ಜಿಲ್ಲಾ ಸುದ್ದಿ:
ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಕೌಶಲ್ಯಾಭಿವೃದ್ಧಿಗೆ ಒತ್ತು ನೀಡಲಿ – ಶಾಸಕ ಬೇಳೂರು
ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಕೌಶಲ್ಯಾಭಿವೃದ್ಧಿಗೆ ಒತ್ತು ನೀಡಲಿ – ಶಾಸಕ ಬೇಳೂರು ರಿಪ್ಪನ್‌ಪೇಟೆ : ಗುರುಹಿರಿಯರನ್ನು ಗೌರವಿಸುವ ಗುಣವನ್ನು ವಿದ್ಯಾರ್ಥಿಗಳು ಬದುಕಿನಲ್ಲಿ ಅಳವಡಿಸಿಕೊಳ್ಳುವುದರೊಂದಿಗೆ ಕೌಶಲ್ಯ ಅಭಿವೃದ್ಧಿಗೆ ಕಡೆಗೆ ವಿದ್ಯಾರ್ಥಿ ದೆಸೆಯಲ್ಲೇ ಗಮನ ಹರಿಸಿದಾಗ ಜೀವನದಲ್ಲಿ ಯಾವುದೇ ಕ್ಷೇತ್ರದಲ್ಲೂ ಯಶಸ್ವಿಯಾಗಲು ಸಾಧ್ಯ ಎಂದು ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಹೇಳಿದರು. ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ನೀಡ್ ಬೇಸ್ ಸಂಸ್ಥೆ ಹಾಗೂ ಶಾಸಕರ ಸಹಭಾಗಿತ್ವದಲ್ಲಿ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಿಸಿ…
ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಓದಿದ್ದ ಶಾಲೆ 10 ಲಕ್ಷ ಮೊತ್ತದ ಪರಿಕರ ದೇಣಿಗೆ ನೀಡಿದ ಮಧು ಬಂಗಾರಪ್ಪ
ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಓದಿದ್ದ ಶಾಲೆ 10 ಲಕ್ಷ ಮೊತ್ತದ ಪರಿಕರ ದೇಣಿಗೆ ನೀಡಿದ ಮಧು ಬಂಗಾರಪ್ಪ ಸೊರಬ : ತಮ್ಮ ತಂದೆ, ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಓದಿದ್ದ ಸ್ವಗ್ರಾಮ ಸೊರಬ ತಾಲ್ಲೂಕಿನ ಕುಬಟೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶುಕ್ರವಾರ ಶಿವಮೊಗ್ಗ ಜಿಲ್ಲಾ ಉಸ್ತುವಾರಿಯೂ ಆದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ₹10 ಲಕ್ಷ ಮೌಲ್ಯದ ಪರಿಕರಗಳನ್ನು ವೈಯಕ್ತಿಕವಾಗಿ ಕೊಡುಗೆ ನೀಡಿದರು. ಆ ಮೂಲಕ ಶಾಲಾ ಶಿಕ್ಷಣ ಹಾಗೂ…
ಮಾಜಿ ಕಾರ್ಪೋರೆಟರ್ ಮೊಟ್ಟೆ ಸತೀಶ್ ಮೇಲೆ ಗುಂಪಿನಿಂದ ಹಲ್ಲೆ.!
ಮಾಜಿ ಕಾರ್ಪೋರೆಟರ್ ಮೊಟ್ಟೆ ಸತೀಶ್ ಮೇಲೆ ಗುಂಪಿನಿಂದ ಹಲ್ಲೆ.! ಮಾಜಿ ಕಾರ್ಪೊರೇಟರ್ ಮೊಟ್ಟೆ ಸತೀಶ್ ಎಂಬವರ ಮೇಲೆ ಗುರುವಾರ ರಾತ್ರಿ ಹಲ್ಲೆ ನಡೆದಿರುವ ಘಟನೆ ನಗರದಲ್ಲಿ ನಡೆದಿದೆ. ಮಾಜಿ ಕಾರ್ಪೊರೇಟರ್ ಸತ್ಯನಾರಾಯಣ ರಾಜು (ಮೊಟ್ಟೆ ಸತೀಶ್) ಎಂಬವರ ಮೇಲೆ ಕುಸ್ಕೂರು ಬಳಿ ಜಮೀನು ವಿಚಾರವಾಗಿ ಈ ಹಲ್ಲೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಜಮೀನು ಖರೀದಿ ವಿಚಾರಕ್ಕೆ ಸತೀಶ್ ವ್ಯಾಜ್ಯ ಹೊಂದಿದ್ದರೆನ್ನಲಾಗಿದೆ. ಸತೀಶ್ ಗುರುವಾರ ದಿನ ರಾತ್ರಿ ತಮ್ಮ ಜಮೀನಿನ ಬಳಿ ತೆರಳಿದ್ದಾಗ, ಅವರ ಕಾರಿನ ಮೇಲೆ ದೊಣ್ಣೆಗಳಿಂದ…
