January 11, 2026

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಟ್ವಿಸ್ಟ್….! ಯುವತಿ ಪರ ವಾದಮಂಡನೆಗೆ ಮುಂದಾದ ಪದ್ಮಶ್ರೀಪುರಸ್ಕೃತ ಇಂದಿರಾ ಜೈಸಿಂಗ್

ಬೆಂಗಳೂರು: ರಾಷ್ಟ್ರಮಟ್ಟದಲ್ಲಿ ಬಿಜೆಪಿ ತಲೆ ತಗ್ಗಿಸುವಂತೆ ಮಾಡಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಅಶ್ಲೀಲ ಸಿಡಿ ಪ್ರಕರಣದ ಸಂತ್ರಸ್ಥೆ ಯುವತಿ...

ಜಮೀರ್ ಮೊದಲು ಯಡಿಯೂರಪ್ಪ ಮನೆ ಮುಂದೆ ವಾಚಮ್ಯಾನ್ ಕೆಲಸ ನಿರ್ವಹಿಸಲಿ..

ದಾವಣಗೆರೆ: ಜಮೀರ್ ಅಹಮ್ಮದ್, ಗುಜರಿ ಅಹಮ್ಮದ್ ಮೊದಲು ವಾಚ್‍ಮೆನ್ ಡ್ರೆಸ್ ಹಾಕಿಕೊಂಡು, ಲಾಠಿ ಹಿಡಿದು, ಯಡಿಯೂರಪ್ಪನವರ ಮನೆ ವಾಚ್ ಮೆನ್ ಆಗಿ ಎಂದು ಶಾಸಕ ರೇಣುಕಾಚಾರ್ಯ ವಾಗ್ದಾಳಿ ನಡೆಸಿದರು.ದಾವಣಗೆರೆ...

ಮುಂದುವರಿದ ವರುಣನ ಆರ್ಭಟ..ಮುಳುಗಡೆ ಭೀತಿಯಲ್ಲಿ ಕರ್ನಾಟಕದ ಅನೇಕ ಜಿಲ್ಲೆಗಳು..

ಪಶ್ಚಿಮಘಟ್ಟದಲ್ಲಿ ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಶುಕ್ರವಾರದ ಹೊತ್ತಿಗೆ ಇನ್ನಷ್ಟು ಚುರುಕುಗೊಂಡಿದೆ. ಪಶ್ಚಿಮಘಟ್ಟ ಭಾಗದ ನದಿಗಳೆಲ್ಲ ಮೈದುಂಬಿ ಹರಿಯುತ್ತಿದ್ದು ಬಯಲು ಸೀಮೆಯ ಜಿಲ್ಲೆಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ....

ಸರಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ

• ಕಳೆದ ಒಂದು ವಾರದಲ್ಲಿ 16 ಜಿಲ್ಲೆಗಳಲ್ಲಿ < 5% ಗಿಂತ ಕಡಿಮೆ ಪಾಸಿಟಿವಿಟಿ ದರ ಇದ್ದು, 13 ಜಿಲ್ಲೆಗಳಲ್ಲಿ ಶೇ.5-10 % ಇದ್ದು, ಮೈಸೂರಿನಲ್ಲಿ ಶೇ...

ಕಾಂಗ್ರೆಸ್ ಶಾಸಕರ ಹೇಳಿಕೆಗೆ ಖಂಡನೆ

(ರಿಪ್ಪನ್ ಪೇಟೆ ) ಶಾಸಕರಾದ ಜಮೀರ್ ಅಹ್ಮದ್ ಖಾನ್ ರವರು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ  ವಿರುದ್ಧ  ಲಘುವಾಗಿ ಮಾತನಾಡಿದ ಜಮೀರ್ ಅಹ್ಮದ್ ಖಾನ್...