w
Headlines

Ripponpete | ಅಂದಾಸುರದಲ್ಲಿ ನೀರು ಕೊಂಡೊಯ್ಯುತ್ತಿದ್ದ ಮಹಿಳೆಗೆ ಟಿಪ್ಪರ್ ಲಾರಿ ಡಿಕ್ಕಿ – ಮಹಿಳೆ ಸಾವು

Ripponpete | ಅಂದಾಸುರದಲ್ಲಿ ನೀರು ಕೊಂಡೊಯ್ಯುತ್ತಿದ್ದ ಮಹಿಳೆಗೆ ಟಿಪ್ಪರ್ ಲಾರಿ ಡಿಕ್ಕಿ – ಮಹಿಳೆ ಸಾವು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅಂದಾಸುರದಲ್ಲಿ ಟಿಪ್ಪರ್ ಡಿಕ್ಕಿಯಾಗಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಅಂದಾಸುರದ ಶಿಲ್ಪ (40) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಮನೆಯ ಮುಂಭಾಗದ ನೀರಿನ ಟ್ಯಾಂಕ್ ನಿಂದ ನೀರು ತುಂಬಿಸಿಕೊಂಡು ಬರುತಿದ್ದಾಗ ಚಾಲಕನ ಅಜಾಗರೂಕತೆಯಿಂದ ಅತೀ ವೇಗದಿಂದ ವಾಹನ ಚಲಾಯಿಸಿಕೊಂಡು ಬಂದು ಮಹಿಳೆಗೆ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆ ಎಷ್ಟಿತ್ತೆಂದರೆ ಶಿಲ್ಪಳಿಗೆ ಡಿಕ್ಕಿಯಾದ ಟಿಪ್ಪರ್ ವಾಹನ 200 ಮೀಟರ್ ಅಷ್ಟು…

Read Full News

SSLC ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿನಿ ರಸ್ತೆ ಅಪಘಾತದಲ್ಲಿ ಸಾವು

ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿನಿ ರಸ್ತೆ ಅಪಘಾತದಲ್ಲಿ ಸಾವು ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಗ್ರಾಮಾಂತರ ತಾಲೂಕಿನ ಮೂಡಲವಿಠಲಾಪುರ ಗ್ರಾಮದಲ್ಲಿ ನಡೆದಿದೆ. ಜಂಬರಘಟ್ಟ ಗ್ರಾಮದ ನಿವಾಸಿ ಉಮ್ಮೆ ಕೂಲ್ಸುಂ (14) ಸಾವನ್ನಪ್ಪಿದ ವಿದ್ಯಾರ್ಥಿನಿ. ಈಕೆ ಇಂದು ಎಸ್‌.ಎಸ್.ಎಲ್.ಸಿ ಪರೀಕ್ಷೆ ಬರೆಯಬೇಕಾಗಿತ್ತು. ಉಮ್ಮೆ ಕೊಲ್ಸುಂ ರಸ್ತೆ ದಾಟುವ ವೇಳೆ ಇನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read Full News

SSLC ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ

SSLC ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಸಾಗರ ತಾಲೂಕಿನ ಆನಂದಪುರ ಸಮೀಪದ ಯಡೆಹಳ್ಳಿ ಗ್ರಾಮದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿ ನೇಣಿಗೆ ಶರಣಾದ ಘಟನೆ ನಡೆದಿದೆ. ಆನಂದಪುರದ ಸರ್ಕಾರಿ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಓದುತ್ತಿದ್ದ ವಿದ್ಯಾರ್ಥಿ ಪರಶುರಾಮ್ ನೇಣಿಗೆ ಶರಣಾದ ದುರ್ದೈವಿ. ಮನೆಯ ಹಿತ್ತಲಿನ ಕಂಬಕ್ಕೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ವಿದ್ಯಾರ್ಥಿಯ ಶವ ಪತ್ತೆಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಆನಂದಪುರ ಪೊಲೀಸರು ಭೇಟಿ ನೀಡಿ…

Read Full News

ಅಧಿಕಾರಿಗಳ ಕಿರುಕುಳ: ಬಸ್ ನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ KSRTC ಬಸ್ ಚಾಲಕ!

ಅಧಿಕಾರಿಗಳ ಕಿರುಕುಳ: ಬಸ್ ನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ KSRTC ಬಸ್ ಚಾಲಕ! ಶಿವಮೊಗ್ಗ : ನಗರದ ಕೆಎಸ್​​​ಆರ್​ಟಿಸಿ ಬಸ್ ನಿಲ್ದಾಣದಲ್ಲಿ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಕರ್ತವ್ಯ ನಿರತ ಚಾಲಕ-ಕಂ-ನಿರ್ವಾಹಕ ಬಸ್ಸಿನಲ್ಲಿಯೇ ವಿಷ ಸೇವಿಸಿ ಅತ್ಮಹತ್ಯೆಗೆ ಯತ್ನಿಸಿರುವ ಘಟನೆ ಜರುಗಿದೆ. ಬಸವರಾಜು ಟಿ.ವಿ ಆತ್ಮಹತ್ಯೆಗೆ ಯತ್ನಿಸಿದ ಚಾಲಕ ಎನ್ನಲಾಗಿದೆ. ಬಸವರಾಜು ಟಿ.ವಿ ಶಿವಮೊಗ್ಗ ವಿಭಾಗದ ಹೊನ್ನಾಳಿ ಘಟಕದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇದೇ ಘಟಕದಲ್ಲಿ ಕೆ.ರೇಣುಕಾ ಎಂಬುವರು ಮೆಕ್ಯಾನಿಕ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರ ಇಬ್ಬರ ನಡುವೆ…

