Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಸೆಲ್ಫಿ ತೆಗೆದುಕೊಳ್ಳುವಾಗ ಸಿಡಿಲು ಬಡಿದು 11 ಜನ ಸಾವು:

ಜೈಪುರ (ಜುಲೈ.12); ಉತ್ತರ ಭಾರತದಲ್ಲಿ ಕಳೆದ ಹಲವು ದಿನಗಳಿಂದ ಬಾರೀ ಮಳೆಯಾಗುತ್ತಿದೆ. ಅದರಲ್ಲೂ ರಾಜಸ್ಥಾನ ಮತ್ತು ಉತ್ತರಪ್ರದೇಶದಲ್ಲಿ ಮಳೆ ಎಡೆಬಿಡದೆ ಸುರಿಯುತ್ತಿದೆ. ಸಿಡಿಲಿನ ಅಬ್ಬರವೂ ಈ ವರ್ಷ ಜೋರಾಗಿದ್ದು, ಈವರೆಗೆ ಉತ್ತರ ಭಾರತದಲ್ಲಿ 28ಕ್ಕೂ ಅಧಿಕ ಜನ ಸಾವನ್ನಪ್ಪಿದ್ದಾರೆ. ಈ ನಡುವೆ ರಾಜಸ್ತಾನದಲ್ಲಿ 18 ಜನ ಸಿಡಿಲಿಗೆ ಬಲಿಯಾಗಿದ್ದಾರೆ. ಈ ಪೈಕಿ 11 ಜನ ಭಾನುವಾರ ಜೈಪುರದ ಅರಮನೆ ಗೋಪುರದ ಮೇಲೆ ನಿಂತು ಒಟ್ಟಾಗಿ ಸೆಲ್ಪೀ ತೆಗೆದುಕೊಳ್ಳುತ್ತಿದ್ದ ವೇಳೆ ಮಿಂಚು ತಾಕಿ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ. ರಾಜಸ್ಥಾನದ…

Read More

ಶಿಕಾರಿಪುರದ ಅಂಜನಾಪುರ ಜಲಾಶಯಕ್ಕೆ ಸಂಸದ ಬಿ ವೈ ರಾಘವೇಂದ್ರ ರವರಿಂದ ಬಾಗಿನ ಅರ್ಪಣೆ:

ಶಿಕಾರಿಪುರ: ಇಲ್ಲಿನ ಅಂಜನಾಪುರ ಜಲಾಶಯಕ್ಕೆ ಸಂಸದರಾದ ಶ್ರೀ ಬಿ ವೈ ರಾಘವೇಂದ್ರರವರು ಭಾಗಿನ ಸಮರ್ಪಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ವರುಣ ದೇವ ಪ್ರತಿ ವರ್ಷ ಇದೇ ರೀತಿ ಕೃಪೆ ತೋರಬೇಕು. ಇದರಿಂದ ಮಳೆ-ಬೆಳೆಯಾಗಿ ರೈತ ಸಂತಸದಿಂದ ಇರುತ್ತಾನೆ. ರೈತರ ಅನುಕೂಲಕ್ಕೆ ಸಾಕಷ್ಟು ಯೋಜನೆಯನ್ನು ಮಾಡಿದ್ದೇವೆ, ಮುಂದೆ ಹಣಕಾಸಿನ ಸ್ಥಿತಿಗತಿ ನೋಡಿಕೊಂಡು ಮತ್ತಷ್ಟು ಮಾಡುತ್ತೇವೆ ಎಂದರು. ಈ ಸಂಧರ್ಭದಲ್ಲಿ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಶ್ರೀ ಗುರುಮೂರ್ತಿ ರವರು,ಶ್ರೀಮತಿ ತೇಜಸ್ವಿನಿ ರಾಘವೇಂದ್ರ ರವರು,ಸೇರಿದಂತೆ ಪ್ರಮುಖರು ಈ ಸಂದರ್ಭದಲ್ಲಿ…

Read More

ವಾಯುಭಾರ ಕುಸಿತ ನಾಳೆ ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ:

