Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಇಬ್ಬರೂ ಒಟ್ಟಾದ್ರೆ ಏನ್ ಭೂಕಂಪ ಆಗುತ್ತಾ ; ಕಿಮ್ಮನೆ-ಆರ್‌ಎಂಎಂಗೆ ತಿವಿದ ಆರಗ ಜ್ಞಾನೇಂದ್ರ|thirthahalli

ರಿಪ್ಪನ್‌ಪೇಟೆ : ಟಿಕೆಟ್‌ಗಾಗಿ ಅಥವಾ ಮಂತ್ರಿ ಸ್ಥಾನಕ್ಕಾಗಿ ದೆಹಲಿಗೆ ಹೋಗುವವನು ನಾನಲ್ಲ. ಇಂತಹ ಸಂದರ್ಭ ಬರುವುದಿಲ್ಲ. ಸಂದರ್ಭ ಬಂದಲ್ಲಿ ಚುನಾವಣಾ ರಾಜಕೀಯದಿಂದಲೇ ನಿವೃತ್ತಿಯಾಗುತ್ತೇನೆ. ಯಾವುದೇ ಕಾರಣ ಕೊಡದೆ ಇನ್ನೊಬ್ಬರಿಗಾಗಿ ಕೆಲಸ ಮಾಡುತ್ತೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಕೋಡೂರಿನಲ್ಲಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, 10 ಬಾರಿ ಒಂದೇ ಪಕ್ಷ ಒಂದೇ ಚಿಹ್ನೆಯಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ. 4 ಬಾರಿ ಶಾಸಕನಾಗಿದ್ದೇನೆ. ಇದು ನನ್ನ ಕೊನೆಯ ಚುನಾವಣೆ. ನಾನು ತತ್ವಕ್ಕಾಗಿ, ಸಿದ್ದಂತಕ್ಕಾಗಿ ರಾಜಕಾರಣ ಮಾಡುವವನು. ಈ…

Read More

ರಿಪ್ಪನ್‌ಪೇಟೆ : ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಗಂಭೀರ : ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ|accident

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ತಳಲೆ ಗ್ರಾಮದಲ್ಲಿ ನಡೆದಿದ್ದು, ಈ ಘಟನೆಯ ಭಯಾನಕ‌ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.  ತಳಲೆ ಗ್ರಾಮದಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ನಲ್ಲಿ ಓರ್ವ ಮಹಿಳೆ ಸೇರಿದಂತೆ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಕೋಡೂರು ಗ್ರಾಮದ ಚೂಡಾಮಣಿ ಮತ್ತು ಪತ್ನಿ ಮೋಹಿನಿ ಬೈಕ್ ನಲ್ಲಿ ತಳಲೆ ಕಡೆ ಹೋಗುತಿದ್ದಾಗ ಮೂಗೂಡ್ತಿಗೆ ಬರುತಿದ್ದ  ಮುತ್ತಿನಕೊಪ್ಪ ಗ್ರಾಮದ ಕೃಷ್ಣಮೂರ್ತಿ…

Read More

ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷ ತೊರೆಯುವುದಿಲ್ಲ : ಬಾಳೂರು ಗ್ರಾಪಂ ಮಾಜಿ ಆಧ್ಯಕ್ಷ ಹೆಚ್.ಎಸ್.ಕೃಷ್ಣಮೂರ್ತಿ ಗೌಡ

ರಿಪ್ಪನ್‌ಪೇಟೆ;- ಇತ್ತೀಚೆಗೆ ಕಾಂಗ್ರೇಸ್ ಪಕ್ಷದ ಮುಖಂಡರು ನಮ್ಮ ಮನೆಗೆ ಭೇಟಿ ನೀಡಿ ನನ್ನನ್ನು ಕಾಂಗ್ರೇಸ್ ಪಕ್ಷ ಸೇರ್ಪಡೆಯಾಗುವಂತೆ ಒತ್ತಾಯಿಸಿದರು ಅದರೆ ನಾನು ಬಿಜೆಪಿಯ ತತ್ವಸಿದ್ದಾಂತ ಮತ್ತು ಕ್ಷೇತ್ರದ ಶಾಸಕ ಹರತಾಳು ಹಾಲಪ್ಪನವರ ಆಭಿವೃದ್ದಿ ಕಾರ್ಯಗಳನ್ನು ಮೆಚ್ಚಿಕೊಳ್ಳುವುದರೊಂದಿಗೆ ಅವರ ಆಭಿಮಾನಿಯಾಗಿರುವ ನಾನು ಬಿಜೆಪಿ ಪಕ್ಷವನ್ನು ಬಿಟ್ಟು ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆಯಾಗಿಲ್ಲ ಎಂದು ಬಾಳೂರು ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಹೆಚ್.ಎಸ್.ಕೃಷ್ಣಮೂರ್ತಿಗೌಡ್ರು  ಸ್ಪಷ್ಟ ಪಡಿಸಿದ್ದಾರೆ. ಮಾದ್ಯಮದವರೊಂದಿಗೆ ಮಾತನಾಡಿ ಕೆಲವರು ನಾನು ಕಾಂಗ್ರೇಸ್ ಪಕ್ಷ ಸೇರಿದ್ದಾರೆಂದು ಸುಳ್ಳು ಅಪಪ್ರಚಾರ ಮಾಡುತ್ತಿದ್ದಾರೆಂದು ತಿಳಿದು…

