Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಆನಂದಪುರ | ಅಕ್ರಮ ಜಾನುವಾರು ಸಾಗಾಟ – ಮೂವರು ವಶಕ್ಕೆ

ಆನಂದಪುರ | ಅಕ್ರಮ ಜಾನುವಾರು ಸಾಗಾಟ – ಮೂವರು ವಶಕ್ಕೆ ಸಾಗರ ತಾಲೂಕಿನ ಆನಂದಪುರ ಸಮೀಪದ ಬಳ್ಳಿಬೈಲು ಬಳಿ ಮೂರು ಜಾನುವಾರುಗಳನ್ನು  ಅಕ್ರಮವಾಗಿ ಸಾಗಿಸುತ್ತಿದ್ದ ಮೂವರನ್ನು ಆನಂದಪುರ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ದಿಂಡದಹಳ್ಳಿ ವಾಸಿಗಳಾದ ಬಸವರಾಜ್, ಮರಿಯಪ್ಪ, ಗುಡ್ಡಪ್ಪ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ. ಬಳ್ಳಿ ಬೈಲಿನಿಂದ ಆನಂದಪುರ ಕಡೆ ತೆರಳುತ್ತಿದ್ದ ಅಶೋಕ್ ಲೈಲ್ಯಾಂಡ್ ವಾಹನವನ್ನು ಪಿಎಸ್ಐ ಪ್ರವೀಣ್ ನೇತೃತ್ವದ ತಂಡ ಪರಿಶೀಲಿಸಿದಾಗ, ಅಕ್ರಮವಾಗಿ ಹಿಂಸಾತ್ಮಕವಾಗಿ ಒಂದು ಎಮ್ಮೆ, ಒಂದು ಕೋಣನ ಮರಿ ಹಾಗೂ ಒಂದು ಹೋರಿ ಕರುವನ್ನು…

Read More

ANANDAPURA | ಗಾಂಜಾ ಅಮಲಿನಲ್ಲಿದ್ದ ಲಾರಿ ಚಾಲಕ ವಶಕ್ಕೆ

ANANDAPURA | ಗಾಂಜಾ ಅಮಲಿನಲ್ಲಿದ್ದ ಲಾರಿ ಚಾಲಕ ವಶಕ್ಕೆ ಗಾಂಜಾ ಸೇವಿಸಿ ವಾಹನ ಚಲಾಯಿಸುತಿದ್ದ ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದು ಎನ್ ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದಲ್ಲಿ ನಡೆದಿದೆ. ಆನಂದಪುರ ಪಿಎಸ್ಐ ಪ್ರವೀಣ್ ನೇತೃತ್ವದ ತಂಡ ಆನಂದಪುರ ಪೊಲೀಸ್ ಠಾಣೆಯ ಮುಂಭಾಗ ವಾಹನಗಳ ತಪಾಸಣೆ ನಡೆಸುತ್ತಿರುವಾಗ ಸಾಗರ ಕಡೆಯಿಂದ ಲಾರಿಯೊಂದು ಅಡ್ಡದಿಡ್ಡಿಯಾಗಿ ಚಾಲನೆ ಮಾಡಿಕೊಂಡು ಬರುತ್ತಿರುವುದನ್ನು ಗಮನಿಸಿದ ಪಿಎಸ್ಐ ಪ್ರವೀಣ್ ಮತ್ತು ತಂಡ ವಾಹನವನ್ನು ನಿಲ್ಲಿಸಿ ವಿಚಾರಿಸಿದಾಗ…