ನಿಗದಿತ ನಿಲ್ದಾಣದಲ್ಲಿ ಬಸ್ ನಿಲ್ಲಿಸಲಿಲ್ಲವೆಂದು ವಾಗ್ವಾದ – ಮಧ್ಯ ರಸ್ತೆಯಲ್ಲಿಯೇ ಬಸ್ ಬಿಟ್ಟು ಹೋದ ಚಾಲಕ
ನಿಗದಿತ ನಿಲ್ದಾಣದಲ್ಲಿ ಬಸ್ ನಿಲ್ಲಿಸಲಿಲ್ಲವೆಂದು ವಾಗ್ವಾದ – ಮಧ್ಯ ರಸ್ತೆಯಲ್ಲಿಯೇ ಬಸ್ ಬಿಟ್ಟು ಹೋದ ಚಾಲಕ ಬಸ್ ನಿಲ್ಲಿಸುವ ವಿಚಾರದಲ್ಲಿ ವಾಗ್ವಾದ ನಡೆದು ಚಾಲಕ ಮಧ್ಯ ರಸ್ತೆಯಲ್ಲಿಯೇ ಬಸ್ ನ್ನು ಬಿಟ್ಟು ಹೋಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪದಲ್ಲಿ ನಡೆದಿದೆ. ಶಿರಾಳಕೊಪ್ಪದಲ್ಲಿ ರಾಣೇಬೆನ್ನೂರು, ಹಿರೇಕೆರೂರು ಮೂಲಕ ಶಿರಾಳಕೊಪ್ಪಕ್ಕೆ ತಲುಪಬೇಕಿದ್ದ ಎನ್ ಡಬ್ಲೂ ಕೆಎಸ್ ಆರ್ ಟಿಸಿ ಬಸ್ ಶಿರಾಳಕೊಪ್ಪದ ನಡುರಸ್ತೆಯಲ್ಲಿ ನಿಲ್ಲಿಸಿದ್ದಾರೆ. ಈ ಬಗ್ಗೆ ವಿಡಿಯೋವೊಂದು ವೈರಲ್ ಆಗಿದ್ದು ಕೆಲ ಪ್ರಯಾಣಿಕರು ಮತ್ತು ಬಸ್ ಚಾಲಕ ಮತ್ತು…
ನಿಟ್ಟೂರು ಆಸ್ಪತ್ರೆಗೆ ಶಾಸಕ ಬೇಳೂರು ದಿಢೀರ್ ಭೇಟಿ-ಪರಿಶೀಲನೆ
ನಿಟ್ಟೂರು ಆಸ್ಪತ್ರೆಗೆ ಶಾಸಕ ಬೇಳೂರು ದಿಢೀರ್ ಭೇಟಿ-ಪರಿಶೀಲನೆ ಹೊಸನಗರ : ಅವಧಿ ಮೀರಿದ ಔಷಧಿ ವಿತರಣೆ, ಸುಚಿತ್ವದ ಕೊರತೆ ದೂರಿನ ಬೆನ್ನಲ್ಲೆ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಇಂದು ತಾಲೂಕಿನ ನಿಟ್ಟೂರು ಗ್ರಾಮದ ಸರಕಾರಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ವತಹ ಶಾಸಕರೇ ಶೌಚಾಲಯ ಸೇರಿದಂತೆ ವಿವಿಧ ಕೊಠಡಿಗಳ ಶುಚಿತ್ವ ಪರಿಶೀಲನೆ ಮಾಡಿ ಮೆಚ್ಚುಗೆ ವ್ಯಕ್ತ ಪಡಿಸಿದರು.ಅವಧಿ ಮೀರಿದ ಔಷಧಿ ವಿತರಣೆ ಕುರಿತಂತೆ ಆಸ್ಪತ್ರೆಯ ವೈದ್ಯೆ ಡಾ. ಚೈತ್ರ ಅವರಿಂದ ಸೂಕ್ತ…
Nitturu | ಜುಮ್ಮಾ ಮಸೀದಿಯಲ್ಲಿ 78ನೇ ಸ್ವಾತಂತ್ಯ್ರೋತ್ಸವ ಆಚರಣೆ
Nitturu | ಜುಮ್ಮಾ ಮಸೀದಿಯಲ್ಲಿ 78ನೇ ಸ್ವಾತಂತ್ಯ್ರೋತ್ಸವ ಆಚರಣೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಗ್ರಾಮದ ಮೊಹೀಯುದ್ದೀನ್ ಜುಮ್ಮಾ ಮಸೀದಿಯಲ್ಲಿ 78ನೇ ಸ್ವಾತಂತ್ಯ್ರೋತ್ಸವ ದಿನವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಮಸೀದಿ ಅಧ್ಯಕ್ಷರಾದ ಅಬ್ದುಲ್ ಸತ್ತಾರ್ ರವರು ಧ್ವಜಾರೋಹಣವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಜುಮ್ಮಾ ಮಸೀದಿ ಸಖಾಫಿ ಉಬೇದುಲ್ಲಾ , ಹಾಗೂ ಅಬ್ದುಲ್ಲಾ , ಮಹಮ್ಮದ್ ರಫಿ, ರೆಹಮಾನ್, ಜಯರಾಮ್ ಶೆಟ್ಟಿ, ಭಾಸ್ಕರ್ ಗುಂಡಿ, ಕೈ ಮೊಮ್ಮದ್ , ಅಸ್ಲಾಂ ಹಾಗೂ ಇನ್ನಿತರರು ಹಾಜರಿದ್ದರು
