Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಶುದ್ದ ರಾಜಕಾರಣದ ಮಾತನಾಡುವ ತೀರ್ಥಹಳ್ಳಿಯ ಇಬ್ಬರು ಅಭ್ಯರ್ಥಿಗಳು ಚುನಾವಣೆ ಹಿಂದಿನ ದಿನ ಮತದಾರನ ಮನೆ ಬಾಗಿಲು ಬಡಿಯುವುದು ಯಾಕೆ – ಯಡೂರು ರಾಜಾರಾಂ|JDS

ಶುದ್ದ ರಾಜಕಾರಣದ ಮಾತನಾಡುವ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಇಬ್ಬರು ಅಭ್ಯರ್ಥಿಗಳು ಚುನಾವಣೆ ಹಿಂದಿನ ದಿನ ತಮ್ಮ ಕಾರ್ಯಕರ್ತರ ಮೂಲಕ ಮತದಾರನ ಮನೆ ಬಾಗಿಲು ತಟ್ಟುವುದು ಯಾಕೆ ಎಂದು  ಜೆಡಿಎಸ್ ಪಕ್ಷದ ಅಭ್ಯರ್ಥಿ ಯಡೂರು ರಾಜಾರಾಂ ಪ್ರಶ್ನೆ ಮಾಡಿದರು. ಹುಂಚಾ ಹೋಬಳಿ ವ್ಯಾಪ್ತಿಯ ಹುಂಚ, ಹೆದ್ದಾರಿಪುರ, ಕೋಡೂರು, ಅಮೃತ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ಹಲವು ಗ್ರಾಮಗಳಿಗೆ ಭೇಟಿ ನೀಡಿ ಮತಯಾಚಿಸಿ ಕಲ್ಲೂರು ಗ್ರಾಮದಲ್ಲಿ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿ,ಸಚ್ಚಾರಿತ್ರ್ಯದ ನಾಟಕವಾಡುವ ಇಬ್ಬರು ರಾಷ್ಟ್ರೀಯ ಪಕ್ಷದ ರಾಜಕಾರಣಿಗಳು ಚುನಾವಣೆಯ ಹಿಂದಿನ…

Read More

ಪ್ರಧಾನಿ ಮೋದಿಗೆ ಗುಂಡಿಕ್ಕಿ ಎಂದಿದ್ದ ಬೇಳೂರಿಗೆ ನೀವು ಮತ ಹಾಕುತ್ತೀರಾ – ಹರತಾಳು ಹಾಲಪ್ಪ|Political-news

ರಿಪ್ಪನ್‌ಪೇಟೆ : ಕಳೆದ ಚುನಾವಣೆಯ ಸಂದರ್ಭದ ದೇಶದ ಪ್ರಧಾನಿ ಮೋದಿಯವರಿಗೆ ಗುಂಡಿಕ್ಕಿ,ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕುಟುಂಬವನ್ನು ಜೈಲಿಗೆ ಕಳುಹಿಸಿ ಎಂದಿದ್ದ ಇದೇ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಈಗ ಯಡಿಯೂರಪ್ಪನವರಂತಹ ಪುಣ್ಯಾತ್ಮ ಎಂದು ಮತದಾರರ ಮುಂದೆ ಕಣ್ಣೀರು ಹಾಕುತ್ತಾ ಹಗಲು ವೇಷ ಮಾಡುತ್ತಿದ್ದಾರೆ ಅಂತವರಿಗೆ ನೀವು ಮತ ಹಾಕುತ್ತೀರಾ ಎಂದು ಶಾಸಕ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ ಹೇಳಿದರು. ಕೆರೆಹಳ್ಳಿ ಹೋಬಳಿ ವ್ಯಾಪ್ತಿಯ ಬಾಳೂರು-ಕೆಂಚನಾಲ-ಅರಸಾಳು-ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರದೊಂದಿಗೆ ಮನೆಮನೆಗೆ ಭೇಟಿ ಸಂದರ್ಭದಲ್ಲಿ ಅರಸಾಳು ಗ್ರಾಮದಲ್ಲಿ…

Read More

ಮೇ 4ಕ್ಕೆ ಸಾಗರಕ್ಕೆ ಖ್ಯಾತ ಕ್ರಿಕೆಟಿಗ ಹರ್ಭಜನ್ ಸಿಂಗ್

ಮೇ 1 ರಿಂದಲೇ ಮಧ್ಯದಂಗಡಿ ಬಂದ್ ಮಾಡಿ ಅಧಿಕಾರಿಗಳ ಬದಲಾಯಿಸಿ – ಕೆ ದಿವಾಕರ್ ಮೇ 4 ಕ್ಕೆ ಸಾಗರಕ್ಕೆ ಆಮ್ ಆದ್ಮಿ ಪರ ಪ್ರಚಾರ ಸಭೆಗೆ ಖ್ಯಾತ ಕ್ರಿಕೆಟಿಗ ಹರ್ಭಜನ್ ಸಿಂಗ್ ರಿಪ್ಪನ್‌ಪೇಟೆ;- ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಆಭ್ಯರ್ಥಿ ಹರತಾಳು ಹಾಲಪ್ಪ ಆಧಿಕಾರ ಚಲಾಯಿಸಿ ಮಧ್ಯವನ್ನು ಹಂಚುವ ಹುನ್ನಾರದಲ್ಲಿದ್ದು ಆ ಕಾರಣ ಮೇ.1 ರಂದಲೇ ಕ್ಷೇತ್ರದ ವ್ಯಾಪ್ತಿಯಲ್ಲಿ ಮಧ್ಯಮಾರಾಟವನ್ನು ಬಂದ್ ಮಾಡುವುದು ಮತ್ತು ಚುನಾವಣಾ ಕರ್ತವ್ಯ ನಿರ್ವಹಿಸುತ್ತಿರುವ ಮತ್ತು ಚಕ್‌ಪೋಸ್ಟ್ಗಳಲ್ಲಿ ಯಾವುದೇ ವಾಹನವನ್ನು ತಪಾಸಣೆ…

Read More

ಜ್ಞಾನವು ಸನ್ಮಾರ್ಗದೆಡೆಗೆ ಕೊಂಡೊಯ್ಯುವ ದಿವ್ಯಶಕ್ತಿಯಾಗಿದೆ – ಡಾ.ಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ|hombuja shri

ರಿಪ್ಪನ್ ಪೇಟೆ : ಜ್ಞಾನವು ಎಲ್ಲರನ್ನೂ ಸನ್ಮಾರ್ಗಕ್ಕೆ ತೆಗೆದುಕೊಂಡು ಹೋಗುವ ದಿವ್ಯಶಕ್ತಿಯಾಗಿದೆ. ಅಜ್ಞಾನದಿಂದ, ಅಂಧಕಾರದಿಂದ ಬೆಳಕಿನ ಕಡೆಗೆ ತೆಗೆದುಕೊಂಡು ಹೋಗುವ ಶಕ್ತಿ ಜ್ಞಾನದಲ್ಲಿರುತ್ತದೆ. ಜ್ಞಾನದ ಶಕ್ತಿಯು ಪ್ರತಿಯೊಬ್ಬರಲ್ಲಿಯೂ ಕೂಡ ಸಮನಾಗಿದ್ದರೂ ಅದರ ಅಭಿವೃದ್ಧಿ ಎಲ್ಲರಲ್ಲಿಯೂ ಸಮಾನಾಗಿರುವುದಿಲ್ಲ. ಎಲ್ಲಾ ಶಿಲೆಯಲ್ಲಿಯೂ ಮೂರ್ತಿಯಾಗುವ ಅರ್ಹತೆ ಇದ್ದರೂ ಶಿಲ್ಪಿ ತನ್ನ ಕೌಶಲ್ಯವನ್ನು ಎಷ್ಟರ ಮಟ್ಟಿಗೆ ಉಪಯೋಗಿಸುತ್ತಾನೆಯೂ ಅಷ್ಟರ ಮಟ್ಟಿಗೆ ಅದು ರೂಪುಗೊಳುತ್ತದೆ. ಹಾಗೆಯೇ ಮನುಷ್ಯನು ತನ್ನಲ್ಲಿರುವ ಜ್ಞಾನದ ಶಕ್ತಿಯನ್ನು ರೂಪುಗೊಳಿಸಿಕೊಳ್ಳಬೇಕು ಎಂದು ಹೊಂಬುಜ ಜೈನ ಮಠದ  ಡಾ. ಶ್ರೀ ದೇವೇಂದ್ರಕೀರ್ತಿ ಭಟ್ಟಾರಕ…

