Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಮತಾಂತರವಾಗುವಂತೆ ಪತ್ನಿಗೆ ಪತಿಯಿಂದ ಚಿತ್ರಹಿಂಸೆ – ತೀರ್ಥಹಳ್ಳಿ ಮೂಲದ ಖಾದರ್ ವಿರುದ್ದ ಪ್ರಕರಣ ದಾಖಲು|arrested

ವಿವಾಹಿತ ಹಿಂದೂ ಮಹಿಳೆಗೆ ವಿಚ್ಛೇದನ ಕೊಡಿಸಿ, ನಂತರ ಆಕೆಯನ್ನ ಮದುವೆಯಾಗಿ ಇದೀಗ ಮತಾಂತರವಾಗುವಂತೆ ಹಿಂಸೆ ನೀಡುತ್ತಿರುವ ಆರೋಪ ಮಹಿಳೆಯಿಂದ ಕೇಳಿಬಂದಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ನಿವಾಸಿ ಅಬ್ದುಲ್ ಖಾದರ್ ಎಂಬಾತನ ವಿರುದ್ಧ ಈ ಆರೋಪ ಕೇಳಿಬಂದಿದ್ದು, ಚಿತ್ರದುರ್ಗದ ಮಹಿಳಾ ಠಾಣೆಯ ಪೊಲೀಸರು ಎಫ್​ಐಆರ್ ದಾಖಲು ಮಾಡಿ, ಈ ಸಂಬಂಧ ತನಿಖೆ ಆರಂಭಿಸಿದ್ದಾರೆ. ತೀರ್ಥಹಳ್ಳಿ ಮೂಲದ ಸಂತ್ರಸ್ತ ಮಹಿಳೆ ಹತ್ತು ವರ್ಷಗಳ ಹಿಂದೆಯೇ ಶ್ರೀನಿವಾಸ್ ಎಂಬುವವರನ್ನ ವಿವಾಹವಾಗಿದ್ದರು. ಹೊಟ್ಟೆಪಾಡಿಗಾಗಿ ತೀರ್ಥಹಳ್ಳಿಯಲ್ಲಿರುವ ಡಯಾಲಿಸಿಸ್ ಸೆಂಟರ್​ ನಲ್ಲಿ ಕೆಲಸ ಮಾಡುತ್ತಿದ್ದಳು. ಈ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (19-11-2022) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…|Mescom

ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 19/11/22 ರಂದು ಬೆಳಿಗ್ಗೆ 9-30 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್ ಪೇಟೆ  110/11 ಕೆ ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣ ಕಾರ್ಯವಿರುವ ನಿಮಿತ್ತ  ನಾಳೆ ಬೆಳಿಗ್ಗೆ 9-30 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ ??? ರಿಪ್ಪನ್ ಪೇಟೆ,ಹೆದ್ದಾರಿಪುರ,ಕೆಂಚನಾಲ,ಗರ್ತಿಕೆರೆ, ಬೆಳ್ಳೂರು,ಅರಸಾಳು,ಕೋಡೂರು ಮತ್ತು ಚಿಕ್ಕಜೇನಿ…