Read More

ವೃದ್ಧೆಯ ಸರ ಅಪಹರಣ ಪ್ರಕರಣ – ಇಬ್ಬರು ಸರಗಳ್ಳರ ಬಂಧನ

ವೃದ್ಧೆಯ ಸರ ಅಪಹರಣ ಪ್ರಕರಣ – ಇಬ್ಬರು ಸರಗಳ್ಳರ ಬಂಧನ ಶಿವಮೊಗ್ಗ: ಜೂನ್ 20ರಂದು ಬೆಳಗಿನ ಜಾವ ವೃದ್ಧೆಯೊಬ್ಬರ ಕೊರಳಿನಿಂದ 38 ಗ್ರಾಂ ಬಂಗಾರದ ಸರ ಕಿತ್ತುಕೊಂಡು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಎನ್.ಆರ್.ಪುರ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಚಿಪ್ಸ್ ವ್ಯಾಪಾರಿ ಸಾಗರ್ ಮತ್ತು ಭದ್ರಾವತಿ ತಾಲ್ಲೂಕಿನ ಹೊಳೆಹೊನ್ನೂರು ಮಾರಶೆಟ್ಟಿಹಳ್ಳಿ ರಾಕೇಶ್ ಬಂಧಿತ ಆರೋಪಿಗಳು. ಎನ್.ಆರ್.ಪುರ ಪಟ್ಟಣದ ಕುರುಕುಬಳ್ಳಿ ಬಳಿ  64 ವರ್ಷ ವಯಸ್ಸಿನ ಮಹಿಳೆಯೊಬ್ಬರು ವಾಕ್ ಮಾಡುತ್ತಿದ್ದರು .  ಆವೇಳೆ  ಇಬ್ಬರು ಕಳ್ಳರು…

Read More

ಗ್ರಾಮ-ಓನ್ ಕೇಂದ್ರದಲ್ಲಿ ಹೆಚ್ಚುವರಿ ಹಣ ವಸೂಲಿ – ಲೈಸೆನ್ಸ್ ರದ್ದುಗೊಳಿಸಿದ ಜಿಲ್ಲಾಧಿಕಾರಿ | ನಾಮಫಲಕಗಳ ತೆರವು

ಗ್ರಾಮ-ಓನ್ ಕೇಂದ್ರದಲ್ಲಿ ಹೆಚ್ಚುವರಿ ಹಣ ವಸೂಲಿ – ಲೈಸೆನ್ಸ್ ರದ್ದುಗೊಳಿಸಿದ ಜಿಲ್ಲಾಧಿಕಾರಿ | ನಾಮಫಲಕಗಳ ತೆರವು ರಿಪ್ಪನ್ ಪೇಟೆ : ಪಟ್ಟಣದ ಸಾಗರ ರಸ್ತೆಯ ಗ್ರಾಮ-ಓನ್ ಕೇಂದ್ರದಲ್ಲಿ ಹೆಚ್ಚುವರಿ ಹಣ ವಸೂಲಿ ಮಾಡುತಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕರು ನೀಡಿದ ದೂರಿನ ಮೇರೆಗೆ ತಹಶೀಲ್ದಾರ್ ರಶ್ಮಿ ಹಾಲೇಶ್ ವರದಿಯನ್ನಾಧರಿಸಿ ಗ್ರಾಮ-ಓನ್ ಕೇಂದ್ರದ ಲೈಸೆನ್ಸ್(ಐಡಿ)ನ್ನು ರದ್ದುಗೊಳಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ. ಸಮಾಜದ ದುರ್ಬಲ ವರ್ಗದವರಿಗೆ ಸರ್ಕಾರಿ ಸೇವೆಗಳನ್ನು ಸುಲಭವಾಗಿ ತಲುಪಿಸುವ ಉದ್ದೇಶದಿಂದ ಸ್ಥಾಪಿಸಲಾಗಿರುವ ಗ್ರಾಮ ಒನ್ ಕೇಂದ್ರಗಳು ಕೆಲವೆಡೆ…

Read More

ಬಸ್ ಹಾಗೂ ಬೈಕ್ ನಡುವೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು

ಬಸ್ ಹಾಗೂ ಬೈಕ್ ನಡುವೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು ಶಿವಮೊಗ್ಗದಿಂದ ಕುಂದಾಪುರಕ್ಕೆ ತೆರಳುತಿದ್ದ ದುರ್ಗಾಂಬ ಬಸ್‌ ರಿಪ್ಪನ್ ಪೇಟೆ ಪಟ್ಟಣದ ಶಿವಮೊಗ್ಗ ರಸ್ತೆಯ ಪೆಟ್ರೋಲ್ ಬಂಕ್ ಬಳಿಯಲ್ಲಿ ಅಪಘಾತವಾಗಿದ್ದು ಬೈಕ್ ಸವಾರನ ತಲೆಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವವಾಗಿತ್ತು ರಿಪ್ಪನ್ ಪೇಟೆ : ಬೈಕ್ ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಕೆಂಚನಾಲ ಗ್ರಾಪಂ ವ್ಯಾಪ್ತಿಯ ಕಮದೂರು ಗ್ರಾಮದ ನಾಗರಾಜ್ ನಾಯ್ಕ್…

