Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಯುವಕ ಸ್ಥಳದಲ್ಲೇ ಸಾವು – ಇನ್ನೋರ್ವ ಗಂಭೀರ|Accident

ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪ ಗ್ಯಾಸ್ ಸಿಲಿಂಡರ್ ಲಾರಿ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಶಿವಮೊಗ್ಗದಿಂದ ಆಯನೂರು ಕಡೆ ಹೊರಟಿದ್ದ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿಗೆ ಹಾಗೂ ಆಯನೂರಿನಿಂದ ಶಿವಮೊಗ್ಗಕ್ಕೆ ಹೊರಟಿದ್ದ ಬೈಕ್ ನ ನಡುವೆ ಈ ಅಪಘಾತ ಸಂಭವಿಸಿದ್ದು. ಸ್ಥಳದಲ್ಲೇ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾರೆ. ಆಯನೂರು ಕೋಟೆ ನಿವಾಸಿ ಯಶವಂತ್ ಎಂಬ ವ್ಯಕ್ತಿ ಸ್ಥಳದಲ್ಲೇ  ಸಾವನ್ನಪ್ಪಿದ್ದಾರೆ. ಬೈಕ್ ನ ಹಿಂಬದಿ ಕೂತಿದ್ದ ವ್ಯಕ್ತಿಯ ಕಾಲು ಮುರಿದಿದ್ದು ತಕ್ಷಣ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ…

Read More

ರಿಪ್ಪನ್‌ಪೇಟೆ : ಅದ್ದೂರಿಯಾಗಿ ಜರುಗಿದ ಈದ್ ಮಿಲಾದ್ ಮೆರವಣಿಗೆ|Ripponpet

ರಿಪ್ಪನ್‌ಪೇಟೆ : ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಮತ್ತು ಮೆಕ್ಕಾ ಜುಮ್ಮಾ ಮಸೀದಿ, ತಝೀಝುಲ್ ಇಸ್ಲಾಂ ಮದ್ರಸ.ಮೀಲಾದ್ ಸ್ವಾಗತ ಸಮಿತಿ, ಬದ್ರಿಯಾ ಮದ್ರಸ ಸಮಿತಿ ಎಸ್.ಎಸ್.ಎಫ್,ಮತ್ತು ಎಸ್.ವೈ.ಎಸ್. ಇವರ ಸಹಯೋಗದಲ್ಲಿ ಅಯೋಜಿಸಲಾದ “ಇಲಲ್ ಹಬೀಬ್ ಮೀಲಾದ್’ ಸಮಾರಂಭದ ಅಂಗವಾಗಿ ಇಂದು ಈದ್ ಮಿಲಾದ್ ಮೆರವಣಿಗೆ ನಡೆಯಿತು. ಹೊಸನಗರ ರಸ್ತೆಯಿಂದ ವಿನಾಯಕ ವೃತ್ತದ ಮೂಲಕ ಸಾಗರ ರಸ್ತೆಯಲ್ಲಿನ ಖಬರ್ ಸ್ಥಾನ್ ವರೆಗೆ ಮುಸಲ್ಮಾನ ಭಾಂಧವರು ಯುವಕರ “ದಫ಼್’’ ಅಕರ್ಷಣೆಯೊಂದಿಗೆ  ಮುಸ್ಲಿಂ ಧರ್ಮಗುರುಗಳ ನೇತೃತ್ವದಲ್ಲಿ  ಮೆರವಣಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು….

