Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಶಿಕಾರಿಪುರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ|144 ಸೆಕ್ಷನ್ ಜಾರಿ

ಮೀಸಲಾತಿ ಪ್ರಮಾಣ ಕಡಿಮೆ ಮಾಡಿರುವುದನ್ನು ಖಂಡಿಸಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದಲ್ಲಿ ಬಂಜಾರ ಸೇರಿದಂತೆ ವಿವಿಧ ಸಮುದಾಯದ ವತಿಯಿಂದ ಪ್ರತಿಭಟನೆ ನಡೆಸಿದರು.ಈ ವೇಳೆ ಕಲ್ಲು ತೂರಾಟ ನಡೆಸಿ ಟೈರ್‌ಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಾ.ಅಂಬೇಡ್ಕರ್ ಸರ್ಕಲ್‌ನಿಂದ ತಾಲೂಕು ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಈ ವೇಳೆ ಕೆಲವರು ಮಾಜಿ ಸಿಎಂ ಯಡಿಯೂರಪ್ಪ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು‌. ಶಿಕಾರಿಪುರದ ಮಿನಿ ವಿಧಾನಸೌಧ, ಬಸ್ ನಿಲ್ದಾಣದ ಬಳಿ ಬಂಜಾರ ಸಮುದಾಯದ ಯುವಕರು ಪ್ರತಿಭಟನೆ ನಡೆಸಿದರು….

Read More

ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ಸಾವು – ಪತಿಯ ವಿರುದ್ದ ಪ್ರಕರಣ ದಾಖಲು|death

ಶಿವಮೊಗ್ಗ ಹೊಳೆಹೊನ್ನೂರು  ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ವಿವಾಹಿತೆಯೊಬ್ಬರು ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆಯ ಬಗ್ಗೆ ವರದಿಯಾಗಿದೆ. ಅನಿತಾ ಮೃತ ಯುವತಿ, ಈಕೆ  7 ತಿಂಗಳ ಹಿಂದೆ ಹೆತ್ತವರ ವಿರೋಧದ ನಡುವೆ ಪ್ರೀತಿಸಿ ಮದುವೆಯಾಗಿದ್ದರು. ಭದ್ರಾವತಿ ತಾಲೂಕಿನ  ಸಂತೋಷ್​ ಎಂಬವರ ಜೊತೆಗೆ ಅನಿತಾರ ಯುವತಿಯಾಗಿತ್ತು. ಸಂತೋಷ್ ಹಾಗೂ ಅನಿತಾ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಕಳೆದ ಶುಕ್ರವಾರ ಅನಿತಾಳ ಆರೋಗ್ಯ ಹದಗೆಟ್ಟಿದೆ ಎಂದು ಸಂತೋಷ್​ ಅನಿತಾರ ಹೆತ್ತವರಿಗೆ ವಿಷಯ ತಿಳಿಸಿದ್ದಾರೆ. ಆನಂತರ ಅನಿತಾರ ಪೋಷಕರು ಶಿವು ಎಂಬವರನ್ನ ಸಂತೋಷ್​ರ ಮನೆಗೆ ಕಳುಹಿಸಿ ವಿಚಾರಿಸುವಂತೆ ತಿಳಿಸಿದ್ದಾರೆ….

Read More

ರಿಪ್ಪನ್‌ಪೇಟೆ – 4.86 ಕೋಟಿ ರೂ ವೆಚ್ಚದ ಬಾಲಕರ ವಸತಿ ನಿಲಯ ಲೋಕಾರ್ಪಣೆಗೊಳಿಸಿದ ಶಾಸಕ ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ : ದೇಶದಲ್ಲಿ ವಿದ್ಯಾರ್ಜನೆಗೆ ಪ್ರಸ್ತುತ ಸಂಧರ್ಭದಲ್ಲಿ ವಿಫುಲವಾದ ಅವಕಾಶವಿದ್ದು ಅದನ್ನು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳಬೇಕಾಗಿದೆ,ನಮ್ಮ ದೇಶ ನಾಗಲೋಟದಲ್ಲಿ ಅಭಿವೃದ್ದಿಯತ್ತ ಸಾಗುತ್ತಿದೆ ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ಅವರು ಇಂದು ಪಟ್ಟಣದಲ್ಲಿ 4 ಕೋಟಿ 86 ಲಕ್ಷ ರೂ ವೆಚ್ಚದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ ತಮ್ಮ ಅಧಿಕಾರಾವಧಿಯಲ್ಲಿ ಸಾಗರ ಹೊಸನಗರ ಕ್ಷೇತ್ರದಲ್ಲಿ ಹಿಂದೆಂದೂ ಕಾಣದಷ್ಟು ಅಭಿವೃದ್ಧಿ ಕಾರ್ಯಗಳು…

