Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

SSLC ಅಂತಿಮ ಪರೀಕ್ಷೆಯ ವೇಳಾಪಟ್ಟಿ ಪ್ರಕಟಣೆ – ಈ ಬಾರಿ ಮುಂಚಿತವಾಗಿ ನಡೆಯಲಿದೆ ಅಂತಿಮ ಪರೀಕ್ಷೆ: ವಿವರಗಳಿಗೆ ಈ ಸುದ್ದಿ ನೋಡಿ

ರಾಜ್ಯಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷಾ ವೇಳಾ ಪಟ್ಟಿ ಪ್ರಕಟವಾಗಿದ್ದು ಮಾ.31 ರಿಂದ ಏ.15ರ ವರೆಗೆ ಪರೀಕ್ಷೆ ನಡೆಯಲಿದೆ. 2023 ರ ವಿಧಾನ ಸಭಾ ಚುನಾವಣೆ ಹಿನ್ನಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಮುಂಚಿತವಾಗಿ ನಡೆಯಲಿದೆ. ದಿನಾಂಕ 31-03-2023, ಶುಕ್ರವಾರ – ಪ್ರಥಮ ಭಾಷೆ – ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್(NCERT) ಹಾಗು ಸಂಸ್ಕೃತ ದಿನಾಂಕ 04-04-2023, ಮಂಗಳವಾರ – ಕೋರ್ ಸಬ್ಜೆಕ್ಟ್ – ಗಣಿತ ಮತ್ತು ಸಮಾಜಶಾಸ್ತ್ರ ದಿನಾಂಕ 06-04-2023,…

Read More

ಹೊಸನಗರ : ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಅಗ್ನಿ ಅವಘಡ – ಬೆಂಕಿ ರಿಂಗ್ ಜಿಗಿತ ಪ್ರದರ್ಶನದ ವೇಳೆ ವಿದ್ಯಾರ್ಥಿಗೆ ಗಂಭೀರ ಗಾಯ|Fire

ಹೊಸನಗರ : ಶಾಲಾ ವಾರ್ಷಿಕೋತ್ಸವ ಸಂದರ್ಭದಲ್ಲಿ ನಡೆದ ಅಹಿತಕರ ಘಟನೆಯಿಂದ ಓರ್ವ ವಿದ್ಯಾರ್ಥಿಗೆ ಸುಟ್ಟಗಾಯಗಳಾಗಿರುವ ಘಟನೆ ಪಟ್ಟಣದ ಶ್ರೀ ರಾಮಕೃಷ್ಣ ವಿದ್ಯಾಸಂಸ್ಥೆಯಲ್ಲಿ ಶನಿವಾರ ರಾತ್ರಿ ಜರುಗಿದೆ. ಮೂರು ದಿನಗಳ ಶಾಲಾ ವಾರ್ಷಿಕೋತ್ಸವ ಸಂದರ್ಭದಲ್ಲಿ ಕೊನೆ ದಿನವಾದ ಶನಿವಾರ ರಾತ್ರಿ ವಿದ್ಯಾರ್ಥಿಗಳಿಂದ ಪಿರಮಿಡ್ ನಿರ್ಮಾಣ ಹಾಗೂ ಬೆಂಕಿಯ ರಿಂಗ್ ಒಳಗಿನ ಜಿಗಿತದ ವೇಳೆ ಘಟನೆ ಸಂಭವಿಸಿದೆ. ಮೂಲತಃ ಬೆಂಗಳೂರಿನ ಬನಶಂಕರಿ ಬಡಾವಣೆಯ ವಾಸಿಯಾದ ಅದೇ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಸಿಂಹಾದ್ರಿಗೆ ಘಟನೆಯಿಂದ ಮುಖ, ಕಣ್ಣು, ಕಿವಿಗಳಿಗೆ ಸುಟ್ಟಗಾಯಗಳಾಗಿದೆ….

