Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ನಾಳೆಯಿಂದ ಅಮ್ಮನಘಟ್ಟ ಜೇನುಕಲ್ಲಮ್ಮ ಜಾತ್ರಾ ಮಹೋತ್ಸವ : ಜಾತ್ರಾಮಹೋತ್ಸವಕ್ಕೆ ಎಲ್ಲಾ ಸಿದ್ದತೆಗಳನ್ನು ನಡೆಸಲಾಗಿದೆ : ಬಿ ಸ್ವಾಮಿರಾವ್

ರಿಪ್ಪನ್‌ಪೇಟೆ;-ಇತಿಹಾಸ ಪ್ರಸಿದ್ಧ ಅಮ್ಮನಘಟ್ಟ  ಶ್ರೀ ಜೇನುಕಲ್ಲಮ್ಮ ದೇವಿಯ ಜಾತ್ರಾಮಹೋತ್ಸವಕ್ಕೆ ಸಕಲ ಸಿದ್ದತೆ ನಡೆಸಲಾಗಿದ್ದು ಸೆ.೧೩ ರಿಂದ ೨೩ ರವರೆಗೆ ಎರಡು ಮಂಗಳವಾರ ಎರಡು ಶುಕ್ರವಾರದೊಂದು ಜಾತ್ರೆ ಅಯೋಜಿಸಲಾಗಿದೆ ಎಂದು ಮಾಜಿ ಶಾಸಕ ಹಾಗೂ ಜೇನುಕಲ್ಲಮ್ಮ ದೇವಸ್ಥಾನದ ಧರ್ಮದರ್ಶಿ ಸಮಿತಿ ಅಧ್ಯಕ್ಷ ಬಿ.ಸ್ವಾಮಿರಾವ್ ತಿಳಿಸಿದರು.  ಜೇನುಕಲ್ಲಮ್ಮ ದೇವಸ್ಥಾನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಪಿತೃಪಕ್ಷದಲ್ಲಿ ಹುಣ್ಣಿಮೆಯಿಂದ ಅಮವಾಸ್ಯೆಯವರೆಗೆ ಸೆಪ್ಟಂಬರ್ ೧೩ ಮತ್ತು ೧೬ ಹಾಗೂ ೨೦ ಮತ್ತು ೨೩ ಮಂಗಳವಾರ ಹಾಗೂ ಶುಕ್ರವಾರದೊಂದು ಈ ಜಾತ್ರಾಮಹೋತ್ಸವ ಜರುಗಲಿದೆ ಸಕಲ ಭಕ್ತಾಧಿಗಳು ಹೆಚ್ಚಿನ…

Read More

ರಿಪ್ಪನ್‌ಪೇಟೆ : ಶಿವಮೊಗ್ಗ ಜಿಲ್ಲೆಯ ಸಮಗ್ರ ಅಭಿವೃದ್ದಿಗಾಗಿ ಪಣ – ಸಂಸದ ಬಿ ವೈ ರಾಘವೇಂದ್ರ

ರಿಪ್ಪನ್ ಪೇಟೆ : ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಎಲ್ಲಾ ಸಮಾಜದ ಉನ್ನತಿಗಾಗಿ ಸಮುದಾಯ ಭವನಗಳ ನಿರ್ಮಾಣವಾಗಿದೆ ಕೆಲವು ಮಾತ್ರ ನಿರ್ಮಾಣ ಹಂತದಲ್ಲಿದ್ದು ಶೀಘ್ರ ಕೆಲಸವನ್ನು ಪೂರ್ಣಗೊಳಿಸಲು ಸೂಚಿಸಿದ್ದೇನೆ ಎಂದು ಸಂಸದರಾದ ಬಿ ವೈ ರಾಘವೇಂದ್ರ ತಿಳಿಸಿದರು. ಪಟ್ಟಣದಲ್ಲಿ ನಿರ್ಮಾಣವಾಗುತ್ತಿರುವ ಶಿವ ಮಂದಿರ ಹಾಗೂ ಶ್ರೀ ರಾಮಭವನದ ಕಾಮಗಾರಿಯನ್ನು ವೀಕ್ಷಿಸಿ ನಂತರ ಅವರು ಮಾತನಾಡಿದರು.ನೂತನ ರೈಲ್ವೇ ಕಾಮಗಾರಿ, ವಿಮಾನ ನಿಲ್ದಾಣ, ನ್ಯಾಷನಲ್ ಹೈವೇ, ಸ್ಮಾರ್ಟ್ ಸಿಟಿ, ವಿಶ್ವ ವಿಖ್ಯಾತ ಜೋಗ ಜಲಪಾತದ ಅಭಿವೃದ್ಧಿ ಹಾಗೂ ಹೊಸನಗರ ತಾಲೂಕಿನ ಕೊಡಚಾದ್ರಿ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (13-09-2022) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 13/09/22 ರಂದು ಬೆಳಿಗ್ಗೆ 9-30 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್ ಪೇಟೆ  110/11 ಕೆ ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣ ಕಾರ್ಯವಿರುವ ನಿಮಿತ್ತ  ನಾಳೆ ಬೆಳಿಗ್ಗೆ 9-30 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ ??? ರಿಪ್ಪನ್ ಪೇಟೆ,ಹೆದ್ದಾರಿಪುರ,ಕೆಂಚನಾಲ,ಗರ್ತಿಕೆರೆ, ಬೆಳ್ಳೂರು,ಅರಸಾಳು,ಕೋಡೂರು ಮತ್ತು ಚಿಕ್ಕಜೇನಿ…

