Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಗರ್ತಿಕೆರೆ ಬೈಕ್ ಹಾಗೂ ಕಾರಿನ ನಡುವೆ ಅಪಘಾತ : ಅಪಘಾತದ ಸಿಸಿಟಿವಿ ದೃಶ್ಯಾವಳಿ ಇಲ್ಲಿ ವೀಕ್ಷಿಸಿ👇|cctv

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಗ್ರಾಮದಲ್ಲಿ ಇಂದು ಬೆಳಿಗ್ಗೆ ನಡೆದ ಕಾರು ಹಾಗು ಬೈಕ್ ನಡುವೆ ಅಪಘಾತದ ಸಿಸಿಟಿವಿ ದೃಶ್ಯಾವಳಿ ಲಭ್ಯವಾಗಿದೆ. ಗರ್ತಿಕೆರೆ ಪೆಟ್ರೋಲ್ ಬಂಕ್ ಮುಂಭಾಗ ಬೈಕ್ ಚಾಲಕನ ಅಜಾಗರೂಕತೆಯಿಂದ ಹಿಂಬದಿ ಗಮನಿಸದೆ ಬಲಕ್ಕೆ ತಿರುಗಿಸಿದ್ದಾನೆ ಆ ಸಂಧರ್ಭದಲ್ಲಿ ಅತೀ ವೇಗವಾಗಿ ಬಂದ ಕಾರು ಬೈಕ್ ನ್ನು ತಪ್ಪಿಸಲು ಬಲಕ್ಕೆ ತಿರುಗಿಸಿದ್ದರೂ ಬೈಕ್ ಗೆ ಕಾರು ತಗುಲಿದ ಪರಿಣಾಮ ಬೈಕ್ ಅಪಘಾತ ಸಂಭವಿಸಿ ಬೈಕ್ ಸವಾರನಿಗೆ ಗಂಭೀರ ಸ್ವರೂಪದ ಗಾಯವಾಗಿದೆ. ರಿಪ್ಪನ್‌ಪೇಟೆ ಮೂಲದ ಮಾರುತಿ…

Read More

ಪಿಂಪ್ ಕೆಲಸ ಮಾಡುವವರ ಬಳಿ ಹಣ ಮಾಡಿಕೊಳ್ಳುವ ಸಂಧರ್ಭ ಬಂದರೇ ಆತ್ಮಹತ್ಯೆ ಮಾಡಿಕೊಳ್ಳುವೆ – ಗೃಹಸಚಿವ ಆರಗ ಜ್ಞಾನೇಂದ್ರ|araga

ಕುಖ್ಯಾತ ಕ್ರಿಮಿನಲ್‌ ಕೆ.ಎಸ್.‌ ಮಂಜುನಾಥ್‌ ಅಲಿಯಾಸ್ ಸ್ಯಾಂಟ್ರೋ ರವಿ ಯಾರೆಂದು ನನಗೆ ಗೊತ್ತಿಲ್ಲ. ನನ್ನ ಮನೆಗೆ ಸಾವಿರಾರು ಜನ ಬಂದು ಹೋಗುತ್ತಾರೆ. ಎಲ್ಲರ ಕ್ಯಾರೆಕ್ಟರ್‌ ಸರ್ಟಿಫಿಕೇಟ್ ನೋಡಿ ಒಳಗೆ ಬಿಡಲಾಗುವುದಿಲ್ಲ. ಹೀಗಿರುವಾಗ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ವಿನಾಕಾರಣ ನನ್ನ ಹೆಸರು ಹೇಳಿ ಗೊಂದಲ ಹುಟ್ಟಿಸುತ್ತಿರುವುದು ಅವರ ಘನತೆಗೆ ತಕ್ಕುದಲ್ಲ. ರವಿಯ ಜತೆಗೆ ನನಗೆ ಸಂಪರ್ಕ ಇದ್ದರೆ. ಅವನನ್ನು ಬಂಧಿಸದಂತೆ ತಡೆಯುವುದು ದೊಡ್ಡ ವಿಚಾರವಾಗಿರಲಿಲ್ಲ. ಅಂಥವನ ಹತ್ತಿರ ದುಡ್ಡು ತೆಗೆದುಕೊಳ್ಳುವ ಸಂದರ್ಭ ಬಂದರೆ ಆತ್ಮಹತ್ಯೆ ಮಾಡಿಕೊಳ್ಳುವೆ ಎಂದು…