Read Full News

Hosanagara | ಪತ್ನಿಯ ಅಗಲಿಕೆಯ ನೋವು ತಾಳಲಾರದೇ ಪತಿ ನೇಣಿಗೆ ಶರಣು

Hosanagara | ಪತ್ನಿಯ ಅಗಲಿಕೆಯ ನೋವು ತಾಳಲಾರದೇ ಪತಿ ನೇಣಿಗೆ ಶರಣು ಹೊಸನಗರ : ಪಟ್ಟಣದ ಮಾವಿನಕೊಪ್ಪ ನಿವಾಸಿ ಎಸ್ ಎಂ ವಿಶ್ವನಾಥ (67) ಮನೆಯಲ್ಲಿಯೇ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ವಿಶ್ವನಾಥರ ಪತ್ನಿ ಲೀಲಾವತಿಯವರು ಕಳೆದ ಆರು ತಿಂಗಳ ಹಿಂದೆ ಅಕಾಲ ಮರಣ ಹೊಂದಿದ್ದು ಪತ್ನಿಯ ಮರಣ ನಂತರ ವಿಶ್ವನಾಥ್ ರವರು ಪತ್ನಿಯ ಕೊರಗಿನಲ್ಲಿ ದಿನ ದೂಡುತ್ತಿದ್ದರೆಂದು ತಿಳಿದುಬಂದಿದೆ. ವಿಶ್ವನಾಥ್ ರವರ ಪುತ್ರ ಬಸ್ ಏಜೆಂಟ್ ರಾಘವೇಂದ್ರ ಸಂಜೆ ತನ್ನ…

Read Full News

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – KTM ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ಶಿವಮೊಗ್ಗ ನಗರದ ನವುಲೆಯ ಬಳಿ ಎರಡು ಬೈಕ್ ಗಳ ನಡುವೆ ಭೀಕರ ಅಪಘಾತವಾಗಿದ್ದು ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.  ಜೆಎನ್ ಸಿಸಿ ಇಂಜಿನಿಯರಿಂಗ್ ಕಾಲೇಜ್‌ನ ವಿದ್ಯಾರ್ಥಿ,ಕಾಶಿಪುರದ ನಿವಾಸಿ ಪುನೀತ್( 20) ಮೃತಪಟ್ಟ ದುರ್ಧೈವಿಯಾಗಿದ್ದಾನೆ. ಕೆಟಿಎಂ ಬೈಕ್ ಹಾಗೂ ಹೀರೋ ಹೋಂಡಾ ಪ್ಯಾಶನ್ ಪ್ರೊ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ನಂತರದಲ್ಲಿ ಕೆಟಿಎಮ್ ಬೈಕ್ ಎದುರಿನಲ್ಲಿದ್ದ KMF ಹಾಲಿನ ವಾಹನಕ್ಕೆ ಡಿಕ್ಕಿಯಾಗಿದೆ‌.ಈ ಅಪಘಾತದ ರಭಸಕ್ಕೆ ಕೆಟಿಎಮ್ ಬೈಕ್ ಸವಾರ ಪುನೀತ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು , ಇನ್ನೊಂದು…

Read Full News

Heddaripura | ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ – ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Heddaripura | ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ – ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹೆದ್ದಾರಿಪುರ(Heddaripura) ಗ್ರಾಮದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಭಾರತ್ ಬೆಂಜ್(Bharath Benz) ಲಾರಿ ಪಲ್ಟಿಯಾಗಿರುವ ಘಟನೆ ನಡೆದಿದೆ. ರಿಪ್ಪನ್‌ಪೇಟೆ(ripponpete) ಕಡೆಯಿಂದ ತೀರ್ಥಹಳ್ಳಿ(Thirthahalli) ಕಡೆಗೆ ತೆರಳುತಿದ್ದಾಗ ಈ ಘಟನೆ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿ ಉರುಳಿ ಬಿದ್ದಿದೆ. ಅಪಘಾತದ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅತೀ ವೇಗದಿಂದ ಭಾರತ್ ಬೆಂಜ್ ಲಾರಿ ಚಲಾಯಿಸುತಿದ್ದ ಚಾಲಕನಿಗೆ…

Read Full News

ದಾಖಲೆಯಿಲ್ಲದೇ ಸಾಗಿಸುತ್ತಿದ್ದ 2 ಲಕ್ಷ ಹಣ ಜಪ್ತಿ

ದಾಖಲೆಯಿಲ್ಲದೇ ಸಾಗಿಸುತ್ತಿದ್ದ 2 ಲಕ್ಷ ಹಣ ಜಪ್ತಿ ಲೋಕಸಭಾ ಚುನಾವಣೆ ಘೋಷಣೆಯ ನಂತ್ರ ಚುನಾವಣಾ ಅಧಿಕಾರಿಗಳು ಅಕ್ರಮ ತಡೆಗೆ ಮಹತ್ವದ ಕ್ರಮ ವಹಿಸಿದ್ದಾರೆ. ಇಂದು ಸಾಗರ ತಾಲೂಕಿನ ಚೂರಿಕಟ್ಟೆ ಬಳಿಯಲ್ಲಿ ದಾಖಲೆಯಿಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದಂತ 2 ಲಕ್ಷ ಹಣವನ್ನು ಜಪ್ತಿ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಚೂರಿಕಟ್ಟೆ ಚೆಕ್ ಪೋಸ್ಟ್ ನಲ್ಲಿ ಇಂದು ಚುನಾವಣಾ ವಿಚಕ್ಷಣ ದಳದ ಅಧಿಕಾರಿಗಳು ಕಾರೊಂದನ್ನು ತಡೆದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಕಾರಿನಲ್ಲಿ 2 ಲಕ್ಷ ಹಣ ಪತ್ತೆಯಾಗಿದೆ.ಕಾರಿನಲ್ಲಿ ದೊರೆತಂತ…

Read Full News

Hosanagara | ಇಸ್ಪೀಟ್ ಅಡ್ಡೆಯ ಮೇಲೆ ಪೊಲೀಸರ ದಾಳಿ – ನಗದು ಸಮೇತ ಎಂಟು ಜನ ವಶಕ್ಕೆ..!!

