Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ವಾಲಿಬಾಲ್ ಪಂದ್ಯಾವಳಿಯಲ್ಲಿ ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ| volleyball

ರಿಪ್ಪನ್ ಪೇಟೆ :- ಶಿವಮೊಗ್ಗ ಜಿಲ್ಲಾ ಮಟ್ಟದ  ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹೊಸನಗರ ತಾಲೂಕು ಮಟ್ಟದಿಂದ ಶಿವಮೊಗ್ಗ ಜಿಲ್ಲಾ ಮಟ್ಟಕ್ಕೆ ಅರ್ಹತೆ ಪಡೆದು  ವಾಲಿಬಾಲ್ ಪಂದ್ಯಾವಳಿಯಲ್ಲಿ ಬಾಲಕರ ಹಾಗೂ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ .    ಜಿಲ್ಲಾ ಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆಯುವುದರ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳಿಗೆ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶಾಸಕ…

Read More

ಎರಡು ಕಾರುಗಳು,ಬಸ್ ಮತ್ತು ಬೈಕ್ ನಡುವೆ ಸರಣಿ ಅಪಘಾತ : ನಾಲ್ವರಿಗೆ ತೀವ್ರ ಗಾಯ-ಮೆಗ್ಗನ್ ಗೆ ದಾಖಲು |Accident

ಎರಡು ಕಾರುಗಳು, ಬಸ್ಸು ಮತ್ತು ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿ, ನಾಲ್ವರು ಗಾಯಗೊಂಡಿರುವ ಘಟನೆ ಸಾಗರ ತಾಲೂಕಿನ ಕುಗ್ವೆ ಕ್ರಾಸ್ ಬಳಿ ಸಂಜೆ ಸಂಭವಿಸಿದೆ.  ಕುಗ್ವೆ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ವ್ಯಾಗನಾರ್ ಕಾರು, ಬೈಕ್, ಕಾರು ಮತ್ತು ಬಸ್ಸಿಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಜೋಗ ನಿವಾಸಿಗಳಾದ ಕೃಷ್ಣಮೂರ್ತಿ, ಬಾಲಕೃಷ್ಣ, ಮಧು ಮತ್ತು ಶ್ರೀಧರ್ ಎಂಬುವವರಿಗೆ ತೀವ್ರ ಗಾಯವಾಗಿದೆ. ಅವರನ್ನು ಕೂಡಲೆ ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ…

Read More

ಕಬ್ಬಡ್ಡಿ ಪಂದ್ಯಾವಳಿಯಲ್ಲಿ ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ :[KABBADDI]

ರಿಪ್ಪನ್ ಪೇಟೆ :- ಶಿವಮೊಗ್ಗ ಜಿಲ್ಲಾ ಮಟ್ಟದ  ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹೊಸನಗರ ತಾಲೂಕು ಮಟ್ಟದಿಂದ ಶಿವಮೊಗ್ಗ ಜಿಲ್ಲಾ ಮಟ್ಟಕ್ಕೆ ಅರ್ಹತೆ ಪಡೆದು  ಕಬ್ಬಡ್ಡಿ ಪಂದ್ಯಾವಳಿಯಲ್ಲಿ  ಬಾಲಕಿಯರ ವಿಭಾಗದಲ್ಲಿ  ಪ್ರಥಮ ಸ್ಥಾನವನ್ನು  ಬಾಲಕರವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು  ಹಾಗೂ 400 ಮೀಟರ್ ಓಟದ ವಿಭಾಗದಲ್ಲಿ ದೀಕ್ಷಾ ಎಂಬ ವಿದ್ಯಾರ್ಥಿನಿ ದ್ವಿತೀಯ ಸ್ಥಾನವನ್ನು  ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗುವುದರ ಮೂಲಕ ಹೊಸನಗರ ತಾಲೂಕಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.  ಶಿವಮೊಗ್ಗ ಜಿಲ್ಲೆಯ  ಸರ್ಕಾರಿ…

