Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ರಾಜಕಾರಣಿಗಳ ನಡವಳಿಕೆ ಜನರಲ್ಲಿ ಅಸಹ್ಯವುಂಟುಮಾಡಿದೆ,ಅದು ಪರಿವರ್ತನೆಯಾಗಬೇಕು: ಕೆ ದಿವಾಕರ್

ರಿಪ್ಪನ್‌ಪೇಟೆ: ಸ್ವಾತಂತ್ರ್ಯ ನಂತರ ನಮ್ಮ ರಾಷ್ಟ, ರಾಜ್ಯದ ರಾಜಕಾರಣಿಗಳು ನಡೆದುಕೊಂಡಿರುವ ರೀತಿ ಜನರಲ್ಲಿ ಅಸಹ್ಯವುಂಟುಮಾಡಿದೆ. ಇದು ಪರಿವರ್ತನೆಯಾಗಬೇಕು ಎಂದು ಆಮ್ ಆದ್ಮಿ ಪಕ್ಷದ ಸಾಗರ ವಿಧಾನಸಭಾ ಕ್ಷೇತ್ರ ಸಂಭಾವ್ಯ ಅಭ್ಯರ್ಥಿ ಕೆ. ದಿವಾಕರ್ ಹೇಳಿದರು. ಪಟ್ಟಣದ ಸಾಗರ ರಸ್ತೆಯ ಗೌರಿಶಂಕರ ಕಾಂಪ್ಲೆಕ್ಸ್ ನಲ್ಲಿ ಆಮ್‌ಆದ್ಮಿ ಪಕ್ಷದ ನೂತನ ಕಛೇರಿ ಉದ್ಘಾಟನೆಯ ನಂತರ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿ ಇದುವರೆಗೆ ನಮ್ಮನ್ನಾಳಿದ ಶಾಸಕರುಗಳು ಉಂಡುಹೋದ ಕೊಂಡುಹೋದ ಮನಸ್ಥಿತಿಯವರಾಗಿರುವುದು ದುರಂತ. ನಮ್ಮಿಂದ ಆಯ್ಕೆಯಾದ ಕಳ್ಳರು, ಕಾಕರು, ದರೋಡೆ ಕೋರರು ಸಮಾಜವನ್ನು ಏನು…

Read More

ಅರಸಾಳು ಮಾಲ್ಗುಡಿ ಮ್ಯೂಸಿಯಂಗೆ ರೈಲ್ವೆ ಪ್ರಧಾನ ವ್ಯವಸ್ಥಾಪಕ ಭೇಟಿ :

ರಿಪ್ಪನ್‌ಪೇಟೆ: ಸಮೀಪದ ಅರಸಾಳು ರೈಲ್ವೆ ನಿಲ್ದಾಣದಲ್ಲಿರುವ ಮಾಲ್ಗುಡಿ ಮ್ಯೂಸಿಯಂಗೆ ನೈರುತ್ಯ ರೈಲ್ವೆಯ ವಲಯದ ಪ್ರಧಾನ ವ್ಯವಸ್ಥಾಪಕ ಸಂಜೀವ್ ಕಿಶೋರ್ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಅರಸಾಳು ಗ್ರಾಮ ಪಂಚಾಯತಿ ಅಧ್ಯಕ್ಷ ಉಮಾಕರ ನೇತೃತ್ವದಲ್ಲಿ ಗ್ರಾಮಸ್ಥರು, ವಿವಿಧ ಸಂಘಸಂಸ್ಥೆಗಳ  ಮುಖಂಡರು ಜಿಎಂ ರವರನ್ನು ಭೇಟಿಮಾಡಿ ಹರಿಹರ-ಬೈಂದೂರು ರಾಜ್ಯ ಹೆದ್ದಾರಿಯ ಪಕ್ಕದಲ್ಲಿರುವ ಅರಸಾಳು ರೈಲು ನಿಲ್ದಾಣಕ್ಕೆ ರೈಲು ನಿಲುಗಡೆಗಾಗಿ 4 ಕೋಟಿ ರೂ. ಅನುದಾನದಲ್ಲಿ ಪ್ಲಾಟ್‌ಫಾರಂ ಜೊತೆಗೆ ಅಭಿವೃದ್ಧಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಿದೆ. ಬ್ರಿಟೀಷರ ಕಾಲದಿಂದಲೂ ಜನನಿಬಿಡ ಪ್ರದೇಶವಾಗಿದ್ದ…

