಪ್ಪ,ಕಾಗೋಡು ತಿಮ್ಮಪ್ಪ ನಂತರದಲ್ಲಿ ಹೆಚ್ಚಿನ ಅರಿವು ಇರುವ ಮಧು ಬಂಗಾರಪ್ಪ ರವರನ್ನು ಉಪಮುಖ್ಯಮಂತ್ರಿ ಮಾಡುವುದರೊಂದಿಗೆ ಕಂದಾಯ ಇಲಾಖೆಯ ಜವಬ್ದಾರಿ ನೀಡಬೇಕು ಎಂದರು. ಮಲೆನಾಡು ಭಾಗದಲ್ಲಿ…

Read More

ಕಾರು ಅಪಘಾತ – ಹೊಸನಗರ ಕಾಂಗ್ರೆಸ್ ಮುಖಂಡ ನಾಗರಾಜ್ ಗೌಡ ಸ್ಥಳದಲ್ಲೇ ಸಾವು|accident

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಮೃತರನ್ನು ಕೋಡೂರು ಸಮೀಪದ ತುರುಕೋಡು ನಾಗರಾಜ್ ಗೌಡ (55) ಎಂದು ಗುರುತಿಸಲಾಗಿದೆ.  ಶಿಕಾರಿಪುರದಿಂದ ವಾಪಾಸ್ ಆಗುವ ವೇಳೆ ಇಂದು ಮಧ್ಯಾಹ್ನ ಗೌತಮಪುರ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಚಾಲಕ ನಾಗರಾಜ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಹೊಸನಗರ ತಾಲೂಕಿನ ಮುಂಬಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಕಾರ್ಯ…

Read More

ನೂತನ ಶಾಸಕ ಬೇಳೂರು ಗೋಪಾಲಕೃಷ್ಣರಿಗೆ ಎದುರಾಗಲಿರುವ ಹತ್ತು ಹಲವು ಸವಾಲುಗಳು – ಸಮುದಾಯ ಆಸ್ಪತ್ರೆ, ಪಟ್ಟಣ ಪಂಚಾಯಿತಿ ಕನಸು ಈಡೇರುವುದೇ???? GKB

ನೂತನ ಶಾಸಕರಿಗೆ ಎದುರಾಗಲಿರುವ ಹತ್ತು ಹಲವು ಸವಾಲುಗಳು ರಿಪ್ಪನ್‌ಪೇಟೆ : ಶರಾವತಿ ಮುಳುಗಡೆ ಸಂತ್ರಸ್ತರ ಮತ್ತು ಶಾಶ್ವತ ಕುಡಿಯುವ ನೀರಿನ ಯೋಜನೆ ಮತ್ತು ರಿಪ್ಪನ್‌ಪೇಟೆ ಹೋಬಳಿ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಪಶು ಅಸ್ಪತ್ರೆಯ ವೈದ್ಯಾಧಿಕಾರಿಗಳ ಸಿಬ್ಬಂದಿಗಳ ಮತ್ತು ಸರ್ಕಾರಿ ಪ್ರಾಥಮಿಕ ಅರೋಗ್ಯ ಕೇಂದ್ರವನ್ನು ಮೇಲ್ದರ್ಜೇಗೇರಿಸುವುದು ಶಾಶ್ವತ ಸುಸಜ್ಜಿತ ಬಸ್ ನಿಲ್ದಾಣ ಗ್ರಾಮ ಪಂಚಾಯ್ತಿಯನ್ನು ಪಟ್ಟಣ ಪಂಚಾಯಿತ್‌ನ್ನಾಗಿ ಮೇಲ್ದರ್ಜೇಗೇರಿಸುವುದು ಸೇರಿದಂತೆ ಇನ್ನೂ ಹತ್ತು ಹಲವು ಜನಪರ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸುವುದು ನೂತನ ಶಾಸಕ ಗೋಪಾಲಕೃಷ್ಣ ಬೇಳೂರರಿಗೆ ಎದುರಾಗಿರುವ ಪ್ರಮುಖ ಸವಾಲುಗಳು….