Read More

ಮೋದಿ ಜನ್ಮದಿನಾಚರಣೆಯ ಪ್ರಯಕ್ತ ಅಕ್ಟೋಬರ್ 1ರಂದು ಹೊಂಬುಜದಲ್ಲಿ ಜಿಲ್ಲಾ ಮಟ್ಟದ ಅಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾವಳಿ

ರಿಪ್ಪನ್‌ಪೇಟೆ : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 72 ನೇ ಜನ್ಮ ದಿನಾಚರಣೆಯ ಅಂಗವಾಗಿ ಹೊಂಬುಜ ದಲ್ಲಿ ಜಿಲ್ಲಾ ಮಟ್ಟದ ಆಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಮೋದಿ ಜನ್ಮ ದಿನಾಚರಣೆ ಅಂಗವಾಗಿ  ಬಿಜೆಪಿ ರೈತ ಮೋರ್ಚ ವಿವಿಧ ಕಾರ್ಯಕ್ರಮಗಳನ್ನು ಅಯೋಜಿಸಲಾಗಿದ್ದು ಈಗಾಗಲೇ ಹುಂಚ ಬಳಿಯಲ್ಲಿರುವ ಬಿಲ್ಲೇಶ್ವರ ಕುಮದ್ವತಿ ಉಗಮ ಸ್ಥಾನದ ಬಳಿಯ ಪುಷ್ಕರಣೆಯ ಅಮೃತ ಸರೋವರ ಸ್ವಚ್ಚತಾ ಅಂದೋಲನ ಮತ್ತು ರಕ್ತದಾನ ಶಿಬಿರ, ಅರೋಗ್ಯ ತಪಾಸಣೆ, ಎಸ್‌ಸಿ ಎಸ್ ಟಿ ಜನಾಂಗದ 50 ಅಯ್ದ ಬಡಮಕ್ಕಳಿಗೆ…

Read More

ಸರ್ಕಾರದ ಯೋಜನೆಗಳನ್ನು ಬಳಸಿಕೊಂಡು ಆರೋಗ್ಯ ಸದೃಡಗೊಳಿಸಿಕೊಳ್ಳಬೇಕು : ಚಂದ್ರಕಲಾ | ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಪೋಷಣ್ ಅಭಿಯಾನ

ರಿಪ್ಪನ್‌ಪೇಟೆ : ಅಪೌಷ್ಠಿಕತೆಯಿಂದ ಬಳಲುತ್ತಿರುವ ಜನರನ್ನು ಅನಾರೋಗ್ಯ ಮುಕ್ತರನ್ನಾಗಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ ಮಾಡುವ ಉದ್ದೇಶದಿಂದ ಸರಕಾರ ಪೋಷಣ್ ಅಭಿಯಾನವನ್ನು ಜಾರಿಗೆ ತಂದಿಗೆ ಎಂದು ಹೊಸನಗರ ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಚಂದ್ರಕಲಾ ಹೇಳಿದರು.        ಸಮೀಪದ ಬೆಳ್ಳೂರು ಗ್ರಾಮದಲ್ಲಿ ಗ್ರಾಮ ಪಂಚಾಯತಿ ಬೆಳ್ಳೂರು ಮತ್ತು ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಶಿಶುಅಭಿವೃದ್ಧಿ ಯೋಜನೆಯ ವತಿಯಿಂದ ಗರ್ಭೀಣಿ ಮತ್ತು ಬಾಣಂತಿಯರಿಗಾಗಿ ಆಯೋಜಿಸಿದ್ದ ಪೋಷಣ್ ಅಭಿಯಾನ ಕಾರ್ಯಕ್ರಮದಲ್ಲಿ…