Read More

ಸಮಾಜ ಮಾದಕ ವಸ್ತುಗಳಿಂದ ಮುಕ್ತವಾಗಿರಬೇಕು – ಗುರಣ್ಣ ಹೆಬ್ಬಾಳ್

ಸಮಾಜ ಮಾದಕ ವಸ್ತುಗಳಿಂದ ಮುಕ್ತವಾಗಿರಬೇಕು – ಗುರಣ್ಣ ಹೆಬ್ಬಾಳ್   ರಿಪ್ಪನ್ ಪೇಟೆ : ಮಾದಕ ವಸ್ತುಗಳ ಸೇವನೆಯಿಂದ ಮನುಷ್ಯ ಅನೇಕ ದೈಹಿಕ ಹಾಗೂ ಮಾನಸಿಕ ಕಾಯಿಲೆಗೆ ಒಳಗಾಗಿ ತನ್ನ ಜೀವವನ್ನೆ ಕಳೆದುಕೊಳ್ಳುತ್ತಾನೆ ಹಾಗೂ ಆರ್ಥಿಕವಾಗಿ ದಿವಾಳಿ ಕೂಡ ಆಗುತ್ತಾನೆ. ಇದರಿಂದ ಕುಟುಂಬ ಹಾಗೂ ಸಮಾಜದ ಮೇಲೆ ಕೆಟ್ಟ ಪರಿಣಾಮ ಉಂಟಾಗುತ್ತದೆ. ಸಮಾಜ ಮಾದಕ ವಸ್ತುಗಳಿಂದ ಮುಕ್ತವಾಗಿರಬೇಕು ಎಂದು ಹೊಸನಗರ ವೃತ್ತ ನಿರೀಕ್ಷಕ ಗುರಣ್ಣ ಹೆಬ್ಬಾಳ್ ಹೇಳಿದರು ರಿಪ್ಪನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಗರ್ತಿಕೆರೆ ಪದವಿಪೂರ್ವ ಕಾಲೇಜಿನಲ್ಲಿ ಮಾದಕ…

Read More

ಗೃಹರಕ್ಷಕರು ಪೊಲೀಸ್ ಇಲಾಖೆಯ ಬಲಗೈ ಇದ್ದಂತೆ – ಡಿವೈಎಸ್ಪಿ ಅರವಿಂದ್ ಕಲಗುಜ್ಜಿ

ಗೃಹರಕ್ಷಕರು ಪೊಲೀಸ್ ಇಲಾಖೆಯ ಬಲಗೈ ಇದ್ದಂತೆ – ಡಿವೈಎಸ್ಪಿ ಅರವಿಂದ್ ಕಲಗುಜ್ಜಿ ರಿಪ್ಪನ್ ಪೇಟೆ : ಗೃಹರಕ್ಷಕ ದಳದವರು ಪೊಲೀಸ್‌ ಇಲಾಖೆಯೊಂದಿಗೆ ಸಮಾಜದ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಗೃಹರಕ್ಷಕ ದಳ ಪೊಲೀಸ್ ಇಲಾಖೆಯ ಬಲಗೈ ಇದ್ದಂತೆ ಎಂದು ತೀರ್ಥಹಳ್ಳಿ ಉಪ ವಿಭಾಗದ ಡಿವೈಎಸ್ಪಿ ಅರವಿಂದ್ ಅಭಿಪ್ರಾಯ ಪಟ್ಟರು. ಹೊಂಬುಜ ಮಠದ ಆವರಣದಲ್ಲಿ ಜಿಲ್ಲಾ ಗೃಹರಕ್ಷಕ ದಳ ಆಯೋಜಿಸಿದ್ದ 10 ದಿನಗಳ ಗೃಹರಕ್ಷಕರ ವಾರ್ಷಿಕ ಮೂಲ ತರಭೇತಿ ಶಿಬಿರದಲ್ಲಿ ಮಾದಕ ವಸ್ತುಗಳ ಸಾಗಾಣಿಕೆ ಮತ್ತು ಮಾರಾಟದ ಕುರಿತು…