Read More

ಗರ್ತಿಕೆರೆ ಬಳಿ ಕಾರು ಹಾಗೂ ಬೈಕ್‌ ನಡುವೆ ಅಪಘಾತ – ಬೈಕ್ ಸವಾರನ ಸ್ಥಿತಿ ಗಂಭೀರ,ಮೆಗ್ಗಾನ್ ಗೆ ದಾಖಲು|accident

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಗ್ರಾಮದಲ್ಲಿ ಕಾರು ಹಾಗು ಬೈಕ್ ನಡುವೆ ಅಪಘಾತ ನಡೆದಿದೆ. ಪೆಟ್ರೋಲ್ ಬಂಕ್ ಮುಂಭಾಗ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರನಿಗೆ ಗಂಭೀರ ಸ್ವರೂಪದ ಗಾಯವಾಗಿದೆ. ರಿಪ್ಪನ್‌ಪೇಟೆ ಮೂಲದ ಮಾರುತಿ ಬ್ರೀಜಾ(KA 15 N 8990) ಕಾರು ತೀರ್ಥಹಳ್ಳಿ ಕಡೆಗೆ ಸಂಚರಿಸುತ್ತಿದ್ದು ಈ ವೇಳೆ ರಸ್ತೆಗೆ ಅಡ್ಡ ಬಂದ ಬೈಕ್ ತಪ್ಪಿಸಲು ಹೋಗಿ ಕಾರು ರಸ್ತೆ ಬದಿಯ ಚರಂಡಿಗೆ ಉರುಳಿದ್ದು ಈ ಘಟನೆಯಲ್ಲಿ ಕಾರಿನ ಮುಂಭಾಗ ಸಂಪೂರ್ಣ…

Read More

ನಾಳೆ(15-01-2023) ರಿಪ್ಪನ್‌ಪೇಟೆಯಲ್ಲಿ ರಾಜ್ಯ ಮಟ್ಟದ ಪುರುಷರ ಹಗ್ಗಜಗ್ಗಾಟ ಸ್ಪರ್ಧೆ|Ripponpet

ನಾಳೆ ರಿಪ್ಪನ್‌ಪೇಟೆಯಲ್ಲಿ ರಾಜ್ಯ ಮಟ್ಟದ ಪುರುಷರ ಹಗ್ಗಜಗ್ಗಾಟ ಸ್ಪರ್ಧೆ ರಿಪ್ಪನ್‌ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯ ಗುಡ್ ಶೆಪರ್ಡ್ ಚರ್ಚ್ ಆವರಣದಲ್ಲಿ ಭಾನುವಾರ(15-01-2023) ರಾಜ್ಯ ಮಟ್ಟದ ಪುರುಷರ ಹಗ್ಗ ಜಗ್ಗಾಟ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಯುವವೇದಿ ಅಧ್ಯಕ್ಷ ರಾಬಿನ್ ತಿಳಿಸಿದ್ದಾರೆ. ಪಟ್ಟಣದ ಗುಡ್ ಶೆಪರ್ಡ್ ಯುವವೇದಿ ವತಿಯಿಂದ ರಾಜ್ಯ ಮಟ್ಟದ ಪುರುಷರ ಹಗ್ಗಜಗ್ಗಾಟ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು ರಾಜ್ಯದ ಹಲವಾರು ಜಿಲ್ಲೆಗಳಿಂದ ಅನೇಕ ತಂಡಗಳು ಭಾಗವಹಿಸುವ ನಿರೀಕ್ಷೆ ಇದೆ.ಗುಡ್ ಶೆಪರ್ಡ್ ಆವರಣದಲ್ಲಿ ಪಂದ್ಯಾವಳಿಯನ್ನು ಆಯೋಜಿಸಲಾಗಿದ್ದು ಪ್ರಥಮ ಬಹುಮಾನ 25000/-,ದ್ವಿತೀಯ…