Read More

ಕೆ ಎಸ್ ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಬೈಕ್ ಸವಾರ ಸಾವು

ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಭದ್ರಾವತಿ ನಗರದ ಉಂಬ್ಳೆಬೈಲು ರಸ್ತೆಯಲ್ಲಿ ಕೆಎಸ್ಆರ್ ಟಿ ಸಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ. ಆಂಜನೇಯ ಅಗ್ರಹಾರದ ಮೂರನೇ ತಿರುವಿನ ನಿವಾಸಿ ಲೋಕೇಶ್ ಎಂಬಾತನು ಬೈಕ್ ನಲ್ಲಿ ಹೋಗುತ್ತಿದ್ದಾಗ ನ್ಯೂಟೌನ್ ಪೊಲೀಸ್ ಠಾಣೆಯ ಸಮೀಪ ಕೆಎಸ್ ಆರ್ ಟಿ ಸಿ ಬಸ್ ಗೆ ಡಿಕ್ಕಿ ಹೊಡೆದಿದ್ದಾರೆ. ಬೈಕ್ ಸವಾರ…

Read More

ಖಾಸಗಿ ಈಜುಕೊಳದಲ್ಲಿ ಸ್ನೇಹಿತರೊಂದಿಗೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವು :

ಖಾಸಗಿ ಈಜುಕೊಳದಲ್ಲಿ ಸ್ನೇಹಿತರೊಂದಿಗೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ತನ್ನ ಸ್ನೇಹಿತರೊಂದಿಗೆ ಶಿವಮೊಗ್ಗದ ಶಕ್ತಿಧಾಮದ ಖಾಸಗಿ‌ ಈಜುಕೊಳಕ್ಕೆ ತೆರಳಿದ್ದ ಜೋಸೆಫ್ ನಗರದ ಯುವಕ ರಾಕೇಶ್ ಎಂಬ 18 ವರ್ಷದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಡಿವಿಎಸ್ ಕಾಮರ್ಸ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ರಾಕೇಶ್ ಎರಡು ಮೂರು ದಿನಗಳಿಂದ ಸ್ನೇಹಿತರೊಂದಿಗೆ ಈಜುಕೊಳದಲ್ಲಿ ತೆರಳಿ ಈಜು ಹೊಡೆಯಲು ಯೋಜನೆ ಹಾಕಿಕೊಂಡಿದ್ದ. ಇಂದು ಮಧ್ಯಾಹ್ನ ಈಜುಕೊಳಕ್ಕೆ ತೆರಳಿದ್ದ ಯುವಕ ಮನೆಗೆ ಹೊರಡುವ ವೇಳೆ ನೀರಿನಿಂದ…

Read More

ಹೊಸನಗರ ತಾಲೂಕ್ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಎಂ ಬಿ ಲಕ್ಷ್ಮಣಗೌಡ ಆಯ್ಕೆ

ರಿಪ್ಪನ್ ಪೇಟೆ : ಹೊಸನಗರ ತಾಲೂಕು ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ರಿಪ್ಪನ್‌ಪೇಟೆಯ ಎಂ. ಬಿ ಲಕ್ಷ್ಮಣಗೌಡ ಆಯ್ಕೆಯಾಗಿದ್ದಾರೆ. 15 ಜನ ನಿರ್ದೇಶಕರನ್ನು ಹೊಂದಿರುವ ಹೊಸನಗರ ತಾಲೂಕು ಒಕ್ಕಲಿಗರ ಸಂಘದ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ಇತ್ತೀಚೆಗೆ ನಡೆದಿತ್ತು.ಈ ಚುನಾವಣೆಯಲ್ಲಿ ಎಂ.ಬಿ ಲಕ್ಷ್ಮಣಗೌಡ ನೇತ್ರತ್ವದ ತಂಡದಿಂದ ಕಣಕ್ಕಿಳಿದ ಅಭ್ಯರ್ಥಿಗಳು 12 ಸ್ಥಾನಗಳಲ್ಲಿ 9 ಸ್ಥಾನಗಳನ್ನು ಪಡೆದು ಜಯಭೇರಿ ಗಳಿಸಿ,ಅವಿರೋಧವಾಗಿ ಆಯ್ಕೆಯಾದ ಮೂವರು ಸೇರಿದಂತೆ 12 ಸ್ಥಾನವನ್ನು ಪಡೆದಿದ್ದರು. ಇಂದು ಪಟ್ಟಣದ ಸಾಗರ ರಸ್ತೆಯ ವಿಶ್ವಮಾನವ ಸಭಾಭವನದಲ್ಲಿ ನಡೆದ ಆಡಳಿತ…

