Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಎರಡು ದಿನದ ಹಿಂದೆ ಸ್ನೇಹಿತರೊಂದಿಗೆ ಹುಟ್ಟುಹಬ್ಬ ಆಚರಿಸಿದ್ದ ಯುವಕ ನೇಣಿಗೆ ಶರಣು :

ಸಾಗರ : ಯುವಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಎಸ್.ಎನ್ ನಗರ ಹೊಸಬಡಾವಣೆಯಲ್ಲಿ  ಭಾನುವಾರ ನಡೆದಿದೆ. ನಾಗರಾಜ್(23) ಆತ್ಮಹತ್ಯೆ ಮಾಡಿಕೊಂಡ ಯುವಕ. ಗ್ಯಾಸ್ ಬಂಕ್ ನಲ್ಲಿ ಕರ್ತವ್ಯ ನಿರ್ವಹಿಸುವ ನಾಗರಾಜ್ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಎರಡು ದಿನಗಳ ಹಿಂದೆಯಷ್ಟೇ ಸ್ನೇಹಿತರೊಂದಿಗೆ ನಾಗರಾಜ್ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾನೆ. ಮೃತ ನಾಗರಾಜನ ತಾಯಿ ತೀರಿಕೊಂಡು ನಾಳೆಗೆ ಒಂದು ವರ್ಷ ಆಗಲಿದೆ. ಮನೆಯಲ್ಲಿ ಒಬ್ಬಂಟಿ ಆಗಿದ್ದ ನಾಗರಾಜ್ ತಾಯಿಯ ಅಗಲಿಕೆಯಿಂದ ಮಾನಸಿಕವಾಗಿ ನೊಂದಿದ್ದ ಎನ್ನಲಾಗಿದೆ. ಸಾಗರ ಪೇಟೆ…

Read More

ರಿಪ್ಪನ್‌ಪೇಟೆ : ಸುತ್ತಮುತ್ತಲಿನ ಸಾರ್ವಜನಿಕ ಗಣಪತಿ ವಿಸರ್ಜನೆ

ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಪ್ರದೇಶಗಳಾದ ಕೊಳವಂಕ, ಕಲ್ಲುಹಳ್ಳ, ಬಸವಾಪುರ, ಕಳಸೆ, ಸೂಡೂರು ಕೋಣನಜಡ್ಡು, ಹಾರೋಹಿತ್ತಲು,ದೂನ ,ಬೆನವಳ್ಳಿ ಮತ್ತು ಜೀರಿಗೆಮನೆ,ಗ್ರಾಮದಲ್ಲಿ ಯುವಕ ಸಂಘಗಳು  ಪ್ರತಿಷ್ಠಾಪಿಸಿದ್ದ ಸಾರ್ವಜನಿಕ ಗಣಪತಿಯನ್ನು ಅತ್ಯಂತ ಸಡಗರ ಸಂಭ್ರಮದಿಂದ  ರಾಜಬೀದಿ ಉತ್ಸವದಲ್ಲಿ ಕೊಂಡೊಯ್ದು ವಿಸರ್ಜನೆ ಮಾಡಿದರು. ಉತ್ಸವಮೂರ್ತಿ ಸಾಗುವ ಮಾರ್ಗದುದ್ದಕ್ಕೂ ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು. ಸ್ಥಳೀಯ ಜನಪದ ಕಲಾಪ್ರಕಾರಗಳು ಮೆರವಣಿಗೆಗೆ ಮೆರುಗು ನೀಡಿತು  ಡೊಳ್ಳು ಕುಣಿತದ ತಾಳಕ್ಕೆ ತಕ್ಕಂತೆ ಯುವಕ ಯುವತಿಯರು ಚಿಣ್ಣರು ಹಾಗೂ ಹೆಂಗಳೆಯರು ಹೆಜ್ಜೆ ಹಾಕಿದರು. ಸಂಪೂರ್ಣ ವೀಡಿಯೋ ಇಲ್ಲಿ…

Read More

ಆಯನೂರಿನಲ್ಲಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ…!!!

ಶಿವಮೊಗ್ಗ ಜಿಲ್ಲೆಯ ಆಯನೂರಿನಲ್ಲಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ.ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಚಾಲಕನ ಸ್ಥಿತಿ ಚಿಂತಾಜನಕವಾಗಿದೆ. ಬೈಕ್ ಸವಾರನನ್ನು ಮಲೇಬೆನ್ನೂರು ನಿವಾಸಿ ಹಬೀಬುಲ್ಲಾ ಎಂದು ಗುರುತಿಸಲಾಗಿದೆ. ಬೈಕ್ ಸವಾರನಿಗೆ ತೀವ್ರ ಪೆಟ್ಟು ಬಿದ್ದಿದ್ದು ಇವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.  ಆಯನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ. ಅಪಘಾತದ ಸಿಸಿಟಿವಿ ದೃಶ್ಯಾವಳಿಯನ್ನು ಇಲ್ಲಿ ವೀಕ್ಷಿಸಿ👇

