Headlines

ಚೋರಡಿ ಅಪಘಾತ – ಮತ್ತೊಬ್ಬ ಗಾಯಾಳು ಸಾವು | ನಿನ್ನೆ ಕರ್ತವ್ಯ ಪ್ರಜ್ಞೆ ಮೆರೆದ ಜಿಲ್ಲೆಯ 108 ಆಂಬ್ಯುಲೆನ್ಸ್ ಸಿಬ್ಬಂದಿಗಳು – ಅಪಘಾತದ ಸಂಪೂರ್ಣ ಮಾಹಿತಿ

ನಿನ್ನೆ ಚೋರಡಿಯಲ್ಲಿ  ಸಂಭವಿಸಿದ ಭೀಕರ ಅಪಘಾತದ ಘಟನೆಯಲ್ಲಿ ಸಾವನ್ನಪ್ಪಿರುವ ಸಂಖ್ಯೆ ಮೂರಕ್ಕೆ ಏರಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಇವತ್ತು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ಧಾರೆ.  ನಿನ್ನೆ ಸಂಜೆ ಸುಮಾರು ಆರು ಗಂಟೆಯ ಹೊತ್ತಿಗೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದರು. ಇವತ್ತು ಶಿಕಾರಿಪುರ ತಾಲೂಕಿನ ಜೋಗಿಹಳ್ಳಿ ಗ್ರಾಮದ ಮಹೇಶ್ (45 ವರ್ಷ) ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಕುಮದ್ವತಿ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಹಿಂದಿನಿಂದಲೂ ಡೇಂಜರಸ್​ ಸ್ಪಾಟ್. ಹಳೇಸೇತುವೆ ಪಕ್ಕದಲ್ಲಿ ಅಗಲವಾದ ಹೊಸಸೇತುವೆ ಕಟ್ಟಿ, ಹೈವೆ ಮಾಡಿದರೂ ಇಲ್ಲಿ…

Read More

ಚೋರಡಿ ಬಸ್ ಅಪಘಾತ ಪ್ರಕರಣ – ಮೆಗ್ಗಾನ್ ಗೆ ಸಂಸದ ಬಿ ವೈ ರಾಘವೇಂದ್ರ ಭೇಟಿ : ಘಟನೆ ಬಗ್ಗೆ ಎಸ್ ಪಿ ಹೇಳಿದ್ದೇನು..???Accident

ಶಿವಮೊಗ್ಗ ಜಿಲ್ಲೆಯ ಚೋರಡಿ ಬಳಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿನ್ನೂ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಗಾಯಗೊಂಡವರ ಸಂಖ್ಯೆ ಹೆಚ್ಚಾಗುತ್ತಿದ್ದು, ಪೊಲೀಸ್ ಇಲಾಖೆಯ ಮಾಹಿತಿ ಪ್ರಕಾರ ಇಬ್ಬರು ಸಾವನ್ನಪ್ಪಿದ್ದು ಮೂವತ್ತು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಗೆ ದೌಡಾಯಿಸಿದ ಸಂಸದ ಬಿ ವೈ ರಾಘವೇಂದ್ರ ಬಸ್ ಅಪಘಾತದ ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ವಿಶೇಷ ವೈದ್ಯರ ತಂಡ, ಗಾಯಾಳುಗಳಿಗೆ ಚಿಕಿತ್ಸೆ ನೀಡುತ್ತಿದೆ. ಘಟನೆಯ ಬಗ್ಗೆ ವಿಷಯ ತಿಳಿಯುತ್ತಲೇ ಸಂಸದ ಬಿವೈ ರಾಘವೇಂದ್ರ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ  ದೌಡಾಯಿಸಿದ್ದಾರೆ….