Read More

ರಿಪ್ಪನ್‌ಪೇಟೆ : ನಿವೃತ ಎ ಎಸ್ ಐ ಮನೆಗೆ ಹಗಲು ಹೊತ್ತಿನಲ್ಲಿಯೇ ನುಗ್ಗಿ ಕಳ್ಳತನ – ಹತ್ತು ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣ ಕಳ್ಳತನ|Theft

ರಿಪ್ಪನ್‌ಪೇಟೆ : ಇಲ್ಲಿ‌ನ ತೀರ್ಥಹಳ್ಳಿ ರಸ್ತೆಯಲ್ಲಿ ವಾಸವಾಗಿರುವ ನಿವೃತ್ತ ಎಎಸ್ ಐ ರೊಬ್ಬರ ಮನೆಗೆ ಹಗಲು ಹೊತ್ತಿನಲ್ಲಿಯೇ ಕಳ್ಳರು ನುಗ್ಗಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣವನ್ನು ಕಳ್ಳತನ ಮಾಡಿರುವ ಘಟನೆ ಇಂದು ನಡೆದಿದೆ. ದಿನದಿಂದ ದಿನಕ್ಕೆ ಕಳ್ಳರು ಸ್ಮಾರ್ಟ್​ ಆಗುತ್ತಿದ್ದಾರೆ, ಮತ್ತಷ್ಟು ಚುರುಕಾಗುತ್ತಿದ್ದಾರೆ. ತಂತ್ರಜ್ಞಾನ ಎಷ್ಟೇ ಅಭಿವೃದ್ಧಿ ಹೊಂದಿದರೂ.. ಅವರವರದ್ದೇ ಆದ ದಾರಿಗಳನ್ನು ಕಂಡುಕೊಂಡು, ತಾವು ಐನಾತಿ ಕಳ್ಳರೇ ಸರಿ ಎಂಬವುದನ್ನು ಸಾಬೀತುಪಡಿಸುತ್ತಿದ್ದಾರೆ. ತಂತ್ರಜ್ಞಾನದ ಸಮ್ಮುಖದಲ್ಲಿ ರಾತ್ರಿಗಳು ಮೊದಲಿನಂತಿಲ್ಲ… ಹಾಗಂತ ಹಗಲು ಎಚ್ಚೆತ್ತುಕೊಳ್ಳುವುದಕ್ಕೆ ಅವಕಾಶವಿದೆಯಾ ಎಂದು ನೋಡಿದರೆ…

Read More

ಸ್ನೇಹಿತರ ನಡುವಿನ ಗಲಾಟೆ ಚೂರಿ ಇರಿತದಲ್ಲಿ ಅಂತ್ಯ : ಗಾಯಾಳು ಆಸ್ಪತ್ರೆಗೆ ದಾಖಲು-ಆರೋಪಿ ಪರಾರಿ|Stabbed

ಹೊಟೇಲ್ ನಲ್ಲಿ ಊಟ ಮಾಡುತಿದ್ದ ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾತು ಮಾತಲ್ಲೇ ಗಲಾಟೆಯಾಗಿ ಒಬ್ಬನಿಗೆ ಚೂರಿ ಇರಿತವಾಗಿರುವ ಘಟನೆ ನಡೆದಿದೆ. ಸಾಗರ ನಗರದ ಬಿ.ಎಚ್ ರಸ್ತೆಯ ಮಂಜುಶ್ರೀ ಹೋಟೆಲಿಗೆ ಗ್ರಾಹಕರಾಗಿ ಇಬ್ಬರು ಯುವಕರು ಬಂದಿದ್ದಾರೆ. ಅವರ ನಡುವೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆಯಾಗಿದೆ. ಗಲಾಟೆ ತಾರಕಕ್ಕೇರಿ, ಒಬ್ಬ ಮತ್ತೊಬ್ಬನಿಗೆ ಚೂರಿಯಿಂದ ಚುಚ್ಚಿದ್ದಾನೆ. ಇರಿತಕ್ಕೆ ಒಳಗಾದವನನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.ಚೂರಿಯಿಂದ ಹಲ್ಲೆ ನಡೆಸಿದ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ.  ಘಟನಾ ಸ್ಥಳಕ್ಕೆ ಪೊಲೀಸರು ಬಂದು ಸ್ಥಳ ಪರಿಶೀಲನೆ…