Read More

ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಗಂಭೀರ

ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಗಂಭೀರ ಪೆಟ್ರೋಲ್ ಬಂಕ್ ಬಳಿಯಲ್ಲಿ ಅಪಘಾತವಾಗಿದ್ದು ಬೈಕ್ ಸವಾರನ ತಲೆಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವವಾಗಿದೆ.ತಕ್ಷಣ ಗಾಯಾಳುವನ್ನು ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ರವಾನಿಸಲಾಗಿದೆ. ರಿಪ್ಪನ್ ಪೇಟೆ : ಬೈಕ್ ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಶಿವಮೊಗ್ಗ ರಸ್ತೆಯ ಹೆಚ್ ಪಿ ಪೆಟ್ರೋಲ್…

Read More

ಭಾರಿ ಮಳೆ | ಹೊಸನಗರ ತಾಲೂಕಿನಾದ್ಯಂತ ಶಾಲೆಗಳಿಗೆ ‘ರಜೆ’ ನೀಡುವ ನಿರ್ಧಾರ ಶಾಲಾಭಿವೃದ್ದಿ ಸಮಿತಿಗೆ

ಭಾರಿ ಮಳೆ | ಹೊಸನಗರ ತಾಲೂಕಿನಾದ್ಯಂತ ಶಾಲೆಗಳಿಗೆ ‘ರಜೆ’ ನೀಡುವ ನಿರ್ಧಾರ ಶಾಲಾಭಿವೃದ್ದಿ ಸಮಿತಿಗೆ ಹೊಸನಗರ ತಾಲ್ಲೂಕಿನ ನಗರ ಹೋಬಳಿಯ ನಿಟ್ಟೂರು ಭಾಗದಲ್ಲಿ ಮುಂಗಾರು ಮಳೆ ರಭಸವಾಗಿ  ಸುರಿಯುತ್ತಿರುವುದು ಮುಂದುವರೆದಿರುವುದು ವರದಿಯಾಗಿದ್ದು ಈ ಬಗ್ಗೆ ತಹಶೀಲ್ದಾರ್ ರಶ್ಮಿ ಹಾಲೇಶ್ ರವರೊಂದಿಗೆ ಚರ್ಚಿಸಿದ್ದು, ಅವರ ಸೂಚನೆಯಂತೆ, ಇದೇ ರೀತಿ ಪರಿಸ್ಥಿತಿ ತಾಲ್ಲೂಕಿನ  ಕೆಲವು ಭಾಗದಲ್ಲಿಯೂ ಇರುವ ಕಾರಣ ಮಕ್ಕಳಿಗೆ ಶಾಲೆಗೆ ಬರಲು ತೊಂದರೆಯಾಗುವ  ಪರಿಸ್ಥಿತಿಯಿದ್ದಲ್ಲಿ ಎಸ್ ಡಿಎಂಸಿ ಯವರೊಂದಿಗೆ ಚರ್ಚಿಸಿ ರಜೆ ನೀಡಲು ಕ್ರಮವಹಿಸಲು ತಾಲೂಕಿನ ಎಲ್ಲಾ ಶಾಲೆಯ…

Read More

ರಸ್ತೆ ಸುರಕ್ಷತೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮುಖ್ಯ : ಪಿಎಸ್ಐ ರಾಜುರೆಡ್ಡಿ

ರಸ್ತೆ ಸುರಕ್ಷತೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮುಖ್ಯ : ಪಿಎಸ್ಐ ರಾಜುರೆಡ್ಡಿ ರಿಪ್ಪನ್ ಪೇಟೆ : ಪ್ರತಿಯೊಬ್ಬ ವಿದ್ಯಾರ್ಥಿ ಹಾಗೂ ಯುವ ಸಮೂಹ ರಸ್ತೆ ಸುರಕ್ಷತೆಯ ಬಗ್ಗೆ ಅರಿವನ್ನು ಹೊಂದಿರಬೇಕು ಆಗ ಮಾತ್ರ ಅಪಘಾತಗಳಿಂದ ಉಂಟಾಗುವ ಸಾವು ನೋವುಗಳಿಂದ ಮತ್ತು  ಅಪಾಯದಿಂದ ಪಾರಾಗಬಹುದು ಎಂದು ರಿಪ್ಪನ್ ಪೇಟೆಯ ನೂತನ  ಪಿಎಸ್ಐ ರಾಜುರೆಡ್ಡಿ ಹೇಳಿದರು. ಪಟ್ಟಣದ ರೋಟರಿ ಕ್ಲಬ್ ಹಾಗೂ ಪೊಲೀಸ್ ಇಲಾಖೆ ವತಿಯಿಂದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ  ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ರಸ್ತೆ…

Read More