Read More

ಚೋರಡಿಯ ಬಳಿ ಎರಡು ಬಸ್ಸುಗಳ ನಡುವೆ ಭೀಕರ ಅಪಘಾತ – 8 ರಿಂದ ಹತ್ತು ಮಂದಿ ಸಾವನ್ನಪ್ಪಿರುವ ಶಂಕೆ

ಶಿವಮೊಗ್ಗ – ಸಾಗರ ಹೆದ್ದಾರಿಯ ಚೋರಡಿ ಬಳಿಯಲ್ಲಿ ಕೆಲವು ಎರಡು ಬಸ್ಸುಗಳ ನಡುವೆ ಭೀಕರ ಅಪಘಾತ ಸಂಭವಿಸಿ ಸಾವು ನೋವುಗಳು ಸಂಭವಿಸಿವೆ ಎನ್ನಲಾಗುತ್ತಿದೆ. ಬಲ್ಲ ಮೂಲಗಳ ಪ್ರಕಾರ 8 ರಿಂದ 10 ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ.ಅನೇಕ ಮಂದಿಗೆ ಗಂಭೀರ ಗಾಯಗಳಾಗಿರುವ ಮಾಹಿತಿ ಇದೆ. ಶಿಕಾರಿಪುರದಿಂದ ಶಿವಮೊಗ್ಗಕ್ಕೆ ತೆರಳುತಿದ್ದ ಬಸ್ಸು ಹಾಗೂ ಶಿಕಾರಿಪುರದಿಂದ (ಹಿತ್ಲ ಕಲ್ಮನೆ ಮಾರ್ಗ) ಶಿವಮೊಗ್ಗಕ್ಕೆ ತೆರಳುತಿದ್ದ ಎರಡು ಬಸ್ ಗಳ ನಡುವೆ ಡಿಕ್ಕಿಯಾಗಿದೆ. ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಿಂದ 5 ಅಂಬ್ಯುಲೆನ್ಸ್ ಗಳು ಮತ್ತು ಅಗ್ನಿಶಾಮಕ…

Read More

ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ – ಇಬ್ಬರ ಸ್ಥಿತಿ ಗಂಭೀರ

ತೀರ್ಥಹಳ್ಳಿ : ತಾಲೂಕಿನ ಮೇಗರವಳ್ಳಿ ಸಮೀಪ ಅರೆಕಲ್ಲು ಬಳಿ ಆಗುಂಬೆ ರಸ್ತೆಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ.  ಭದ್ರಾವತಿಯ ದಡಮಘಟ್ಟದಿಂದ ಮಂಗಳೂರು ವೆನ್​ ಲಾಕ್ ಆಸ್ಪತ್ರೆಗೆ ರೋಗಿಯೊಬ್ಬರನ್ನ ನೋಡಲು ಹೊರಟಿದ್ದ ವೇಳೆ ಈ ಅಪಘಾತ ಸಂಭವಿಸಿದೆ.  ಇವತ್ತು ಮಧ್ಯಾಹ್ನ ಈ ಘಟನೆ ನಡೆದಿದ್ದು, ಬೈಕ್​ ನಲ್ಲಿ ವೆನ್​ಲಾಕ್ ಆಸ್ಪತ್ರೆಗೆ ಇಬ್ಬರು ಭದ್ರಾವತಿಯಿಂದ ಹೊರಟಿದ್ದರು. ಈ ವೇಳೆ ಆಗುಂಬೆಯ ಕಡೆಯಿಂದ ಬರುತ್ತಿದ್ದ ಕಾರೊಂದು ಓವರ್​ ಸ್ಪೀಡ್​ನಲ್ಲಿ ಬೈಕ್​ಗೆ ಡಿಕ್ಕಿ ಹೊಡೆದಿದೆ.  ಡಿಕ್ಕಿಯಾದ ರಭಸಕ್ಕೆ ಬೈಕ್​ನಲ್ಲಿದ್ದ ಇಬ್ಬರು ಸಹ ಬಹಳಷ್ಟು ದೂರ…

