Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಡಿಕೆಶಿ ಸಂಧಾನ ಸಭೆ ಯಶಸ್ವಿ – ತೀರ್ಥಹಳ್ಳಿ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್ ಅಂತಿಮ|dk-rmm-kimmane

ಶಿವಮೊಗ್ಗ: ಕಿಮ್ಮನೆ ರತ್ನಾಕರ್ ಅವರಿಗೆ ಚುನಾವಣೆಗೆ ಟಿಕೆಟ್ ನೀಡುವುದು ಮತ್ತು  ಆರ್.ಎಂ.ಮಂಜುನಾಥಗೌಡ ಅವರನ್ನು ವಿಧಾನ ಪರಿಷತ್ ಗೆ ಕಳುಹಿಸುವ  ಭರವಸೆಯನ್ನು ಕೆಪಿಸಿಸಿ  ನೀಡಿದೆ ಎಂದು ತಿಳಿದುಬಂದಿದೆ. ತೀರ್ಥಹಳ್ಳಿ ವಿದಾನಸಭಾ ಕ್ಷೇತ್ರದ ಉಮೇದರುವಾರಿಕೆ ಸಂಬಂಧ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮತ್ತು ಆರ್.ಎಂ.ಮಂಜುನಾಥಗೌಡ ಮಧ್ಯೆ ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮನೆಯಲ್ಲಿ ನಡೆದ ಸಂಧಾನ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ.  ಕಾಂಗ್ರೆಸ್ ಪಕ್ಷದ ಟಿಕೆಟ್‌ಗಾಗಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮತ್ತು ಆರ್.ಎಂ.ಮಂಜುನಾಥ ಗೌಡ ಅವರ ನಡುವೆ ಪ್ರಬಲ…

Read More

ಹುಲಿಕಲ್ ಘಾಟಿ ಏಪ್ರಿಲ್ 15 ರವರೆಗೆ ಬಂದ್ – ಸಕಾಲಕ್ಕೆ ಮುಗಿಯಲಿಲ್ಲ ಕಾಮಗಾರಿ : ಪರ್ಯಾಯ ಮಾರ್ಗದ ಮಾಹಿತಿ ಇಲ್ಲಿದೆ…

ಏಪ್ರಿಲ್ 5 ರಿಂದ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಬೇಕಾಗಿದ್ದ ಬಾಳೇಬರೆ ಘಾಟಿ ಮತ್ತೆ 15 ದಿನಗಳ ಕಾಲ ಬಂದ್ ಆಗಿರಲಿದೆ. ಇದರಿಂದಾಗಿ ಹೊಸನಗರ-ಕುಂದಾಪುರ, ಸಾಗರ-ಕುಂದಾಪುರ ಹಾಗೂ ತೀರ್ಥಹಳ್ಳಿ ಕುಂದಾಪುರ ಮಾರ್ಗಕ್ಕೆ ಪರ್ಯಾಯ ರಸ್ತೆಗಳನ್ನ ಸೂಚಿಸಲಾಗಿದೆ. ಫೆ.5 ರಂದು ಬಾಳೇಬರೆ ಘಾಟಿಯಲ್ಲಿ 2570 ಮೀಟರ್ ಪೇವ್ ಮೆಂಟ್ ಕಾಮಗಾರಿ ಹಮ್ಮಿಕೊಳ್ಳಲಾಗಿದ್ದು ಏ.5 ರ ವರೆಗೆ ಬಾಳೇಬರೆ ಘಾಟಿಯನ್ನ ಬಂದ್ ಮಾಡಿ ಬದಲೀ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು. ಆದರೆ ಕಾರಣಾಂತರದಿಂದ ಏ.15 ರವರೆಗೆ ಘಾಟಿಯಲ್ಲಿ ವಾಹನ ಸಂಚಾರವನ್ನ ಬಂದ್ ಮಾಡಿ…

Read More

ಶಿವಮೊಗ್ಗ – ಹರಕೆರೆ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದ ಕೋಟ್ಯಾಂತರ ರೂ ವಶ|election