Read More

ರಿಪ್ಪನ್‌ಪೇಟೆ : ವರಾನಹೊಂಡದ ಭೂತರಾಯ ದೇವಸ್ಥಾನದಲ್ಲಿ ಹುಂಡಿ ಒಡೆದು ಕಳ್ಳತನ|Theft

ರಿಪ್ಪನ್ ಪೇಟೆ :  ಇಲ್ಲಿನ ಸಮೀಪದ ವರಾನಹೊಂಡದ  ಭೂತರಾಯನ ಗುಡಿಯಲ್ಲಿ ಹುಂಡಿ ಒಡೆದು ಕಳ್ಳತನ ಮಾಡಿರುವ ಘಟನೆ ನಡೆದಿದೆ. ಪಟ್ಟಣದ ತೀರ್ಥಹಳ್ಳಿ ರಸ್ತೆಯ ವರಾನಹೊಂಡದ ಶ್ರೀ ಭೂತರಾಯ ಸ್ವಾಮಿ ದೇವಸ್ಥಾನದ ಕಾಣಿಕೆ ಹುಂಡಿಯನ್ನು ಒಡೆದು ಕಳ್ಳತನ ಮಾಡಿದ್ದಾರೆ.ಭಾನುವಾರ ರಾತ್ರಿ ಕಳ್ಳತನ ನಡೆದಿರುವ ಸಾಧ್ಯತೆ ಇದೆ. ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲಿನ ಜನರಿಗೆ ವರಾನಹೊಂಡದ ಭೂತರಾಯ ದೇವಸ್ಥಾನವೆಂದರೆ ಅಪಾರ ಭಕ್ತಿ ಹಾಗೂ ಭಯ, ನಂಬಿಕೆ ಇರುವ ಸ್ಥಳವಾಗಿದ್ದು ಈ ಕ್ಷೇತ್ರದಲ್ಲಿ ಕಳ್ಳರು ಕೈಚಳಕ ತೋರಿಸಿರುವುದು ಅವರ ಅವನತಿಗೆ ದಾರಿಯಾಗಿದೆ ಎಂದು…

Read More

ಶಿರಾಳಕೊಪ್ಪದಲ್ಲಿ ಕಿಡಿಗೇಡಿಗಳ ಅಟ್ಟಹಾಸ – ನಿಷೇಧಿತ ಸಂಘಟನೆಯ ಗೋಡೆ ಬರಹ|shiralakopppa

ಮಲೆನಾಡಿನ ಹೆಬ್ಬಾಗಿಲಲ್ಲಿ ಮತ್ತೆ ಕಿಡಿಗೇಡಿ ಕೃತ್ಯ ಕಂಡು ಬಂದಿದೆ. ಶಾಂತವಾಗಿದ್ದ ಶಿವಮೊಗ್ಗದಲ್ಲಿ ‘ಜಾಯಿನ್ ಸಿಎಫ್‌ಐ’ ಎನ್ನುವ ಗೋಡೆ ಬರೆದು ಸಮಾಜದ ಸ್ವಾಸ್ಥ್ಯ ಕದಡಲು ಕಿಡಿಗೇಡಿಗಳು ಮುಂದಾಗಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದ ವಿವಿಧ ಕಡೆಗಳಲ್ಲಿ ಕಿಡಿಗೇಡಿಗಳು ಜಾಯಿನ್ ಸಿಎಫ್‌ಐ ಎಂಬ ಗೋಡೆ ಬರಹ ಬರದಿದ್ದಾರೆ. ಈ ಸಂಬಂಧ ಶಿರಾಳಕೊಪ್ಪ ಠಾಣೆಯಲ್ಲಿ ಸುಮೊಟೊ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಎಲ್ಲೆಲ್ಲಿ ಗೋಡೆ ಬರಹಗಳು? ಹಳೆಯ ಪೆಟ್ರೋಲ್ ಬಂಕ್ ಪಕ್ಕದ ಕಂಬ, ಭೋವಿ ಕಾಲೋನಿಗೆ ಹೋಗುವ ರಸ್ತೆಯಲ್ಲಿ ವಿದ್ಯುತ್ ಕಂಬ,…

Read More

ವರದಕ್ಷಿಣೆ ಕಿರುಕುಳದಿಂದ ಬೇಸತ್ತು ನವವಿವಾಹಿತೆ ಆತ್ಮಹತ್ಯೆ – ಪ್ರಕರಣ ದಾಖಲು|Dowry case

ನೂರಾರು ಕನಸು ಹೊತ್ತು ಮದುವೆಯಾಗಿದ್ದ ನವ ವಿವಾಹಿತೆ ವರದಕ್ಷಿಣೆ ಭೂತಕ್ಕೆ ಬಲಿಯಾಗಿರುವ ಘಟನೆ ಶಿವಮೊಗ್ಗ ಶಿಕಾರಿಪುರದ ಶಿರಾಳಕೊಪ್ಪದ ಉಡುಗುಣಿ ಗ್ರಾಮದಲ್ಲಿ ನಡೆದಿದೆ. ನವವಿವಾಹಿತೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಕಳೆದ ವರ್ಷವಷ್ಟೇ ಮದುವೆಯಾಗಿದ್ದ ಸಂಗೀತಾ ಅನುಮಾನಸ್ಪದವಾಗಿ ಸಾವನಪ್ಪಿದ್ದು, ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಂಡ, ಅತ್ತೆ ಮಾವನ ಕಿರುಕುಳಕ್ಕೆ ಅಮಾಯಕ ಜೀವ ಬಲಿಯಾಗಿದ್ದು, ಸಂಗೀತಾ ನೂರಾರು ಕನಸು ಹೊತ್ತು ಹರೀಶ್ ಎಂಬಾತನ ಜೊತೆ ಮದುವೆಯಾಗಿದ್ದರು. ಸಂಗೀತಾ ಪೋಷಕರು ಚಿನ್ನ, ಹಣ ಕೊಟ್ಟು ಅದ್ದೂರಿಯಾಗಿ ಮದುವೆ ಮಾಡಿದ್ದರು. ಮದುವೆಯಾದ ಆರು ತಿಂಗಳಿಗೆ…