Read More

ಸಮಾಜದಲ್ಲಿ ನೊಂದವರನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು : ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಸಮಾಜದಲ್ಲಿ ನೊಂದವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು ಹಾಗೂ ಮಕ್ಕಳಿಗೆ ಸೂಕ್ತ ವಿದ್ಯಾಭ್ಯಾಸ ಒದಗಿಸಿ ಸುಸಂಸ್ಕೃತ ಬದುಕು ಕಟ್ಟಿಕೊಳ್ಳಲು ನೆರವಾಗಬೇಕು ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ಅವರು ಭಾನುವಾರ ಪಟ್ಟಣದ ಜಿಎಸ್ ಬಿ ಸಭಾಂಗಣದಲ್ಲಿ ಹೊಸನಗರ ತಾಲ್ಲೂಕ್ ಗಂಗಾಮತಸ್ಥರ ನೌಕರರ ಕ್ಷೇಮಾಭಿವೃದ್ದಿ ಸಂಘ ಮತ್ತು ತಾಲ್ಲೂಕ್ ಗಂಗಾಮತಸ್ಥರ ಸಮಾಜ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಕೊರೊನಾದಿಂದಾಗಿ…

Read More

ಭಾರಿ ಮಳೆಗೆ ಧರೆ ಕುಸಿತ : ಶಾಸಕರ ನಿರ್ಲಕ್ಷ್ಯ ಧೋರಣೆ ಖಂಡಿಸಿ ಬೇಳೂರು ಗೋಪಾಲಕೃಷ್ಣ ನೇತೃತ್ವದಲ್ಲಿ ಗ್ರಾಮಸ್ಥರ ಪ್ರತಿಭಟನೆ

ರಿಪ್ಪನ್‌ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಳವಳ್ಳಿ-ತಮ್ಮಡಿಕೊಪ್ಪ ಸಂಪರ್ಕ ರಸ್ತೆಯ ಧರೆ ಕುಸಿದು ಸಂಪರ್ಕ ಕಡಿತಗೊಳ್ಳುವ ಅಪಾಯದ ಅತಂಕದಲ್ಲಿ  ಇರುವ ಹಿನ್ನೆಲೆಯಲ್ಲಿ  ಮಳವಳ್ಳಿ ಮತ್ತು ತಮ್ಮಡಿಕೊಪ್ಪ ಗ್ರಾಮಸ್ಥರು ಇಂದು ಮಾಜಿ ಶಾಸಕ  ಹಾಗೂ ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ನೇತ್ರತ್ವದಲ್ಲಿ ಶಾಸಕ ಹರತಾಳು ಹಾಲಪ್ಪ ರವರ ನಿರ್ಲಕ್ಷ್ಯ ಧೋರಣೆ ಖಂಡಿಸಿ ಪ್ರತಿಭಟನೆ ನಡೆಸಿದರು. ನಂತರ ಮಾತನಾಡಿದ ಬೇಳೂರು ಮಳವಳ್ಳಿ-ತಮ್ಮಡಿಕೊಪ್ಪದ ಗ್ರಾಮದ  ಸಂಪರ್ಕ ರಸ್ತೆಯು ಸಂಪೂರ್ಣ ಅಪಾಯದ ಸ್ಥಿತಿಯಲ್ಲಿದ್ದು ಈಗಾಗಲೇ ಈ…

Read More

ರಿಪ್ಪನ್‌ಪೇಟೆ : ಮಹಿಳಾ ಪೊಲೀಸರಿಗೆ ಬಾಗಿನ ಅರ್ಪಿಸಿ,ಪುರುಷರಿಗೆ ರಾಖಿ ಕಟ್ಟಿ ಸೋದರತ್ವ ಮೆರೆದ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ಜೈನ್