ಬೆಂಗಳೂರು: ಬಂಗಾಳ ಉಪ ಸಾಗರದಲ್ಲಿ ವಾಯುಭಾರ ಕುಸಿತ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರಾಜ್ಯದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ನಾಳೆಯೂ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ವಿಭಾಗದ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ. ಇಂದು ಕೂಡ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದೆ. ಮುಲ್ಕಿಯಲ್ಲಿ 16 ಸೆಂ.ಮೀ, ಕಲಬುರಗಿಯಲ್ಲಿ 11 ಸೆಂ.ಮೀ, ಮಂಗಳೂರು, ಸುಬ್ರಹ್ಮಣ್ಯ,…

Read More

ಸ್ವಯಂಘೋಷಿತ ಆಸ್ತಿ ತೆರಿಗೆ ಹೆಚ್ಚಳ ಅವೈಜ್ಞಾನಿಕ: ಶಿವಮೊಗ್ಗದಲ್ಲಿ ಪ್ರತಿಭಟನೆ

ಶಿವಮೊಗ್ಗ: ಇಲ್ಲಿನ ಗೋಪಿ ಸರ್ಕಲ್ ನಲ್ಲಿ ನಾಗರಿಕ ಹಿತಾಸಕ್ತಿಯ ರಕ್ಷಣಾ ಒಕ್ಕೂಟ ಸ್ವಯಂಘೋಷಿತ ಆಸ್ತಿ ತೆರಿಗೆ ಹೆಚ್ಚಳ ಖಂಡಿಸಿ ಪೋಸ್ಟ್ ಕಾರ್ಡ್ ಚಳುವಳಿಯನ್ನು ನಡೆಸಿತು.  ಕೋವಿಡ್ ಸಂಕಷ್ಟ ಕಾಲದಲ್ಲಿ ಲಾಕ್ಡೌನ್ ನಿಂದ ಆರ್ಥಿಕ ಪರಿಸ್ಥಿತಿ ಹದಗೆಟ್ಟು ಇರುವಂತಹ ಇಂತಹ ಸಂದರ್ಭದಲ್ಲಿ, ಗಾಯದ ಮೇಲೆ ಬರೆ ಎಳೆಯುವಂತೆ 2021- 22 ನೇ ಸಾಲಿನ ಆಸ್ತಿ ತೆರಿಗೆಯನ್ನು ಕಾನೂನು ತಿದ್ದುಪಡಿ ಮಾಡುವ ಮೂಲಕ ಅವೈಜ್ಞಾನಿಕವಾಗಿ ಹೆಚ್ಚಿಸಿದೆ ಎಂದು ಪ್ರತಿಭಟನಾಕಾರರು ದೂರಿದ್ದಾರೆ. ಎಸ್ಸಾರ್ ದರ ಆಧರಿಸಿ ವಾಸದ ಮನೆ, ವಾಣಿಜ್ಯ ಕಟ್ಟಡಗಳು, ಕೈಗಾರಿಕೆಗಳು…

Read More

ಸಾಗರದಲ್ಲಿ ಪಾದಚಾರಿಗೆ ಕಾರಿನಲ್ಲಿ ಗುದ್ದಿ ಚಾಲಕ ಪರಾರಿ:

ಸಾಗರ: ಇಲ್ಲಿನ ಸಿಂಗಂದೂರು ರಸ್ತೆಯ ಸಂಜಯ್ ಮೆಮೋರಿಯಲ್ ಕಾಲೇಜು ಬಳಿ ಆದಿಶಕ್ತಿ ನಗರದ ವ್ಯಕ್ತಿಯೊಬ್ಬರು ನಡೆದುಕೊಂಡು ಹೋಗುತ್ತಿರುವಾಗ ಅಪರಿಚಿತ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಜೆ 7.30 ರ ಸುಮಾರಿಗೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಆದಿಶಕ್ತಿ ನಗರದ ಬಾಬು(47) ಎಂದು ಹೇಳಲಾಗುತ್ತಿದೆ. ಘಟನಾ ಸ್ಥಳಕ್ಕೆ ಸಾಗರ ಪೇಟೆ ಪೊಲೀಸ್ ಇನ್ಸ್ ಪೆಕ್ಟರ್ ಅಶೋಕ್ ಕುಮಾರ್ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಗಿರೀಶ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತ ಶರೀರವನ್ನು ಸಾಗರ…

Read More

ಅನಗತ್ಯ ಬಾಕ್ಸ್ ಚರಂಡಿ ನಿರ್ಮಾಣಕ್ಕೆ ವಿರೋಧ :