Read More

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಸಾವು|accident

ತೀರ್ಥಹಳ್ಳಿ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆ ದಾಖಲಾಗಿದ್ದ ಇಬ್ಬರು ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ತೀರ್ಥಹಳ್ಳಿ ತಾಲೂಕು ದೇವಂಗಿ ಬಳಿ ಭಾನುವಾರ ನಡೆದಿದೆ. ತೀರ್ಥಹಳ್ಳಿ ಮತ್ತು ಕೊಪ್ಪ ಮಾರ್ಗದ ದೇವಂಗಿ ವಾಟಿಗಾರು ಬಳಿ ಮಾರುತಿ ಸ್ವಿಫ್ಟ್ ಹಾಗೂ ಫಿಗೋ ಕಾರಿನ ನಡುವೆ ಅಪಘಾತ ಸಂಭವಿಸಿದ್ದು ಎರಡು ಕಾರಿನಲ್ಲಿದ್ದ ತಲಾ ಮೂವರು ಗಂಭೀರ ಗಾಯಗೊಂಡಿದ್ದರು.  ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ  ತೀರ್ಥಹಳ್ಳಿ ಸೊಪ್ಪುಗುಡ್ಡೆಯ ಡಾಕಪ್ಪ ಗೌಡ(70), ಶ್ರೀನಿವಾಸ್ ಗೌಡ ಶಿರೂರು…

Read More

ರಿಪ್ಪನ್‌ಪೇಟೆ – ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ|accident

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಗವಟೂರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಧರೆಗೆ ಡಿಕ್ಕಿಯಾಗಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಹೊಸನಗರದಿಂದ ಶಿವಮೊಗ್ಗಕ್ಕೆ ತೆರಳುತಿದ್ದ ಮಾರುತಿ ಬಲೆನೋ ಕಾರು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ಧರೆಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ.ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಶಿವಮೊಗ್ಗದ ರಸ್ತೆ ಅಭಿವೃದ್ಧಿ ಪ್ರಾಧಿಕಾರದ ಇಂಜಿನಿಯರ್ ಕಾರು ಚಲಾಯಿಸುತಿದ್ದರು ಎನ್ನಲಾಗುತಿದ್ದು ಅವರಿಗೆ ಪಟ್ಟಣದ ನಂದಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದ್ದು ಗಂಭೀರ ಗಾಯಗಳಾದ ವರದಿಯಾಗಿಲ್ಲ.ಕಾರಿನಲ್ಲಿ ಒಬ್ಬರೇ ಪ್ರಯಾಣಿಸುತಿದ್ದರು ಎನ್ನಲಾಗಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ…

Read More

ರಿಪ್ಪನ್‌ಪೇಟೆ – ಕ್ಯಾಂಟರ್ ಲಾರಿ ಮತ್ತು ಇನ್ನೋವಾ ಕಾರಿನ ನಡುವೆ ಮುಖಾಮುಖಿ ಡಿಕ್ಕಿ|accident

ಕ್ಯಾಂಟರ್ ಲಾರಿ ಹಾಗೂ ಟೊಯೋಟಾ ಇನ್ನೋವಾ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಸೂಡೂರು ಗೇಟ್ ಸಮೀಪದಲ್ಲಿ ನಡೆದಿದೆ. ಕುಂದಾಪುರದಿಂದ ಶಿವಮೊಗ್ಗಕ್ಕೆ ತೆರಳುತಿದ್ದ ಟೊಯೋಟಾ ಇನ್ನೋವಾ ಕಾರು ಹಾಗೂ ಶಿವಮೊಗ್ಗದಿಂದ ಹೊಸನಗರಕ್ಕೆ ತೆರಳುತಿದ್ದ ಕ್ಯಾಂಟರ್ ಲಾರಿ ನಡುವೆ ಸೂಡೂರು ಗೇಟ್ ಸಮೀಪದಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.ಘಟನೆಯಲ್ಲಿ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿರುವುದಿಲ್ಲ ಎಂದು ತಿಳಿದುಬಂದಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ರಿಪ್ಪನ್‌ಪೇಟೆ – ಚಿಪ್ಪಿಗರ ಕೆರೆಯ ಬಳಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ|rpet