Read More

ಬಿಜೆಪಿ ತೆಕ್ಕೆಗೆ ಜಾರಿದ ಶಿಕಾರಿಪುರ ಜೆಡಿಎಸ್ ಅಭ್ಯರ್ಥಿ ಹೆಚ್ ಟಿ ಬಳಿಗಾರ್ |shikaripura

ಶಿಕಾರಿಪುರದಲ್ಲಿ ಜೆಡಿಎಸ್​ ನಿಂದ ಸ್ಪರ್ಧಿಸುತ್ತಿರುವ ಅಭ್ಯರ್ಥಿಯನ್ನೇ ಬಿಜೆಪಿ ತನ್ನತ್ತಾ ಸೆಳೆದು ಜೆಡಿಎಸ್​ಗೆ ಶಾಕ್ ನೀಡಿದೆ.  ಶಿಕಾರಿಪುರದ ಅಭ್ಯರ್ಥಿಯಾಗಿದ್ದ ಹೆಚ್.ಟಿ. ಬಳಿಗಾರ್ ಕಳೆದ ಎರಡು ಬಾರಿ ಜೆಡಿಎಸ್​ನಿಂದ ಸ್ಪರ್ಧಿಸಿದ್ದರು.ಆದರೆ ಈ ಬಾರಿ ಬಿಜೆಪಿ ಹೆಚ್ ಟಿ ಬಳಿಗಾರ್​ರನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಶಿವಮೊಗ್ಗ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ನೂರಾರು ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಅಧಿಕೃತವಾಗಿ ಚಳಿಗಾರ್ ಬಿಜೆಪಿಯನ್ನು ಸೇರಿದ್ದಾರೆ.  ಈ ವೇಳೆ ಗೃಹಸಚಿವ ಆರಗ ಜ್ಞಾನೇಂದ್ರ, ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಉಪಸ್ಥಿತರಿದ್ದರು. ಚುನಾವಣೆಗೆ ನಾಲ್ಕೈದು ತಿಂಗಳಿರುವಾಗಲೇ…

Read More

ಚಲಿಸುತಿದ್ದ KSRTC ಬಸ್ ನಿಂದ ಹಾರಿ ವ್ಯಕ್ತಿ ಆತ್ಮಹತ್ಯೆ|

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ‍ಚಲಿಸುತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಭದ್ರಾವತಿಯ ವೀರಾಪುರ ಕ್ರಾಸ್ ಬಳಿ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಮಿಳ್ಳೆನಹಳ್ಳಿ ನಿವಾಸಿ ನಂದೀಶ್ (35) ಎಂಬುವವರು ಮೃತ ದುರ್ದೈವಿ. ನಂದೀಶ್‌ ಕಳೆದ ಹಲವು ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮೆಗ್ಗಾನ್ ಆಸ್ಪೆತ್ರೆಗೆ ಚಿಕಿತ್ಸೆಗಾಗಿ ಸ್ನೇಹಿತನ ಜತೆ ಬಂದಿದ್ದ ನಂದೀಶ್, ಚಿಕಿತ್ಸೆ ಪಡೆಯುವುದಿಲ್ಲ ಎಂದು ಹಠ ಮಾಡಿದ್ದಾರೆ. ಆಸ್ಪತ್ರೆಯಿಂದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ವಾಪಸ್ ಬರುತ್ತಿದ್ದಾಗ, ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದಲೇ…

Read More

ತೀರ್ಥಹಳ್ಳಿಯಲ್ಲಿ ಕೋರ್ಟ್ ಕಟ್ಟಡವನ್ನೇ ಗೋಡೌನ್ ಮಾಡಿಕೊಂಡಿದ್ದ ಗುಜರಿ ವ್ಯಾಪಾರಿ – ಆರೋಪಿಗೆ ನ್ಯಾಯಂಗ ಬಂಧನ|Thirthahalli

ನ್ಯಾಯಾಲಯದ ಕಟ್ಟಡವನ್ನು ಗೋಡೌನ್ ಮಾಡಿ ಕೊಂಡಿದ್ದ ವ್ಯಕ್ತಿಯೊಬ್ಬನಿಗೆ ತೀರ್ಥಹಳ್ಳಿ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿ, ಬಿಗ್ ಶಾಕ್ ನೀಡಿರುವಂತ ಘಟನೆ ನಡೆದಿದೆ. ತೀರ್ಥಹಳ್ಳಿ ಪಟ್ಟಣದ ಶಿಬಿನಕೆರೆಯಲ್ಲಿ ಹೊಸ ನ್ಯಾಯಾಲಯವಾದ ಪ್ರಯುಕ್ತ ಸೊಪ್ಪು ಗುಡ್ಡೆಯಲ್ಲಿರುವ ಹಳೆ ನ್ಯಾಯಾಲಯದ ಕಟ್ಟಡದಲ್ಲಿ ಬೀಗಗಳನ್ನು ಹಾಕಿ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧಿತ ಮತ್ತು ನಿಷೇಧಿತ ಪ್ರದೇಶವೆಂದು ಕಟ್ಟಡಗಳಿಗೆ ಬೀಗಗಳನ್ನು ಹಾಕಲಾಗಿತ್ತು. ನ್ಯಾಯಾಲಯದ ಕಟ್ಟಡದ ಆವರಣದಲ್ಲಿ ಅನೇಕರು ತಮ್ಮ ಕಾರುಗಳನ್ನು ಅಕ್ರಮ ಪಾರ್ಕಿಂಗ್ ಮಾಡಿಕೊಂಡಿದ್ದರು. ಇದಲ್ಲದೆ ಸೊಪ್ಪುಗುಡ್ಡೆ ಎರಡನೇ ಕ್ರಾಸ್ ನಿವಾಸಿ ಮೇರಾ ರಾಮ್ ಬಿನ್…