Read More

ದೇಶಾದ್ಯಂತ ಐದು ವರ್ಷ PFI ಮತ್ತು 8 ಅಂಗಸಂಸ್ಥೆಗಳನ್ನು ಬ್ಯಾನ್ ಮಾಡಿದ ಕೇಂದ್ರ ಸರ್ಕಾರ :

ಕೇಂದ್ರ ಸರ್ಕಾರ ಪಿಎಫ್‌ಐ ಸಂಘಟನೆಯನ್ನು ಬ್ಯಾನ್ ಮಾಡಿದೆ. ಕೇಂದ್ರ ಸರ್ಕಾರದ ಗೃಹ ಇಲಾಖೆ ಪಿಎಫ್‌ಐ ಸಂಘಟನೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಐದು ವರ್ಷ ಬ್ಯಾನ್ ಮಾಡಿದೆ. ಕಾನೂನು ಬಾಹಿರ ಸಂಘಟನೆ ಎಂದು PFI(ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಮತ್ತು ಅದರ ಸಹವರ್ತಿಗಳು ಅಥವಾ ಅಂಗಸಂಸ್ಥೆಗಳು ಅಥವಾ ರಂಗಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ಬ್ಯಾನ್ ಮಾಡಲಾಗಿದೆ ಎಂದು ಸರ್ಕಾರ ಘೋಷಿಸಿದೆ. ಇತ್ತೀಚೆಗಷ್ಟೇ ಕರ್ನಾಟಕ ಸೇರಿದಂತೆ ದೇಶಾದ್ಯಂತ ಪಿಎಫ್‌ಐ ಕಚೇರಿಗಳ ಮೇಲೆ ದಾಳಿ ಮಾಡಿದ್ದ ಎನ್‌ಐಎ…

Read More

ಬೆನವಳ್ಳಿ : ನರೇಗಾ ಕಾಮಗಾರಿಗೆ ತಡರಾತ್ರಿ ಟ್ರ್ಯಾಕ್ಟರ್ ಬಳಕೆ : ಗ್ರಾಮಸ್ಥರ ತಡೆ

ರಿಪ್ಪನ್‌ಪೇಟೆ : ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬೆನವಳ್ಳಿ ಸರ್ಕಾರಿ ಪಾಠಶಾಲೆಯ ಆಟದ ಮೈದಾನ ಸಮತಟ್ಟು ಕಾಮಗಾರಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ಹಣ ಮಂಜಾರಾಗಿದ್ದು ಕಳೆದ ಒಂದು ತಿಂಗಳಿಂದ ಕೂಲಿಗಳ ಮೂಲಕ ಕಾಮಗಾರಿ ನಿರ್ವಹಿಸಲಾಗುತ್ತಿತ್ತು. ಆದರೆ ಸೋಮವಾರ ಮಧ್ಯರಾತ್ರಿಯಲ್ಲಿ ಏಕಾಏಕಿ ಟ್ರ್ಯಾಕ್ಟರ್ ತಂದು ನರೇಗ ಕಾಮಗಾರಿ ನಿರ್ವಹಿಸುವುದನ್ನು ಖಂಡಿಸಿ ಅಧಿಕಾರಿಗಳು ಬರುವವರೆಗೂ ಟ್ರ್ಯಾಕ್ಟರ್ ಹೊರ ಬಿಡದೇ ಪಟ್ಟು ಹಿಡಿದು ಬೆನವಳ್ಳಿಯ ನೂರಾರು ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಸುಮಾರು 15 ರಿಂದ 20 ಜನ ಮಹಿಳಾ…

Read More
Exit mobile version