ರಿಪ್ಪನ್‌ಪೇಟೆ : ಹಬ್ಬ ಹರಿದಿನಗಳಲ್ಲಿ ತವರು ಮನೆಗೆ ಹೋಗಿ ಬರುವಷ್ಟು ಸಮಯವಿರದಂತಹ ಸ್ಥಿತಿಯಲ್ಲಿರುವ ಪೊಲೀಸ್ ಇಲಾಖೆಯ ಮಹಿಳಾ ಸಿಬ್ಬಂದಿಗಳಿಗೆ ಹೊಂಬುಜ ಗ್ರಾಮ ಪಂಚಾಯ್ತಿ ಸದಸ್ಯೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ವೃಷಭರಾಜ್ ಜೈನ್ ಕುಟುಂಬ ವರ್ಗದವರು ಬಾಗಿನ ನೀಡಿ ಸತ್ಕರಿಸಿದರು. ಇಂದು ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿಗಳಿಗೆ ಅರಿಶಿಣ ಕುಂಕುಮ ಮತ್ತು ಅರತಿ ಬೆಳಗಿ ಬಾಗಿನ ಅರ್ಪಿಸಿದರು. ಇದೇ ಸಂಧರ್ಭದಲ್ಲಿ ವೃತ್ತ ನಿರೀಕ್ಷಕ ಗಿರೀಶ್ ಹಾಗೂ ಪಿಎಸ್‌ಐ ಶಿವಾನಂದ ಕೋಳಿ, ಎಎಸ್‌ಐ ಗಣಪತಿ,ಹಾಲಪ್ಪ,ಮಂಜಪ್ಪ ಹಾಗೂ ಇನ್ನಿತರ…

Read More

ನಾಳೆ (29-08-2022) ರಿಪ್ಪನ್‌ಪೇಟೆಗೆ ಖ್ಯಾತ ಹಾಸ್ಯನಟ ಟೆನ್ನಿಸ್ ಕೃಷ್ಣ : ಆಮ್ ಆದ್ಮಿ‌ ಪಕ್ಷದ ನೂತನ ಕಾರ್ಯಾಲಯ ಉದ್ಘಾಟನೆ

ರಿಪ್ಪನ್‌ಪೇಟೆ : ನಾಳೆ (29/08/2022) ಸೋಮವಾರ ಪಟ್ಟಣದಲ್ಲಿಆಮ್ ಆದ್ಮಿ ಪಕ್ಷದ ನೂತನ ಕಛೇರಿಯನ್ನು ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಟೆನ್ನಿಸ್ ಕೃಷ್ಣ ಉದ್ಘಾಟಿಸಲಿದ್ದಾರೆ. ಪಟ್ಟಣದ ಸಾಗರ ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ10 ಗಂಟೆಗೆ ಆಮ್ ಆದ್ಮಿ ಪಕ್ಷದ ನೂತನ ಕಛೇರಿಯನ್ನು ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಹಾಗೂ ಆಮ್ ಆದ್ಮಿ ಪಕ್ಷದ ರಾಜ್ಯ ಮುಖಂಡ ಟೆನ್ನಿಸ್ ಕೃಷ್ಣ ರವರು ಉದ್ಘಾಟಿಸಲಿದ್ದಾರೆ. ಆಮ್ ಆದ್ಮಿ‌ಪಕ್ಷದ ನೂತನ ಕಛೇರಿ ಉದ್ಘಾಟನೆಗೆ ರಿಪ್ಪನ್‌ಪೇಟೆ ಸುತ್ತಮುತ್ತಲಿನ ಹಳ್ಳಿಗಳ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ…

Read More

ಬೆಳ್ಳೂರು ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ರೈತ ಸಾವು :

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬೆಳ್ಳೂರು ಗ್ರಾಮದಲ್ಲಿ ತೋಟದಲ್ಲಿ ಕೆಲಸ ಮಾಡುತಿದ್ದ ರೈತ ವಿದ್ಯುತ್ ಅವಘಡದಿಂದ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಇಂದು ಬೆಳಿಗ್ಗೆ ಕೃಷಿ ಚಟುವಟಿಕೆ ನಿಮಿತ್ತ ತೋಟಕ್ಕೆ ಹೋದಾಗ ಈ ಅವಘಡ ಸಂಭವಿಸಿದ್ದು,ಬೆಳ್ಳೂರು ಗ್ರಾಮದ ಹಿರಿಯಣ್ಣ (58) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಮೃತ ಹಿರಿಯಣ್ಣ ಬೆಳ್ಳೂರು ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆ ಗಿರಿಜಮ್ಮ ರವರ ಪತಿಯಾಗಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು ದೂರು  ದಾಖಲಾಗಿದೆ. ಸಂತಾಪ…

Read More

ಕಾಗೋಡು ತಿಮ್ಮಪ್ಪ ಸಮ್ಮುಖದಲ್ಲಿ ಒಗ್ಗಟ್ಟಿನ ಮಂತ್ರ ಜಪಿಸಿದ ಬೇಳೂರು :