Read More

ಸಮಾಜಕ್ಕೆ ನಿಖರ ಸುದ್ದಿ ಮತ್ತು ಜ್ಞಾನವನ್ನು‌ ಪ್ರಸರಿಸುವ ವಾಹಿನಿಗಳ ಅಗತ್ಯತೆ ಇದೆ – ಶಾಸಕ ಹರತಾಳು ಹಾಲಪ್ಪ|sagara

ಸಾಗರ : ಇಂದಿನ ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಸುದ್ದಿ‌ಮಾಧ್ಯಮಗಳು ಪೈಪೋಟಿಗೆ ಬಿದ್ದು ಸುದ್ದಿಗಳನ್ನು ನೀಡುವುದರ ಜೊತೆಗೆ ಸಮಾಜಕ್ಕೆ ನಿಖರ ಸುದ್ದಿ ಮತ್ತು ಜ್ಞಾನವನ್ನು ಪ್ರಸರಿಸುವ ಅಗತ್ಯ ಇದೆ. ಜನರು ವಾಹಿನಿಗಳ ಮೇಲೆ ಇರಿಸಿಕೊಂಡಿರುವ ನಂಬಿಕೆ ಶಾಶ್ವತವಾಗಿ ಉಳಿಸಿ ಬೆಳೆಸಿಕೊಳ್ಳುವ ನಿಟ್ಟಿನಲ್ಲಿ ವಿಸ್ತಾರ ಚಾನಲ್ ಗಮನ ಹರಿಸಬೇಕು ಎಂದು ಶಾಸಕ ಎಚ್.ಹಾಲಪ್ಪ ಹರತಾಳು ತಿಳಿಸಿದರು.  ಪಟ್ಟಣದ ನಗರಸಭೆ ರಂಗಮಂದಿರದಲ್ಲಿ ಗುರುವಾರ ವಿಸ್ತಾರ ವಾಹಿನಿ ಕನ್ನಡ ಸಂಭ್ರಮ ಕಾರ್ಯಕ್ರಮವನ್ನು ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದ ಅವರು…

Read More

ರಿಪ್ಪನ್‌ಪೇಟೆ – ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಮದೀನಾ ಕಾಲೋನಿಯ ಯುವಕನ ಬಂಧನ|Ripponpet

