ಜಿಲ್ಲಾ ಸುದ್ದಿ:
ಸಮ್ಯಕ್ತ್ವ ಪಥವು ಸಾತ್ವಿಕವಾದುದು : ಹೊಂಬುಜ ಶ್ರೀಗಳು
ಸಮ್ಯಕ್ತ್ವ ಪಥವು ಸಾತ್ವಿಕವಾದುದು : ಹೊಂಬುಜ ಶ್ರೀಗಳು ಶ್ರೀಕ್ಷೇತ್ರ ಹೊಂಬುಜದಲ್ಲಿ ಯಜ್ಞೋಪವೀತ ಧಾರಣೆ ಹೊಂಬುಜ : ಜೈನ ಧರ್ಮದ ಸಿದ್ಧಾಂತಗಳನ್ನು ಜೀವನದಲ್ಲಿ ರೂಢಿಸಿಕೊಂಡು ಸಮ್ಯಕ್ ಜ್ಞಾನ, ದರ್ಶನ, ಚಾರಿತ್ರ್ಯದ ನೈಜ ಪಥವು ಸಾತ್ವಿಕವೂ, ಆಪ್ತವೂ ಆಗಿ ಉತ್ತಮ ಪರಿಣಾಮವುಂಟಾಗುವುದು ಎಂದು ಹೊಂಬುಜ ಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರು ಶ್ರಾವಣ ಮಾಸದ ಹುಣ್ಣಿಮೆಯಂದು ಆಚರಿಸುವ ಉಪಕರ್ಮದ ಕುರಿತು ತಿಳಿಸಿದರು. ಪ್ರಾತಃ ಕಾಲದಲ್ಲಿ ಶ್ರೀ ಪಾರ್ಶ್ವನಾಥ ಸ್ವಾಮಿ, ಜಗನ್ಮಾತೆ ಶ್ರೀ…
Ripponpete | ವಿಶ್ವಕರ್ಮ ಸಮಾಜದಿಂದ ಸಾಮೂಹಿಕ ಉಪಕರ್ಮ
Ripponpete | ವಿಶ್ವಕರ್ಮ ಸಮಾಜದಿಂದ ಸಾಮೂಹಿಕ ಉಪಕರ್ಮ ರಿಪ್ಪನ್‌ಪೇಟೆ : ಪಟ್ಟಣದ ವಿರಾಟ್ ವಿಶ್ವಕರ್ಮ ಸಮಾಜೋದ್ಧಾರಕ ಸಂಘದ ವತಿಯಿಂದ ಪ್ರಥಮ ಬಾರಿಗೆ ರಿಪ್ಪನ್ ಪೇಟೆಯಲ್ಲಿ ಸಾಮೂಹಿಕ ಉಪಕರ್ಮ(ಯಜ್ಙೋಪವೀತ) ,ವಿಶ್ವಕರ್ಮ ಪೂಜೆ ಹಾಗೂ ಹೋಮ ಮಾಡುವುದರ ಮೂಲಕ ನೆರವೇರಿಸಲಾಯಿತು. ವಿರಾಟ್ ವಿಶ್ವಕರ್ಮ ಸಮಾಜೋದ್ಧಾರಕ ಸಂಘ ಹಾಗೂ ನೂತನ ಗ್ರಾಮ ಮೊಕ್ತೇಸರರಾದ ಶ್ರೀಧರಾಚಾರ್ಯ ಕೆಂಚನಾಲ ಇವರ ನೇತೃತ್ವದಲ್ಲಿ ಸಾಮೂಹಿಕ ಉಪಕರ್ಮ (ಯಜ್ಙೋಪವೀತ) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂಧರ್ಭದಲ್ಲಿ ಸಂಘದ ಅಧ್ಯಕ್ಷರಾದ ಮಂಜುನಾಥ್ ಆಚಾರ್ಯ,ಉಪಾಧ್ಯಕ್ಷರಾದ ರವಿ ಆರ್ ಆಚಾರ್ಯ ಕಾರ್ಯದರ್ಶಿಗಳಾದ ಸುದೇಶ್…
Ripponpete | ಗಗನಯಾತ್ರಿ ಸುನಿತಾ ವಿಲಿಯಮ್ಸ್ ಸುರಕ್ಷತೆಗಾಗಿ ಪ್ರಾರ್ಥಿಸಿ ವಿಶೇಷ ಪೂಜೆ
Ripponpete | ಗಗನಯಾತ್ರಿ ಸುನಿತಾ ವಿಲಿಯಮ್ಸ್ ಸುರಕ್ಷತೆಗಾಗಿ ಪ್ರಾರ್ಥಿಸಿ ವಿಶೇಷ ಪೂಜೆ ರಿಪ್ಪನ್‌ಪೇಟೆ : ಭಾರತೀಯ ಮೂಲದ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಸುರಕ್ಷಿತವಾಗಿ ಭೂಮಿಗೆ ಮರಳಲಿ ಎಂದು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಪದ್ಮಾ ಸುರೇಶ್ ನೇತ್ರತ್ವದಲ್ಲಿ ಪಟ್ಟಣದ ಶ್ರೀ ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಸೋಮವಾರ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಪದ್ಮಾ ಸುರೇಶ್ ಅಮೆರಿಕದ ಮೂಲದ ಬುಚ್ ವಿಲ್ಮೋರ್ ಜೊತೆ ಬಾಹ್ಯಾಕಾಶಯಾನ ಕೈಗೊಂಡಿದ್ದ ಭಾರತೀಯ ಮೂಲದ ಸುನಿತಾ ವಿಲಿಯಮ್ಸ್ 52 ದಿನವಾದರೂ ಭೂಮಿಗೆ…
ಆಲುವಳ್ಳಿಯಲ್ಲಿ ಭಾರಿ ಮಳೆಗೆ ಮನೆ ಸಂಪೂರ್ಣ ಹಾನಿ – ಆತಂಕದಲ್ಲಿ ಬಡ ಕುಟುಂಬ
ಆಲುವಳ್ಳಿಯಲ್ಲಿ ಭಾರಿ ಮಳೆಗೆ ಮನೆ ಸಂಪೂರ್ಣ ಹಾನಿ – ಆತಂಕದಲ್ಲಿ ಬಡ ಕುಟುಂಬ ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಪಂ ವ್ಯಾಪ್ತಿಯ ಆಲುವಳ್ಲೀ ಗ್ರಾಮದ ಹೊಳೆಮದ್ಲು ಗ್ರಾಮದಲ್ಲಿ ಇಂದು ಮಧ್ಯಾಹ್ನ ಸುರಿದ ಭಾರಿ ಮಳೆಗೆ ಮನೆ ಸಂಪೂರ್ಣ ಕುಸಿದು ಬಿದ್ದಿರುವ ಘಟನೆ ನಡೆದಿದೆ. ಆಲುವಳ್ಳಿ ಸಮೀಪದ ಹೊಳೆಮದ್ಲು ಗ್ರಾಮದ ಮಂಜಮ್ಮ ಕೋಂ ಈರಪ್ಪ ಎಂಬುವವರ ಮನೆ ಭಾರಿ ಗಾಳಿ ಮಳೆಗೆ ಸಂಪೂರ್ಣ ಕುಸಿತವಾಗಿ ಬಡ ಕುಟುಂಬದಲ್ಲಿ ಆತಂಕವನ್ನುಂಟು ಮಾಡಿದೆ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ,ಕೆಂಚನಾಲ ಗ್ರಾಮ ಪಂಚಾಯತ್…
ಎದೆನೋವಿನಿಂದ ಮೃತಪಟ್ಟ ಮಾಲೀಕನಿಗಾಗಿ ಆಸ್ಪತ್ರೆಯಲ್ಲೆ ಠಿಕಾಣಿ ಹೂಡಿದ ನಾಯಿ
ಎದೆನೋವಿನಿಂದ ಮೃತಪಟ್ಟ ಮಾಲೀಕನಿಗಾಗಿ ಆಸ್ಪತ್ರೆಯಲ್ಲೆ ಠಿಕಾಣಿ ಹೂಡಿದ ನಾಯಿ ಶಿವಮೊಗ್ಗ : ಮೃತ ಯಜಮಾನನನ್ನು ಹುಡುಕಿಕೊಂಡು ಆಸ್ಪತ್ರೆ ಆವರಣದಲ್ಲಿ ಠಿಕಾಣಿ ಹೂಡಿದ ನಾಯಿಯೊಂದನ್ನು ಹಿಡಿಯಲಾಗಿದೆ. ಕನ್ನೆಕೊಪ್ಪದ ಪಾಲಾಕ್ಷಪ್ಪ ಹದಿನೈದು ದಿನಗಳ ಹಿಂದೆ ಎದೆನೋವಿನಿಂದ ಬಳಲಿ ಹೊಳೆಹೊನ್ನೂರಿನ ಸಮುದಾಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೃದಯಘಾತವನ್ನು ದೃಡಪಡಿಸಿದ ವೈದ್ಯಾಧಿಕಾರಿಗಳು ಪ್ರಥಮ ಚಿಕಿತ್ಸೆ ನೀಡಿ ಮೆಗ್ಗಾನ್ ಆಸ್ಪತ್ರೆಗೆ ಕಳಿಸಿದ್ದಾರೆ. ಚಿಕಿತ್ಸೆ ಪಲಿಸದೆ ಮೆಗ್ಗಾನ್‌ನಲ್ಲಿ ಪಾಲಾಕ್ಷಪ್ಪ ಮೃತಪಟ್ಟಿದ್ದಾರೆ. ಆದರೆ ಎದೆನೋವಿನಿಂದ ಬಳಲುತ್ತಿದ ವ್ಯಕ್ತಿಯೊಂದಿಗೆ ಬಂದಿದ ನಾಯಿ ತನ್ನ ಮಾಲೀಕ ಪಾಲಾಕ್ಷಪ್ಪ ಆಸ್ಪತ್ರೆಯಲ್ಲೆ ಉಳಿದಿದ್ದಾರೆಂದು ತಿಳಿದು…