Hosanagara | ಇಸ್ಪೀಟ್ ಅಡ್ಡೆಯ ಮೇಲೆ ಪೊಲೀಸರ ದಾಳಿ – ನಗದು ಸಮೇತ ಎಂಟು ಜನ ವಶಕ್ಕೆ..!! ಹೊಸನಗರ ತಾಲ್ಲೂಕಿನ ಅಲಗೇರಿಮಂಡ್ರಿ ವ್ಯಾಪ್ತಿಯ ಮುಡುಬಾ ಗ್ರಾಮದಲ್ಲಿ ಅಂದರ್ ಬಾಹರ್ ಆಡುತಿದ್ದ ಸ್ಥಳಕ್ಕೆ ದಾಳಿ ನಡೆಸಿ ನಗದು ಸಮೇತ ಎಂಟು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಮುಡುಬಾ ಗ್ರಾಮದಲ್ಲಿ 10 ಜನರು ಅಂದರ್ ಬಾಹರ್ ಇಸ್ಪೀಟ್ ಆಟವಾಡುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್‌ರವರ ಆದೇಶದ ಮೇರೆಗೆ ಸಬ್ ಇನ್ಸ್‌ಪೆಕ್ಟರ್ ರಾಜುರೆಡ್ಡಿಯವರ ನೇತೃತ್ವದಲ್ಲಿ ದಾಳಿ ನಡೆಸಿ…

Read Full News

ತಂಗಿ ಮನೆಗೆ ಹೋಗಿ ಹಿಂದಿರುಗುವಾಗ ಮನೆ ಕಳ್ಳತನ – ಮಗನ ವಿರುದ್ದವೇ ದೂರು ನೀಡಿದ ತಾಯಿ | Theft

ತಂಗಿ ಮನೆಗೆ ಹೋಗಿ ಹಿಂದಿರುಗುವಾಗ ಮನೆ ಕಳ್ಳತನ – ಮಗನ ವಿರುದ್ದವೇ ದೂರು ನೀಡಿದ ತಾಯಿ | Theft ಮನೆಯಲ್ಲಿ ಕಳ್ಳತನವಾಗಿದ್ದು(theft) ಇದಕ್ಕೆ ತನ್ನ ಸ್ವಂತ ಮಗನೇ ಕಾರಣ ಎಂದು ಹೆತ್ತ ತಾಯಿಯೇ ತನ್ನ ಮಗನ ಮೇಲೆ ಕಳ್ಳತನದ ಆರೋಪ ಹೊರಿಸಿರುವ ಘಟನೆ ಶಿವಮೊಗ್ಗ(Shivamogga) ನಗರದ ತುಂಗಾ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.   ಘಟನೆಯ ಹಿನ್ನಲೆ : ಫೆಬ್ರವರಿ ತಿಂಗಳಿನಲ್ಲಿ ನಡೆದ ಘಟನೆ ಸಂಬಂದ ತುಂಗಾನಗರ ಪೊಲೀಸ್‌ ಸ್ಟೇಷನ್‌ ವ್ಯಾಪ್ತಿಯಲ್ಲಿ : IPC 1860 (U/s-380)…

Read Full News

ಮಹಿಳೆಯನ್ನು ಕೊಲೆಗೈದು ಮೃತದೇಹಕ್ಕೆ ಬೇಲಿ ಕಂಬ ಕಟ್ಟಿ ಹುಂಚದ ಮುತ್ತಿನಕೆರೆಗೆ ಎಸೆದ ಹಂತಕರು – ವಾರಸುದಾರರ ಪತ್ತೆಗೆ ಪೊಲೀಸರ ಮನವಿ | Crime News

ಮಹಿಳೆಯನ್ನು ಕೊಲೆಗೈದು ಮೃತದೇಹಕ್ಕೆ ಬೇಲಿ ಕಂಬ ಕಟ್ಟಿ ಹುಂಚದ ಮುತ್ತಿನಕೆರೆಗೆ ಎಸೆದ ಹಂತಕರು – ವಾರಸುದಾರರ ಪತ್ತೆಗೆ ಪೊಲೀಸರ ಮನವಿ | Crime News ಹೊಸನಗರ ತಾಲೂಕಿನ ಹುಂಚ ಗ್ರಾಮದ ಮುತ್ತಿನಕೆರೆಯಲ್ಲಿ ಮಹಿಳೆಯೊಬ್ಬರನ್ನು ಕೊಲೆಗೈದು ಕುತ್ತಿಗೆ ಹಾಗೂ ಕಾಲನ್ನು ಪ್ಲಾಸ್ಟಿಕ್ ಹಗ್ಗದಿಂದ ಕಟ್ಟಿಹಾಕಿ ಹೊಟ್ಟೆಯ ಬಾಗಕ್ಕೆ ಬೇಲಿ ಕಂಬವನ್ನು ಕಟ್ಟಿ ನೀರಿಗೆ ಎಸೆದಿರುವ ಘಟನೆ ನಡೆದಿದೆ. ಹುಂಚದ ಮುತ್ತಿನಕೆರೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ | ಕೊಲೆಯೋ..!!? ಆತ್ಮಹತ್ಯೆಯೋ..!!??? ಸೋಮವಾರ ಹುಂಚದ ಮುತ್ತಿನಕೆರೆಯಲ್ಲಿ ಅಪರಿಚಿತ ಮಹಿಳೆಯ ಶವ…

Read Full News

Accident | ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ – ತಪ್ಪಿದ ಭಾರಿ ಅನಾಹುತ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅಮ್ಮನ ಘಟ್ಟ ತಿರುವಿನ ಬಳಿ ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ಪಲ್ಟಿಯಾಗಿದ್ದು ಅಗ್ನಿಶಾಮಕ ದಳದ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ಇಂದು ಬೆಳಗಿನಜಾವ ಮಂಗಳೂರಿನಿಂದ ಬಳ್ಳಾರಿ ಜಿಲ್ಲೆ ಕೂಡ್ಲಿಗಿಗೆ ಇಂಧನ ತುಂಬಿಸಿಕೊಂಡು ಹೋಗುತ್ತಿದ್ದ ಪೆಟ್ರೋಲ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಮಗುಚಿ ಬಿದ್ದು ದುರಂತ ಸಂಭವಿಸಿದೆ.  ಘಟನೆ ನಡೆದ ಸ್ಥಳದ ಸಮೀಪದಲ್ಲೇ ಕೋಡೂರು ಪೆಟ್ರೋಲ್…

Read Full News

Hosanagara | ಅಡಿಕೆ ತೋಟಕ್ಕೆ ಔಷದಿ ಸಿಂಪಡಿಸುವಾಗ ಅಸ್ವಸ್ಥಗೊಂಡು ರೈತ ಸಾವು – ಸೂಕ್ತ ಪರಿಹಾರಕ್ಕೆ ಆಗ್ರಹ