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಸಂತೆ ಮಾರ್ಕೆಟ್ ಬಳಿ ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಟ್ಟಣದ ಮದೀನಾ ಕಾಲೋನಿ ನಿವಾಸಿ ತನ್ವೀರ್ ಬಂಧಿತ ಆರೋಪಿಯಾಗಿದ್ದಾನೆ.ಈತನಿಗೆ ಇತ್ತೀಚೆಗೆ ಗಾಂಜಾ ಸೇವನೆ ಆರೋಪದಡಿಯಲ್ಲಿ ಬಂಧಿಸಲಾಗಿದ್ದ ಸಿದ್ದಪ್ಪನಗುಡಿ ನಿವಾಸಿ ಸಿದ್ದೇಶ್ ಗಾಂಜಾ ನೀಡಿರುವುದಾಗಿ ತನಿಖೆ ವೇಳೆಯಲ್ಲಿ ಆರೋಪಿ ಒಪ್ಪಿಕೊಂಡಿರುವ ಹಿನ್ನಲೆಯಲ್ಲಿ ಸಿದ್ದೇಶ್ ಮೇಲೆ ಪ್ರಕರಣ ದಾಖಲಾಗಿದೆ. ವೈದ್ಯಕೀಯ ಪರೀಕ್ಷೆಯಿಂದ ಆರೋಪಿ ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿರುವ ಹಿನ್ನಲೆಯಲ್ಲಿ ಮಾದಕ ದ್ರವ್ಯ ಕಾಯ್ದೆಯಡಿ ಆರೋಪಿಯನ್ನು…

Read More

ನ.22 ಕ್ಕೆ ಅಡಕೆ ಬೆಳೆಯ ಎಲೆಚುಕ್ಕೆ ರೋಗದ ಅಧ್ಯಯನಕ್ಕೆ ಕೇಂದ್ರ ತಂಡ ತೀರ್ಥಹಳ್ಳಿಗೆ ಆಗಮನ : ಆರಗ ಜ್ಞಾನೇಂದ್ರ|Araga

ರಾಜ್ಯದಲ್ಲಿ ಅಡಿಕೆ ತೋಟಗಳಲ್ಲಿ ಹಬ್ಬಿರುವ ಎಲೆಚುಕ್ಕೆ ರೋಗದ ಬಗ್ಗೆ ಅಧ್ಯಯನ ನಡೆಸಿ, ಪರಿಹಾರ ಕಂಡುಕೊಳ್ಳಲು ಕೇಂದ್ರ ಸರಕಾರದ ಏಳು ಮಂದಿ ತಜ್ಞರನ್ನು ಒಳಗೊಂಡ ತಜ್ನರ ಸಮಿತಿ ಮುಂದಿನ ವಾರ ರಾಜ್ಯಕ್ಕೆ ಆಗಮಿಸಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಜತೆ ಇಂದು ಮಾತನಾಡಿರುವ ಸಚಿವರು ಮಲೆನಾಡು ಹಾಗೂ ಕರಾವಳಿ ಭಾಗದ ರೈತರು ಎದುರಿಸುತ್ತಿರುವ ಸಂಕಷ್ಟಕ್ಕೆ ಕೇಂದ್ರ ಸರಕಾರ ತಕ್ಷಣ ಸ್ಪಂದಿಸಿದ್ದು ಅಡಿಕೆ ಬೆಳೆಗೆ ಎದುರಾಗಿರುವ ರೋಗ ನಿವಾರಣೆಗೆ ಸಮಿತಿ ಪರಿಹಾರ ಕಂಡುಕೊಳ್ಳಲು…