ಹೊಸನಗರ: ಮುಂಬರುವ ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ಮುಂದಿನ ವರ್ಷ ನಡೆಯುವ ವಿಧಾನಸಬೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲ ನಾಯಕರು ಹಾಗೂ ಕಾರ್ಯಕರ್ತರು ನಮ್ಮಲ್ಲಿ ಯಾವುದೇ ಒಡಕಿಲ್ಲದೇ ಚುನಾವಣೆ ಎದುರಿಸೋಣ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣರವರು ಹೇಳಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಸಮ್ಮುಖದಲ್ಲಿ ಒಗ್ಗಟ್ಟಿನ ಮಂತ್ರ ಜಪಿಸಿದರು. ಭಾರತ ಸ್ವಾತಂತ್ರ್ಯ ಪಡೆದು 75 ವರ್ಷಗಳ ಆಚರಣೆ ಪ್ರಯುಕ್ತ ಸ್ವಾತಂತ್ರ್ಯ ಬರಲು ಕಾರಣರಾದ ಎಲ್ಲ ಮಹಾನೀಯರಿಗೆ ಗೌರವ ಸೂಚಕವಾಗಿ ಹೊಸನಗರ ತಾಲ್ಲೂಕು ಮಾವಿನಕಟ್ಟೆಯಿಂದ ಸುಮಾರು…

Read More

ಭೂ ಕಬಳಿಕೆ ಕಾಯ್ದೆ ತಿದ್ದುಪಡಿ ತರಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ : ಶಾಸಕ ಹರತಾಳು ಹಾಲಪ್ಪ ಸಂತಸ

ರಿಪ್ಪನ್‌ಪೇಟೆ : ರಾಜ್ಯದ ಬಹು ಜನರ ಬೇಡಿಕೆಯಾಗಿದ್ದ ಕರ್ನಾಟಕ ಭೂ ಕಬಳಿಕೆ ನಿಷೇದ ಕಾಯ್ದೆಯ 2011 ರ ಕಾಲಂ 2(ಡಿ ) ತಿದ್ದುಪಡಿ ತಂದಿರುವುದು ಬಹಳ ಸಂತಸವಾಗಿದೆ ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹೆಚ್ ಹಾಲಪ್ಪ ಹರತಾಳು ಹೇಳಿದರು. ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕರ್ನಾಟಕ ರಾಜ್ಯ ಸಚಿವ ಸಂಪುಟದ ಪರಿಷತ್  ಒಳ್ಳೆಯ ನಿರ್ಧಾರ ತೆಗೆದುಕೊಂಡಿದೆ. 192ಎ ಕಾಲಂ ಸ್ಥಗಿತಗೊಳಿಸಿರುವಂಥದ್ದು ಬಹಳ ಖುಷಿಯ ವಿಚಾರ. ಕಾರಣ ಒಂದು…

Read More

ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಅಪಘಾತ – ಚಾಲಕ ಸಾವು

ರಿಪ್ಪನ್ ಪೇಟೆ : ಪಟ್ಟಣದ ಸಾಗರ ರಸ್ತೆಯ ಅಂಚೆ ಕಚೇರಿ ಮುಂಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಅಪಘಾತವಾಗಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ನಡೆದಿದೆ. ಪಟ್ಟಣದ ಶಬರೀಶನಗರದ ನಿವಾಸಿ ಶ್ರೀನಿವಾಸ್(36) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಸಾಗರ ರಸ್ತೆಯಿಂದ ರಿಪ್ಪನ್ ಪೇಟೆ ಕಡೆಗೆ ಬರುತ್ತಿದ್ದ ಗೂಡ್ಸ್ ಆಟೊ ಅಂಚೆ ಕಚೇರಿ ಮುಂಭಾಗದಲ್ಲಿ ಇರುವ ದೊಡ್ಡ ಗುಂಡಿಯನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಅಲ್ಲಿಯೇ ನಿಂತಿದ್ದ ಬೈಕಿಗೆ ಡಿಕ್ಕಿ ಹೊಡೆದಿದೆ.ಈ ಅಪಘಾತದಲ್ಲಿ ಗೂಡ್ಸ್ ಆಟೊ ಸ್ಟೇರಿಂಗ್ ಚಾಲಕನ ಹೊಟ್ಟೆಗೆ…

Read More