Read More

ಶಿವಮೊಗ್ಗ ಚಾಕು ಇರಿತ ಪ್ರಕರಣದ ಆರೋಪಿಗೆ ಭಯೋತ್ಪಾದಕರ ಲಿಂಕ್ ಬಹಿರಂಗ : ಆರಗ ಜ್ಞಾನೇಂದ್ರ

ಶಿವಮೊಗ್ಗ : ಗಾಂಧಿ ಬಜಾರ್ ನಲ್ಲಿ ಪ್ರೇಮ್​ ಸಿಂಗ್ ಯುವಕನಿಗೆ ಚಾಕು ಇರಿದ ಪ್ರಕರಣ ಸಂಬಂಧಿತ ಆರೋಪಿಗೆ ಜಬೀವುಲ್ಲಾ ಲಿಂಕ್‌ ಭಯಾನಕವಾಗಿದೆ.  ಭಯೋತ್ಪಾದಕರ ಜೊತೆ ಲಿಂಕ್‌ ಇರೋದು ಬಹಿರಂಗವಾಗಿದೆ. ಸದ್ಯದಲ್ಲೇ ಪ್ರಕರಣವನ್ನು ಎನ್‌ಐಎಗೆ ಹಸ್ತಾಂತರಿಸುತ್ತೇವೆ ಎಂದು ಗೃಹಸಚಿವ ಅರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಶಿವಮೊಗ್ಗದಲ್ಲಿ ವೀರ್ ಸಾವರ್ಕರ್ ಫೋಟೋ ಹಾಕುವ ವಿಚಾರದಲ್ಲಿ ಎಸ್​ಡಿಪಿಐ ಬೆಂಬಲದಲ್ಲಿ ಕೆಲವರು ಹಿಂಸಾಚಾರ ನಡೆಸಿದ್ದರು. ಪ್ರೇಮ್ ಸಿಂಗ್ ಎಂಬ ಯುವಕನಿಗೆ ಚಾಕು ಇರಿದಿದ್ದ ಪ್ರಕರಣ ನಡೆದಿತ್ತು. ಪ್ರಕರಣದ ಆರೋಪಿಗೆ ‘ಭಯೋತ್ಪಾದಕರ ಲಿಂಕ್‌ ಭಯಾನಕ’ವಾಗಿದೆ…

Read More

ಮುರುಘಾ ಶ್ರೀ ಪ್ರಕರಣ : ಎರಡನೇ ಆರೋಪಿ ರಶ್ಮಿ ಶಿವಮೊಗ್ಗದ ಜೈಲಿಗೆ – 13 ದಿನ ನ್ಯಾಯಾಂಗ ಬಂಧನ

 ಶಿವಮೊಗ್ಗ : ಮುರುಘಾ ಶ್ರೀಗಳ ವಿರುದ್ಧದ ಪೋಕ್ಸೋ ಪ್ರಕರಣದಲ್ಲಿ 2ನೇ ಆರೋಪಿಯಾಗಿರುವ ವಾರ್ಡನ್​ ರಶ್ಮಿಯನ್ನು ಪೊಲೀಸರು ಶಿವಮೊಗ್ಗ ಸೆಂಟ್ರಲ್​ ಜೈಲ್​ಗೆ ಕರೆತಂದಿದ್ದಾರೆ. ಚಿತ್ರದುರ್ಗದಲ್ಲಿ ಮಹಿಳಾ ಸೆಲ್ ಇಲ್ಲದ ಕಾರಣಕ್ಕಾಗಿ ಆಕೆಯನ್ನು ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ ಕರೆತಂದಿದ್ದಾರೆ. ಕೋವಿಡ್‌ ಬಂದ ನಂತರ ಚಿತ್ರದುರ್ಗ ಜೈಲಿನಲ್ಲಿದ್ದ ಮಹಿಳಾ ಸೆಲ್‌ನ್ನು ರದ್ದುಪಡಿಸಲಾಗಿದೆ.ಹೀಗಾಗಿ ರಶ್ಮಿಯನ್ನು ಶಿವಮೊಗ್ಗದ ಜೈಲಿಗೆ ವರ್ಗಾವಣೆ ಮಾಡಲಾಗಿದೆ ಶುಕ್ರವಾರ ರಾತ್ರಿ 9.30 ಕ್ಕೆ ರಶ್ಮಿಯನ್ನು ಕೇಂದ್ರ ಕಾರಾಗೃಹಕ್ಕೆ ಕರೆತರಲಾಗಿದೆ. ರಶ್ಮಿಯನ್ನು ಕಳೆದ ಗುರುವಾರ ಡಿವೈಎಸ್​ಪಿ ಕಚೇರಿಗೆ ಕರೆಸಿಕೊಂಡು ವಿಚಾರಣೆ ನಡೆಸಿ…