Shivamogga ಮಾ.31: ಶಿವಮೊಗ್ಗ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ಹರಕೆರೆ ಚೆಕ್ ಪೋಸ್ಟ್ ನಲ್ಲಿ 1 ಕೋಟಿ 39 ಲಕ್ಷ ರೂ ನಗದು ಹಣವನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಕರ್ನಾಟಕ ಸಾರ್ವತ್ರಿಕ ಚುನಾವಣೆ ಹಿನ್ನಲೆ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ತೆರೆದಿದ್ದು, ವಾಹನಗಳನ್ನು ತಪಾಸಣೆ ನಡೆಸುತ್ತಿರುವ ವೇಳೆ ಯಾವುದೇ ದಾಖಲೆಯಿಲ್ಲದೆ ಹರಕೆರೆ ಚೆಕ್ ಪೋಸ್ಟ್ ನಲ್ಲಿ ಸಾಗಿಸುತ್ತಿದ್ದ ಬೊಲೆರೋ ವಾಹನದಲ್ಲಿ 1 ಕೋಟಿ 39 ಲಕ್ಷ ರೂ. ಹಣ ಪತ್ತೆಯಾಗಿದೆ. ಕಾರು ತಪಾಸಣೆ ನಡೆಸಿದಾಗ 1 ಕೋಟಿ ರೂ. ನಗದು…

Read More

ಮಾನಸಿಕ ಸಂತೋಷವೇ ಸುಖದ ಮೂಲ – ಉಜ್ಜಯಿನಿ ಶ್ರೀಗಳು|Mandi hospital

ಮಾನಸಿಕ ಸಂತೋಷವೇ ಸುಖದ ಮೂಲ – ಉಜ್ಜಯಿನಿ ಶ್ರೀಗಳು ರಿಪ್ಪನ್‌ಪೇಟೆ : ಮಾನಸಿಕ ಸಂತೋಷವೇ ಸುಖದ ಮೂಲವಾಗಿದ್ದು, ಮನುಷ್ಯ ಆರೋಗ್ಯದಿಂದ ಇದ್ದಾಗ ಮಾತ್ರ ಜಗತ್ತಿನ ಎಲ್ಲಾ ಸುಖಗಳನ್ನು ಅನುಭವಿಸಲು ಸಾಧ್ಯ ಎಂದು ಉಜ್ಜಯಿನಿ ಸದ್ಧರ್ಮ ಪೀಠದ ಜಗದ್ಗುರು ಸಿದ್ದಲಿಂಗ ರಾಜದೇಶೀಕೇಂದ್ರ ಶಿವಾಚಾರ್ಯ ಭಗವತ್ಪಾದರು ಹೇಳಿದರು. ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿ ನೂತನ ಶ್ರೀ ನಂದಿ ಹಾಸ್ಪಿಟಲ್ ನ್ನು ಉದ್ಘಾಟಿಸಿ, ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ರೋಗ ರುಜಿನಗಳು ಮನುಷ್ಯನಿಗೆ ಸಹಜ. ರೋಗ ಬಂದ ನಂತರ ವೈದ್ಯರನ್ನು ಕಾಣುವುದು…

Read More

ರಿಪ್ಪನ್‌ಪೇಟೆಯ ಗಾನ ಕೋಗಿಲೆ ಕು|| ಪ್ರಣತಿ ಅಣ್ಣಪ್ಪ ರವರಿಗೆ ಶಾಸಕರಿಂದ ಸನ್ಮಾನ|pranathi

ರಿಪ್ಪನ್‌ಪೇಟೆ : ಪಟ್ಟಣದ ಗಾನ ಕೋಗಿಲೆ ಕುಮಾರಿ ಪ್ರಣತಿ ಅಣ್ಣಪ್ಪ ರವರಿಗೆ ಇತ್ತೀಚೆಗೆ ಅರಸಾಳು ಗ್ರಾಪಂ ವ್ಯಾಪ್ತಿಯ ತಮ್ಮಡಿಕೊಪ್ಪ ಗ್ರಾಮದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಚಿಕ್ಕವಯಸ್ಸಿನಲ್ಲೇ ಅದ್ಭುತ ಸಾಧನೆ ತೋರಿ ತನ್ನ ಕಂಠಸಿರಿಯಿಂದ ಗಾಯನ ಲೋಕದಲ್ಲಿ ತನ್ನದೇ ಆದ ಛಾಪು ಮೂಡಿಸಿ ಸಂಗೀತ ಲೋಕದಲ್ಲಿ ತನ್ನದೇ ಆದ ಅಭಿಮಾನಿ ಬಳಗವನ್ನು ಸೃಷ್ಟಿಸಿಕೊಂಡು ನಾಡಿನಾದ್ಯಂತ ಗಾನ ಸುಧೆಯನ್ನು ಹರಿಸಿ ಸಂಗೀತ ಪ್ರಿಯರಲ್ಲಿ ತನ್ನದೇ ಆದ ವಿಶಿಷ್ಟ ಛಾಪು ಮೂಡಿಸಿದ ಯುವ ಪ್ರತಿಭೆ ರಿಪ್ಪನ್ ಪೇಟೆಯ ಪ್ರಣತಿ…