Read More

ವಿಧಾನಸಭೆಯ ಡೆಪ್ಯೂಟಿ ಸ್ಪೀಕರ್ ಶಾಸಕ ಆನಂದ್ ಮಾಮನಿ ನಿಧನ|Bangalore

ವಿಧಾನಸಭೆಯ ಉಪಸಭಾಧ್ಯಕ್ಷ ಹಾಗೂ ಬೆಳಗಾವಿ ಜಿಲ್ಲೆ ಸವದತ್ತಿ ಕ್ಷೇತ್ರದ ಶಾಸಕರೂ ಆಗಿದ್ದ ಆನಂದ್ ಚಂದ್ರಶೇಖರ್ ಮಾಮನಿ (56) ಅವರು ತಡರಾತ್ರಿ ನಿಧನರಾಗಿದ್ದಾರೆ. ತೀವ್ರ ಸ್ವರೂಪದ ಅನಾರೋಗ್ಯದ ಹಿನ್ನೆಲೆಯಲ್ಲಿ ಎರಡು ತಿಂಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸದೆ ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾದರು. ಉಪಸಭಾಪತಿಯಾಗಿದ್ದ ವೇಳೆ ಅವರು ಕಲಾಪದಲ್ಲಿ ಸದನವನ್ನು ನಿರ್ವಹಿಸುತ್ತಿದ್ದ ರೀತಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ಬೆಳಗಾವಿ ಜಿಲ್ಲೆಯ ಸವದತ್ತಿ ವಿಧಾನಸಭೆ ಕ್ಷೇತ್ರದಿಂದ ಸತತ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಅವರು, ಮಾದರಿ ಜನಪ್ರತಿನಿಧಿಯಾಗಿ ಕ್ಷೇತ್ರದಲ್ಲಿ…

Read More

ಕೊಡಚಾದ್ರಿ ಬೆಟ್ಟವೇರಿದ್ದ ಕೇರಳ ಮೂಲದ ವ್ಯಕ್ತಿ ಹೃದಯಾಘಾತದಿಂದ ಸಾವು|Kodachadri

ಕೊಡಚಾದ್ರಿ ಗಿರಿ ಹತ್ತಿದ ವ್ಯಕ್ತಿಯೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ. ಕೇರಳದ ಕನ್ನೂರು ಜಿಲ್ಲೆಯ ವಾಲಪ್ಪಿಲ್ ಸಮೀಪದ ಕೊಟ್ಟಾರತು ಗ್ರಾಮದ ನಿವಾಸಿ ಗೋವಿಂದನ್ ಕುನ್ನಪ್ಪ (72) ಮೃತ ವ್ಯಕ್ತಿ ಶುಕ್ರವಾರದಂದು ಕೇರಳದಿಂದ ಕೊಲ್ಲೂರು ಶ್ರೀ ಮೂಕಾಂಬಿಕ ದರ್ಶನಕ್ಕೆ ಬಂದಿದ್ದ ಗೋವಿಂದನ್ ಕುಟುಂಬ ಕೊಲ್ಲೂರಿನಲ್ಲಿ ವಾಸ್ತವ್ಯ ಹೂಡಿ ಇಂದು ಬೆಳಿಗ್ಗೆ ಕೊಡಚಾದ್ರಿ ಗಿರಿಗೆ ಹೋಗಿದ್ದು ಪ್ರವಾಸಿಮಂದಿರದಿಂದ ಗಿರಿ ತುದಿಯ ಸರ್ವಜ್ಞ ಪೀಠಕ್ಕೆ ಕಾಲ್ನಡಿಗೆಯಲ್ಲಿ ತೆರಳಿದ್ದರು. ಸರ್ವಜ್ಞ ಪೀಠ ತಲುಪಿದ ನಂತರ ಅಲ್ಲೇ ಗೋವಿಂದನ್ ಕುನ್ನಪ್ಪ ಕುಸಿದು…

Read More

ಡಿನೋಟಿಫಿಕೇಷನ್ ರದ್ದುಗೊಳಿಸಿದ ರಾಜ್ಯ ಸರ್ಕಾರ : ಅತಂತ್ರಗೊಂಡ ಶರಾವತಿ ಮುಳುಗಡೆ ಸಂತ್ರಸ್ತರ ಬದುಕು|Sharavathi