Read More

ರಿಪ್ಪನ್ ಪೇಟೆ : ಅದ್ದೂರಿಯಾಗಿ ಜರುಗಿದ ವಿನಾಯಕ ನಗರ ಗಣೇಶ ಮೂರ್ತಿ ವಿಸರ್ಜನಾ ಪೂರ್ವ ಮೆರವಣಿಗೆ

ರಿಪ್ಪನ್ ಪೇಟೆ : ಪಟ್ಟಣದ ವಿನಾಯಕ ನಗರದ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಿದ ಐದನೇ ವರ್ಷದ ಗಣೇಶಮೂರ್ತಿ ವಿಸರ್ಜನಾ ಪೂರ್ವ ಮೆರವಣಿಗೆ ಸಡಗರ ಹಾಗೂ ಸಂಭ್ರಮದಿಂದ ನೆರವೇರಿತು. ಮಕ್ಕಳು ಮಹಿಳೆಯರು ಹಿರಿಯರು ಸೇರಿದಂತೆ ನೂರಾರು ಜನರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇

Read More

ಮನೆಗೆ ನುಗ್ಗಿದ ನೀರು – ಗೋಡೆ ಕುಸಿತದಿಂದ ನಾಲ್ವರಿಗೆ ಪೆಟ್ಟು

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಬೆಳ್ಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗಾಮನಗದ್ದೆ ನಿವಾಸಿ ಲೋಕೇಶ್ ಎಂಬವರ ಮನೆಯ ಹೊರಭಾಗದ ಗೋಡೆ ಕುಸಿದ ಪರಿಣಾಮ ಮೂವರಿಗೆ ಗಂಭೀರ ಪೆಟ್ಟು ತಗುಲಿದೆ. ಗುರುವಾರ ಸಂಜೆ ಸುರಿದ ಭಾರಿ ಮಳೆಗೆ ಮನೆಯ  ಹೊರಭಾಗದಲ್ಲಿ   ಕೃಷಿ  ಸಾಮಾಗ್ರಿಗಳನ್ನು ದಾಸ್ತಾನಿರಿಸಿದ ಕಡುಮಾಡಿನ ಒಳಗೆ ಪ್ರವಾಹದ ರೀತಿಯಲ್ಲಿ   ಏಕಾಏಕಿ ನೀರು ನುಗ್ಗಿತ್ತು. ಕುಟುಂಬಸ್ಥರು ಸೇರಿ ಅಲ್ಲಿದ್ದ ಕೃಷಿ ಪರಿಕರಗಳನ್ನು ಒಳಗೆ ಸಾಗಿಸುತ್ತಿರುವಾಗ ನೀರಿನ ರಭಸಕ್ಕೆ ಗೋಡೆ  ಸಂಪೂರ್ಣ ಕುಸಿದು ಬಿದ್ದು ಗೋಡೆಯಡಿಯಲ್ಲಿ ನಾಲ್ವರು ಸಿಲುಕಿಕೊಂಡರು….

Read More

20 ಸಾವಿರ ಸಾಲ ಪಡೆದ ಪತಿ ಆತ್ಮಹತ್ಯೆ! ಪತ್ನಿಗೆ ಶುರುವಾಯ್ತು ಮಾನಸಿಕ & ಲೈಂಗಿಕ ಕಿರುಕುಳ! ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ಶಿವಮೊಗ್ಗ : ಇಲ್ಲಿನ ಮೆಗ್ಗಾನ್ ಆಸ್ಪತ್ರೆ ಹೊರಗುತ್ತಿಗೆ ಉದ್ಯೋಗಿಯೊಬ್ಬರು  ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವಿಷ ಸೇವಿಸಿದ ಮಹಿಳೆಗೆ, ಸಾಲದ ಹಣಕ್ಕಾಗಿ ನಾಲ್ವರು ಇನ್ನಿಲ್ಲದ ಕಿರುಕುಳ ನೀಡುತ್ತಿದ್ದರಂತೆ. ಈ ಮಾನಸಿಕ ಕಿರುಕುಳ ಹಾಗೂ ತಮ್ಮ ಮೇಲಿನ ಲೈಂಗಿಕ ಕಿರುಕಳ ತಾಳಲಾರದೇ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ವಿಷ ಸೇವಿಸಿದ ಪತಿ ಬಳಿಯಲ್ಲಿ 20 ಸಾವಿರ ರೂಪಾಯಿ ಪಡೆದಿದ್ದರಂತೆ. ಅದು ಕೂಡ 10 ಪರ್ಸೆಂಟ್​ ಬಡ್ಡಿಗೆ! ಆದರೆ ಈ ಸಾಲವನ್ನು ಕಟ್ಟಲಾಗದೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಲ್ಲಿವರೆಗೂ ಪತಿಗೆ ಎದುರಾಗಿದ್ದ ಕಿರುಕುಳ ಅವರ…

