Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಪಿಎಸ್ ಐ ಹಾಗೂ ಸಿಬ್ಬಂದಿಗಳ ಮೇಲೆ‌ ಪೊಲೀಸ್ ಠಾಣೆಯಲ್ಲೇ ಸಮವಸ್ತ್ರ ಹರಿದು ಹಲ್ಲೆ – ಇಬ್ಬರ ಬಂಧನ|nagara

ಹೊಸನಗರ: ಪಿಎಸ್ಐ ಸೇರಿದಂತೆ ಪೊಲೀಸರ ಸಮವಸ್ತ್ರ ಹರಿದು, ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಘಟನೆ ತಾಲೂಕಿನ ನಗರ ಪೊಲೀಸ್ ಠಾಣೆಯಲ್ಲೇ ನಡೆದಿದೆ. ಹೌದು ಹೀಗಂತ ನಗರ ಪೊಲೀಸ್ ಠಾಣೆಯಲ್ಲಿ ಪೊಲೀಸರಿಂದಲೇ ದೂರು ದಾಖಲಾಗಿದ್ದು ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ಬೇಳೂರು ಗ್ರಾಮದ ಮಕ್ಕಿಮನೆ ವಾಸಿಗಳಾದ ಕೃಷ್ಣಮೂರ್ತಿ(45), ರಾಮಚಂದ್ರ (50) ಬಂಧಿತ ಆರೋಪಿಗಳು ಏನಿದು ಘಟನೆ? ಭಾನುವಾರ ಸಂಜೆ ಠಾಣೆ ಬಂದ ಹರೀಶ್ ನೀಡಿದ ದೂರಿನ ಅರ್ಜಿಯಂತೆ, ಕೃಷ್ಣಮೂರ್ತಿ ಮತ್ತು ರಾಮಚಂದ್ರ ಎಂಬುವರನ್ನು ವಿಚಾರಣೆ ನಡೆಸುತ್ತಿದ್ದ ವೇಳೆ,…

Read More

ಹೆದ್ದಾರಿಪುರ ಗ್ರಾಪಂ ಸದಸ್ಯ ಚೂಡಾಮಣಿ‌ ಕಗ್ಗಲಿ ನಿಧನ|Heddaripura

ಹೊಸನಗರ ತಾಲ್ಲೂಕಿನ ಹೆದ್ದಾರಿಪುರ ಗ್ರಾಮ ಪಂಚಾಯತಿ ಸದಸ್ಯ ಚೂಡಾಮಣಿ ಕಗ್ಗಲಿ (50) ಅನಾರೋಗ್ಯದಿಂದ ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ. ಹೆದ್ದಾರಿಪುರ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಇವರು ಬಿಜೆಪಿ ಪಕ್ಷದ ಸಕ್ರೀಯ ಕಾರ್ಯಕರ್ತರಾಗಿದ್ದರು.ತೀವ್ರ ಅನಾರೋಗ್ಯದಿಂದ ಬಳಲುತಿದ್ದ ಇವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ. ಮೃತರು ತಾಯಿ,ಪತ್ನಿ ಇರ್ವರು ಪುತ್ರರನ್ನು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ತಮ್ಮ ಸ್ವಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಸಂತಾಪ :  ಬಿಜೆಪಿ ಪಕ್ಷದ…

Read More

ಕಾರು ಮತ್ತು ಬೈಕ್‌ ನಡುವೆ ಭೀಕರ ಅಪಘಾತ – ನಾಲ್ಕು ವರ್ಷದ ಮಗು ಸೇರಿ ಮೂವರ ಸಾವು|Accident

ಕಾರು, ಬೈಕ್ ಮುಖಾಮುಖಿ ಡಿಕ್ಕಿ ಸಂಭವಿಸಿ ನಾಲ್ಕು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಮತ್ತೊಬ್ಬನಿಗೆ ಗಂಭೀರ ಗಾಯವಾಗಿದೆ.  ಶಿವಮೊಗ್ಗ ಜಿಲ್ಲೆ ಶಿರಾಳಕೊಪ್ಪ ಸಮೀಪದ ಮಂಚಿಕೊಪ್ಪ ಬಳಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ಹಲುಗಿನಕೊಪ್ಪದ ಜ್ಯೋತಿ (30), ಗಂಗಮ್ಮ (50) ಮತ್ತು ಸೌಜನ್ಯ (4) ಮೃತರು.  ಕಾರು, ಬೈಕು ಮುಖಾಮುಖಿ ಡಿಕ್ಕಿಯಾಗಿದ್ದು, ಮಗು ಸೌಜನ್ಯ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಮಲ್ಲಿಕಾರ್ಜುನ, ಜ್ಯೋತಿ, ಗಂಗಮ್ಮ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಕೂಡಲೆ ಶಿಕಾರಿಪುರದ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆಸ್ಪತ್ರೆಯಲ್ಲಿ…