Read More

ಹೊಸನಗರ : ಬಾಲಕಿಯನ್ನು ಅಡ್ಡಗಟ್ಟಿ ನಂಬರ್ ಕೊಡುವಂತೆ ಕಿರುಕುಳ – ಇಬ್ಬರು ವಶಕ್ಕೆ|Crime News

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪೊಲೀಸ್ ಸ್ಟೇಷನ್​ ಒಂದರಲ್ಲಿ ಅಪ್ತಾಪ್ತೆಯೊಬ್ಬಳನ್ನ ಅಡ್ಡಗಟ್ಟಿ ಫೋನ್ ನಂಬರ್ ಕೇಳಿ ಕಿರುಕುಳ ನೀಡಿದ ಆರೋಪ ಸಂಬಂಧ ಕೇಸ್ ದಾಖಲಾಗಿದ್ದು ಇಬ್ಬರು ಆರೋಪಿಗಳನ್ನ ವಶಕ್ಕೆ ಪಡೆಯಲಾಗಿದೆ.  ಕೇರಳದಲ್ಲಿ  ಓದುತ್ತಿರುವ ಅಪ್ರಾಪ್ತೆಯೊಬ್ಬರು ಹೊಸನಗರ ತಾಲ್ಲೂಕಿನ ಗ್ರಾಮವೊಂದರಲ್ಲಿರುವ ತಮ್ಮ ಅಜ್ಜಿ ಮನೆಗೆ ಬಂದಿದ್ದಾರೆ. ಕಳೆದ ಭಾನುವಾರ ಚರ್ಚ್​ವೊಂದರಲ್ಲಿ ಪ್ರಾರ್ಥನೆ ಮುಗಿಸಿ ವಾಪಸ್ ಆಗುವಾಗ ಇಬ್ಬರು ಆಕೆಯನ್ನು ಎರಡು ಬಾರಿ ಅಡ್ಡಗಟ್ಟಿ ಮೊಬೈಲ್ ನಂಬರ್ ಕೇಳಿದ್ಧಾರೆ.   ಅಲ್ಲದೆ  ಬೈಕ್‌ನಲ್ಲಿ ಬಂದ ಆರೋಪಿಗಳು ಬಾಲಕಿಯನ್ನು  ಹಿಂಬಾಲಿಸಿ ಕಿರುಕುಳ ನೀಡಿದ್ದಾರೆ…

Read More

Crime News | ಸಾಗರದಲ್ಲಿ ಲಕ್ಷಾಂತರ ರೂ ಮೌಲ್ಯದ ಸಿಗರೇಟ್ ಕಳ್ಳತನ..!!!

ಶಿವಮೊಗ್ಗ ಜಿಲ್ಲೆ ಸಾಗರ ಟೌನ್​ನಲ್ಲಿ ಬರೋಬ್ಬರಿ 17 ಲಕ್ಷ ರೂಪಾಯಿಯ ಸಿಗರೇಟ್ ಕಳ್ಳತನವಾಗಿದೆ. ಈ ಸಂಬಂಧ ಸಾಗರ ಟೌನ್​ ಪೊಲೀಸ್ ಸ್ಟೇಷನ್​ನಲ್ಲಿ ದೂರು ಕೂಡ ದಾಖಲಾಗಿದೆ. ಇಲ್ಲಿನ ಸೊರಬ ರಸ್ತೆಯ ಯುನೈಟೆಡ್ ಟ್ರೇಡಿಂಗ್ ಕಂಪೆನಿಯಲ್ಲಿ ಭಾನುವಾರ ರಾತ್ರಿ ₹17 ಲಕ್ಷ ಮೌಲ್ಯದ ಸಿಗರೇಟ್ ಬಂಡಲ್‌ಗಳು ಕಳ್ಳತನವಾಗಿರುವ ಬಗ್ಗೆ ವರದಿಯಾಗಿದೆ.  ಸಾಗರ ತಾಲ್ಲೂಕಿನ ವಿವಿಧ ಅಂಗಡಿಗಳಿಗೆ ಸಿಗರೇಟ್ ಪೂರೈಕೆ ಮಾಡುವ ಕೆಲಸಮಾಡುತ್ತಿರುವ ಈ ಅಂಗಡಿಯಲ್ಲಿ ರೋಲಿಂಗ್​ ಶೆಟ್ಟರ್​ ಒಡೆದು ಕಳ್ಳತನ ಮಾಡಲಾಗಿದೆ.  ಶೆಟರ್ ಮುರಿದು ಒಳಕ್ಕೆ ಬಂದಿರುವ ಕಳ್ಳರು,…

Read More

ಸಿದ್ದರಾಮಯ್ಯರ ಜನಪ್ರಿಯತೆ ಹಾಗೂ ಡಿಕೆಶಿ ರವರ ಪರಿಶ್ರಮದಿಂದ ಕಾಂಗ್ರೆಸ್ ಅಧಿಕಾರಕ್ಕೇರಿದೆ – ಬಂಡಿ ರಾಮಚಂದ್ರ