Read More

ರಿಪ್ಪನ್‌ಪೇಟೆ ಸ್ನೇಹ ಬಳಗದ ವತಿಯಿಂದ ಮಾನವೀಯ ಕಾರ್ಯ

ರಿಪ್ಪನ್‌ಪೇಟೆ : ಇಲ್ಲಿನ ಸರ್ಕಾರಿ ಪ್ರೌಢಶಾಲೆಯ 1995-96 ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಸ್ನೇಹ ಬಳಗದ ವತಿಯಿಂದ ಇಂದು ಪಟ್ಟಣದ ಹಲವು ಕಡೆ ಮಾನವೀಯ ಕಾರ್ಯಗಳನ್ನು ಕೈಗೊಳ್ಳಲಾಗಿತ್ತು. ಇತ್ತೀಚೆಗೆ 1995 96ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಗುರುವಂದನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಇಂದು ಹೊರ ದೇಶಗಳಲ್ಲಿ & ಹೊರ ರಾಜ್ಯಗಳಲ್ಲಿ ಮತ್ತು ರಿಪ್ಪನ್ ಪೇಟೆಯ ಸುತ್ತಮುತ್ತಲೂ ಇರುವ ಸ್ನೇಹಿತರನ್ನು ಒಳಗೊಂಡು ಪಟ್ಟಣದ ಸುತ್ತಮುತ್ತಲಿನ ನೊಂದ ಕುಟುಂಬಕ್ಕೆ ಆಸರೆಯಾಗುವ ಕಾರ್ಯವನ್ನು ಹಮ್ಮಿಕೊಳ್ಳಲಾಗಿತ್ತು. ಹಾಲುಗುಡ್ಡೆಯ…

Read More

ಹೃದಯಾಘಾತದಿಂದ ರೈತ ಸಾವು : ಅರಣ್ಯಾಧಿಕಾರಿಗಳ ಕಿರುಕುಳವೇ ರೈತನ ಸಾವಿಗೆ ಕಾರಣ : ಆರ್ ಎಂಎಂ ಮತ್ತು ಬೇಳೂರು ಆರೋಪ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅಮೃತ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮದ ನೆಣೆಬಸ್ತಿ ಗ್ರಾಮದ ರೈತ ಶಬ್ಬೀರ್ ಅಹಮದ್ (71) ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದು ಈ ಸಾವಿಗೆ  ಅರಣ್ಯ ಇಲಾಖೆಯ ಅಧಿಕಾರಿಗಳೇ ನೇರ ಕಾರಣ ಎಂದು ಜಂಟಿ ಪತ್ರೀಕಾಗೋಷ್ಠಿಯಲ್ಲಿ ರಾಜ್ಯ ಕಾಂಗ್ರೆಸ್ ಸಹಕಾರ ವಿಭಾಗದ ಸಂಚಾಲಕರಾದ ಆರ್ ಎಂ ಮಂಜುನಾಥ್ ಗೌಡ ಹಾಗೂ ಮಾಜಿ ಶಾಸಕ,ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಆರೋಪಿಸಿದ್ದಾರೆ. ಹಲವಾರು ದಶಕಗಳಿಂದ ಕೃಷಿ ಚಟುವಟಿಕೆ ನಡೆಸಿಕೊಂಡು ಬರುತ್ತಿದ್ದ ಅರಣ್ಯ ಒತ್ತುವರಿ ಜಾಗ ತೆರವಿಗೆ…

Read More

ಭರ್ಜರಿ 20 ಗಂಟೆಗಳ ಭಾರಿ ಜನಸ್ತೋಮದ ಮೆರವಣಿಗೆ ಬಳಿಕ ರಿಪ್ಪನ್‌ಪೇಟೆ ಗಣಪತಿ ವಿಸರ್ಜನೆ :