Read More

ಶಿವಮೊಗ್ಗ – ರೈಲಿನಲ್ಲಿ ಶೌಚಾಲಯಕ್ಕೆ ತೆರಳಿದ್ದ ಬ್ಯಾಂಕ್ ಮ್ಯಾನೇಜರ್ ಸಾವು|Railway

ಶಿವಮೊಗ್ಗ: ಬೆಂಗಳೂರಿನಿಂದ ಹೆಂಡತಿ ಮಕ್ಕಳನ್ನು ಕರೆದುಕೊಂಡು ಬರಲು ಹೋಗಿದ್ದ ಬ್ಯಾಂಕ್ ಮ್ಯಾನೇಜರ್ ರೈಲ್ವೆ ಬೋಗಿಯಲ್ಲಿ ಶೌಚಾಲಯದಲ್ಲಿ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ದುರ್ದೈವಿ ಅಶೋಕ್ ಚೌಧರಿ ಅವರು ಶಿವಮೊಗ್ಗದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಅಸ್ಸೋಂ ಮೂಲದವರಾಗಿದ್ದ ಅಶೋಕ್ ಚೌಧರಿ ಅವರು ಅಸ್ಸೋಂ ನಿಂದ ಬೆಂಗಳೂರಿಗೆ ಬಂದಿದ್ದ ತಮ್ಮ ಹೆಂಡತಿ ಹಾಗೂ ಮಕ್ಕಳನ್ನು ಕರೆ ತರಲು ನಿನ್ನೆ ಬೆಳಗ್ಗೆ ಶಿವಮೊಗ್ಗ-ಯಶವಂತಪುರದ ಇಂಟರಸಿಟಿ ರೈಲಿನ ಎಸಿ ಬೋಗಿಯಲ್ಲಿ ಪ್ರಯಾಣ ಬೆಳೆಸಿದ್ದಾರೆ‌. ರೈಲಿನಲ್ಲಿಯೇ ಶೌಚಾಲಯಕ್ಕೆ…

Read More

ಹೊಂಬುಜ : ಶ್ರವಣಬೆಳಗೊಳದ ಪರಮಪೂಜ್ಯ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರಿಗೆ ಶ್ರದ್ಧಾಂಜಲಿ|hombuja

ಶ್ರವಣಬೆಳಗೊಳದ ಪರಮಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರಿಗೆ  ಶ್ರದ್ಧಾಂಜಲಿಯ ನುಡಿನಮನಗಳು ಆಧುನಿಕ ಬೆಳಗೊಳದ ಶಿಲ್ಪಿ, ಅತಿಶಯ ಶ್ರೀಕ್ಷೇತ್ರ ಶ್ರವಣಬೆಳಗೊಳದ ಪರಮಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು 54 ವರ್ಷ ಜನಸಮುದಾಯ ಹಾಗೂ ಶ್ರೀಮಠವನ್ನು ಮುನ್ನಡೆಸಿದ ಪ್ರಾತಃ ಸ್ಮರಣೀಯರು ಹಾಗೂ ಮಾರ್ಗದರ್ಶಕರೂ ಆಗಿದ್ದ ಅವರ ನೇತೃತ್ವವನ್ನು ಕಳೆದುಕೊಂಡ ನಮ್ಮ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ.  ಪೂಜ್ಯರು ತಮ್ಮ ಬಾಲ್ಯ ಜೀವನದ ವಿದ್ಯಾಭ್ಯಾಸವನ್ನು ಶ್ರೀಕ್ಷೇತ್ರ ಹೊಂಬುಜದ ಶ್ರೀಮಠದ ಗುರುಕುಲದಲ್ಲಿ ಮಾಡಿದ್ದರು ಎಂಬುದು ನಮ್ಮೆಲ್ಲರ ಹೆಮ್ಮೆಯ ಸಂಗತಿಯಾಗಿದೆ….

Read More

ಸೇನಾ ಹೆಲಿಕಾಪ್ಟರ್ ನಲ್ಲಿ ಶಿವಮೊಗ್ಗಕ್ಕೆ ಆಗಮಿಸಿ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಿದ ಪ್ರಧಾನಿ‌ ಮೋದಿ|modi