ಡಿಕೆಶಿ ಜನ್ಮದಿನಾಚರಣೆ ಮತ್ತು ಬೇಳೂರು ಗೆಲುವಿಗೆ ಕಾರ್ಯಕರ್ತರಿಗೆ ಮತದಾರರಿಗೆ ಆಭಿನಂದನೆ’’ ರಿಪ್ಪನ್‌ಪೇಟೆ : ಸಿದ್ದರಾಮಯ್ಯರವರ ಜನಪ್ರಿಯತೆ ಹಾಗೂ ಡಿ ಕೆ ಶಿವಕುಮಾರ್ ರವರ ರವರ ಶ್ರಮದಿಂದ ಪಕ್ಷ ಅಧಿಕಾರಕ್ಕೇರಿದೆ ಎಂದು ಜಿಪಂ ಮಾಜಿ ಸದಸ್ಯ ಬಂಡಿ ರಾಮಚಂದ್ರ ಹೇಳಿದರು. ಅವರು ಇಂದು ಪಟ್ಟಣದ ಕಾಂಗ್ರೆಸ್ ಕಛೇರಿಯಲ್ಲಿ ಆಯೋಜಿಸಿದ್ದ ಕಾರ್ಯಕರ್ತರು ಹಾಗೂ ಮತದಾರರಿಗೆ ಕೃತಜ್ಞತಾ ಸಭೆಯಲ್ಲಿ ಭಾಗವಹಿಸಿ ನಂತರ ಪತ್ರೀಕಾ ಗೋಷ್ಠಿಯಲ್ಲಿ ಮಾತನಾಡಿ ರಾಜ್ಯದಲ್ಲಿ ಕಳೆದ ಹತ್ತು ವರ್ಷಗಳಿಂದ ಅಡಳಿತ ನಡೆಸಿದ ಬಿಜೆಪಿ ಭ್ರಷ್ಟಾಸರ್ಕಾರವನ್ನು ಕಿತ್ತು ಹಾಕುವುದೇ ನಮ್ಮ…

Read More

Ex Mla |ರಿಪ್ಪನ್‌ಪೇಟೆ : ಮಾಜಿ ಶಾಸಕ ಡಾ. ಉಮಾಕಾಂತ್ ಬಿ ಬೋರ್ಕರ್ ನಿಧನ

ರಿಪ್ಪನ್‌ಪೇಟೆ : ಶಿರಸಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಬೋರ್ಕರ್ ಉಮಾಕಾಂತ್(84) ರವರು ಇಂದು ಮುಂಜಾನೆ ವಯೋಸಹಜ ನಿಧನರಾಗಿದ್ದಾರೆ. ಶಿರಸಿ ವಿಧಾನಸಭಾ ಕ್ಷೇತ್ರದಲ್ಲಿ 1978ರಲ್ಲಿ ಜನತಾ ಪಕ್ಷದಿಂದ ಸ್ಪರ್ಧಿಸಿದ್ದ ಬೋರ್ಕರ್ ಉಮಾಕಾಂತ್ ಗೆಲುವು ಸಾಧಿಸಿದ್ದರು. ಹಲವಾರು ವರ್ಷಗಳಿಂದ ಅವರು ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಅರಸಾಳು ಗ್ರಾಮದಲ್ಲಿ ವಾಸಿಸುತಿದ್ದು ಅವರ ಪತ್ನಿ ಮಂಜುಳಾ ಬೋರ್ಕರ್ ಪ್ರಮುಖ ರಾಜಕೀಯ ಪಕ್ಷವಾದ ಕಾಂಗ್ರೆಸ್ ನಲ್ಲಿ ಗುರುತಿಸಿಕೊಂಡಿದ್ದಾರೆ. 1978 ರಲ್ಲಿ ತುರ್ತು ಪರಿಸ್ಥಿತಿಯ ಪ್ರಭಾವದಿಂದ ಬೋರ್ಕರ್ ಉಮಾಕಾಂತ್ ಕಾಂಗ್ರೆಸ್‌ನ ರೇವಣಕರ್‌ ಶಂಕರ್‌ ಪುರುಷೋತ್ತಮ್‌…

Read More

ಆಂಬ್ಯುಲೆನ್ಸ್ ಮತ್ತು ಬೈಕ್‌ ನಡುವೆ ಡಿಕ್ಕಿ – ಯುವಕ ಸ್ಥಳದಲ್ಲಿಯೇ ಸಾವು|accident

ಬೈಕ್ ಮತ್ತು ಆಂಬ್ಯುಲೆನ್ಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದಲ್ಲಿ ನಡೆದಿದೆ. ಸಾವನ್ನಪ್ಪಿದ ಯುವಕನನ್ನು ನ್ಯಾಮತಿ ತಾಲೂಕಿನ ಪುನೀತ್(26) ಅಲಿಯಾಸ್ ಕುಲ್ಡ ಪುನೀತ್ ಎಂಬಾತ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.  ಆಯನೂರಿನ ಚೆನ್ನಳ್ಳಿ ಕ್ರಾಸ್ ಬಳಿ ಸಾಗರದಿಂದ ಬರುತ್ತಿದ್ದ ಸರ್ಕಾರಿ ಅಂಬ್ಯುಲೆನ್ಸ್  ಬೈಕ್ ಗೆ ಡಿಕ್ಕಿ ಹೊಡೆದಿದೆ. ಶಿವಮೊಗ್ಗದಿಂದ ಆಯನೂರು ಮೂಲಕ ಬೆಳಗುತ್ತಿಗೆ ಹೋಗುವಾಗ ಈ ಘಟನೆ ಸಂಭವಿಸಿದೆ. ಪುನೀತ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಪುನೀತ್ ಬೆಳಗುತ್ತಿಯಲ್ಲಿ  ಕೋಳಿ ಮಾಂಸದ ಅಂಗಡಿ ನಡೆಸುತಿದ್ದರು ಎನ್ನಲಾಗುತ್ತಿದೆ….

