ಸಿಮ್ಸ್ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ವಿಧ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ : ಮರು ತನಿಖೆ ನಡೆಸುವಂತೆ ಆಗ್ರಹ
ಸಿಮ್ಸ್ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ವಿಧ್ಯಾರ್ಥಿನಿಯೊಬ್ಬರ ಮೇಲೆ ಹಿರಿಯ ವೈದ್ಯರೊಬ್ಬರಿಂದ ನಡೆದಿರುವ ಲೈಂಗಿಕ ದೌರ್ಜನ್ಯದ ಪ್ರಕರಣವನ್ನು ಮುಚ್ಚಿಹಾಕಲಾಗಿದ್ದು, ಈ ಕೂಡಲೆ ತನಿಖೆ ನಡೆಸಿ ತಪ್ಪಿತಸ್ಥ ವೈದ್ಯರ ವಿರುದ್ಧ ಕಠಿಣ ಕ್ರಮವನ್ನು ಕೈಗೊಂಡು ಪೀಪಲ್ಸ್ ಲಾಯರ್ ಗಿಲ್ಡ್ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಕಳೆದ ಶುಕ್ರವಾರ ಅಂದರೆ ದಿನಾಂಕ:15-07-2022 ರಂದು ಸಿಮ್ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯ ಮೇಲೆ ಹಿರಿಯ ಶಸ್ತ್ರ ಚಿಕಿತ್ಸೆ ವೈದ್ಯರಾದ ಆಶ್ವಿನ್ ಹೆಬ್ಬಾರ್, ಎಂಬುವರಿಂದ ಲೈಂಗಿಕ ದೌರ್ಜನ್ಯ ಎಸಗಿದ ಬಗ್ಗೆ ಉತ್ತರಭಾರತೀಯ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಸಿಮ್ಸ್ ನಿರ್ದೇಶಕರಿಗೆ ಲಿಖಿತ ದೂರನ್ನು…


