ಬಿಜೆಪಿ ಸರಕಾರದ ಭ್ರಷ್ಟಾಚಾರದ ವಿರುದ್ದ ತೀವ್ರ ಪ್ರತಿಭಟನೆ:ಹೆಚ್ ಎಸ್ ಸುಂದರೇಶ್
ಶಿವಮೊಗ್ಗ: ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದು, ಇದಕ್ಕೆ ಲಗಾಮ ಹಾಕುವವರೇ ಇಲ್ಲವಾಗಿದೆ. ಇದರ ವಿರುದ್ಧ ಕಾಂಗ್ರೆಸ್ ತನ್ನ ಪ್ರತಿಭಟನೆಯನ್ನು ತೀವ್ರಗೊಳಿಸಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿಯಿಂದ ಹಿಡಿದು ಪಕ್ಷದ ಸಾಮಾನ್ಯ ಕಾರ್ಯಕರ್ತನವರೆಗೂ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಯಾವುದೇ ಹೊಸ ಯೋಜನೆಗಳು ಬಂದರೂ ಕೂಡಾ ಕಿಕ್‍ಬ್ಯಾಕ್ ಸಿದ್ಧವಾಗಿಯೇ ಇರುತ್ತದೆ. ಶೇ.20ರಷ್ಟು ಗುಣಮಟ್ಟದ ಕೆಲಸವನ್ನು ಮಾಡುತ್ತಿಲ್ಲ. ಗ್ರಾಮೀಣ ಪ್ರದೇಶದಲ್ಲಿ ಬೇಕಾಬಿಟ್ಟಿ ಕೆಲಸಗಳು ನಡೆಯುತ್ತಿದೆ. ಕಳಪೆ ರಸ್ತೆಯಿಂದ ಹಿಡಿದು…