Read More

ನವ ವಿವಾಹಿತ ಮಹಿಳೆ ನೇಣು ಬಿಗಿದುಕೊಂಡು ಸಾವು|crime news

ಶಿವಮೊಗ್ಗ : ಇಲ್ಲಿನ ಮಿಳಘಟ್ಟದ ವಿವಾಹಿತ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೌಟುಂಬಿಕ ಕಾರಣ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಮಳಘಟ್ಟದ ಸಂಗೀತ (21) ಮೃತ ಮಹಿಳೆ. ಇವರು ಎರಡು ವರ್ಷಗಳ ಹಿಂದಷ್ಟೇ ಮಿಳಘಟ್ಟದ ನಿವಾಸಿ ಗುರೂಮೂರ್ತಿ ವಿವಾಹವಾಗಿದ್ದರು. ಮನೆಯಲ್ಲಿ ಒಬ್ಬರೇ ಇದ್ದಾಗ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಅಲ್ಲದೆ, ಪ್ರಕರಣ ದಾಖಲು ಮಾಡಿಕೊಂಡಿದ್ದು, ಕುಟುಂಬದವರ ವಿಚಾರಣೆ ಕೈಗೊಂಡಿದ್ದಾರೆ.  ಆಕೆಯ ಸಾವಿಗೆ ಸ್ಪಷ್ಟವಾದ…

Read More

ತೀರ್ಥಹಳ್ಳಿ : ಹನಿಟ್ರ್ಯಾಪ್ ಮೂಲಕ ಸೆರೆ ಸಿಕ್ಕ ಒಂಟಿ ಸಲಗ – ಬಂಡೀಪುರ ಅಭಯಾರಣ್ಯಕ್ಕೆ ಪುಂಡಾನೆಯ ರವಾನೆ|elephant

ತೀರ್ಥಹಳ್ಳಿ : ಪಟ್ಟಣದೊಳಗೆ ನುಗ್ಗಿ ಆತಂಕ ಮೂಡಿಸಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.  ತಾಲೂಕಿನ ದೇವಂಗಿಯ ಮಳೂರು ಕಾಡಿನಲ್ಲಿ ಆನೆ ಸೆರೆ ಹಿಡಿಯಲಾಯಿತು. ಗುರುವಾರ ರಾತ್ರಿ ಕಾರ್ಯಾಚರಣೆ ನಡೆಸಿದ ಸಕ್ರೆಬೈಲು ಬಿಡಾರದ ಸಿಬ್ಬಂದಿ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಆನೆ ಕಾಣಿಸಿಕೊಳ್ಳುತ್ತಿದ್ದಂತೆ ಅರಣ್ಯ ಇಲಾಖೆ ಸಿಬ್ಬಂದಿ ಆನೆಗೆ ಚುಚ್ಚು ಮದ್ದಿನ ಇಂಜೆಕ್ಷನ್ ಡಾರ್ಟ್ ಮಾಡಿ ಸೆರೆ ಹಿಡಿದಿದ್ದಾರೆ. ಡಿಸೆಂಬರ್ ತಿಂಗಳಲ್ಲಿ ಈ ಕಾಡಾನೆ ತೀರ್ಥಹಳ್ಳಿ ಪಟ್ಟಣದೊಳಗೆ ನುಗ್ಗಿತ್ತು….

Read More

ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಬೈಕ್ – ಯುವಕ ಸ್ಥಳದಲ್ಲಿಯೇ ಸಾವು|accident

ಶಿವಮೊಗ್ಗ :  ಕುಂಚೇನಹಳ್ಳಿ ಕೆರೆಯ ಬಳಿಯ ಹಳ್ಳಕ್ಕೆ ಬಿದ್ದ ಬೈಕ್ ಸವಾರನೊಬ್ಬ ಸಾವು ಕಂಡಿರುವ ಘಟನೆ ನಿನ್ನೆ ಸಂಜೆ ನಡೆದಿದೆ. ಸಂತೆಕಡೂರಿನ ನಿವಾಸಿಗಳಾದ ನಾಗೇಶ್ ಮತ್ತು ದರ್ಶನ್ ಎಂಬುವರು ಕುಂಚೇನಹಳ್ಳಿ ತಾಂಡದಲ್ಲಿ ಸ್ನೇಹಿತನ ಮನೆಯಲ್ಲಿ ಊಟ ಮುಗಿಸಿಕೊಂಡು ವಾಪಾಸ್ ಶಿವಮೊಗ್ಗಕ್ಕೆ ಹಿಂದಿರುಗುವಾಗ ನಿಯಂತ್ರಣ ತಪ್ಪಿ ಬೈಕ್ ಹಳ್ಳಕ್ಕೆ ಬಿದ್ದಿದೆ. ಈ ಅಪಘಾತದಲ್ಲಿ ನಾಗೇಶ್ ಬೆನ್ನಿಗೆ ಬಲವಾದ ಪೆಟ್ಟುಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಸಹ ಸವಾರ ದರ್ಶನ್ ಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ನಾಗೇಶ್ ಗಾರೆ…