Read More

ಅರಿವಿನ ದಾರಿ ಸುಖ ಶಾಂತಿಗೆ ಮೂಲ – ಶ್ರೀ ರಂಭಾಪುರಿ ಜಗದ್ಗುರುಗಳು|Malali

ರಿಪ್ಪನ್‌ಪೇಟೆ : ಮನುಷ್ಯನ ಜೀವನ ಅರಿವು ಆದರ್ಶಗಳಿಂದ ಸದೃಢಗೊಳ್ಳಬೇಕು.ಅರಿವಿನ ದಾರಿ ಸುಖ ಶಾಂತಿಯ ಬದುಕಿಗೆ ಮೂಲ ಅಡಿಪಾಯವೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಹೇಳಿದರು. ರಿಪ್ಪನ್‌ಪೇಟೆ ಸಮೀಪದ ಮಳಲಿ ಮಹಾಸಂಸ್ಥಾನ ಮಠದಲ್ಲಿ ಅಯೋಜಿಸಲಾದ ಕಾರ್ತೀಕ ದೀಪೋತ್ಸವ ಮತ್ತು ಜನ ಜಾಗೃತಿ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ ಹೊರಗಿರುವ ಕತ್ತಲೆ ಕಳೆಯಲು ದೀಪ ಬೇಕು. ಮನುಷ್ಯನ ಒಳಗಿರುವ ಅಜ್ಞಾನ ಎಂಬ ಕತ್ತಲೆ ಕಳೆಯಲು ಗುರು ಬೋಧಾಮೃತ ಅವಶ್ಯಕ. ದೀಪ ಬೆಳಗುತ್ತಿದೆ. ಆದರೆ ಉರಿಯುತ್ತಿಲ್ಲ….

Read More

ಶಿವಮೊಗ್ಗ : ಕೌಟುಂಬಿಕ ಕಲಹಕ್ಕೆ ಬೇಸತ್ತು ನವವಿವಾಹಿತೆ ಆತ್ಮಹತ್ಯೆ|Sucide

ಶಿವಮೊಗ್ಗ: ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದ ಅಶ್ವತ್ಥ್ ನಗರದಲ್ಲಿ ನಡೆದಿದೆ. ನವ್ಯಶ್ರೀ ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತೆ. ನವ್ಯಶ್ರೀಗೆ 5 ತಿಂಗಳ ಹಿಂದೆ ಆಕಾಶ್ ಎಂಬ ಯುವಕನ ಜೊತೆ ವಿವಾಹವಾಗಿತ್ತು. ನಿನ್ನೆ ರಾತ್ರಿ ಕಾರ್ ಶೆಡ್‍ ನಲ್ಲಿ ನೇಣು ಬಿಗಿದು, ಆತ್ಮಹತ್ಯೆಗೆ ಶರಣಾಗಿದ್ದಾಳೆ. ಘಟನೆಗೆ ಸಂಬಂಧಿಸಿ ಆಕೆಯ ಕುಟುಂಬಸ್ಥರು ಮಾತನಾಡಿ, ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ನವ್ಯಶ್ರೀ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಹೊಸನಗರ : ಮನೆಯಿಂದ ನಾಪತ್ತೆಯಾಗಿದ್ದ ಮಹಿಳೆ ಇಂದು ಕೆರೆಯಲ್ಲಿ ಶವವಾಗಿ ಪತ್ತೆ|Hosanagara

ಕಳೆದ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ಇಂದು ಹೊಸನಗರ ಸಮೀಪದ ಇಟ್ಟಕ್ಕಿ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಹೊಸನಗರ ತಾಲೂಕಿನ ಬಿಳ್ಳೋಡಿ ಗ್ರಾಮದ ಮತ್ತಿಗ ನಿವಾಸಿ ಮಂಗಳ (36) ಮೃತ ಮಹಿಳೆಯಾಗಿದ್ದು ತನ್ನ ಗಂಡನೊಂದಿಗೆ ಕಳೆದ ಎರಡ್ಮೂರು ವರ್ಷಗಳಿಂದ ತಾಯಿ ಮನೆ ಮತ್ತಿಗ ಗ್ರಾಮದಲ್ಲಿ ವಾಸ ಮಾಡುತ್ತಿದ್ದರು. ಮಾನಸಿಕವಾಗಿ ದುರ್ಬಲರಾಗಿದ್ದ ಈಕೆ ನ.03 ರಂದು ಮಧ್ಯಾಹ್ನ 2:30ರ ಸುಮಾರಿಗೆ ಬಿಳ್ಳೋಡಿ ಗ್ರಾಮದಿಂದ ಕಾಣೆಯಾಗಿದ್ದರು. ಸಂಬಂಧಿಕರು ಎಲ್ಲ ಕಡೆ ಹುಡುಕಿದರು ಪತ್ತೆಯಾಗದೆ ಇದ್ದು ನಿನ್ನೆ ಹೊಸನಗರ ಠಾಣೆಯಲ್ಲಿ ಮೃತಳ…

Read More

ನ.6 ರಂದು ರಿಪ್ಪನ್‌ಪೇಟೆ ಪಟ್ಟಣದ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಎಲ್ಲೆಲ್ಲಿ ಗೊತ್ತಾ ???? ಈ ಸುದ್ದಿ ನೋಡಿ|Mescom