ಅಡಿಕೆ ತೋಟಕ್ಕೆ ಔಷದಿ ಸಿಂಪಡಿಸುವಾಗ ಅಸ್ವಸ್ಥಗೊಂಡು ರೈತ ಸಾವು  ಹೊಸನಗರ ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಡೇನಕೊಪ್ಪ  ಗ್ರಾಮದ ಗಣೇಶ್ ಪೂಜಾರಿ ಎಂಬುವವರು ಅಡಿಕೆ ತೋಟಕ್ಕೆ ಕ್ರಿಮಿನಾಶಕ ಸಿಂಪಡಿಸುತ್ತಿದ್ದಾಗ ತಲೆ ಸುತ್ತು ಬಂದು ಅಸ್ವಸ್ಥಗೊಂಡು ಮೃತಪಟ್ಟ ಘಟನೆ ನಡೆದಿದೆ. ರೈತ ಗಣೇಶ್ ಪೂಜಾರಿ ಔಷಧಿ ಸಿಂಪಡಣೆ ಮಾಡುವಾಗ ಅಸ್ವಸ್ಥಗೊಂಡಿದ್ದು ತಕ್ಷಣವೇ ಅವರನ್ನು ಕುಟುಂಬದವರು ಹೊಸನಗರ ಆಸ್ಪತ್ರೆಗೆ ಕರೆದೊಯ್ದಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಜಿಲ್ಲಾಸ್ಪತ್ರೆಗೆ ಸೇರಿಸಿದ್ದಾರೆ. ರಕ್ತ ವಾಂತಿ ಜಾಸ್ತಿಯಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ ಮೃತಪಟ್ಟಿದ್ದಾರೆ. ಮೃತರು…

Read Full News

Shivamogga | ಮೋದಿ ಕಾರ್ಯಕ್ರಮದಲ್ಲಿ ಜೇಬುಗಳ್ಳರ ಹಾವಳಿ – ಓರ್ವ ವಶಕ್ಕೆ..!!

ಶಿವಮೊಗ್ಗದ ಮೋದಿ ಕಾರ್ಯಕ್ರಮದಲ್ಲಿ ಜೇಬುಗಳ್ಳರ ಹಾವಳಿ – ಓರ್ವ ವಶಕ್ಕೆ..!! ಶಿವಮೊಗ್ಗದಲ್ಲಿ ಫ್ರೀಡಂ ಪಾರ್ಕ್ ನಲ್ಲಿ ನಡೆದ‌ ಮೋದಿ ಕಾರ್ಯಕ್ರಮದಲ್ಲಿ ಕಳ್ಳಕಾಕರ ಹಾವಳಿ ಹೆಚ್ಚಾಗಿದ್ದು ಬಿಗಿ ಬಂದೋ ಬಸ್ತ್ ಇದ್ದರೂ ಕಳ್ಳರ ಹಾವಳಿ ತಪ್ಪಿಸಲು ಸಾಧ್ಯವಾಗಿಲ್ಲ. ಸಭೆಯಲ್ಲಿ ಭಾಗಿಯಾಗಿರುವ ಶ್ರೀನಿವಾಸ್ ಮತ್ತು ರವಿಕುಮಾರ್ ಎಂಬುವವರ ಪ್ಯಾಂಟ್ ಜೇಬಿಗೆ ಕತ್ತರಿ ಹಾಕಿರುವ ಮೂವರು ಕಳ್ಳರಲ್ಲಿ ಓರ್ವನನ್ನು ಹಿಡಿದ ಸಾರ್ವಜನಿಕರು ಆಟೋದಲ್ಲಿ ಜಯನಗರ ಪೊಲೀಸ್ ಠಾಣೆಗೆ ಕರೆತರಲು ಮುಂದಾಗಿದ್ದಾರೆ. ಇನ್ನಿಬ್ಬರು ಎಸ್ಕೇಪ್ ಆಗಿದ್ದಾರೆ. ಪಿಕ್ ಪ್ಯಾಕೆಟ್ ಮಾಡಲು ಹೋಗಿ ಸಿಕ್ಕಿಬಿದ್ದವನನ್ನು…

Read Full News

ಹುಂಚದ ಮುತ್ತಿನಕೆರೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ | ಕೊಲೆಯೋ..!!? ಆತ್ಮಹತ್ಯೆಯೋ..!!???|Crime News

ಹುಂಚದ ಮುತ್ತಿನಕೆರೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ | ಕೊಲೆಯೋ..!!? ಆತ್ಮಹತ್ಯೆಯೋ..!!??? ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದ ಮುತ್ತಿನಕೆರೆಯಲ್ಲಿ ಅಪರಿಚಿತ ಮಹಿಳೆಯ ಶವವೊಂದು ಕೊಳೆತ ಸ್ಥಿತಿಯಲ್ಲಿ ಸೋಮವಾರ ಮಧ್ಯಾಹ್ನ ಪತ್ತೆಯಾಗಿದ್ದು ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಹುಂಚ ಹೊಸನಗರ ಮಾರ್ಗದಲ್ಲಿರುವ ಮುತ್ತಿನಕೆರೆಯಲ್ಲಿ ಸುಮಾರು 40 ವರ್ಷ ವಯಸ್ಸಿನ ಅಪರಿಚಿತ ಮಹಿಳೆಯ ಶವ ಕೆರೆಯಲ್ಲಿ ಕಂಡುಬಂದಿದ್ದು , ಮೃತದೇಹವನ್ನು ಹಗ್ಗದಿಂದ ಕಟ್ಟಲಾಗಿದೆ ಎನ್ನಲಾಗುತಿದ್ದು ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಾಗಿದೆ. ವಿಷಯ ತಿಳಿಯುತ್ತಿದ್ದಂತೆ…

Read Full News

ತಂಗಿಯನ್ನು ಪ್ರೀತಿಸುತಿದ್ದ ಯುವಕನನ್ನು ಇನ್ನೊವಾ ಕಾರಿನ ಸಮೇತ ಸುಟ್ಟುಹಾಕಿದ ಕಿರಾತಕರು | Crime News

