ಆರಗ ಜ್ಞಾನೇಂದ್ರರಿಗೆ ಮಂತ್ರಿ ಸ್ಥಾನ ನೀಡುವಂತೆ ತೀರ್ಥಹಳ್ಳಿ ತಾಲೂಕು ಬಿಜೆಪಿ ಮುಖಂಡರಿಂದ ಒಕ್ಕೊರಲ ಮನವಿ:
ತೀರ್ಥಹಳ್ಳಿ : ಶಾಸಕ ಆರಗ ಜ್ಞಾನೇಂದ್ರರಿಗೆ ಮಂತ್ರಿ ಸ್ಥಾನ ನೀಡುವಂತೆ ತಾಲೂಕಿನ 500ಕ್ಕೂ ಹೆಚ್ಚು ಬಿಜೆಪಿ ಮುಖಂಡರುಗಳು ಇಂದು ಸಂಸದರಾದ ಬಿ.ವೈ.ರಾಘವೇಂದ್ರರನ್ನುಶಿಕಾರಿಪುರದ ಪ್ರವಾಸಿಮಂದಿರದಲ್ಲಿ ಭೇಟಿ ಮಾಡಿ ಮನವಿ ಮಾಡಿದರು. ಸತತ 9 ಬಾರಿ ಕ್ಷೇತ್ರವನ್ನು ಪ್ರತಿನಿಧಿಸಿ 5 ಬಾರಿ ಶಾಸಕರಾಗಿರುವ ಸ್ನೇಹಮಯಿ ವ್ಯಕ್ತಿತ್ವದ ಆರಗ ಜ್ಞಾನೇಂದ್ರ ರವರು ಓರ್ವ ಹಿರಿಯ ಮುತ್ಸದ್ಧಿ ರಾಜಕಾರಣಿ.ಪಕ್ಷ ಅಧಿಕಾರದಲ್ಲಿರಲಿ ಬಿಡಲಿ ತಾಲೂಕಿನಲ್ಲಿ ತಮ್ಮದೇ ಕಾರ್ಯಶೈಲಿ ಹಾಗೂ ವಿಭಿನ್ನ ವ್ಯಕ್ತಿತ್ವದ ಮೂಲಕ ತಳಮಟ್ಟದ ಕಾರ್ಯಕರ್ತರನ್ನು ಒಗ್ಗೂಡಿಸುವುದರಲ್ಲಿ ಸಿದ್ದ ಹಸ್ತರು.ಕ್ಷೇತ್ರವನ್ನು ಸತತವಾಗಿ ಪ್ರತಿನಿಧಿಸುತ್ತಾ,ಪಕ್ಷ ಬಲವರ್ಧನೆಗೆ…