ರಿಪ್ಪನ್‌ಪೇಟೆ : ಪಟ್ಟಣದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ವತಿಯಿಂದ ಪ್ರತಿಷ್ಠಾಪಿಸಿದ್ದ 55 ನೇ ವರ್ಷದ  ಗಣೇಶೋತ್ಸವದ ಗಣಪತಿ ವಿಸರ್ಜನೆ 20 ಗಂಟೆಗಳ ಕಾಲ ನಡೆದ ರಾಜಬೀದಿ ಉತ್ಸವದ ಬಳಿಕ ಶಾಂತಿಯುತವಾಗಿ ನೆರವೇರಿದೆ. ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಪ್ರತಿಷ್ಠಾಪಿಸಿದ್ದ ಗಣಪತಿ ಮೂರ್ತಿಯ ವಿಸರ್ಜನೆಗೂ ಮುನ್ನ ಭರ್ಜರಿ 20 ಗಂಟೆಗಳ ಕಾಲ ರಾಜಬೀದಿ ಉತ್ಸವ ನಡೆಯಿತು.ನಿನ್ನೆ ಸಂಜೆ 4.30 ಕ್ಕೆ ಆರಂಭವಾಗಿದ್ದ ಮೆರವಣಿಗೆ ಇಂದು ಮಧ್ಯಾಹ್ನ12.30 ಕ್ಕೆ ಕೊನೆಗೊಂಡು ವಿಸರ್ಜನೆ ನೆರವೇರಿತು. ರಾಜ್ಯ ಗೃಹ…

Read More

ರಿಪ್ಪನ್‌ಪೇಟೆ : ಕರ್ನಾಟಕ ಹಿಂದೂ ಪ್ರಾಂತೀಯ ರಾಷ್ಟ್ರ ಸೇನಾ ಗಣಪತಿಯ ವೈಭವದ ರಾಜಬೀದಿ ಉತ್ಸವ ಪ್ರಾರಂಭ : ಭಾರಿ ಜನಸ್ತೋಮ

ರಿಪ್ಪನ್‌ಪೇಟೆ;-ಇಲ್ಲಿನ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ್ ಮಂಟಪದಲ್ಲಿ ಪ್ರತಿಷ್ಟಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟç ಸೇನಾ ಸೇವಾ ಸಮಿತಿಯ ೫೫ ನೇ ವರ್ಷದ ಗಣಪತಿ ವಿಸರ್ಜನಾ ಪೂರ್ವ ವೈಭವದ ರಾಜಬೀದಿ ಉತ್ಸವಕ್ಕೆ ಇಂದು ಸಂಜೆ ೬ ಗಂಟೆಗೆ ಅರಂಭಗೊಂಡಿತು. ಕರೋನಾ ಕಾರಣ ಕಳೆದೆರಡು ವರ್ಷ ಅದ್ದೂರಿ ಮೆರವಣಿಗೆ ನಡೆದಿರಲಿಲ್ಲ ಯುವಕರ ಮಹಿಳೆಯರು ಪುಟಾಣಿ ಮಕ್ಕಳ ವಾದ್ಯಕ್ಕೆ ತಕ್ಕ ಕುಣಿತದೊಂದಿಗೆ ಚಾಲನೆ ರಾಜಬೀದಿ ಉತ್ಸವದಲ್ಲಿ ವಿವಿಧ ಹೆಸರಾಂತ ಜಾನಪದ ಕಲಾತಂಡಗಳಾದ ಡೊಳ್ಳೂ ಕುಣಿತ ತಮಟೆಬಡಿತ.ಕೀಲುಕುದುರೆ ಗೊಂಬೆಕುಣಿತ,ನಗಾರಿ ತಟ್ಟಿರಾಯ ತಂಡದವರಿಂದ…

Read More

ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಗೆ ಪ್ರವೇಶ ಪಡೆಯಲು ಹೆಲ್ಮೆಟ್ ಕಡ್ಡಾಯಗೊಳಿಸಲಿ : ಬೇಳೂರು ಆರೋಪ