ಜನಸಂಕಲ್ಪ ಮಹಾಸಂಗಮ ಸಮಾವೇಶಕ್ಕೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಸೇನಾ ಹೆಲಿಕಾಪ್ಟರ್ ಮೂಲಕ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಅಲ್ಲಿಂದ ವಿಶೇಷ ವಿಮಾನದಲ್ಲಿ ನವದೆಹಲಿಗೆ ಪ್ರಯಾಣ ಬೆಳೆಸಿದರು. ಪ್ರಧಾನಿ ನರೇಂದ್ರ ಮೋದಿ, ಅವರ ಸಿಬ್ಬಂದಿಗಳು ಹಾಗೂ ಭದ್ರತಾ ಸಿಬ್ಬಂದಿಗಳು ಮೂರು ಸೇನಾ ಹೆಲಿಕಾಪ್ಟರ್’ನಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಸಂಸದ ಬಿ.ವೈ. ರಾಘವೇಂದ್ರ, ಗೃಹ ಸಚಿವ ಆರಗ ಜ್ಞಾನೇಂದ್ರ, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ಶಾಸಕರಾದ ಹಲತಾಳು ಹಾಲಪ್ಪ, ಎಂಎಲ್’ಸಿಗಳಾದ ಡಿ.ಎಸ್. ಅರುಣ್,…

Read More

ಕಳಪೆ ಕಾಮಗಾರಿಗೆ ಆರಗ ಜ್ಞಾನೇಂದ್ರ ಉಗ್ರಾವತಾರ – ಬೆಚ್ಚಿ ಬಿದ್ದ ಅಧಿಕಾರಿಗಳು|ಪರ್ಸೆಂಟೇಜ್ ತಿಂದು ನಮಗೆ ಕೆಟ್ಟ ಹೆಸರು ತರ್ತೀರಾ!!|araga

ತೀರ್ಥಹಳ್ಳಿ : ಶಾಸಕರು, ಸಚಿವರು ಸರ್ಕಾರದ ಮಟ್ಟದಲ್ಲಿ ವಿವಿಧ ಕಾಮಗಾರಿಗಳನ್ನು ಮಾಡಲು ಹಣ ಮಂಜುರಾತಿ ಮಾಡಿಸಿಕೊಂಡು ಬರುತ್ತಾರೆ. ಆದರೆ, ಆ ಅನುದಾನದಲ್ಲಿ ಸಮರ್ಪಕವಾಗಿ ಕೆಲಸ ಮಾಡದಿದ್ದರೇ ಯಾರಿಗಾದರೂ ಸಿಟ್ಟು ಬಂದೆ ಬರುತ್ತದೆ.ತೀರ್ಥಹಳ್ಳಿ ಆರಗ ಜ್ಞಾನೇಂದ್ರರವರು ಸಹ ಇದೇ ಕಾರಣಕ್ಕೆ ಸಿಟ್ಟುಮಾಡಿಕೊಂಡ ಘಟನೆ ನಡೆದಿದೆ. ತೀರ್ಥಹಳ್ಳಿಯ ಬಾಳೆ ಕೂಡ್ಲು, ಗುಡ್ಡೆಪಾಲ್ ರಸ್ತೆ ಕಳಪೆಯಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದರು,ಅಲ್ಲದೆ ಇದೇ ವಿಚಾರವನ್ನು ಸಚಿವ ಆರಗ ಜ್ಞಾನೇಂದ್ರರವರ ಗಮನಕ್ಕೆ ತಂದಿದ್ದರು. ಹೀಗಾಗಿ ಗುಣಮಟ್ಟವನ್ನ ಖುದ್ದು ವೀಕ್ಷಿಸುವ ಸಲುವಾಗಿ ಸಚಿವರು ಸ್ಥಳಕ್ಕೆ ದೌಡಾಯಿಸಿದ್ಧಾರೆ. …

Read More

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಅಮಾನತ್ತಿನಲ್ಲಿದ್ದ ಪೊಲೀಸ್ ಕಾನ್ಸ್ ಟೇಬಲ್ ಹತ್ಯೆ – ರಕ್ತದ ಮಡುವಿನಲ್ಲಿ ಮೃತದೇಹ ಪತ್ತೆ|murder

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಪಟ್ಟಣದ ಸಮೀಪವಿರುವ ಮಾರ್ಕೆಟ್ ಬಳಿಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ. ನಿನ್ನೆ ರಾತ್ರಿ ಈ ಘಟನೆ ನಡೆದಿರುವ ಸಾಧ್ಯತೆ ಇದ್ದು, ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು ತೀರ್ಥಹಳ್ಳಿ ಪೊಲೀಸ್ ಸ್ಟೇಷನ್ನಲ್ಲಿ ಪೇದೆಯಾಗಿ ಕೆಲಸ ನಿರ್ವಹಿಸಿದ್ದ ಪೂರ್ಣೇಶ್​ ಎಂದು ಗುರುತಿಸಲಾಗಿದೆ.   ಮದ್ಯವ್ಯಸನಿಯಾಗಿದ್ದ ಪೂರ್ಣೇಶ್​, ಇದೇ ಕಾರಣಕ್ಕೆ ಪೊಲೀಸ್ ಕೆಲಸದಿಂದ ವಜಾಗೊಂಡಿದ್ದ ಎನ್ನಲಾಗಿದೆ.  ತೀರ್ಥಹಳ್ಳಿಯ ಮೀನು ಮಾರುಕಟ್ಟೆಯಲ್ಲಿ ಘಟನೆ ಸಂಭವಿಸಿದೆ. ಮೃತನನ್ನು ಪೂರ್ಣೇಶ್ ಎಂದು ಗುರುತಿಸಲಾಗಿದೆ….