Read More

ಆನಂದಪುರದಲ್ಲಿ ನಡೆದುಕೊಂಡು ಹೋಗುತಿದ್ದ ಇಬ್ಬರು ವಿದ್ಯಾರ್ಥಿನಿಯರಿಗೆ ಕಾರು ಡಿಕ್ಕಿ – ಮೆಗ್ಗಾನ್ ಗೆ ದಾಖಲು

ಆನಂದಪುರ : ರಸ್ತೆಯಲ್ಲಿ ನಡೆದುಕೊಂಡು ಹೋಗಿತಿದ್ದ ಇಬ್ಬರು ವಿದ್ಯಾರ್ಥಿಗಳಿಗೆ ಕಾರು ಡಿಕ್ಕಿ ಹೊಡೆದು ವಿದ್ಯಾರ್ಥಿಳು ಗಾಯಗೊಂಡ ಘಟನೆ ನೂತನ ಪೊಲೀಸ್ ಠಾಣೆಯ ಮುಂಭಾಗದ ತಿರುವಿನಲ್ಲಿ ನಡೆದಿದೆ. ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿಯರಿಬ್ಬರು ಶಾಲೆ ಮುಗಿಸಿ ತಮ್ಮ ಊರಾದ ಮೊದ್ಲೇಸರ ಕಡೆಗೆ ನಡೆದುಕೊಂಡು ಹೋಗುತಿದ್ದ ಸಂಧರ್ಭದಲ್ಲಿ ಪೊಲೀಸ್ ಠಾಣೆ ಮುಂಭಾಗದ ತಿರುವಿನಲ್ಲಿ ಸಾಗರ ಕಡೆಯಿಂದ ಆನಂದಪುರ ಕಡೆಗೆ ಬರುತಿದ್ದ ಫೋರ್ಡ್ ಕಾರು(Ka 18 N 5812) ಮುಂಭಾಗದಿಂದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ವಿದ್ಯಾರ್ಥಿಗಳಿಗೆ ತೀವ್ರ…

Read More

ದೇವಸ್ಥಾನಗಳ ಹುಂಡಿ ಕಳ್ಳತನ ಮಾಡುತಿದ್ದ ಕಳ್ಳರ ಬಂಧನ|theft

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಕಳೆದ ವರ್ಷ ನಡೆದ ನಾಲ್ಕು ದೇವಸ್ಥಾನಗಳ ಕಳ್ಳತನ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಸಾಗರ ಗ್ರಾಮಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ ವರ್ಷ ಫೆಬ್ರುವರಿ 17ಕ್ಕೆ ತಾಲೂಕಿನ ಸಿರಿವಂತೆ ಗ್ರಾಮದ ವೀರಭದ್ರೇಶ್ವರ ದೇವಸ್ಥಾನ ,ಮೇ 5ಕ್ಕೆ ಬಿಳಿಸಿರಿ ಗ್ರಾಮದ ಕೊರಳಿಕೊಪ್ಪದ ಶನೇಶ್ವರ ದೇವಾಸ್ಥಾನ, ಮೇ 27ರಂದು ಕಳೆದಿ ಹೋಬಳಿಯ ತೆರವಿನಕೊಪ್ಪ ಗ್ರಾಮದ ಅಕ್ಕ ನಾಗಮ್ಮ ದೇವಸ್ಥಾನ ಹಾಗೂ ಅಕ್ಟೋಬರ್ 21ರಂದು ಮಲ್ಲ ಗ್ರಾಮದ ಪಂಚಲಿಂಗೇಶ್ವರ ಹಾಗೂ ಸಿದ್ದೇಶ್ವರ ದೇವಸ್ಥಾನದಲ್ಲಿ ಕಳ್ಳತನ ನಡೆದಿರುವ ಪ್ರಕರಣ ಸಾಗರ…