ರಿಪ್ಪನ್ ಪೇಟೆ : ಇಲ್ಲಿಯ ಗ್ರಾಮ ಪಂಚಾಯಿತಿ ಮುಂಭಾಗದ ಹಾಸ್ಟೆಲ್ ರಸ್ತೆಯಲ್ಲಿ ಈ ಹಿಂದೆ ವಿಶ್ವ ಯೋಜನೆಯನ್ವಯ ಮಾಡಿರುವ ಚಪ್ಪಡಿ ಕಲ್ಲಿನಲ್ಲಿ ನಿರ್ಮಾಣಗೊಂಡ ಭದ್ರವಾದ ಚರಂಡಿಯನ್ನು ತೆಗೆದು ಹೊಸ ಬಾಕ್ಸ್ ಚರಂಡಿ ಮಾಡಲು ಹೊರಟಿರುವ ಗ್ರಾಮ ಪಂಚಾಯಿತಿ ವಿರುದ್ಧ ಸಾಮಾಜಿಕ ಹೋರಾಟಗಾರ ಟಿ. ಆರ್ .ಕೃಷ್ಣಪ್ಪ ಆಕ್ರೋಶ ವ್ಯಕ್ತಪಡಿಸಿ ಸ್ಥಳದಲ್ಲಿಯೇ ಧರಣಿ ನಡೆಸಿದರು.  ಹಿಂದಿನ ಗ್ರಾಮಪಂಚಾಯಿತಿ ಅವಧಿಯಲ್ಲಿ ಅಂದು ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದ ಈಗ ಹಾಲಿ ಪಂಚಾಯಿತಿ ಉಪಾಧ್ಯಕ್ಷೆ ಶ್ರೀಮತಿ  ಮಹಾಲಕ್ಷ್ಮಿ ಅಣ್ಣಪ್ಪ ಇವರು ತಮ್ಮ ವಿವೇಚನಾ…

Read More

ಸಮಾಜ ಕಲ್ಯಾಣ ಇಲಾಖೆಯಿಂದ ಪಿಯುಸಿ ಪದವಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ 35000 ಸಾವಿರ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ:

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯಿಂದ ಪಿಯುಸಿ ಪದವಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ 35000 ಸಾವಿರ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.   ನಮ್ಮಲ್ಲಿ ಅನೇಕ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಆರ್ಥಿಕ ಪರಿಸ್ಥಿತಿಯಿಂದಾಗಿ ವಿದ್ಯಾಭ್ಯಾಸವನ್ನು ಅರ್ಧದಲ್ಲಿಯೇ ಬಿಡುತ್ತಾರೆ. ಹೀಗಾಗಿ ಆರ್ಥಿಕ ಪರಿಸ್ಥಿತಿಯಿಂದ ಮಕ್ಕಳ ಶಿಕ್ಷಣ ಬಿಡಬಾರದೆಂದು ಕರ್ನಾಟಕ ಸಮಾಜ ಕಲ್ಯಾಣ ವತಿಯಿಂದ ಸರ್ಕಾರವು ಪ್ರತಿಭಾವಂತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕಾಗಿ ಪ್ರೋತ್ಸಾಹಧನವನ್ನು ನೀಡಲಾಗುತ್ತಿದೆ. ಅಧ್ಯಯನಕ್ಕೆ ಪ್ರೋತ್ಸಾಹಧನವನ್ನು ವಿಂಗಡಿಸಲಾಗಿದೆ. ಪಿಯುಸಿ ಮತ್ತು ಡಿಪ್ಲೋಮೋ : 20000/- ಯಾವುದೇ ಪದವಿ…

Read More

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೆಗೌಡರ ಹೆಸರನ್ನು ಇಡಲು ಆಗ್ರಹ:

ರಿಪ್ಪನ್ ಪೇಟೆ: ಶಿವಮೊಗ್ಗದಲ್ಲಿ ಉದ್ಘಾಟನೆಗೆ ಸಿದ್ದವಾಗಿರುವ ನೂತನ ವಿಮಾನ ನಿಲ್ದಾಣಕ್ಕೆ ಕರ್ನಾಟಕದಿಂದ ಆಯ್ಕೆಯಾಗಿ ದೇಶದ ಪ್ರಧಾನಿಯಾಗಿ ರಾಜ್ಯದ ಕೀರ್ತಿಯನ್ನು ಇಡೀ ದೇಶಕ್ಕೆ ಪರಿಚಯಿಸಿದ ಮಾಜಿ ಪ್ರಧಾನಿ ಹೆಚ್ ಡಿ ದೇವೆಗೌಡರ ಹೆಸರನ್ನು  ಇಡಬೇಕೆಂದು ಮಾನ್ಯ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಶಿವಮೊಗ್ಗ ಸಂಸದರಾದ ಬಿ ವೈ ರಾಘವೇಂದ್ರ ರವರಿಗೆ ರಾಜ್ಯ ಜೆಡಿಎಸ್ ಮಾಜಿ ಪ್ರಧಾನಕಾರ್ಯದರ್ಶಿಗಳಾದ ಅರ್ ಎ ಚಾಬುಸಾಬ್ ಒತ್ತಾಯಿಸಿದ್ದಾರೆ. .                     …

Read More

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷನಾಗಿ ಅಣ್ಣಾಮಲೈ ನೇಮಕ::

ನವದೆಹಲಿ: ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು, ತಮಿಳುನಾಡು ಬಿಜೆಪಿ ಅಧ್ಯಕ್ಷನಾಗಿ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರನ್ನು ಗುರುವಾರ ನೇಮಿಸಿದ್ದಾರೆ. ಈ ಬಗ್ಗೆ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ನೇಮಕಾತಿ ಪತ್ರವನ್ನು ತಮಿಳುನಾಡು ಬಿಜೆಪಿಗೆ ರವಾನಿಸಿದ್ದಾರೆ. 2024 ರ ಲೋಕಸಭಾ ಚುನಾವಣೆಗೆ ಮುನ್ನ ತಮಿಳುನಾಡಿನಲ್ಲಿ ಪಕ್ಷವನ್ನು ಬಲಪಡಿಸಲು ಬಿಜೆಪಿ ಬುಧವಾರ ಪಕ್ಷದ ರಾಜ್ಯ ಅಧ್ಯಕ್ಷರಾಗಿದ್ದ ಎಲ್. ಮುರುಗನ್ ಅವರನ್ನು ಕೇಂದ್ರ ಸಚಿವಾಲಯದ ರಾಜ್ಯ ಸಚಿವರನ್ನಾಗಿ ನೇಮಿಸಿತ್ತು. ಅವರಿಗೆ ಮಾಹಿತಿ ಮತ್ತು…

Read More

ಮೂಗೂರು ಏತ ನೀರಾವರಿಗೆ ಸಂಬಂಧಿಸಿದ ಎಲ್ಲಾ ಕೆರೆಗಳ ಸಮಿತಿ ರಚನೆ ಕುರಿತು ಸಭೆ:

ಸೊರಬ: ತಾಲೂಕಿನ ಆನವಟ್ಟಿ ಪದವಿಪೂರ್ವ ಕಾಲೇಜು ರಂಗಮಂದಿರದಲ್ಲಿ ಮಾನ್ಯ ಶಾಸಕರಾದ ಶ್ರೀ ಎಸ್ ಕುಮಾರ್ ಬಂಗಾರಪ್ಪ ರವರ ಅಧ್ಯಕ್ಷತೆಯಲ್ಲಿ ಮೂಗೂರು ಏತನೀರಾವರಿಗೆ ಸಂಬಂಧಿಸಿದ ಎಲ್ಲಾ ಕೆರೆಗಳ ಸಮಿತಿ ರಚನೆ ಕುರಿತು ಸಭೆ ನಡೆಯಿತು. ಈ ಸಂಧರ್ಭದಲ್ಲಿ ತಹಶಿಲ್ದಾರ ಗ್ರೇಡ್ 2 ರವರು, ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಆನವಟ್ಟಿ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗಳು, ದಂಡಾವತಿ AEE ರವರು ಹಾಗೂ ಸಿಬ್ಬಂದಿ ವರ್ಗ, MI AEE ರವರು, AEE PRED ರವರು, ಪಿಡಿಒ , ರಾಜಸ್ತ ನಿರೀಕ್ಷಕರು ಮೂಗೂರು…

Read More