Read More

ಸಾಗರ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ತಿ ನಾ ಶ್ರೀನಿವಾಸ್|election

ಸಾಗರ : ಅಧಿಕಾರಿ ನೌಕರ ವರ್ಗ ಪ್ರಜಾಪ್ರಭುತ್ವದ ತಳಹದಿಯಾಗಿರುವ ಪ್ರಜೆಗಳಿಗೆ ಕೈಮುಗಿದು ಕೆಲಸ ಮಾಡಿಕೊಡಬೇಕು. ಅಂತಹ ವಾತಾವರಣ ಸೃಷ್ಟಿ ಮಾಡಬೇಕು ಎನ್ನುವ ಉದ್ದೇಶದಿಂದ ಚುನಾವಣೆ ಸ್ಪರ್ಧೆ ಮಾಡಿದ್ದೇನೆ ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ, ಸಾಗರ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ತೀ.ನ.ಶ್ರೀನಿವಾಸ್ ತಿಳಿಸಿದರು. ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಗುರುವಾರ ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮದ ಜೊತೆ ಮಾತನಾಡಿ, ಸಚ್ಚಾರಿತ್ರ್ಯದ ರಾಜಕಾರಣಕ್ಕೆ ಮುನ್ನುಡಿ ಬರೆಯಲು ನಾನು ಸ್ಪರ್ಧೆ ಮಾಡಿದ್ದೇನೆ. ಸಾಗರ ಕ್ಷೇತ್ರದಲ್ಲಿ…

Read More

ತಂದೆಯ ಸಣ್ಣ ನಿರ್ಲಕ್ಷ್ಯಕ್ಕೆ ಬಲಿಯಾದ ಒಂದೂವರೆ ವರ್ಷದ ಮಗು – ಮಲೆನಾಡಿನಲ್ಲೊಂದು ಹೃದಯವಿದ್ರಾವಕ ಘಟನೆ|accident

ಅಪ್ಪನನ್ನು ಹಿಂಬಾಲಿಸಲು ಹೋಗಿ ಮಗುವೊಂದು ಟ್ರ್ಯಾಕ್ಟರ್‌ಗೆ ಸಿಲುಕಿ ಮೃತಪಟ್ಟಿರುವ ದುರ್ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಹೆದ್ದೂರಿನಲ್ಲಿ ಬುಧವಾರ ನಡೆದಿದೆ. ಹೆದ್ದೂರು ಗ್ರಾಮದ ಆದರ್ಶ್‌ ಎಂಬುವವರ ಒಂದೂವರೆ ವರ್ಷದ ಮಗು ದುರ್ಮರಣ ಹೊಂದಿದೆ. ಆದರ್ಶ್‌ ಅವರು ತಮ್ಮ ಒಂದೂವರೆ ವರ್ಷದ ಮಗುವಿನೊಂದಿಗೆ ಆಟವಾಡುತ್ತಿದ್ದರು. ನಂತರ ಕೆಲಸದ ನಿಮಿತ್ತ ಮಗುವನ್ನು ಮನೆಯೊಳಗೆ ಬಿಟ್ಟಿದ್ದಾರೆ. ಮನೆ ಮುಂದೆ ನಿಲ್ಲಿಸಿದ್ದ ಟ್ರ್ಯಾಕ್ಟರ್ ಅನ್ನು ತೆಗೆಯಲು ಹೋಗಿದ್ದಾರೆ. ಈ ವೇಳೆ ಒಂದೂವರೆ ವರ್ಷದ ಮಗು ಅಪ್ಪನನ್ನೇ ಹಿಂಬಾಲಿಸಿಕೊಂಡು ಬಂದಿದೆ. ಆದರೆ, ಇದ್ಯಾವುದರ ಅರಿವು ಇರದ…

