ಚಂದ್ರಗುತ್ತಿ: ರೇಣುಕಾಂಬ ದೇವಸ್ಥಾನದ ಪ್ರಧಾನ ಅರ್ಚಕರಾದ ಅರ್ಚಕ್ ದತ್ತಾತ್ರೇಯ ಭಟ್ ನಿಧನ:
ಚಂದ್ರಗುತ್ತಿ: ಇಲ್ಲಿನ ಪುರಾಣ ಹಾಗೂ ಐತಿಹಾಸಿಕ ಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸಿದ್ದ ಅರ್ಚಕ್ ದತ್ತಾತ್ರೇಯ ಭಟ್ (80) ಭಾನುವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ ಶನಿವಾರ ತೀವ್ರವಾದ ಎದೆನೋವು ಕಾಣಿಕೊಂಡಿತ್ತು, ತಕ್ಷಣವೇ ಶಿರಸಿಯ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಭಾನುವಾರ ಬೆಳಗಿನ ಜಾವ ಮೃತಪಟ್ಟಿದ್ದಾರೆ. ಮೃತರು ಪುತ್ರರಾದ ಅರ್ಚಕ ಅರವಿಂದ್ ಭಟ್, ಅರ್ಚಕ ನಿರಂಜನ್ ಭಟ್ ಸೇರಿದಂತೆ ಪತ್ನಿ, ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. ಸಂತಾಪ: ಶ್ರೀ…