Read More

ಸಾಗರದ ಬಳಿ ಹೊಸನಗರದ ಓಮಿನಿ‌ ಕಾರು ಅಪಘಾತ – ಜಖಂಗೊಂಡ ಕಾರಿನಲ್ಲಿ ಸಿಲುಕಿಕೊಂಡಿದ್ದ ವ್ಯಕ್ತಿಯ ಜೀವ ಉಳಿಸಿದ 112 ಸಿಬ್ಬಂದಿ|Accident

ಹೊಸನಗರದಿಂದ ಕುಮುಟಾ ಕಡೆಗೆ ತೆರಳುತಿದ್ದ ಮಾರುತಿ ಓಮಿನಿ ಕಾರು  ಆಕ್ಸಿಡೆಂಟ್​ ಆಗಿ, ಜಖಂ ಆದ ವಾಹನದಲ್ಲಿ ಸಿಲುಕಿ ನರಳುತ್ತಿದ್ದ ವ್ಯಕ್ತಿಯನ್ನು 112 ಸಿಬ್ಬಂದಿ ಕಾಪಾಡಿದ್ಧಾರೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.  ನಿನ್ನೆ ಬೆಳಗ್ಗಿನ ಜಾವ ಸಾಗರ ತಾಲ್ಲೂಕಿನ ಶಿರವಂತೆ ಬಳಿ ಅಪಘಾತವೊಂದು ಸಂಭವಿಸಿತ್ತು. ಹೊಸನಗರ ಮೂಲದ ಪ್ರವೀಣ್ ಓಮಿನಿ ಕಾರಿನಲ್ಲಿ  ಕುಮಟಾಕ್ಕೆ ಹೋಗುತ್ತಿದ್ದ ಸಂಧರ್ಭದಲ್ಲಿ ಅಪಘಾತವಾಗಿತ್ತು. ತಕ್ಷಣ ಸ್ಥಳೀಯರು 112 ಸಿಬ್ಬಂದಿ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ವಿಚಾರ ಕೇಳಿ ತಕ್ಷಣ…

Read More

ಡಾ.ಧನಂಜಯ್ ಸರ್ಜಿ ಹಾಗೂ ಕೆ ಎಸ್ ಪ್ರಶಾಂತ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆ|BJP

ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ವಿವಿಧ ಪಕ್ಷ ಸೇರುವವರ ಸಂಖ್ಯೆಯೂ ಏರಿಕೆಯಾಗುತ್ತಿದೆ. ಶಿವಮೊಗ್ಗದ ಖ್ಯಾತ ವೈದ್ಯ ಡಾ. ಧನಂಜಯ ಸರ್ಜಿ ಬಿಜೆಪಿ ಸೇರಿದರು. ಭಾನುವಾರ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ.ಧನಂಜಯ ಸರ್ಜಿ ಹಾಗೂ ಸಾಗರದ ಯುವ ರಾಜಕಾರಣಿ ಕೆ. ಎಸ್. ಪ್ರಶಾಂತ್ ಬಿಜೆಪಿ ಸೇರ್ಪಡೆಗೊಂಡರು. ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವ, ಶಿವಮೊಗ್ಗ ನಗರ ಶಾಸಕ ಶಾಸಕ ಕೆ. ಎಸ್. ಈಶ್ವರಪ್ಪ, ಶಿವಮೊಗ್ಗ ಸಂಸದ ಬಿ. ವೈ. ರಾಘವೇಂದ್ರ ಮುಂತಾದವರು ಉಪಸ್ಥಿತಿಯಲ್ಲಿ ಅವರು ಪಕ್ಷ…

Read More

ದ್ವಿತೀಯ ಪಿಯುಸಿ ಪೂರ್ವಸಿದ್ದತಾ ಪರೀಕ್ಷೆಯ ವೇಳಾಪಟ್ಟಿ ಪ್ರಕಟಣೆ|PUC

ಶಿವಮೊಗ್ಗ ಜಿಲ್ಲೆಯ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿಯನ್ನು  ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ಇಂದು ಪ್ರಕಟಿಸಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದಲ್ಲಿ ಮಹತ್ತರ ಪಾತ್ರ ವಹಿಸುವ  ಪದವಿ ಪೂರ್ವ ಶಿಕ್ಷಣ ಉನ್ನತ ಶಿಕ್ಷಣಕ್ಕೆ ಮಾರ್ಗದರ್ಶಿಯಾಗಲಿದೆ.  2023 ಜನವರಿ 18 ರಿಂದ ಜನವರಿ 29ರ ತನಕ ಪೂರ್ವ ಸಿದ್ಧತಾ ಪರೀಕ್ಷೆ ನಡೆಯಲಿದೆ. ಪರೀಕ್ಷಾ ವೇಳಾಪಟ್ಟಿ ಈ ಕೆಳಗಿನಂತಿದೆ.