ತಂಗಿಯನ್ನು ಪ್ರೀತಿಸುತಿದ್ದ ಯುವಕನನ್ನು ಇನ್ನೊವಾ ಕಾರಿನ ಸಮೇತ ಸುಟ್ಟುಹಾಕಿದ ಕಿರಾತಕರು ಸಹೋದರಿಯನ್ನು ಪ್ರೀತಿಸುತಿದ್ದ(love affair) ಯುವಕನನ್ನು ಯುವತಿಯ ಅಣ್ಣ ಹಾಗೂ ಆತನ ಸ್ನೇಹಿತರು ಇನ್ನೋವಾ ಕಾರಿನಲ್ಲಿ ಕರೆದೊಯ್ದು, ಕಾರಿನ ಸಮೇತವೇ ಸುಟ್ಟು ಕೊಂದು ಹಾಕಿರುವ ದುರ್ಘಟನೆ ಶಿವಮೊಗ್ಗದಲ್ಲಿ(Shivamogga) ನಡೆದಿದೆ. ಶಿವಮೊಗ್ಗ ಜಿಲ್ಲೆಯ ಗಾಡಿಕೊಪ್ಪ ಯುವಕ ವೀರೇಶ್ ಎಂಬಾತ ಕೊಲೆಯಾದ ಯುವಕವಾಗಿದ್ದಾನೆ. ಶಿಕಾರಿಪುರ(shikaripura) ತಾಲೂಕಿನ ತೊಗರ್ಸಿ(togarsi) ಬಳಿ ಇನ್ನೋವಾ ಕಾರಿನಲ್ಲಿ ಕೂಡಿಹಾಕಿ ಕಾರಿಗೆ ಬೆಂಕಿ ಹಚ್ಚಿದ್ದಾರೆ. ಇನ್ನು ಯುವತಿಯನ್ನು ನೋಡಲು ಯುವಕ ಬಂದಿದ್ದ ಇನೋವಾ(Innova) ಕಾರಿನಲ್ಲೇ ಕೊಲೆಗೈದು ಸುಟ್ಟು…

Read Full News

Anandapura | ಎರಡು ಬೈಕ್‌ಗಳ ನಡುವೆ ಅಪಘಾತ – ಬೈಕ್ ಸವಾರ ಸಾವು

Anandapura | ಎರಡು ಬೈಕ್‌ಗಳ ನಡುವೆ ಅಪಘಾತ – ಬೈಕ್ ಸವಾರ ಸಾವು ಆನಂದಪುರ : ಇಲ್ಲಿನ ಸಮೀಪದ ಹೊಸಕೊಪ್ಪ ಬಳಿಯಲ್ಲಿ ಬೈಕ್ ಸವಾರ ಹಿಂಬದಿಯಿಂದ ಮತ್ತೊಂದು ಬೈಕ್ ಡಿಕ್ಕಿಯಾಗಿ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟಿದ್ದಾನೆ. ಮೆಣಸಿನಸರ  ಗ್ರಾಮದ ನಿವಾಸಿ ಷಣ್ಮುಖಪ್ಪ ( 65 ) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಸೋಮವಾರ ಸಂಜೆ ಹೊಸಕೊಪ್ಪ ತಿರುವಿನಲ್ಲಿ ಈ ಅಪಘಾತ ನಡೆದಿದ್ದು ತಕ್ಷಣ ಗಾಯಾಳುಗಳನ್ನು ಆನಂದಪುರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಮೆಗ್ಗಾನ್ ಆಸ್ಪತ್ರೆಗೆ ಸಾಗಿಸಿ…

Read Full News

Hosanagara | ಅಕ್ರಮ ಮರಳು ಸಾಗಾಟ – ನಾಲ್ಕು ಟಿಪ್ಪರ್ ಲಾರಿ ಪೊಲೀಸರ ವಶಕ್ಕೆ.!!

ಹೊಸನಗರ : ಅಕ್ರಮ ಮರಳು ಸಾಗಾಟ – ನಾಲ್ಕು ಟಿಪ್ಪರ್ ಲಾರಿ ವಶಕ್ಕೆ.!! ಹೊಸನಗರ :  ಅಕ್ರಮವಾಗಿ ಮರಳು ಸಾಗಿಸುತಿದ್ದ ನಾಲ್ಕು ಟಿಪ್ಪರ್ ಲಾರಿಯನ್ನು ಹೊಸನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತಾಲೂಕಿನಾದ್ಯಂತ ವಿವಿಧ ಪ್ರದೇಶದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿರುವ ಹಿನ್ನಲೆಯಲ್ಲಿ ಹೊಸನಗರ ಪೊಲೀಸ್ ಠಾಣೆ ಪಿಎಸ್‌ಐ ರಾಜು ರೆಡ್ಡಿ ನೇತೃತ್ವದ ಸಿಬ್ಬಂದಿಗಳ ನಾಲ್ಕು ಎರಡು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿರುತ್ತಾರೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿ ದಿನೇಶ್ ಮೂಡುಬ ಎಂಬಾತನಿಗೆ ಸೇರಿದ(KA 19 AD 2001) ,ಸುರೇ೦ದ್ರಕೋಟ್ಯಾನ್…

Read Full News

ಆನಂದಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ – ರಬ್ಬರ್ ಶೀಟ್ ಕಳ್ಳರ ಬಂಧನ : ಲಕ್ಷಾಂತರ ರೂ ಮೌಲ್ಯದ ರಬ್ಬರ್ ಶೀಟ್ ಸಮೇತ ವಾಹನ ವಶಕ್ಕೆ | Crime News

ಆನಂದಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ – ರಬ್ಬರ್ ಶೀಟ್ ಕಳ್ಳರ ಬಂಧನ ಆನಂದಪುರ : ಪಟ್ಟಣದ ಪೋಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮನೆಯಲ್ಲಿ ಒಣಗಿಸಿಡುತಿದ್ದ ರಬ್ಬರ್ ಕಳ್ಳತನ ಮಾಡುತಿದ್ದ ಕಳ್ಳರ ಜಾಲವೊಂದನ್ನು ಭೇದಿಸಿ ನಾಲ್ವರು ಆರೋಪಿಗಳನ್ನು ಮಾಲು ಹಾಗೂ ವಾಹನ ಸಮೇತ ಬಂಧಿಸಿದ್ದಾರೆ. ಆರೋಪಿಗಳಾದ ರಾಘವೇಂದ್ರ @ರಾಘು ಹರತಾಳು, ಪ್ರವೀಣ್ ಹುಳಿಗದ್ದೆ , ನಾಗಭೂಷಣ್@ನಾಗ ಶಿವಪುರ ಮತ್ತು ಪ್ರತಾಪ್ ಸಿಂಗ್ ವಡಗೆರೆ ಬಂಧಿತ ಆರೋಪಿಯಾಗಿದ್ದಾರೆ. 2023 ರ ಆಗಸ್ಟ್ ತಿಂಗಳಿನಲ್ಲಿ ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಕೆರೆಹಿತ್ಲು…

Read Full News

ಮನೆಯ ಬಾಗಿಲು ಮುರಿದು ಚಿನ್ನಾಭರಣ ಕಳ್ಳತನ – 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಪಿಎಸ್‌ಐ ಪ್ರವೀಣ್ ನೇತ್ರತ್ವದ ತಂಡ

ಮನೆಯ ಬಾಗಿಲು ಮುರಿದು ಚಿನ್ನಾಭರಣ ಕಳ್ಳತನ – 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಪಿಎಸ್‌ಐ ಪ್ರವೀಣ್ ನೇತ್ರತ್ವದ ತಂಡ ನ್ಯಾಮತಿ : ಕಡದಕಟ್ಟೆ ಗ್ರಾಮದ ಮನೆಯೊಂದರಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ದೂರು ಕೊಟ್ಟ 24 ಗಂಟೆಯೊಳಗೆ ತನಿಖೆ ನಡೆಸಿದ ನ್ಯಾಮತಿ ಪೊಲೀಸ್ ಠಾಣೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳ ತಂಡ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಡದಕಟ್ಟೆ ನಿವಾಸಿ ರವಿನಾಯ್ಕ್(44) ಬಂಧಿತ ಆರೋಪಿಯಾಗಿದ್ದಾನೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಕಡದಕಟ್ಟೆ ನಿವಾಸಿ ಅಶೋಕ್…

Read Full News

Ripponpete | ಸೂಕ್ಷ್ಮ ಪ್ರದೇಶಗಳಲ್ಲಿ ಶಾಂತಿ ಸುವ್ಯವಸ್ಥೆಗಾಗಿ ದಿಟ್ಟ ಹೆಜ್ಜೆ ಇಟ್ಟಿರುವ ಪಿಎಸ್ಐ ನಿಂಗರಾಜ್ |

ಸೂಕ್ಷ್ಮ ಪ್ರದೇಶಗಳಲ್ಲಿ ಶಾಂತಿ ಸುವ್ಯವಸ್ಥೆಗಾಗಿ ದಿಟ್ಟ ಹೆಜ್ಜೆ ಇಟ್ಟಿರುವ ಪಿಎಸ್ಐ ನಿಂಗರಾಜ್ | ಕಿಡಿಕೇಡಿಗಳ ನಿದ್ದೆಗೆಡಿಸಿರುವ ಅತ್ಯಾಧುನಿಕ ತಂತ್ರಜ್ಞಾನದ ಸಿಸಿಟಿವಿ ಕಣ್ಗಾವಲು ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಸೂಕ್ಷ್ಮ ಪ್ರದೇಶಗಳಲ್ಲಿ ಕಿಡಿಗೇಡಿಗಳ ಕಾನೂನು ಬಾಹಿರ ಚಟುವಟಿಕೆಗಳನ್ನು ಮಟ್ಟ ಹಾಕುವಲ್ಲಿ ಪಿಎಸ್‌ಐ ನಿಂಗರಾಜ್ ಕೆ ವೈ ತೆಗೆದುಕೊಂಡ ಕ್ರಮ ಕಿಡಿಗೇಡಿಗಳ ನಿದ್ದೆಗೆಡಿಸಿದೆ. ಹೌದು ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಕೆಂಚನಾಲ , ಕೋಡೂರು ಗ್ರಾಮಗಳಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಕೆಲವು ಘಟನೆಗಳು ಪೊಲೀಸರ ತಲೆ ನೋವಿಗೆ…

Read Full News

Ripponpete | ಅರಸಾಳುವಿನಲ್ಲಿ ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ಅರಸಾಳು ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು ರಿಪ್ಪನ್‌ಪೇಟೆ : ಇಲ್ಲಿನ ಅರಸಾಳು ಗ್ರಾಮದ ಅರಣ್ಯ ಇಲಾಖೆ ಕಛೇರಿಯ ಮುಂಭಾಗದ ರೈಲ್ವೆ ಹಳಿಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ರೈಲಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸಾಳು ಅರಣ್ಯ ಇಲಾಖೆಯ ಮುಂಭಾಗದಲ್ಲಿ ಈ ಘಟನೆ ನಡೆದಿದ್ದು ಬೆಳಿಗ್ಗೆ 7.45 ರ ಬೆಂಗಳೂರು – ತಾಳಗುಪ್ಪ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಮೃತ ವ್ಯಕ್ತಿಯ ಮಾಹಿತಿ ಇನ್ನೂ ತಿಳಿದುಬಂದಿರುವುದಿಲ್ಲ. ಘಟನೆಯಲ್ಲಿ ವ್ಯಕ್ತಿಯ ರುಂಡ ಮುಂಡ ಬೇರ್ಪಟ್ಟಿದ್ದು ರೈಲಿಗೆ ತಲೆ ಇಟ್ಟು…

Read Full News

ತಂಗಿಯೊಂದಿಗೆ ನಿಶ್ಚಿತಾರ್ಥವಾಗಿದ್ದ ಯುವಕನಿಗೆ ಚೂರಿ ಇರಿದ ಅಣ್ಣ | Crime News

ತಂಗಿಯೊಂದಿಗೆ ನಿಶ್ಚಿತಾರ್ಥವಾಗಿದ್ದ ಯುವಕನಿಗೆ ಚೂರಿ ಇರಿದ ಅಣ್ಣ | Crime News ತಂಗಿಯನ್ನು ಪ್ರೀತಿಸುತಿದ್ದ ಯುವಕನಿಗೆ ಚಾಕುವಿನಿಂದ ಇರಿದಿರುವ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕು ಶಿರಾಳಕೊಪ್ಪದಲ್ಲಿ ನಿನ್ನೆ ರಾತ್ರಿ ನಡೆದಿದೆ. ಶಿರಾಳಕೊಪ್ಪ ನಿವಾಸಿಗಳಾದ ಯುವಕ ಯುವತಿ ಹಲವು ಸಮಯದಿಂದ ಪರಸ್ಪರ ಪ್ರೀತಿಸುತ್ತಿದ್ದರು.ಈ ಸಂಬಂಧ ನಿಶ್ಚಿತಾರ್ಥವೂ ನಡೆದಿತ್ತು ಆದರೆ ಯುವತಿಯ ಸಹೋದರನಿಗೆ ಆಕೆ ಪ್ರೀತಿಸಿದ ಯುವಕನನ್ನು ಮದುವೆಯಾಗುವುದು ಇಷ್ಟವಿರಲಿಲ್ಲ. ಈ ಕಾರಣಕ್ಕೆ ಹಲವು ಬಾರಿ ವಿರೋದಿಸಿದ್ದನು. ಇದೇ ಕಾರಣಕ್ಕೆ ಗುರುವಾರ ರಾತ್ರಿ ಯುವಕನಿಗೆ ಯುವತಿಯ ಸಹೋದರನೇ ಚಾಕು…