Read More

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪೈಪೋಟಿ ಎದುರಿಸಲು ಸಿದ್ದರಾಗಬೇಕು – ಹರತಾಳು ಹಾಲಪ್ಪ|GJC

ರಿಪ್ಪನ್‌ಪೇಟೆ :  ಶ್ರೀಮಂತರ ಮತ್ತು ಸರ್ಕಾರಿ ನೌಕರರ ಅಧಿಕಾರಿಗಳ ಮಕ್ಕಳ ಮುಂದೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿ ಸ್ಪರ್ಧಾತ್ಮಕ ಪೈಪೋಟಿ ನಡೆಸಬೇಕಾಗಿದೆ. ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಕೊಳ್ಳುವುದರೊಂದಿಗೆ ಬೌದ್ಧಿಕ ಬೆಳವಣಿಗಗೆ ಸಹಕಾರಿಯಾಗಬೇಕು ಎಂದು ಶಾಸಕ ಹರತಾಳು ಹಾಲಪ್ಪ ಕರೆ ನೀಡಿದರು. ರಿಪ್ಪನ್‌ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನಲ್ಲಿ ಶುಕ್ರವಾರ ನಡೆದ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ಗುರುಗಳ, ತಂದೆ-ತಾಯಿಯರ ಪೋಷಕರ ಮಾರ್ಗದರ್ಶನದೊಂದಿಗೆ ಶಿಸ್ತುಬದ್ದ ಬದುಕಿಗೆ ಸರಿಯಾದ ಮಾರ್ಗದರ್ಶನ ಕೊಡಿಸಬೇಕು. ಇಲ್ಲದಿದ್ದರೆ ಭಾರಿ ಸಂಕಷ್ಟ…

Read More

ಪ್ರಿಯಕರನನ್ನು ಕತ್ತು ಸೀಳಿ ಹತ್ಯೆಗೈದ ಪ್ರೇಯಸಿ..!!! ಭದ್ರಾವತಿಯ ಖಾಸಗಿ ಲಾಡ್ಜ್ ನಲ್ಲಿ ನಡೆದ ಘಟನೆmurder

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಹೆರಿಟೇಜ್ ಲಾಡ್ಜ್ ನಲ್ಲಿ ಪ್ರೇಯಸಿಯೇ ಪ್ರಿಯಕರನನ್ನು ಹತ್ಯೆಗೈದಿರುವ ಘಟನೆ ನಡೆದಿದೆ. ಹಾಸನ ಮೂಲದ ಪರ್ವೇಜ್ ಖಾನ್​ ಎಂಬ ವ್ಯಕ್ತಿಯ ಕೊಲೆಯಾಗಿದೆ. ಪ್ರೇಯಸಿಯೇ ಈ ಕೊಲೆ ಮಾಡಿದ್ದಾಳೆ ಎಂದು ಆರೋಪಿಸಲಾಗುತಿದ್ದು ಪೊಲೀಸ್ ತನಿಖೆಯಿಂದ ಹೆಚ್ಚಿನ ಮಾಹಿತಿ ತಿಳಿದುಬರಬೇಕಾಗಿದೆ. ಹಾಸನದ ಚನ್ನರಾಯಪಟ್ಟಣದ ಮೂಲದ ಆಯಿಷಾ ಮತ್ತು ಜಾವಗಲ್​ ಮೂಲದ ಪರ್ವೇಜ್ ಖಾನ್ ಇಬ್ಬರು ಕಳೆದ ಮೂರು ನಾಲ್ಕು ವರ್ಷಗಳಿಂದ ಸಂಬಂಧ ಹೊಂದಿದ್ದರು ಎನ್ನಲಾಗಿದೆ.  ಇವರಿಬ್ಬರ ಸಂಬಂಧದ ವಿಚಾರಕ್ಕೆ ಮನನೊಂದಿದ್ದ ಆಯಿಷಾ ಳ ಪತಿ ಇವಳನ್ನು…