ಹರೀಶ್ ಪ್ರಭು ಬಿಜೆಪಿ ಪಕ್ಷದ ಕಾರ್ಯಕರ್ತನಲ್ಲ – ಸುರೇಶ್ ಸಿಂಗ್
ಹರೀಶ್ ಪ್ರಭು ಬಿಜೆಪಿ ಪಕ್ಷದ ಕಾರ್ಯಕರ್ತನಲ್ಲ – ಸುರೇಶ್ ಸಿಂಗ್ ರಿಪ್ಪನ್‌ಪೇಟೆ : ಪಟ್ಟಣದ ಹರೀಶ್ ಪ್ರಭು ಎಂಬುವವರು ನಾನು ಕಟ್ಟಾ ಬಿಜೆಪಿ ಕಾರ್ಯಕರ್ತನಾದರೂ ಕಾಂಗ್ರೆಸ್ ಶಾಸಕರ ಗೆಲುವಿಗಾಗಿ ಹರಕೆ ಮಾಡಿಕೊಂಡಿದ್ದೇ ಎನ್ನುವ ವಿಚಾರ ಸತ್ಯಕ್ಕೆ ದೂರವಾದ ವಿಷಯವಾಗಿದ್ದು ಅವರು ಬಿಜೆಪಿ ಪಕ್ಷದ ಕಾರ್ಯಕರ್ತನೇ ಅಲ್ಲ ಅವರೊಬ್ಬ ಸಾಮಾನ್ಯ ಮತದಾರನಷ್ಟೇ ಎಂದು ಬಿಜೆಪಿ ಹಿರಿಯ ಮುಖಂಡ ಎಂ ಸುರೇಶ್ ಸಿಂಗ್ ಹೇಳಿದ್ದಾರೆ. ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಅವರು ಶನಿವಾರದಂದು ಹರೀಶ್ ಪ್ರಭು ಎಂಬುವವರು ಕಳೆದ…
ಉತ್ತಮ ಆರೋಗ್ಯವೆನ್ನುವುದು ಶ್ರೀಮಂತರಿಗೆ ಮಾತ್ರ ಸೀಮಿತವೇ.!?
ಉತ್ತಮ ಆರೋಗ್ಯವೆನ್ನುವುದು ಶ್ರೀಮಂತರಿಗೆ ಮಾತ್ರ ಸೀಮಿತವೇ.!? ನಾನೊಬ್ಬ ಮಾಧ್ಯಮ ವರ್ಗದ ಸಾಮಾನ್ಯ ಗೃಹಿಣಿ ಯಾಗಿದ್ದು ನನ್ನ ಕೆಲಸ ಪ್ರತಿದಿನ ನನ್ನ ಕುಟುಂಬ ಆರೋಗ್ಯವಂತವಾಗಿ ಮತ್ತು ಸಂತೋಷದಿಂದ ಇರುವಂತೆ ನೋಡಿಕೊಳ್ಳುವುದು. ಅದಕ್ಕಾಗಿ ನಾನು ಪ್ರತಿ ಗಳಿಗೆಯು ಶ್ರಮಿಸುತ್ತಿರುತ್ತೇನೆ.ಆದರೆ ಇತ್ತೀಚಿನ ದಿನಗಳಲ್ಲಿ ಕೆಲವು ಉತ್ತರವೇ ಸಿಗದ ಪ್ರಶ್ನೆಗಳು ನನ್ನನ್ನು ಸದಾ ಕಾಡುತ್ತಿರುತ್ತವೆ. ಪ್ರತಿಯೊಬ್ಬರಿಗೂ ಒಳ್ಳೆಯ ಆರೋಗ್ಯ ಸಿಗಬೇಕೆಂದರೆ, ಒಳ್ಳೆಯ ಆಹಾರವೇ ಪ್ರಥಮ ಆದ್ಯತೆ. ಇದನ್ನು ಆಯುರ್ವೇದ ಗ್ರಂಥಗಳಲ್ಲೂ ಉಲ್ಲೆಖಿಸಿದ್ದಾರೆ. ಈ ಹಿನ್ನಲೆಯಲ್ಲಿ ನನ್ನ ಕುಟುಂಬದ ಉತ್ತಮ ಆರೋಗ್ಯಕ್ಕಾಗಿ ಹೊರಗಿನ ತಿಂಡಿ…
ಬಿ ಎಸ್ ಯಡಿಯೂರಪ್ಪ ಮನೆ ಮೇಲೆ ಮುತ್ತಿಗೆ ಯತ್ನ
ಸಿಎಂ ಸಿದ್ದರಾಮಯ್ಯ ವಿರುದ್ದ ಷಡ್ಯಂತ್ರ ರೂಪಿಸಿದ್ದಾರೆಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮನೆಗೆ ಮತ್ತಿಗೆ ಹಾಕಲು ಯತ್ನಿಸಿದರು. ಶಿಕಾರಿಪುರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದಲ್ಲಿರುವ ಬಿಎಸ್ ವೈ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು. ಕಾಂಗ್ರೆಸ್ ನಾಯಕ ನಾಗರಾಜ್ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಶಿಕಾರಿಪುರ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹೈಡ್ರಾಮ ನಡೆಸಿದರು. ಪೊಲೀಸರು ರಸ್ತೆ ಮಧ್ಯೆಯೆ ಪ್ರತಿಭಟನಾಕಾರರನ್ನು ತಡೆದರು. ನೂರಾರು ಕಾಂಗ್ರೆಸ್…
ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರಬೇಕು – ಶಾಸಕ ಬೇಳೂರು
ರಿಪ್ಪನ್‌ಪೇಟೆ ಸರ್ಕಾರಿ ಪಿಯು ಕಾಲೇಜಿನಲ್ಲಿ ನೀಟ್ ಹಾಗೂ ಸಿಇಟಿ ತರಬೇತಿ ಕೇಂದ್ರ ಉದ್ಘಾಟನೆ ರಿಪ್ಪನ್‌ಪೇಟೆ : ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸರ್ಕಾರದ ಸವಲತ್ತನ್ನು ಬಳಸಿಕೊಂಡು ಶೈಕ್ಷಣಿಕ ಜೀವನದಲ್ಲಿ ಉತ್ತಮ ಸಾಧನೆಗೈದು ದೇಶ ಉನ್ನತ ಹುದ್ದೆಗಳಿಗೆ ಹೋಗಬೇಕು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ KCET NEET JEE ಹಾಗೂ ವೃತ್ತಿಪರ ಕೋರ್ಸ್ ಗಳ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿ ಗ್ರಾಮೀಣ ಪ್ರದೇಶದ…
ಕಾಂಗ್ರೆಸ್ ಶಾಸಕನ ಗೆಲುವಿಗೆ ಬಿಜೆಪಿ ಪಕ್ಷದ ಕಟ್ಟಾ ಕಾರ್ಯಕರ್ತನ ಹರಕೆ
ಕಾಂಗ್ರೆಸ್ ಶಾಸಕನ ಗೆಲುವಿಗೆ ಬಿಜೆಪಿ ಕಟ್ಟಾ ಕಾರ್ಯಕರ್ತನ ಹರಕೆ ರಿಪ್ಪನ್‌ಪೇಟೆ : ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಗೆಲುವಿಗಾಗಿ ಬಿಜೆಪಿ ಪಕ್ಷದ ಕಟ್ಟಾ ಕಾರ್ಯಕರ್ತರೊಬ್ಬರು ಪಟ್ಟಣದ ಪುರಾಣ ಪ್ರಸಿದ್ಧ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಹರಕೆ ಮಾಡಿಕೊಂಡಿದ್ದ ಹಿನ್ನಲೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಇಂದು ಪಟ್ಟಣದ ಸಿದ್ಧಿವಿನಾಯಕ ದೇವಸ್ಥಾನದ ಸನ್ನಿಧಿಗೆ ಆಗಮಿಸಿ ತನ್ನ ಅಭಿಮಾನಿಯೊಂದಿಗೆ ಹರಕೆಯನ್ನು ಸಲ್ಲಿಸಿರುವ ಘಟನೆ ನಡೆದಿದೆ. ಪಟ್ಟಣದ ಬಿಜೆಪಿ ಕಟ್ಟಾ ಕಾರ್ಯಕರ್ತ ಹರೀಶ್ ಪ್ರಭು ಎಂಬುವರು ಕಳೆದ ವಿಧಾನಸಭಾ ಚುನಾವಣೆ ಸಮಯದಲ್ಲಿ ಕಾಂಗ್ರೆಸ್…