ರಿಪ್ಪನ್‌ಪೇಟೆ: ಹೊಸನಗರ ಉಪವಿಭಾಗದ ರಿಪ್ಪನ್‌ಪೇಟೆ ಶಾಖೆಯಲ್ಲಿ ನ. 6 ರ ಬೆಳಿಗ್ಗೆ 9.30 ರಿಂದ ಸಂಜೆ 6 ಗಂಟೆವರೆಗೆ ತುರ್ತು ನಿರ್ವಹಣಾ ಕಾರ್ಯದ ಪ್ರಯುಕ್ತ ರಿಪ್ಪನ್‌ಪೇಟೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆಲವೊಂದು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಪಟ್ಟಣದ ವಿನಾಯಕನಗರ ಮತ್ತು ಕೆರೆಹಳ್ಳಿ ವಾರ್ಡ್ಗಳಿಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಆದ್ದರಿಂದ ಗ್ರಾಹಕರು ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿ ಕೋರಿದೆ. 

Read More

ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಓರ್ವ ಗಂಭೀರ|Accident

ತೀರ್ಥಹಳ್ಳಿ : ಪಟ್ಟಣದ ಸೀಬಿನಕೆರೆ ಸಮೀಪದ ಯಡೆಹಳ್ಳಿ ಕೆರೆ ಬಳಿ ಬೈಕ್ ಹಾಗೂ ಕೆ ಎಸ್ ಆರ್ ಟಿ ಸಿ ಬಸ್‌ಗೆ ನಡುವೆ ಭೀಕರ ಅಪಘಾತವಾದ ಘಟನೆ ನಡೆದಿದೆ. ಯಡೆಹಳ್ಳಿ ಕೆರೆ ಏರಿ ಮೇಲೆ ಬಸ್ ಬೈಕ್ ಗೆ  ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನಿಗೆ ಗಂಭೀರವಾಗಿ ಗಾಯವಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಗುರುವಾರ ಸಂಜೆ ನಡೆದಿದೆ.   ತೀರ್ಥಹಳ್ಳಿಯ ಮಾರ್ಕೆಟ್ ರಸ್ತೆಯ ಸಿರಾಜ್ ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿರಾಜ್ ಅವರು ತೀರ್ಥಹಳ್ಳಿ ಯಿಂದ ಯಡೆಹಳ್ಳಿ…

Read More

ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಪತಿ

ಗಂಡ ಹೆಂಡತಿ ನಡುವೆ ಜಗಳವಾಗಿದ್ದು, ಗಂಡ ತನ್ನ ಹೆಂಡತಿ ಮೇಲೆ ರಾಡಿನಿಂದ ಹಲ್ಲೆ ನಡೆಸಿ, ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಶಿವಮೊಗ್ಗದ ದುಮ್ಮಳ್ಳಿಯಲ್ಲಿ ನಡೆದಿದೆ. ಶೋಭ (50) ಕೊಲೆಯಾದ ಮಹಿಳೆ. ಪ್ರಕಾಶ ಎಂಬಾತ ತನ್ನ ಹೆಂಡತಿ ಶೋಭರನ್ನು ಕೊಲೆ ಮಾಡಿದ್ದಾನೆ. ಇಂದು ಬೆಳಗ್ಗೆ ಸ್ಥಳಕ್ಕೆ ತುಂಗಾನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆರೋಪಿ ಪ್ರಕಾಶ್ ನನ್ನು ಕೃತ್ಯ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಬಂಧಿಸಿದ್ದಾರೆ. ಶೋಭಾ ದುಮ್ಮಳ್ಳಿಯಲ್ಲಿ ಹಾಲಿನ ಅಂಗಡಿ ನಡೆಸುತ್ತಿದ್ದರು. ಪತಿಯೊಂದಿಗೆ…

Read More

18 ಕೊಲೆ,20 ಅತ್ಯಾಚಾರದ ಆರೋಪಿ ವಿಕೃತಕಾಮಿ ಉಮೇಶ್ ರೆಡ್ಡಿಯ ಗಲ್ಲು ಶಿಕ್ಷೆ ರದ್ದು!!!!!!!|Umesh Reddy

ಕರ್ನಾಟಕ ಹೈಕೋರ್ಟ್ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ (CJI) ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಸುಮಾರು ಹತ್ತು ವರ್ಷಗಳ ಕಾಲ ಅಕ್ರಮ ಏಕಾಂತವಾಸವನ್ನು ಪರಿಗಣಿಸಿ ವಿಕೃತ ಕಾಮಿ ಉಮೇಶ್‌ ರೆಡ್ಡಿಯ ಮರಣದಂಡನೆಯನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ.  1998ರ ಫೆಬ್ರವರಿ 28ರಂದು ಜಯಶ್ರೀ ಎಂಬ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಅಪರಾಧಿ ಎಂದು ಸಾಬೀತಾದ ಬಳಿಕ ಬೆಂಗಳೂರಿನ ಸೆಷನ್ಸ್ ನ್ಯಾಯಾಲಯವು…

Read More