Read More

ಕೆರೆಹಳ್ಳಿ ಹೋಬಳಿಯ ಎಲ್ಲಾ ಬೂತ್ ಗಳಲ್ಲಿ ಬೇಳೂರಿಗೆಷ್ಟು ಮತ??? ಹರತಾಳಿಗೆಷ್ಟು ಮತ ???? ಇಲ್ಲಿದೆ ನಿಖರ ಮಾಹಿತಿ|Election News

ಕೆರೆಹಳ್ಳಿ ಹೋಬಳಿಯ ಎಲ್ಲಾ ಬೂತ್ ಗಳಲ್ಲಿ ಬೇಳೂರಿಗೆಷ್ಟು ಮತ??? ಹರತಾಳಿಗೆಷ್ಟು ಮತ ???? ಇಲ್ಲಿದೆ ನಿಖರ ಮಾಹಿತಿ ರಿಪ್ಪನ್‌ಪೇಟೆ : ಸಾಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು ಬೇಳೂರು ಗೋಪಾಲಕೃಷ್ಣ 15971 ಮತಗಳ ಅಂತರದಿಂದ ಗೆದ್ದಿದ್ದಾರೆ. ಕೆರೆಹಳ್ಳಿ ಹೋಬಳಿ ವ್ಯಾಪ್ತಿಯ ಎಲ್ಲಾ ಬೂತಗಳಲ್ಲಿ ಕಾಂಗ್ರೆಸ್ ಪಕ್ಷದ ಬೇಳೂರು ಗೋಪಾಲಕೃಷ್ಣ ಮತ್ತು ಬಿಜೆಪಿ ಪಕ್ಷದ ಹರತಾಳು ಹಾಲಪ್ಪ ಈ ಕೆಳಕಂಡಂತೆ ಮತ ಪಡೆದಿದ್ದಾರೆ. ಆಲುವಳ್ಳಿ  ಬೇಳೂರು ಗೋಪಾಲಕೃಷ್ಣ – 368 ಹರತಾಳು ಹಾಲಪ್ಪ – 350 ಮಾದಾಪುರ …

Read More

ರಿಪ್ಪನ್‌ಪೇಟೆಯ ಏಳು ಬೂತ್ ಗಳಲ್ಲಿ ಬೇಳೂರಿಗೆಷ್ಟು ಮತ??? ಹರತಾಳಿಗೆಷ್ಟು ಮತ ???? ಇಲ್ಲಿದೆ ನಿಖರ ಮಾಹಿತಿ|Election Result

ರಿಪ್ಪನ್‌ಪೇಟೆಯ ಏಳು ಬೂತ್ ಗಳಲ್ಲಿ ಬೇಳೂರಿಗೆಷ್ಟು ಮತ??? ಹರತಾಳಿಗೆಷ್ಟು ಮತ ???? ಇಲ್ಲಿದೆ ನಿಖರ ಮಾಹಿತಿ ರಿಪ್ಪನ್‌ಪೇಟೆ : ಸಾಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು ಬೇಳೂರು ಗೋಪಾಲಕೃಷ್ಣ 15971 ಮತಗಳ ಅಂತರದಿಂದ ಗೆದ್ದಿದ್ದಾರೆ. ರಿಪ್ಪನ್‌ಪೇಟೆ ಗ್ರಾಪಂ ವ್ಯಾಪ್ತಿಯ ಏಳು ಬೂತಗಳಲ್ಲಿ ಕಾಂಗ್ರೆಸ್ ಪಕ್ಷದ ಬೇಳೂರು ಗೋಪಾಲಕೃಷ್ಣ ಮತ್ತು ಬಿಜೆಪಿ ಪಕ್ಷದ ಹರತಾಳು ಹಾಲಪ್ಪ ಈ ಕೆಳಕಂಡಂತೆ ಮತ ಪಡೆದಿದ್ದಾರೆ. ಬರುವೆ 1  ಬೇಳೂರು ಗೋಪಾಲಕೃಷ್ಣ – 486 ಹರತಾಳು ಹಾಲಪ್ಪ – 371 ಬರುವೆ…

Read More
Exit mobile version