Read More

ಇಂದಿನಿಂದ ರಾಜ್ಯಾದ್ಯಂತ SSLC ಪರೀಕ್ಷೆ ಪ್ರಾರಂಭ – ವಿದ್ಯಾರ್ಥಿಗಳಿಗೆ ಇಲ್ಲಿದೆ ಅಗತ್ಯ ಮಾಹಿತಿ

ಇಂದಿನಿಂದ ರಾಜ್ಯಾದ್ಯಂತ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗಲಿದ್ದು, 8,42,811 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ರಾಜ್ಯದಲ್ಲಿ ಒಟ್ಟು 3,305 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪರೀಕ್ಷೆ ಸುಸೂತ್ರವಾಗಿ ನಡೆಯಲು ರಾಜ್ಯದ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಪರೀಕ್ಷೆಗೆ ವಿದ್ಯಾರ್ಥಿಗಳು ಮೊಬೈಲ್ ಫೋನ್, ಸ್ಮಾರ್ಟ್ ವಾಚ್, ಇಯರ್ ಫೋನ್ ನಂತಹ ಸಾಧನಗಳನ್ನು ತರುವಂತಿಲ್ಲ.  ಎಲ್ಲಾ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷಾ ಕೇಂದ್ರದ ಬಳಿಯಿರುವ ಜೆರಾಕ್ಸ್ ಅಂಗಡಿ, ಸೈಬರ್ ಸೆಂಟರ್ ಗಳನ್ನು ಅಧಿಕಾರಿಗಳು ಆದೇಶ…

Read More

ನಾಳೆ(31-03-2023) ರಿಪ್ಪನ್‌ಪೇಟೆಯಲ್ಲಿ ನೂತನವಾಗಿ ಶುಭಾರಂಭಗೊಳ್ಳಲಿದೆ ಸುಸಜ್ಜಿತ ಶ್ರೀ ನಂದಿ ಹಾಸ್ಪಿಟಲ್

ರಿಪ್ಪನ್‌ಪೇಟೆ : ಇಲ್ಲಿನ ಶಿವಮೊಗ್ಗ ರಸ್ತೆಯ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಮುಂಭಾಗದಲ್ಲಿ ನೂತನವಾಗಿ ಸುಸಜ್ಜಿತ “ನಂದಿ ಆಸ್ಪತ್ರೆ” ಶುಕ್ರವಾರ ಶುಭಾರಂಭಗೊಳ್ಳಲಿದೆ. ನಾಳೆ 31-03-2023 ರ ಶುಕ್ರವಾರ ಬೆಳಿಗ್ಗೆ 09 ಗಂಟೆಗೆ ಉಜ್ಜಯಿನಿ ಮಠದ  ಶ್ರೀಗಳು ಮತ್ತು ಆನಂದಪುರದ ಡಾ ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಮಹಾಸ್ವಾಮಿಗಳ ಸಮ್ಮುಖದಲ್ಲಿ ನೂತನ ಆಸ್ಪತ್ರೆ ಶುಭಾರಂಭಗೊಳ್ಳಲಿದ್ದು.ಈ ಕಾರ್ಯಕ್ರಮಕ್ಕೆ ಅನೇಕ ಗಣ್ಯರು ಆಗಮಿಸಲಿದ್ದಾರೆ. ನೂತನ ನಂದಿ ಆಸ್ಪತ್ರೆಯಲ್ಲಿ ದೊರೆಯುವ ಸೌಲಭ್ಯಗಳು ಸೇವೆಗಳು: * 24X7 ತುರ್ತು ಚಿಕಿತ್ಸೆಯ ವೈದ್ಯರು ಲಭ್ಯವಿರುತ್ತಾರೆ. * ಮಕ್ಕಳ ಡಾಕ್ಟರ್…

Read More