Read More

ಅಕ್ರಮ ಕಸಾಯಿಖಾನೆ ಮೇಲೆ ದಾಳಿ : 8 ಗೋವುಗಳ ರಕ್ಷಣೆ – 7 ಗೋವುಗಳ ದಾರುಣ ಹತ್ಯೆ

ಶಿವಮೊಗ್ಗ ನಗರದ ಸೂಳೆಬೈಲ್​ನ ಸಮೀಪ ಇವತ್ತು ತುಂಗಾನಗರ ಪೊಲೀಸರು ಹಾಗೂ ನಗರಸಭೆ ಅಧಿಕಾರಿಗಳು ಕಸಾಯಿಖಾನೆಯ ಮೇಲೆ ದಾಳಿ ನಡೆಸಿದ್ದಾರೆ. ಗೋಹತ್ಯೆ ನಿಷೇಧದ ನಡುವೆಯು, ಗೋವುಗಳನ್ನು ಮಾಂಸಕ್ಕಾಗಿ ಕೊಂದು ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಬಂದ ಬೆನ್ನಲ್ಲೆ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ.  ಸೂಳೆಬೈಲಿನ ಕಸಾಯಿ ಖಾನೆಯೊಂದ ಮೇಲೆ ತುಂಗನಗರ ಪೊಲೀಸರು ಬೆಳ್ಳಂಬೆಳಿಗ್ಗೆನೇ ದಾಳಿ ನಡೆಸಿ 8 ಗೋವುಗಳನ್ನ ರಕ್ಷಿಸಿದ್ದಾರೆ. ಆದರೆ 7 ಗೋವುಗಳ ಕತ್ತು ಸೀಳಿ ಹತ್ಯೆ ಮಾಡಿರುವ ದೃಶ್ಯಗಳು ಲಭ್ಯವಾಗಿವೆ. ಸೂಳೆಬೈಲಿನ ಅಜೀಜ್ ಮನೆಯ ಹಿಂಭಾಗದ…

Read More

ಸಾಲಭಾದೆಗೆ ತತ್ತರಿಸಿ ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ|sucide

ಸಾಲಭಾದೆಗೆ ಹೆದರಿ ಶಿವಮೊಗ್ಗ ದ ಮಿಳಘಟ್ಟದಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಪರಂದಯ್ಯ(70), ದಾನಮ್ಮ (60)ಮತ್ತು ಮಂಜುನಾಥ್(25) ಮನೆಯಲ್ಲಿ ವಿಷ ಸೇವಿಸಿ ಸಾವನ್ನಪ್ಪಿದ್ದಾರೆ. ಶಿವಮೊಗ್ಗದ ಮಿಳಘಟ್ಟ ಮೊದಲನೇ ತಿರುವಿನಲ್ಲಿ ಪರಂದಯ್ಯ, ದಾನಮ್ಮ, ಮಂಜುನಾಥ್ ನಿನ್ನೆ ಸಾಲಕ್ಕೆ ಬೆದರಿ ವಿಷ ಸೇವಿಸಿದ್ದರು. ವೃದ್ಧರಿಬ್ಬರೂ ನಿನ್ನೆನೇ ಸಾವನ್ನಪ್ಪಿದರು.  ಶಿವಮೊಗ್ಗದ ಆನಂದರಾವ್ ಬಡಾವಣೆ   ಹತ್ತಿರದ ಮಿಳಗಟ್ಟ ಕೆರೆಅಂಗಳದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಪರಂದಯ್ಯ ಕೂಲಿ ಕೆಲಸ ಮಾಡಿಕೊಂಡಿದ್ದು, ದಾನಮ್ಮ ಕಲ್ಲೂರು ಮಂಡ್ಲಿ ಪೇಪರ್ ಫ್ಯಾಕ್ಟರಿಯಲ್ಲಿ ಕೆಲಸಕ್ಕೆ ಹೋಗುತಿದ್ದರು. ಅವರಿಗೆ ಮಕ್ಕಳಿರಲಿಲ್ಲ…

Read More