Read More

ಹುಂಚದಕಟ್ಟೆಯಲ್ಲಿ ಕಾರು ಡಿಕ್ಕಿಯಾಗಿ ವ್ಯಕ್ತಿ ಸಾವು : ಅಪಘಾತವೆಸಗಿ ಪರಾರಿಯಾಗಿದ್ದ ಕಾರು ಹಾದಿಗಲ್ಲು ಸಮೀಪ ಪಲ್ಟಿ

ಹುಂಚದ ಕಟ್ಟೆ : ಇಲ್ಲಿನ ಈಶ್ವರ ದೇವಸ್ಥಾನದ ಮುಂಭಾಗ ನಡೆದುಕೊಂಡು ಹೋಗುತಿದ್ದ ಪಾದಚಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ವೃದ್ದರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಹುಂಚದ ಕಟ್ಟೆ ನಿವಾಸಿ ಪುಟ್ಟಸ್ವಾಮಿ ಗೌಡ (70) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆಯ ಹಿನ್ನಲೆ :  ಪುಟ್ಟಸ್ವಾಮಿ ಗೌಡ ಹುಂಚದಕಟ್ಟೆ ಈಶ್ವರ ದೇವಸ್ಥಾನದ ಎದುರು ನಡೆದುಕೊಂಡು ಹೋಗುತಿದ್ದಾಗ ಹಿಂಬದಿಯಿಂದ ಬಂದ ಮಾರುತಿ ಆಲ್ಟೋ ಕಾರು ವೃದ್ದನಿಗೆ ಡಿಕ್ಕಿ ಹೊಡೆದು ವಾಹನವನ್ನು ನಿಲ್ಲಿಸದೇ ಅಲ್ಲಿಂದ …

Read More

ರಿಪ್ಪನ್‌ಪೇಟೆಯಲ್ಲಿ ಸುರಿದ ಭಾರಿ ಮಳೆಗೆ ತತ್ತರಿಸಿದ ಜನತೆ : ಅಂಗಡಿ ಮುಗ್ಗಟ್ಟುಗಳಿಗೆ ನುಗ್ಗಿದ ನೀರು

ರಿಪ್ಪನ್‌ಪೇಟೆ : ಭಾರಿ ಗುಡುಗು ಸಿಡಿಲು ಮಳೆಯಿಂದ ತತ್ತರಿಸಿದ ಪಟ್ಟಣದ ಜನತೆ,ಕಳೆದ ಒಂದು ಗಂಟೆಯಿಂದ ನಿರಂತರವಾಗಿ ಸುರಿಯುತ್ತಿರುವ ಕುಂಭದ್ರೋಣ ಮಳೆ. ಪಟ್ಟಣದ ಸುತ್ತಮುತ್ತಲಿನ ಅರಸಾಳು ,ಬೆನವಳ್ಳಿ,ದೂನ,ಬಾಳೂರು ಸೇರಿದಂತೆ ಅನೇಕ ಹಳ್ಳಿಗಳಲ್ಲಿ ಭಾರಿ ಮಳೆ ಸುರಿದು ಜನಜೀವನ ಅಸ್ತವ್ಯಸ್ತ ವಾಗಿದೆ. ರಿಪ್ಪನ್‌ಪೇಟೆಯಲ್ಲಿ ಸುರಿದ ಭಾರಿ ಮಳೆಗೆ ರಸ್ತೆಯಲ್ಲಿ ನೀರು ಹರಿದು ಹಲವಾರು ಅಂಗಡಿಗಳಿಗೆ ನೀರು ನುಗ್ಗಿದೆ.ತೀರ್ಥಹಳ್ಳಿ ರಸ್ತೆಯಲ್ಲಿ ಪ್ರಭಾಕರ್ ಎಂಬುವವರ ಅಂಗಡಿಗೆ ನೀರು‌ ನುಗ್ಗಿದೆ. ರಸ್ತೆಯ ಮೇಲೆ ಹರಿಯುತ್ತಿರುವ ಭಾರಿ ಪ್ರಮಾಣದ ನೀರಿನಿಂದ ಸಂಚಾರ ಅಸ್ತವ್ಯಸ್ತವಾಗಿದ್ದು,ವಿದ್ಯುತ್ ವ್ಯತ್ಯಯ ಉಂಟಾಗಿದೆ….

Read More