Read Full News

ಗೋಸಾಗಾಟ ಮಾಡುತಿದ್ದವರ ಮೇಲೆ ಹಲ್ಲೆ – 25 ಜನರ ಮೇಲೆ ಕೊಲೆಯತ್ನ ಕೇಸ್ ದಾಖಲು

ಗೋಸಾಗಾಟ ಮಾಡುತಿದ್ದವರ ಮೇಲೆ ಹಲ್ಲೆ – 25 ಜನರ ಮೇಲೆ ಕೊಲೆಯತ್ನ ಕೇಸ್ ದಾಖಲು ತೀರ್ಥಹಳ್ಳಿ:  ಪಟ್ಟಣದಲ್ಲಿ ಬುಧವಾರ ಸಂಜೆ ಅಕ್ರಮವಾಗಿ ಗೋ ಸಾಗಾಟ ನಡೆಸಿದ್ದಾರೆ ಎಂಬ ಕಾರಣಕ್ಕೆ ನಡೆದ ನೈತಿಕ ಪೊಲೀಸ್ ಗಿರಿಯಂತಹ ಘಟನೆಯೊಂದರ ಸಂಬಂಧ ಸುಮಾರು 25 ಮಂದಿ ವಿರುದ್ಧ ಕೇಸ್ ದಾಖಲಾಗಿದೆ. ಪಟ್ಟಣದ ಸಮೀಪದ ಕುರುವಳ್ಳಿಯ ಪುತ್ತಿಗೆ ಮಠದ ರಸ್ತೆಯಲ್ಲಿ ಅಶೋಕ ಲೈಲಾಂಡ್‌ ಗಾಡಿಯೊಂದನ್ನ ಅಡ್ಡಗಟ್ಟಿ ಅದರಲ್ಲಿದ್ದ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿತ್ತು. ದನಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದರು ಎಂಬ ಆರೋಪದ ಅಡಿಯಲ್ಲಿ…

Read Full News

ಮೈ ಮೇಲೆ ‘ದೆವ್ವ’ ಬರುತ್ತೆಂದು ಹೆದರಿ ‘ನೇಣಿಗೆ’ ಕೊರಳೊಡ್ಡಿದ ಯುವಕ | Crime News

ಮೈ ಮೇಲೆ ‘ದೆವ್ವ’ ಬರುತ್ತೆಂದು ಹೆದರಿ ‘ನೇಣಿಗೆ’ ಕೊರಳೊಡ್ಡಿದ ಯುವಕ ಆತ್ಮಹತ್ಯೆ ಮಾಡಿಕೊಳ್ಳುವವರಿಗೆ ಹಲವು ಬಲವಾದ ಕಾರಣಗಳಿರುತ್ತವೆ. ಅಲ್ಲದೆ ಮಾನಸಿಕವಾಗಿಯೂ ಹಲವರು ಖಿನ್ನತೆಗೆ ಒಳಗಾಗಿರುತ್ತಾರೆ. ಆದರೆ ಮೈಸೂರಿನಲ್ಲಿ ಯುವಕನೊಬ್ಬ ಮೈಮೇಲೆ ದೆವ್ವ ಬರುತ್ತದೆ ಎಂಬ ಕ್ಷುಲ್ಲಕ ಕಾರಣಕ್ಕೆ ಹೆದರಿಕೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೌದು ಘಟನೆಯು ಮೈಸೂರಿನ ಮೈ ಮೇಲೆ ದೆವ್ವ ಬರುತ್ತೆ ಎಂದು ಹೆದರಿ ಯುವಕ ಆತ್ಮಹತ್ಯೆ ಖನ್ನತೆಗೆ ಒಳಗಾಗಿ ಋಷಭೇಂದ್ರ (21) ಎನ್ನುವ ಯುವಕ ಮೈಸೂರಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು…

Read Full News

ಬೈಕ್ ಆಲ್ಟ್ರೇಷನ್ ಮಾಡಿಸಿ ಕರ್ಕಶ ಶಬ್ಧದೊಂದಿಗೆ ಚಲಾಯಿಸುತ್ತಿದ್ದ ಸವಾರನಿಗೆ ಶಾಕ್ | Traffic fine

ಬೈಕ್ ಆಲ್ಟ್ರೇಷನ್ ಮಾಡಿಸಿ ಕರ್ಕಶ ಶಬ್ಧದೊಂದಿಗೆ ಚಲಾಯಿಸುತ್ತಿದ್ದ ಸವಾರನಿಗೆ ಶಾಕ್ ಬೈಕ್ ಆಲ್ಟ್ರೇಷನ್ ಮಾಡಿಸಿ ಕರ್ಕಶ ಶಬ್ಧದೊಂದಿಗೆ ಚಲಾಯಿಸುತ್ತಿದ್ದ ಸವಾರನಿಗೆ 8200 ರೂ. ದಂಡ ವಿಧಿಸಲಾಗಿದೆ. ಶಿವಮೊಗ್ಗ ನಗರದ ವಿವಿಧ ಸರ್ಕಲ್ ಗಳಲ್ಲಿ ಡಿಸ್ಕವರಿ ಬೈಕ್ ನ್ನು Altration ಮಾಡಿಕೊಂಡು ಮತ್ತು ಬೀಟ್/ಡಿಫೆಕ್ಟಿವ್ ಸೈಲೆನ್ಸರ್ ಅಳವಡಿಸಿಕೊಂಡು ಕರ್ಕಶ ಶಬ್ದ ಉಂಟಾಗುವ ರೀತಿಯಲ್ಲಿ ತನ್ನ ವಾಹನವನ್ನು ಚಲಾಯಿಸುತ್ತಿದ್ದಾನೆಂದು ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಪೂರ್ವ ಸಂಚಾರ ಪೊಲಸ್ ಠಾಣೆಯ ಪಿಎಸ್‌ಐ ನವೀನಕುಮಾರ್ ಮಠಪತಿ ಮತ್ತು ಸಿಬ್ಬಂದಿಗಳಾದ ಸಂತೋಷ ಕೆ,ಹೆಚ್…