Read More

ಶಂಕಿತ ಭಯೋತ್ಪಾದಕ ಶಾರೀಕ್ ಸಹಚರರ ಮಾಹಿತಿ ಸಂಗ್ರಹಕ್ಕೆ ಶಿವಮೊಗ್ಗಕ್ಕೆ NIA ತಂಡ ಭೇಟಿ

ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಮೊಹಮ್ಮದ್ ಶಾರಿಕ್ ಮತ್ತು ಆತನ ಸಹಚರರ ಕುರಿತು ಮಾಹಿತಿ ಸಂಗ್ರಹಿಸಲು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಶಿವಮೊಗ್ಗಕ್ಕೆ ಭೇಟಿ ನೀಡಿದ್ದಾರೆ. ಶನಿವಾರ ಬೆಳಗ್ಗೆ ಎನ್‌ಐಎ ಅಧಿಕಾರಿಗಳ ತಂಡ ಗ್ರಾಮಾಂತರ ಪೊಲೀಸ್ ಠಾಣೆಗೆ ಭೇಟಿ ನೀಡಿ, ಮಾಹಿತಿ ಸಂಗ್ರಹಿಸುತ್ತಿದೆ. ರಾಷ್ಟ್ರೀಯ ತನಿಖಾ ಸಂಸ್ಥೆಯ ಮೂವರು ಅಧಿಕಾರಿಗಳ ತಂಡ ಶಿವಮೊಗ್ಗಕ್ಕೆ ಆಗಮಿಸಿದೆ. ಮೂರು ತಿಂಗಳ ಹಿಂದೆ ತೀರ್ಥಹಳ್ಳಿಯ ಮೊಹಮ್ಮದ್ ಶಾರಿಕ್ ನ ಸಹಚರರಾದ ಮಾಜ್ ಮುನೀರ್ ಅಹಮದ್ ಮತ್ತು ಶಿವಮೊಗ್ಗದ ಸಯ್ಯದ್…

Read More

ಗಡಿಪಾರು ಆದೇಶಕ್ಕೆ ಹೆದರಿ ವಿಷ ಸೇವಿಸಿದ್ದ ತೀರ್ಥಹಳ್ಳಿಯ ರೌಡಿ ಶೀಟರ್ ಕೋಬ್ರಾ ಸುಹೈಲ್ ಸಾವು|cobra suhail

ತೀರ್ಥಹಳ್ಳಿ : ಹಲವಾರು ಕ್ರಿಮಿನಲ್‌ ಪ್ರಕರಣಗಳಲ್ಲಿ ಭಾಗಿಯಾಗಿ ಪೊಲೀಸ್‌ ಇಲಾಖೆಯಿಂದ ಗಡಿಪಾರು ಆದೇಶ ಪಡೆದಿದ್ದ ತೀರ್ಥಹಳ್ಳಿಯ ಸುಹೇಲ್ ಕೋಬ್ರಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಸುಹೇಲ್ ವಿರುದ್ದ ತೀರ್ಥಹಳ್ಳಿ ಹಾಗು ಮಾಳೂರು ಠಾಣೆಯಲ್ಲಿ ಹಲವು ಕ್ರಿಮಿನಲ್ ‌ಪ್ರಕರಣ ದಾಖಲಾಗಿದ್ದವು. ಈತನ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಇಲಾಖೆ ಎರಡು ವರ್ಷಗಳ ಅವಧಿಗೆ ಜಿಲ್ಲೆಯಿಂದ ಗಡಿಪಾರು ಮಾಡಿತ್ತು. ನವೆಂಬರ್‌ 25 ರಂದು ಗಡಿಪಾರು ಆದೇಶವನ್ನು ಜಾರಿ ಮಾಡಿ ಆತನ ಮನೆಗೆ ನೋಟಿಸ್‌ ಕಳುಹಿಸಲಾಗಿತ್ತು. ಈ ಗಡಿಪಾರು ಆದೇಶಕ್ಕೆ ಬೆದರಿದ್ದ ಸುಹೇಲ್‌ ಅಂದೇ…

Read More
Exit mobile version