Read More

ಗಾಜನೂರಿನ ಫಿಶ್ ಹೊಟೇಲ್ ಗಳ ಮೇಲೆ ಅಬಕಾರಿ ಇಲಾಖೆ ದಾಳಿ – ಅಪಾರ ಪ್ರಮಾಣದ ಮದ್ಯ ವಶ|gajanoor

ಗಾಜನೂರಿನಲ್ಲಿರುವ ಫಿಶ್ ಹೋಟೆಲ್ ಗಳ ಮೇಲೆ ಅಬಕಾರಿ ಇಲಾಖೆ ದಾಳಿ ನಡೆಸಿದೆ. ಯಾವುದೇ ಪರವಾನಗಿ ಇಲ್ಲದೆ ಫಿಶ್ ಹೋಟೆಲ್ ಗಳು ಮದ್ಯ ಸೇವನೆಗೆ ಅವಕಾಶ ಮಾಡಿಕೊಟ್ಟ ಹಿನ್ನಲೆಯಲ್ಲಿ ದಾಳಿ ನಡೆದಿದೆ. ಮಂಗಳವಾರ ಅಬಕಾರಿ ಉಪ ಆಯುಕ್ತರು ಕ್ಯಾಪ್ಟನ್ ಅಜೀತ್ ಕುಮಾರ್ ಮಾರ್ಗದರ್ಶನ ಹಾಗೂ ನಿರ್ದೇಶನದಲ್ಲಿ ಶಿವಮೊಗ್ಗ ತಾಲ್ಲೂಕಿನ ಗಾಜನೂರು ವ್ಯಾಪ್ತಿಯಲ್ಲಿನ ರೆಸ್ಟೋರೆಂಟ್ ಗಳು ಯಾವುದೇ ಅಬಕಾರಿ ಲೈಸೆನ್ಸ್ ಹೊಂದಿಲ್ಲದೆ ಸಾರ್ವಜನಿಕರಿಗೆ ಹೋಟೆಲ್ ನಲ್ಲಿ ಮದ್ಯ ಸರಬರಾಜು ಮಾಡಿ‌ ಸೇವಿಸಲು ಸ್ಥಳಾವಕಾಶ ಮಾಡಿಕೊಟ್ಟಿರುವ 7 ಹೋಟೆಲ್ ಗಳ ಮೇಲೆ…

Read More

ಕಾರ್ಯಕರ್ತರು ಹಾಗೂ ಅಭಿಮಾನಿಗಳೊಂದಿಗೆ ಕಾಫಿ ಸವಿದ ಗೃಹ ಸಚಿವ ಆರಗ ಜ್ಞಾನೇಂದ್ರ – ಸೆಲ್ಫಿಗಾಗಿ ಮುಗಿಬಿದ್ದ ಅಭಿಮಾನಿಗಳು ಹಾಗೂ ಕಾರ್ಯಕರ್ತರು|Ripponpet

ರಿಪ್ಪನ್ ಪೇಟೆ :ಆನವಟ್ಟಿಯಲ್ಲಿ ಜನ ಸಂಕಲ್ಪ  ಕಾರ್ಯಕ್ರಮ ಮುಗಿಸಿಕೊಂಡು ತೀರ್ಥಹಳ್ಳಿ ಗೆ ತೆರಳುವ ಮಾರ್ಗ ಮಧ್ಯದಲ್ಲಿ ರಿಪ್ಪನ್ ಪೇಟೆಯ ವಿನಾಯಕ ವೃತ್ತದ ಗಣೇಶ್ ಪ್ರಸಾದ್ ಹೊಟೇಲ್ ನಲ್ಲಿ  ಇಂದು ಸಂಜೆ ರಾಜ್ಯ ಗೃಹ ಸಚಿವರಾದ  ಆರಗ ಜ್ಞಾನೇಂದ್ರ ಸ್ಥಳೀಯ ಬಿಜೆಪಿ ಕಾರ್ಯಕರ್ತರ ಕುಶಲೋಪರಿ ವಿಚಾರಿಸಿದರು. ಹೊಟೇಲ್ ನಲ್ಲಿ ಕಾಫ಼ಿ ಸವಿಯುವುದರೊಂದಿಗೆ ಜನಸಾಮಾನ್ಯರೊಂದಿಗೆ ಬೆರೆತು ಸರಳತೆ ಮೆರೆದಿದ್ದಾರೆ.ಈ ಸಂಧರ್ಭದಲ್ಲಿ ಜನಸಾಮಾನ್ಯರು ಗೃಹ ಸಚಿವರೊಂದಿಗೆ ಸೆಲ್ಪಿಗೆ ಮುಂದಾದಗ ನಗುಮೊಗದಲ್ಲೇ ಎಲ್ಲಾರೊಂದಿಗೆ ಸೆಲ್ಪಿ ಕ್ಲಿಕ್ಕಿಸಿಕೊಂಡರು. ಗೃಹ ಸಚಿವರ ಆಗಮನದ ಸುದ್ದಿ ತಿಳಿಯುತಿದ್ದಂತೆ…

Read More