ಶರಾವತಿ ಮುಳುಗಡೆ ಸಂತ್ರಸ್ತರ ಭೂ ಹಕ್ಕಿನ ಕನಸು ಮತ್ತೆ ಕಮರಿ‌ ಹೋಗಿದೆ.ನ್ಯಾಯಾಂಗ ನಿಂದನೆ ಭಯದಿಂದ‌ ರಾಜ್ಯ ಸರ್ಕಾರ ಡಿನೋಟಿಫಿಕೇಷನ್ ರದ್ದುಗೊಳಿಸಿದೆ. ಈ ಮೂಲಕ ರಾಜ್ಯಕ್ಕೆ ಬೆಳಕು ನೀಡಲು ತಮ್ಮ ಸರ್ವಸ್ವವನ್ನೇ ತ್ಯಾಗ ಮಾಡಿರುವ ಮುಳುಗಡೆ ಸಂತ್ರಸ್ತರನ್ನು ಸರ್ಕಾರ ಮತ್ತೊಮ್ಮೆ ಅನಾಥರನ್ನಾಗಿಸಿದೆ. ಹೌದು, ವಿದ್ಯುತ್ ಉತ್ಪಾದನೆ ಸಲುವಾಗಿ ಲಿಂಗನಮಕ್ಕಿ ಜಲಾಶಯ ನಿರ್ಮಾಣದ ವೇಳೆ ಶಿವಮೊಗ್ಗದ ಸಾಗರ, ಹೊಸನಗರ ತಾಲೂಕಿನ 166 ಗ್ರಾಮಗಳ 6,177 ಕುಟುಂಬಗಳನ್ನು ಎತ್ತಂಗಡಿ ಮಾಡಲಾಗಿತ್ತು. ಅಂದಿನ‌ ರಾಜ್ಯ ಸರ್ಕಾರ 1962 ರಲ್ಲಿಯೇ ಪುನರ್ವಸತಿಗಾಗಿ ಅರಣ್ಯ ಭೂಮಿಯನ್ನ…

Read More

ರಿಪ್ಪನ್‌ಪೇಟೆ : ಧರ್ಮಸ್ಥಳಕ್ಕೆ ಹೋಗಿ‌ ಕೇಶ ಮುಂಡನೇ ಮಾಡಿಸಿಕೊಂಡು ಬಂದಿದ್ದ ವ್ಯಕ್ತಿ ಆತ್ಮಹತ್ಯೆ|Sucide

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೋಡೂರು ಗ್ರಾಮದ ಇಂದಿರಾನಗರ ನಿವಾಸಿ ಸತೀಶ್ (35) ತನ್ನ ಮನೆಯಲ್ಲಿಯೇ ಇಂದು ಸಂಜೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಗಾರೆ ಕೆಲಸ ಮಾಡಿಕೊಂಡಿದ್ದ ಈತ ಮಾನಸಿಕವಾಗಿ ನೊಂದಿದ್ದ. ಕಳೆದ ಮೂರು ದಿನಗಳ ಹಿಂದಷ್ಟೇ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥನ ದರ್ಶನ ಪಡೆದು ಪೂಜೆ ಸಲ್ಲಿಸಿ ಕೇಶ ಮುಂಡನ ಮಾಡಿಸಿಕೊಂಡು ಬಂದಿದ್ದ ಎಂದು ತಿಳಿದುಬಂದಿದೆ. ಪತ್ನಿ, ಇಬ್ಬರು (ಪುತ್ರಿ, ಪುತ್ರ) ಚಿಕ್ಕ ಮಕ್ಕಳನ್ನು ಹಾಗೂ ಸಹೋದರ ಸೇರಿದಂತೆ ಅಪಾರ…

Read More

ಎಲ್ಲ ಧರ್ಮಗಳಿಗಿಂತ ಮಾನವ ಧರ್ಮ ಶ್ರೇಷ್ಠ : ಫಾದರ್ ವೀರೇಶ್ ವಿ ಮೋರಸ್ |ರಿಪ್ಪನ್‌ಪೇಟೆಯಲ್ಲಿ ನಡೆದ ಸೌಹಾರ್ದ ಸಮ್ಮಿಲನ ಕಾರ್ಯಕ್ರಮ