Read More

ಹಳ್ಳಿ ಮಕ್ಕಳ ರಂಗ ಹಬ್ಬದ ಸಮಾರೋಪ ಹಾಗೂ ಬಸವ ಜಯಂತಿ ಸಂಭ್ರಮೋತ್ಸವ|Ripponpet

“ಹಳ್ಳಿ ಮಕ್ಕಳ ರಂಗ ಹಬ್ಬದ ಸಮಾರೋಪ ಹಾಗೂ ಬಸವ ಜಯಂತಿ ಸಂಭ್ರಮೋತ್ಸವ’’ ಇಂದಿನ ಮಕ್ಕಳಲ್ಲಿ ಸಂಸ್ಕೃತಿ ಸಂಸ್ಕಾರ ಅರಿವಿಲ್ಲದಂತಾಗಿದೆ :ಡಾ. ಶ್ರೀ ಗುರು ನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿ. ರಿಪ್ಪನ್‌ಪೇಟೆ;- ಆಧುನಿಕ ತಂತ್ರಜ್ಞಾನದ ಅಡಿಯಲ್ಲಿ ಶಿಕ್ಷಣ ಪಡೆಯುತ್ತಿರುವ ಇಂದಿನ ಮಕ್ಕಳಲ್ಲಿ ಸಂಸ್ಕೃತಿ ಹಾಗೂ  ಸಂಸ್ಕಾರ ಇಲ್ಲದಂತಾಗಿದೆ.ಇತ್ತೀಚಿನ ದಿನಗಳಲ್ಲಿ  ನಾಟಕ ರಂಗಕಲೆ ಜಾನಪದ ತತ್ವ ಪದಗಳಿಂದ ನಮ್ಮ ಕಲೆ ಸಂಸ್ಕೃತಿ ಗಳು ಜೀವಂತವಾಗಿ ಉಳಿದಿದ್ದು ಅದನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಮಕ್ಕಳ ರಂಗ ಹಬ್ಬ ಪ್ರೇರಕವೆಂದು ಮಳಲಿಮಠದ ಡಾ.ಗುರುನಾಗಭೂಷಣ…

Read More

ಸಾಗರದ ಪ್ರತಿಷ್ಠಿತ RBD ಗ್ರೂಪ್ಸ್ ನ ಮಹೇಶ್ ಮತ್ತು ಜಲೀಲ್ ನೂರಾರು ಅಭಿಮಾನಿಗಳೊಂದಿಗೆ ಕಾಂಗ್ರೆಸ್ ಸೇರ್ಪಡೆ

ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ದಿನಕಳೆದಂತೆ ರಂಗೇರುತಿದ್ದು ಅಭಿವೃದ್ದಿಗಿಂತ ಪ್ರೀತಿ ವಿಶ್ವಾಸಕ್ಕೆ ನಮ್ಮ ಸಹಕಾರ ಎಂದು ಕ್ಷೇತ್ರದ ಜನ ತೀರ್ಮಾನ ಮಾಡಿದಂತೆ ಭಾಸವಾಗುತಿದ್ದು ಆ ನಿಟ್ಟಿನಲ್ಲಿ ಯುವಕ ಯುವತಿಯರಿಂದ ಹಿಡಿದ್ದು ವೃದ್ದರವರೆಗೂ ಬೇಳೂರು ಗೋಪಾಲಕೃಷ್ಣ ರವರಿಗೆ ಬೆಂಬಲ ಸೂಚಿಸುತ್ತಿರುವುದು ಎದ್ದು ಕಾಣುತ್ತಿದೆ. ಹೌದು ಸಾಗರದ ಪ್ರಖ್ಯಾತ ಉದ್ಯಮಿಗಳಾದ RBD ಡೆವಲಪರ್ಸ್ ನ  ಜಲೀಲ್ ಮತ್ತು ಮಹೇಶ್ ಇವರು ಸಾಗರ ಕ್ಷೇತ್ರದಾದ್ಯಂತ ಹಲವಾರು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡು ಕ್ಷೇತ್ರದಾದ್ಯಂತ ಹಲವು ಅಭಿಮಾನಿಗಳನ್ನು ಹೊಂದಿದ್ದಾರೆಯೇ ಹೊರತು ಯಾವುದೇ ಪಕ್ಷಗಳಲ್ಲಿ ಗುರುತಿಸಿಕೊಂಡವರಲ್ಲ…

Read More

ರಿಪ್ಪನ್‌ಪೇಟೆ : ಪದವಿ‌ ಕಾಲೇಜಿನ ಆವರಣದಲ್ಲಿ ಜೇನು ದಾಳಿ – ಹಲವು ವಿದ್ಯಾರ್ಥಿಗಳಿಗೆ ಗಾಯ|Bee attack

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ಸರ್ಕಾರಿ ಪದವಿ ಕಾಲೇಜು ಅವರಣದಲ್ಲಿ ಜೇನುನೊಣಗಳು ದಾಳಿ ಮಾಡಿದ್ದರಿಂದ ಸುಮಾರು 13 ಮಂದಿ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಪಟ್ಟಣದ ಸರ್ಕಾರಿ ಪದವಿ ಕಾಲೇಜಿನ ಆವರಣದಲ್ಲಿ ಇಂದು ಬೆಳಿಗ್ಗೆ ಜೇನುಹುಳುಗಳು ದಾಳಿ ಮಾಡಿದ್ದರಿಂದ 13 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳಿಗೆ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಅವರ ಸ್ಥಿತಿ ಗಂಭೀರವಾಗಿರದಿದ್ದರೂ, ಅವರಲ್ಲಿ ಹಲವರಿಗೆ ಜೇನುನೊಣಗಳು ಕುಟುಕಿದ ಜಾಗದ ಸುತ್ತಲೂ ಭಾರಿ ಊತ ಕಂಡುಬಂದಿದೆ. ಆಗಿದ್ದೇನು? ಕಳೆದೊಂದು ತಿಂಗಳಿನಿಂದ ಕಾಲೇಜಿಗೆ…

Read More

ಸಿಗಂದೂರು ಬಳಿ ಪ್ರವಾಸಿಗರ ಬಸ್ ಪಲ್ಟಿ – ಓರ್ವ ಸಾವು|accident

ಸಾಗರ :  ತಾಲೂಕಿನ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆಂದು ಬಂದಿದ್ದ ಪ್ರವಾಸಿಗರ ಬಸ್ ಪಲ್ಟಿಯಾಗಿ ತೋಟಕ್ಕೆ ಬಿದ್ದಿದ್ದು ಪ್ರವಾಸಿಗರಲ್ಲಿ ಓರ್ವ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಓರ್ವ ವೃದ್ದೆ ಸಾವನ್ನಪ್ಪಿರುವಾಗಿದೆ ತಿಳಿದುಬಂದಿದೆ. ಇಲ್ಲಿನ ಸಂಕಣ್ಣ ಶಾನುಬೋಗ್​ ಪಂಚಾಯ್ತಿ ವ್ಯಾಪ್ತಿಯಲ್ಲಿ ಹೊಸಕೊಪ್ಪ ತಿರುವಿನಲ್ಲಿ ಘಟನೆ ಸಂಭವಿಸಿದೆ.  ಬೆಳಗ್ಗಿನ ಜಾವ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಬಸ್ ರಸ್ತೆ ಪಕ್ಕ ಇಳಿಜಾರಿನಲ್ಲಿದ್ದ ತೋಟಕ್ಕೆ ಉರುಳಿಸಿದೆ.  ಚಾಲಕ ನಿದ್ರೆ ಮಂಪರಿನಲ್ಲಿದ್ದಿದ್ದು ಘಟನೆಗೆ ಕಾರಣ ಎನ್ನಲಾಗುತ್ತಿದ್ದು, ತಿರುವಿನಲ್ಲಿ ವಾಹನದ ಅಪಘಾತವಾಗಿದೆ ಎಂದು ಹೇಳಲಾಗುತ್ತಿದೆ. ಘಟನೆಯ…

