ಬೆಂಗಳೂರಿನಲ್ಲಿ ಪಾದಾಚಾರಿಗಳ ಮೇಲೆ ಹರಿದ ಕಾರು : ರಿಪ್ಪನ್‌ಪೇಟೆ ಮೂಲದ ಯುವಕ ಸಾವು
ಪಾದಾಚಾರಿಗಳ ಮೇಲೆ ಕಾರು ಹರಿದು ಹೋಗಿ ರಿಪ್ಪನ್‌ಪೇಟೆ ಮೂಲದ ವ್ಯಕ್ತಿಯೊಬ್ಬ ದುರ್ಮರಣ ಹೊಂದಿದ ಘಟನೆ ಬೆಂಗಳೂರು ನಗರದ ಕತ್ರಿಗುಪ್ಪೆಯಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಪಾದಾಚಾರಿಗಳ ಮೇಲೆ ಹರಿದು ಹೋಗಿದ್ದಲ್ಲದೆ, ಮುಂದೆ ನಿಲ್ಲಿಸಿದ್ದ ಕಾರು ಹಾಗೂ ಬೈಕ್ಗೆ ಡಿಕ್ಕಿ ಹೊಡೆದಿದೆ. ಕೂಡಲೇ ನಾಲ್ವರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಿಪ್ಪನ್‌ಪೇಟೆ ಸಮೀಪದ ಬೆಳ್ಳೂರು ಗ್ರಾಮದ ಸುರೇಶ್ ಯಾನೆ ರುದ್ರಪ್ಪ (28) ಎಂಬ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಸಚಿನ್, ಸಿವರಾಜು, ಶೈಲೇಂದ್ರ ಅವರಿಗೆ…


