
ನಿಟ್ಟೂರಿನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ
ನಿಟ್ಟೂರಿನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ ನಿಟ್ಟೂರು: ಪ್ರಜ್ಞಾಭಾರತಿ ವಿದ್ಯಾ ಕೇಂದ್ರದ ಆಶ್ರಯದಲ್ಲಿ ನಗರ ಹೋಬಳಿ ವ್ಯಾಪ್ತಿಯ 17 ವರ್ಷದೊಳಗಿನ ವಯೋಮಿತಿಯ ಪ್ರೌಢಶಾಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರ ಕ್ರೀಡಾಕೂಟ ಇಂದು ನಿಟ್ಟೂರಿನ ಕಾಲೇಜು ಮೈದಾನದಲ್ಲಿ ಭವ್ಯವಾಗಿ ಆರಂಭವಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಹೊಸನಗರ ತಾಲೂಕು ಕೆ.ಡಿ.ಪಿ ಸದಸ್ಯೆ ಸುಮಾ ಸುಬ್ರಹ್ಮಣ್ಯ ಅವರು ನೆರವೇರಿಸಿ ನಂತರ ಮಾತನಾಡಿ“ವಿದ್ಯಾರ್ಥಿಗಳ ಉನ್ನತಿಗಾಗಿ ಶ್ರಮಿಸುತ್ತಿರುವ ಪೋಷಕರಿಗೆ ಗೌರವ ನೀಡಬೇಕು, ಶಿಕ್ಷಕರ ಮಾರ್ಗದರ್ಶನದಲ್ಲಿ ಉತ್ತಮ ನಾಗರಿಕರಾಗಿ ಬೆಳೆಯಬೇಕು,” ಎಂದು ಹಾರೈಸಿದರು. ಕ್ರೀಡೆ ದೈಹಿಕ ಹಾಗೂ ಮಾನಸಿಕ ಅಭಿವೃದ್ಧಿಗೆ ಅನನ್ಯವಾದ ಪಾತ್ರವಹಿಸುತ್ತದೆ…