ರಿಪ್ಪನ್‌ಪೇಟೆ ಚಿಪ್ಪಿಗರ ಕೆರೆಯ ಬಳಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ  ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಚಿಪ್ಪಿಗರ ಕೆರೆಯ ಸಮೀಪದಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆಯಾಗಿದೆ. ಚಿಪ್ಪಿಗರ ಕೆರೆ ಬಳಿಯ ಪಾರ್ಕ್ ಸಮೀಪ ಸುಮಾರು 45 ರಿಂದ 50 ವಯೋಮಾನದ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪಟ್ಟಣದಲ್ಲಿ ಕಳೆದ ಕೆಲವು ವರ್ಷಗಳಿಂದ ಚಿಂದಿ ಆಯುತಿದ್ದ ಮಹಿಳೆ ಮೃತಪಟ್ಟಿರಬಹುದು ಎನ್ನಲಾಗುತ್ತಿದೆ. ಗ್ರಾಪಂ ಅಭಿವೃದ್ಧಿ ಅಧಿಕಾರಿ ಚಂದ್ರಶೇಖರ್ ,ಸದಸ್ಯರಾದ ಆಸೀಫ಼್ ಭಾಷಾಸಾಬ್ ,ಪ್ರಕಾಶ್ ಪಾಲೇಕರ್…

Read More

ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ – ಸಹೋದರರಿಬ್ಬರು ಸ್ಥಳದಲ್ಲಿಯೇ ಸಾವು|accident

ಕಾರು ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿ ಬಳಿ ನಡೆದಿದೆ. ಸಾಗರದ ರಾಮನಗರದ ವೆಲ್ಡಿಂಗ್ ಕೆಲಸಗಾರ ಸುಹೇಲ್ (27),ಸಯ್ಯದ್ ಆಫ್ರಿದ್(ಪಿಂಟು),(21) ಮೃತಪಟ್ಟ ದುರ್ಧೈವಿಗಳಾಗಿದ್ದಾರೆ. ಮದುವೆ ಕಾರ್ಯಕ್ರಮಕ್ಕೆಂದು ಉಳವಿ ಗ್ರಾಮಕ್ಕೆ ಹೋಗುತ್ತಿದ್ದಾಗ ಮಾರುತಿ ವ್ಯಾಗನಾರ್ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಇಬ್ಬರು ಸಹೋದರರ ಮೃತದೇಹವನ್ನು ಸಾಗರದ ಉಪವಿಭಾಗೀಯ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.

Read More

SAGARA|ಬೈಕ್ ಗೆ ಲಾರಿ ಡಿಕ್ಕಿ – ಮಹಿಳೆ ಸ್ಥಳದಲ್ಲಿಯೇ ಸಾವು

ಬೃಹತ್​ ಲಾರಿಯ ಚಕ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ಸಂಭವಿಸಿದೆ. ನಿನ್ನೆ ಬೆಳಗ್ಗೆ ಸಾಗರ ಪೇಟೆಯ ಐಬಿ ವೃತ್ತದ ಸಮೀಪ ಈ ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಬೆಳಲಮಕ್ಕಿ ನಿವಾಸಿಯೊಬ್ಬರು ಸಾವನ್ನಪ್ಪಿದ್ದಾರೆ. ನಗರದ ಷಾಹಿ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದ ಬೆಳಲಮಕ್ಕಿಯ 34ವರ್ಷದ ಪದ್ಮಾ ಅವರನ್ನು ಬೈಕ್‌ನಲ್ಲಿ ಅವರ ಮೈದುನ ರಘು ಕರೆದೊಯ್ಯುತ್ತಿದ್ದಾಗ ಬೃಹತ್ ಲಾರಿ ಹಿಮ್ಮುಖವಾಗಿ ಚಲಿಸಿದಾಗ ಬೈಕ್ ಉರುಳಿದೆ. ಈ ಸಂದರ್ಭದಲ್ಲಿ ಲಾರಿಯ ಚಕ್ರ ಪದ್ಮಾ ಅವರ ಮೇಲೆ ಹರಿದು ತೀವ್ರವಾಗಿ…

Read More