Read Full News

ರೈಲಿಗೆ ತಲೆ ಕೊಟ್ಟು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ | Crime News

ರೈಲಿಗೆ ತಲೆ ಕೊಟ್ಟು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಕಾಲೇಜು ವಿದ್ಯಾರ್ಥಿನಿಯೊಬ್ಬಳು ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದ ಸಾಗರದ ಸೊರಬ ಗೇಟ್ ಸಮೀಪದಲ್ಲಿ ನಡೆದಿದೆ. ಭೂಮಿಕಾ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಭೂಮಿಕಾ ಸಿರಿವಂತೆ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದಳು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಸಾಗರ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.  ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

Read Full News

ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ರಸ್ತೆ ಮೇಲೆ ಬಿದ್ದ ವಿದ್ಯುತ್ ಕಂಬ : ತಪ್ಪಿದ ಭಾರಿ ಅನಾಹುತ | accident

ತೀರ್ಥಹಳ್ಳಿಯಲ್ಲಿ ಕಾರು ಕರೆಂಟ್ ಕಂಬಕ್ಕೆ ಡಿಕ್ಕಿ- ರಸ್ತೆ ಮೇಲೆ ಬಿದ್ದ ವಿದ್ಯುತ್ ಕಂಬ : ತಪ್ಪಿದ ಭಾರಿ ಅನಾಹುತ ತೀರ್ಥಹಳ್ಳಿ: ಪಟ್ಟಣದ ಯಡೇಹಳ್ಳಿ ಕೆರೆ ಸಮೀಪದ ಸಹ್ಯಾದ್ರಿ ಕಾಲೇಜು ಬಳಿ ತೀರ್ಥಹಳ್ಳಿಯಿಂದ ಸಾಗರ ಕಡೆ ಹೋಗುವಾಗ ನಿಯಂತ್ರಣ ತಪ್ಪಿದ ಕಾರು ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಬುಧವಾರ ನಡೆದಿದೆ. ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ತಂತಿ ಸಮೇತ ಕಂಬ ರಸ್ತೆ ಮೇಲೆ ಬಿದ್ದಿದ್ದು, ಸ್ವಲ್ಪ ಸಮಯ ಟ್ರಾಫಿಕ್ ಜಾಮ್ ಉಂಟಾಗಿತ್ತು. ಮೆಸ್ಕಾಂ…

Read Full News

ಹಾಡಹಗಲೇ ಚಾಕು ಇರಿದು ವ್ಯಕ್ತಿಯೊಬ್ಬನ ಕೊಲೆಗೆ ಯತ್ನ | Crime News

ಹಾಡಹಗಲೇ ಚಾಕು ಇರಿದು ವ್ಯಕ್ತಿಯೊಬ್ಬನ ಕೊಲೆಗೆ ಯತ್ನ  ಶಿವಮೊಗ್ಗ :  ಹಾಡಹಗಲೇ ಭರ್ಚಿಯಿಂದ ವ್ಯಕ್ತಿಯೊಬ್ಬನ ಮೇಲೆ ಕೊಲೆಗೆ ಯತ್ನಿಸಿದ ಘಟನೆ ನಗರದ ರಾಯಲ್ ಆರ್ಕೀಡ್ ಹೊಟೆಲ್ ನ ಹಿಂಭಾಗದ ರಸ್ತೆಯ ಅಂಬೇಡ್ಕರ್ ವೃತ್ತದ ಬಳಿ ನಡೆದಿದೆ.  ಕಾರ್ತಿಕ್ (48) ಹಲ್ಲೆಗೊಳಗಾದ ವ್ಯಕ್ತಿ. ಇನ್ನು ಗಾಯಗೊಳಗಾದ ಯುವಕನನ್ನು ಕೂಡಲೇ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಇಂದು ಮದ್ಯಾಹ್ನ 12.30 ರ ಆಸುಪಾಸಿನಲ್ಲಿ ಈ ಘಟನೆ ನಡೆದಿದ್ದು, ಕಾರ್ತಿಕ್ ಎನ್ನುವ ವ್ಯಕ್ತಿಯು ಮನೆಗೆ ಹೋಗುತ್ತಿರುವ ಸಂದರ್ಭದಲ್ಲಿ ಹಿಂದಿನಿಂದ ಬಂದ ಇಬ್ಬರು ಅಪರಿಚಿರಲ್ಲಿ…

Read Full News

Shivamogga ಎಪಿಎಂಸಿ ಯಲ್ಲಿ ಲೋಕಾಯುಕ್ತ ದಾಳಿ – ಇಬ್ಬರು ಅಧಿಕಾರಿಗಳು ವಶಕ್ಕೆ

ಶಿವಮೊಗ್ಗದಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆಸಿದ್ದಾರೆ. ಈ ವೇಳೆ  50 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಇಬ್ಬರು ಅಧಿಕಾರಿಗಳನ್ನ ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಬಲೆಗೆ ಬಿದ್ದವರು ಎಪಿಎಂಸಿ ಕಾರ್ಯದರ್ಶಿ ಹಾಗೂ ಹಿರಿಯ ಮೇಲ್ವಿಚಾರಕ. ಶಿವಮೊಗ್ಗದ ಸಾಗರ ರಸ್ತೆಯಲ್ಲಿರುವ ಎಪಿಎಂಸಿ ಹಾಗೂ ಕಛೇರಿಯಲ್ಲಿ ಎಪಿಎಂಸಿ ಮಳಿಗೆ ಮಂಜೂರು  ಮಾಡಲು 2 ಲಕ್ಷ ರೂ. ಡಿಮ್ಯಾಂಡ್ ಮಾಡಿದ್ದರು ಎನ್ನಲಾಗಿದೆ. ಈ ವಿಚಾರದಲ್ಲಿ ಎಪಿಎಂಸಿ  ಕಾರ್ಯದರ್ಶಿ ಒಂದು ಲಕ್ಷ ರೂ. ಗೆ ಮಾತುಕತೆ ನಡೆಸಿ,…

Read Full News
  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.