Read More

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ – ಜಿಲ್ಲೆಯ 3 ಕ್ಷೇತ್ರಕ್ಕೆ ಅಭ್ಯರ್ಥಿ ಪ್ರಕಟ | ಬೇಳೂರು ಸ್ಪರ್ಧೆಗೆ ಗ್ರೀನ್ ಸಿಗ್ನಲ್

 ವಿಧಾನ ಸಭೆ ಚುನಾವಣೆಗೆ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಮೊದಲ ಹಂತದಲ್ಲಿ 124  ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಲಾಗಿದೆ. ಈ ಪೈಕಿ ಶಿವಮೊಗ್ಗ ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಗಿದೆ. ನಿರೀಕ್ಷೆಯಂತೆ ಸೊರಬ ವಿಧಾನಸಭೆ ಕ್ಷೇತ್ರದಿಂದ ಮಧು ಬಂಗಾರಪ್ಪ, ಭದ್ರಾವತಿಯಿಂದ ಬಿ.ಕೆ.ಸಂಗಮೇಶ್ವರ, ಸಾಗರದಿಂದ ಬೇಳೂರು ಗೋಪಾಲಕೃಷ್ಣ ಅವರ ಹೆಸರನ್ನು ಪ್ರಕಟಿಸಲಾಗಿದೆ. ಮೂರು ಕ್ಷೇತ್ರದ ಅಭ್ಯರ್ಥಿಗಳನ್ನು ಪ್ರಕಟಿಸಿರುವುದು ಪಕ್ಷದ ಕಾರ್ಯಕರ್ತರ ಹುಮ್ಮಸ್ಸು ಹೆಚ್ಚಿಸಿದೆ. ಸಾಗರ ಕ್ಷೇತ್ರದಲ್ಲಿ ಬೇಳೂರು ಗೋಪಾಲಕೃಷ್ಣ ರವರಿಗೆ ಟಿಕೆಟ್ ನೀಡಿರುವುದು ಕಾರ್ಯಕರ್ತರಲ್ಲಿ ಹುಮ್ಮಸ್ಸು…

Read More

ರಿಪ್ಪನ್‌ಪೇಟೆ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಕೊಟ್ಟಿಗೆ ಸುಟ್ಟು ಭಸ್ಮ – ಅಪಾರ ಹಾನಿ|fire

ಹೊಸನಗರ ತಾಲೂಕಿನ ಬಾಳೂರು ಗ್ರಾಪಂ ವ್ಯಾಪ್ತಿಯ ಮಾದಾರದಿಂಬದಲ್ಲಿ ಗುರುವಾರ ಮಧ್ಯರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿ ಕೊಟ್ಟಿಗೆ ಮನೆಯೊಂದು ಸಂಪೂರ್ಣ ಭಸ್ಮಗೊಂಡು ಅದರಲ್ಲಿದ್ದ ಮರ-ಮುಟ್ಟು ಕೃಷಿ ಉಪಕರಣ ಸೇರಿದಂತೆ ಸಾವಿರಾರು ರೂ ನಷ್ಟ ಉಂಟಾಗಿದೆ. ಮಾದಾರದಿಂಬ ಗ್ರಾಮದ ಕೃಷಿಕ ಷಣ್ಮುಖಪ್ಪ ಗೌಡರ ಕೊಟ್ಟಿಗೆ ಮನೆಯಲ್ಲಿ ಮದ್ಯರಾತ್ರಿ ಬೆಂಕಿ ಕಾಣಿಸಿ ಕೊಂಡಿದೆ. ಬಳಿಕ ಕೆಲವೇ ಕ್ಷಣಗಳಲ್ಲಿ ಬೆಂಕಿ ಕೆನ್ನಾಲಿಗೆ ಕೊಟ್ಟಿಗೆ ತುಂಬಾ ಆವರಿಸಿದೆ.ತಕ್ಷಣ ಕೊಟ್ಟಿಗೆಯಲ್ಲಿದ್ದ ದನಗಳನ್ನು ಹೊರತರಲಾಯಿತು ಆದರೂ ಕೆಲವು ದನಗಳಿಗೆ ಸುಟ್ಟ ಗಾಯಗಳಾಗಿವೆ….

Read More
Exit mobile version