Read More

IPLಬೆಂಗಳೂರು – ರಾಜಸ್ಥಾನ ಪಂದ್ಯಾವಳಿಯಲ್ಲಿ ಸಾಗರ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಪ್ಲೇ ಕಾರ್ಡ್ ಪ್ರದರ್ಶನ

ಸಾಗರ : ವಿಧಾನಸಭಾ ಚುನಾವಣೆ ಈ ಬಾರಿ ಕದನ ಕುತೂಹಲವಾಗಿದೆ. ಅದರಲ್ಲೂ ಮಲೆನಾಡಿನ ಕ್ಷೇತ್ರಗಳು ರಣ ರೋಚಕವಾಗಿದೆ. ಅದರಲ್ಲೂ ಸಾಗರದಲ್ಲಿ ಚುನಾವಣೆ ಕಾವು ರಂಗೇರಿದೆ.  ಬೇಳೂರು ಗೋಪಾಲಕೃಷ್ಣ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು ಬಿಜೆಪಿ ಅಭ್ಯರ್ಥಿಯಾಗಿ ಹರತಾಳು ಹಾಲಪ್ಪನವರ ನಡುವೆ ಈ ಬಾರಿ ಸೆಣಸಾಟ ಜೋರಾಗಿದೆ. ಇನ್ನು ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನೆಡೆದ ಆರ್ ಸಿ ಬಿ ಮತ್ತು ರಾಜಸ್ಥಾನದ ಪಂದ್ಯದ ವೇಳೆ ಸಾಗರದ ಕಾಂಗ್ರೆಸ್ ಅಭ್ಯರ್ಥಿ ಗೋಪಾಲಕೃಷ್ಣ ಬೇಳೂರಿನ ಪ್ಲೆ ಕಾರ್ಡ್ ಹಿಡಿದು ಸಾಗರದ ಬಾಳೆಗುಂಡಿ…

Read More

ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿ ಪಲ್ಟಿ – ತಪ್ಪಿದ ಭಾರಿ ಅನಾಹುತ|accident

ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಗೌತಮಪುರ ಬಳಿ ನಡೆದಿದೆ. ಆನಂದಪುರ ಸಮೀಪದಲ್ಲಿ ಗ್ಯಾಸ್ ಸಿಲಿಂಡರ್ ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಯು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿರುತ್ತಾನೆ. ಮಂಗಳೂರಿನಿಂದ ರಾಣೆಬೆನ್ನೂರಿಗೆ ಹೋಗುವ ಗ್ಯಾಸ್ ಸಿಲಿಂಡರ್ ತುಂಬಿದ  ಲಾರಿ ಗೌತಮಪುರ ಸಮೀಪದ ಬೀರನ ಕಣವಿಯ ತಿರುವಿನಲ್ಲಿ ಪಲ್ಟಿಯಾಗಿದೆ. 372 ಗ್ಯಾಸ್ ಸಿಲಿಂಡರ್ ಗಳನ್ನು ತುಂಬಿಕೊಂಡು ಹೋಗುತಿದ್ದ ಲಾರಿ ಚಾಲಕ…

Read More
Exit mobile version