ಶಿವಮೊಗ್ಗದಲ್ಲಿ ರಾಜ್ಯ ಮಟ್ಟದ ದೇಹಾದಾರ್ಢ್ಯ ಸ್ಪರ್ಧೆ: ಬೆಂಗಳೂರಿನ ಶರವಣಂಗೆ ಮಿಸ್ಟರ್ ಕರ್ನಾಟಕ ಪ್ರಶಸ್ತಿ
ಶಿವಮೊಗ್ಗ: ನಾಡ ಹಬ್ಬ ದಸರಾ ಪ್ರಯುಕ್ತ ಶಿವಮೊಗ್ಗ ಮಹಾನಗರ ಪಾಲಿಕೆಯಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಕಲಾವಿದರನ್ನು ಹಾಗೂ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲಾಗುತ್ತಿದೆ. ಅದರಂತೆ ನಗರದ ಕುವೆಂಪು ರಂಗಮಂದಿರದಲ್ಲಿ ರಾಜ್ಯ ಮಟ್ಟದ ದೇಹದಾರ್ಢ್ಯ ಸ್ಪರ್ಧೆ ನಡೆಯಿತು. ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ದೇಹಾದಾರ್ಢ್ಯ ಪಟುಗಳು ಸ್ಪರ್ಧೆಯಲ್ಲಿ ಭಾಗವಹಿಸಿ ತಮ್ಮ ಕಟ್ಟುಮಸ್ತಾದ ದೇಹವನ್ನು ಪ್ರದರ್ಶಿಸಿದರು. ರಾಜ್ಯ ಮಟ್ಟದ ದೇಹಾದಾರ್ಢ್ಯ ಸ್ಪರ್ಧೆಯಲ್ಲಿ ಬೆಂಗಳೂರಿನ ಶರವಣಂ ಅವರಿಗೆ ಮಿಸ್ಟರ್ ಕರ್ನಾಟಕ ಅವಾರ್ಡ್ ನೀಡಿ ಗೌರವಿಸಲಾಯಿತು. 55 ರಿಂದ 85 ಕೆಜಿ ಕೆಟಗಿರಿಯ ಒಟ್ಟು…


