ಆನಂದಪುರದ ಕೆರೆಯಲ್ಲಿ ಮಹಿಳೆಯ ಶವ ಪತ್ತೆ | ಹೊಸನಗರದಲ್ಲಿ ಹೆಜ್ಜೇನು ದಾಳಿ|CRIME NEWS
ಸಾಗರ : ತಾಲೂಕಿನ ಆನಂದಪುರದ ಗಾಣಿಗನ ಕೆರೆಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಆನಂದಪುರದ ಜೆಡಿಸರ ಹೋಗುವ ರಸ್ತೆಯ ಕೆರೆಯ ಬಳಿ ಇದೀಗ ಮಹಿಳೆಯ ಶವ ಪತ್ತೆಯಾಗಿದೆ.ಮೃತ ಮಹಿಳೆ ಸಿದ್ದೇಶ್ವರ ಕಾಲೋನಿಯ ನಿವಾಸಿಯಾಗಿದ್ದು ಕಳೆದ ನಾಲ್ಕು ದಿನಗಳ ಹಿಂದೆ ಮನೆಯಿಂದ ಕಾಣೆಯಾಗಿದ್ದರು. ಇದೀಗ ಗಾಣಿಗನ ಕೆರೆಯಲ್ಲಿ ಶವ ಪತ್ತೆಯಾಗಿದ್ದು ಸಾವಿಗೆ ಇನ್ನೂ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಸಾಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಹೆಜ್ಜೇನು ದಾಳಿ – ವ್ಯಕ್ತಿಯೊಬ್ಬರ ಸಮಯ ಪ್ರಜ್ಞೆಯಿಂದ ಪ್ರಾಣಾಪಾಯದಿಂದ…