ರಿಪ್ಪನ್ ಪೇಟೆ : ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಬರುವ ರೋಗಿಗಳು  ಸೇರಿದಂತೆ ಪ್ರತಿಯೊಬ್ಬರು ಶಿರ ಕವಚ (ಹೆಲ್ಮೇಟ್) ಧರಿಸುವುದು ಕಡ್ಡಾಯಗೊಳಿಸಲಿ ಎಂದು ಗೋಪಾಲಕೃಷ್ಣ  ಬೇಳೂರು ಹೇಳಿದರು. ಅವರು ಇಂದು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಭೇಟಿ‌ ನೀಡಿ ಪರಿಶೀಲನೆ ನಡೆಸಿ ಹೆಲ್ಮೆಟ್ ಧರಿಸಿ ಜೀವ ಉಳಿಸಿಕೊಳ್ಳಿ ಈ ನಿಯಮ ಇನ್ನು ಮುಂದೆ ಈ ಸರ್ಕಾರಿ ಆಸ್ಪತ್ರೆಗೆ ಪ್ರವೇಶ ಪಡೆಯಲು ಕಡ್ಡಾಯ ಮಾಡಬೇಕಾಗಿದೆ ಎಂದರು. ಸರ್ಕಾರಿ ಆಸ್ಪತ್ರೆ ಕಟ್ಟಡವು ಶಿಥಿಲಗೊಂಡಿದ್ದು ಮೇಲ್ಚಾವಣಿಯ ಸಿಮೆಂಟಿನ  ಗಾರೆ ಸೀಲಿಂಗ್ ಗಳು ಅತಿಯಾದ…

Read More

ತೀರ್ಥಹಳ್ಳಿ : ಕ್ರೀಡಾಕೂಟದಲ್ಲಿ ಅನ್ಯಕೋಮಿನ ಯುವಕರ ನಡುವೆ ಗಲಾಟೆ : ಓರ್ವ ಮೆಗ್ಗಾನ್ ಗೆ ದಾಖಲು

ತೀರ್ಥಹಳ್ಳಿ : ತಾಲೂಕಿನ ಜೂನಿಯರ್ ಕಾಲೇಜು ಕ್ರೀಡಾಂಗಣದಲ್ಲಿ ನೆಡೆದಿದ್ದ ಕ್ರೀಡಾಕೂಟದಲ್ಲಿ ಅನ್ಯಕೋಮಿನ ಯುವಕರ ನಡುವೆ ಶುಕ್ರವಾರ ಗಲಾಟೆ ನಡೆದಿದೆ. ಬೆಟ್ಟಮಕ್ಕಿ ಸಮೀಪದ ಯುವಕ ಪ್ರಜ್ವಲ್ ಮತ್ತು ಇಂದಿರಾನಗರದ ಯುವಕ ರೆಹಮಾನ್ ನಡುವೆ ಗಲಾಟೆ ನಡೆದಿದೆ ಎಂದು ತಿಳಿದುಬಂದಿದೆ  ಪ್ರಜ್ವಲ್ ಗೆ ಪೆಟ್ಟಾಗಿದ್ದು ಜಯ ಚಾಮರಾಜೇಂದ್ರ ಆಸ್ಪತ್ರೆಗೆ ದಾಖಲು ಮಾಡಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ವರದಿ : ಅಕ್ಷಯ್ ಕುಮಾರ್

Read More

ರಿಪ್ಪನ್‌ಪೇಟೆ : ಚಲಿಸುತ್ತಿದ್ದ ಟ್ರಾಕ್ಟರ್ ನಿಂದ ಆಯತಪ್ಪಿ ಕೆಳಗೆ ಬಿದ್ದು ವ್ಯಕ್ತಿ ಸಾವು

ರಿಪ್ಪನ್‌ಪೇಟೆ: ಚಲಿಸುತಿದ್ದ ಟ್ರ್ಯಾಕ್ಟರ್ ನಿಂದ ಆಯತಪ್ಪಿ ಕೆಳಕ್ಕೆ  ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯ ಹಿರೇಮೈಥೆ ಗ್ರಾಮದಲ್ಲಿ ಗುರುವಾರ ನಡೆದಿದೆ. ಹಿರೇಮೈಥೆ ಗ್ರಾಮದ ವಾಸಿ ರಾಘವೇಂದ್ರ (43) ಮೃತ ದುರ್ದೈವಿಯಾಗಿದ್ದಾನೆ.  ಮನೆ ಕೆಲಸಕ್ಕೆ ಬೇಕಾಗಿದ್ದ ಮರಳು ತರಲು ಬಾಡಿಗೆ ಕೆಎ-15-TA-9879 ಟ್ರ್ಯಾಕ್ಟರ್ ನಲ್ಲಿ ಮನೆ ಸಮೀಪವಿರುವ ಹಳ್ಳದಿಂದ ಮರಳು ತುಂಬಿಸಿಕೊಂಡು ಬರುತ್ತಿರುವಾಗ   ಟ್ರ್ಯಾಕ್ಟರ್ ಚಾಲಕನ ಅಜಾಗರೂಕತೆಯಿಂದ ರಾಘವೇಂದ್ರ ಕೆಳಗೆ ಬಿದ್ದು ಹೊಟ್ಟೆ ಭಾಗಕ್ಕೆ ತೀವ್ರ ಗಾಯವಾಗಿದೆ ತಕ್ಷಣ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ…

Read More
Exit mobile version