Read More

ಡಿ.ವಿ.ರೇವಣಪ್ಪಗೌಡರಿಗೆ ಹಲವು ಪ್ರಶಸ್ತಿ-ಪುರಸ್ಕಾರಗಳ ಗರಿ – ಚೆನೈನ ಏಷಿಯಾ ವೇದಿಕ್ ಕಲ್ಚರ್ ಯೂನಿವರ್ಸಿಟಿ ವತಿಯಿಂದ ಗೌರವ ಡಾಕ್ಟರೇಟ್ ಪ್ರಧಾನ|doctorate

“ಡಿ.ವಿ.ರೇವಣಪ್ಪಗೌಡರಿಗೆ ಪ್ರಶಸ್ತಿ-ಪುರಸ್ಕಾರಗಳ ಗರಿ – ಚೆನೈನ ಏಷಿಯಾ ವೇದಿಕ್ ಕಲ್ಚರ್ ಯೂನಿವರ್ಸಿಟಿ ವತಿಯಿಂದ ಗೌರವ ಡಾಕ್ಟರೇಟ್ ಪ್ರಧಾನ ರಿಪ್ಪನ್‌ಪೇಟೆ : ಸಾಧನೆಗೆ ವಯಸ್ಸಿನ ಮಿತಿ ಇಲ್ಲ. ಆದರೆ, ಸಾಧನೆಗೆ ಸ್ಪಷ್ಟ ಗುರಿ ಹಾಗೂ ಗುರುವಿನ ಆಶೀರ್ವಾದ ಇದ್ದಲ್ಲಿ ಮಹತ್ತರ ಸಾಧಿಸಲು ಸಾಧ್ಯ ಎಂಬುದು ನಮ್ಮ ಪೂರ್ವಿಕರ ನಾಲ್ನುಡಿ ಆಗಿದೆ. ಇಂತಹ ಸಾಧಕರ ಸಾಲಿನಲ್ಲಿ ಹೊಸನಗರದ ಡಿ.ವಿ.ರೇವಣಪ್ಪಗೌಡ ವಿಶೇಷವಾಗಿ ಕಂಡುಬರುತ್ತಾರೆ. ಧಾರ್ಮಿಕ, ಆಧ್ಯಾತ್ಮಿಕ, ರಾಜಕಾರಣ, ಸಾಮಾಜಿಕ ಕ್ಷೇತ್ರಗಳೇ ಅಲ್ಲದೇ ಕೃಷಿ, ಪತ್ರಿಕೋದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮದೇ ಛಾಪು…

Read More

ಆನಂದಪುರದ ಅಂಗಡಿಗಳಲ್ಲಿ ಸರಣಿ ಕಳ್ಳತನ – ಸಿಸಿಟಿವಿ ಯಲ್ಲಿ ದೃಶ್ಯ ಸೆರೆ| theft

ಸಾಗರ ತಾಲೂಕಿನ ಆನಂದಪುರದ ಕೆಲವು ಅಂಗಡಿಗಳಲ್ಲಿ ಮಂಗಳವಾರ ತಡರಾತ್ರಿ ಸರಣಿ ಕಳ್ಳತನವಾದ ಘಟನೆ ನಡೆದಿದೆ. ಆನಂದಪುರದ ಬಿ ಎಚ್ ರಸ್ತೆಯಲ್ಲಿರುವ ಹೋಲ್ ಸೇಲ್ ಅಂಗಡಿಗಳಾದ ಮಾರುತಿ ಜನರಲ್ ಸ್ಟೋರ್. ಸಾಗರ್ ಜನರಲ್ ಸ್ಟೋರ್. ಲಿಬರಟಿ ಸ್ಟೋರ್ ಹಾಗೂ ಶ್ರೀನಿವಾಸ್ ಜನರಲ್ ಸ್ಟೋರಿನ ಬೀಗಗಳನ್ನ ಮುರಿದು ಕಳ್ಳತನ ನಡೆದಿದೆ. ಮಧ್ಯ ರಾತ್ರಿಯ ಸಮಯದಲ್ಲಿ ಈ ಕಳ್ಳತನ ನಡೆದಿದ್ದು ಅಂಗಡಿಯ ಮುಂಭಾಗದಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮೆರಾ ಗಳನ್ನು ಸಹ ಬೇರೆ ಕಡೆ ತಿರುಗಿಸುವುದರ ಮೂಲಕ ಕಳ್ಳತನ ನಡೆಸಿ ಅಂಗಡಿಯ ಒಳಗೆ…