ರಿಪ್ಪನ್‌ಪೇಟೆ : ಎಲ್ಲಾ ಧರ್ಮಗಳಿಗಿಂತ ಮಾನವ ಧರ್ಮ ಶ್ರೇಷ್ಠ ಎಂಬುವುದನ್ನು ಕೋವಿಡ್ ಎಂಬ ಖಾಯಿಲೆ ಇಡೀ ಮನುಕುಲಕ್ಕೆ ಉತ್ತಮ ಪಾಠವನ್ನು ಕಲಿಸಿಕೊಟ್ಟಿದೆ.ಇಂದಿನ ಕಾಲದಲ್ಲಿ ಮನುಷ್ಯತ್ವ ಮಾತ್ರ ಜೀವಂತವಾಗಿದೆ ಎಂದು ಶಿವಮೊಗ್ಗ ಕ್ರೈಸ್ತ ಧರ್ಮ ಕ್ಷೇತ್ರದ ಧರ್ಮ ಗುರು ಫಾದರ್ ವೀರೇಶ್ ವಿ. ಮೋರಸ್ ಹೇಳಿದರು. ಗುರುವಾರ ಸಂಜೆ ರಿಪ್ಪನ್ ಪೇಟೆಯ ಮೊಹಿಯುದ್ದೀನ್ ಜುಮ್ಮಾ ಮಸೀದಿ ವತಿಯಿಂದ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಏರ್ಪಡಿಸಿದ್ದ ಇಲಾಲ್ ಹಬೀಬ್ ಮಿಲಾದ್ ಧಾರ್ಮಿಕ ಸಮ್ಮೇಳದಲ್ಲಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಿ ಮಾತನಾಡಿ ಎಲ್ಲಾ…

Read More

ಗರ್ತಿಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಳ್ಳತನ| ಕೋಣಂದೂರಿನ ಎರಡು ಶಾಲೆಗಳಲ್ಲಿ ಕಳ್ಳತನ|theft

ಗರ್ತಿಕೆರೆ: ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಬೀಗಗಳನ್ನು ತುಂಡರಿಸಿ ಒಳ ನುಗ್ಗಿದ ದುಷ್ಕರ್ಮಿಗಳು ಗಾಡ್ರೇಜ್ ಬೀರುಗಳನ್ನು ಮುರಿದು  ಕಡತಗಳನ್ನು ಚೆಲ್ಲಾಪಿಲ್ಲಿ ಮಾಡಿ ಗಾಡ್ರೇಜ್ ಬೀರುನಲ್ಲಿದ್ದ ಅಂದಾಜು 20 ಸಾವಿರ ಕ್ಕೂ ಹೆಚ್ಚು ಹಣವನ್ನು ದೋಚಿಕೊಂಡು ಹೋಗಿರುವ ಘಟನೆ ತಡರಾತ್ರಿ ನಡೆದಿದೆ. ಇಂದು ಬೆಳಿಗ್ಗೆ ಕಾಲೇಜು ಸಿಬ್ಬಂದಿಗಳು ಕಾಲೇಜಿಗೆ ಬಂದಾಗ ಬೀಗ ಮುರಿದ ಪರಿಸ್ಥಿತಿ ನೋಡಿ ಕಾಲೇಜಿನ ಕಡತಗಳು ಚೆಲ್ಲಾಪಿಲ್ಲಿಯಾಗಿ ಇರುವುದನ್ನು ಕಂಡು ದಂಗಾಗಿ ಕಾಲೇಜಿನ ಪ್ರಾಚಾರ್ಯರಿಗೆ ಹಾಗೂ ಪೊಲೀಸರಿಗೆ ಘಟನೆ ಬಗ್ಗೆ ತಿಳಿಸಿದ್ದಾರೆ. ಸ್ಥಳಕ್ಕೆ ಶ್ವಾನ…

Read More