Read More

ಚುನಾವಣೆ ಹಿನ್ನೆಲೆ – ರಿಪ್ಪನ್‌ಪೇಟೆಯಲ್ಲಿ CRPF ಪಥಸಂಚಲನ

ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಶಾಂತಿಯುತ ಮತದಾನಕ್ಕಾಗಿ ಸೆಂಟ್ರಲ್ ಪ್ಯಾರಾ ಮಿಲಿಟರಿ ಫೋರ್ಸ್(ಸಿಆರ್ ಪಿಎಫ್) ಮತ್ತು ಪೊಲೀಸ್ ಸಿಬ್ಬಂದಿಯಿಂದ ಬುಧವಾರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಥ ಸಂಚಲನ ಸಾರ್ವಜನಿಕರ ಗಮನ ಸೆಳೆಯಿತು. ಪಟ್ಟಣದ ಶಿವಮೊಗ್ಗ ರಸ್ತೆಯಿಂದ ಪ್ರಾರಂಭವಾದ ಪಥಸಂಚಲನದಲ್ಲಿ ಸಿಆರ್ ಪಿ ಎಫ್ ಮತ್ತು ಪೊಲೀಸ್ ಸಿಬ್ಬಂದಿಗಳು ವಿನಾಯಕ ವೃತ್ತ ಮಾರ್ಗವಾಗಿ ಹೊಸನಗರ ರಸ್ತೆ ಮೂಲಕ ತೆರಳಿ ಮದೀನಾ ಕಾಲೋನಿಯಿಂದ ಸಾಗರ ರಸ್ತೆ ಮೂಲಕ ತೀರ್ಥಹಳ್ಳಿ ರಸ್ತೆಯಲ್ಲಿ ಸಾಗಿತು ನಂತರ ಚೌಡೇಶ್ವರಿ ಕಾಲೋನಿಯ ಮೂಲಕ ಶಿವಮೊಗ್ಗ ರಸ್ತೆಯ ಪೊಲೀಸ್…

Read More

ಕಾಗೋಡು ಪುತ್ರಿ ರಾಜನಂದಿನಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆ – ನನ್ನ ಎದೆಗೆ ಚೂರಿ ಹಾಕಿದ ಹಾಗೇ ಆಗುತ್ತಿದೆ – ಕಾಗೋಡು|Kagodu

ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಕಾಗೋಡು ತಿಮ್ಮಪ್ಪರವರ ಪುತ್ರಿ ರಾಜನಂದಿನಿ ಹಾಗೂ ಜಿಪಂ ಮಾಜಿ ಸದಸ್ಯ ಹೊನಗೋಡು ರತ್ನಾಕರ್ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.  ರಾಜನಂದಿನಿ KPCC ಯ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಬಸರಾಜ ಬೊಮ್ಮಾಯಿ ಯವರನ್ನು ಭೇಟಿ ಮಾಡಿ ಸಾಗರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ನವರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಗೊಂಡರು….

Read More

Political News ಕಾಂಗ್ರೇಸ್ ಪಕ್ಷವನ್ನು ಗೆಲ್ಲಿಸಲು ಕಾರ್ಯಕರ್ತರ ಪಡೆ ಸಜ್ಜಾಗಿದೆ – ಕಲಗೋಡು ರತ್ನಾಕರ್

ಕಾಂಗ್ರೇಸ್ ಪಕ್ಷವನ್ನು ಗೆಲ್ಲಿಸಲು ಕಾರ್ಯಕರ್ತರ ಪಡೆ ಸಜ್ಜಾಗಿದೆ – ಕಲಗೋಡು ರತ್ನಾಕರ್ ರಿಪ್ಪನ್‌ಪೇಟೆ : ಮೇ 10 ರಂದು ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಸಾಗರ ಸೊರಬ ಸೇರಿದಂತೆ ಭದ್ರಾವತಿಯಲ್ಲಿ ಕಾಂಗ್ರೇಸ್ ಪಕ್ಷ ಈ ಭಾರಿ ಗೆಲುವು ಸಾಧಿಸಲಿದೆ ಎಂದು ಜಿಲ್ಲಾ ಪಂಚಾಯ್ತಿ ಮಾಜಿ ಆಧ್ಯಕ್ಷ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಲಗೋಡು ರತ್ನಾಕರ್ ಆಭಿಮತ ವ್ಯಕ್ತಪಡಿಸಿದರು. ರಿಪ್ಪನ್‌ಪೇಟೆಯ ಕಾಂಗ್ರೇಸ್ ಕಛೇರಿಯಲ್ಲಿ ಕೆರೆಹಳ್ಳಿ ಕಸಬಾ ಹೋಬಳಿ ವ್ಯಾಪ್ತಿಯ ಕಾಂಗ್ರೇಸ್ ಬೂತ ಸಮಿತಿಯ ಕಾರ್ಯಕರ್ತರ ಸಮಲೋಚನಾ…

Read More
Exit mobile version