ಕೆಂಚನಾಲದಲ್ಲಿ ಸಡಗರ ಸಂಭ್ರಮದಿಂದ 78ನೇ ಸ್ವಾತಂತ್ರ್ಯೋತ್ಸವ ಆಚರಣೆ – ಸಾಧಕರಿಗೆ ಸನ್ಮಾನ
ಕೆಂಚನಾಲದಲ್ಲಿ ಸಡಗರ ಸಂಭ್ರಮದಿಂದ 78ನೇ ಸ್ವಾತಂತ್ರ್ಯೋತ್ಸವ ಆಚರಣೆ – ಸಾಧಕರಿಗೆ ಸನ್ಮಾನ ಕೆಂಚನಾಲದಲ್ಲಿ ಸಡಗರ ಹಾಗೂ ಸಂಭ್ರಮದಿಂದ 78ನೇಯ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹಿರಿಯರು ತನು, ಮನ, ಧನವನ್ನು ಲೆಕ್ಕಿಸದೇ ತ್ಯಾಗ ಮಾಡಿ ಹುತಾತ್ಮರಾಗಿದ್ದು ಅವರಂತೆ ಪ್ರತಿಯೊಬ್ಬರೂ ಸ್ವಾತಂತ್ರ್ಯ ಪ್ರೇಮಿಯಾಗಿ ದೇಶಾಭಿಮಾನ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ಇದೇ ಸಂಧರ್ಭದಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಸಲಾಯಿತು. ಪ್ರಕಾಶ್ ಮಾದಾಪುರ , ಅಲ್ತಾಫ್…
Hosanagara | ವಿವಿಧೆಡೆ 78ನೇ ಸ್ವಾತಂತ್ಯ್ರೋತ್ಸವ ಆಚರಣೆ
Hosanagara | ವಿವಿಧೆಡೆ 78ನೇ ಸ್ವಾತಂತ್ಯ್ರೋತ್ಸವ ಆಚರಣೆ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 78ನೇ ಸ್ವಾತಂತ್ಯ್ರೋತ್ಸವ ಆಚರಣೆ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು 78ನೇ ಸ್ವಾತಂತ್ಯ್ರ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಡಾ. ಉಮೇಶ್ ಕೆ. ಅಧ್ಯಕ್ಷತೆಯನ್ನು ವಹಿಸಿದ್ದರು. ಡಾ. ಪ್ರಭಾಕರ್ ರಾವ್ ಕೆ. ಅವರು ಭಾರತದ ಸ್ವಾತಂತ್ರ್ಯದ ಚಳವಳಿಯ ಕುರಿತಾದ ವಿಶೇಷ ಉಪನ್ಯಾಸವನ್ನು ನೀಡಿದರು. ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಶ್ರೀ. ಸುಬ್ರಹ್ಮಣ್ಯ ಮಾಸ್ತಿಕಟ್ಟೆ, ಉಪಾಧ್ಯಕ್ಷರು, ಕಾಲೇಜು ಅಭಿವೃದ್ದಿ ಸಮಿತಿ, ಮತ್ತು ಸದಸ್ಯರಾದ ಶ್ರೀ….
ಚಿಕ್ಕಜೇನಿ ಪ್ರೌಢ ಶಾಲೆಯಲ್ಲಿ ಕೇಂದ್ರ ಸಂವಹನ ಇಲಾಖೆಯಿಂದ ಸ್ವಾತಂತ್ರ್ಯ ಉತ್ಸವ
ಚಿಕ್ಕಜೇನಿ ಪ್ರೌಢ ಶಾಲೆಯಲ್ಲಿ ಕೇಂದ್ರ ಸಂವಹನ ಇಲಾಖೆಯಿಂದ ಸ್ವಾತಂತ್ರ್ಯ ಉತ್ಸವ ರಿಪ್ಪನ್‌ಪೇಟೆ – ಇಲ್ಲಿಗೆ ಸಮೀಪದ ಚಿಕ್ಕಜೇನಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಗುರುವಾರ ಶಿವಮೊಗ್ಗದ ಕೇಂದ್ರ ಸಂವಹನ ಇಲಾಖೆಯಿಂದ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಎಸ್.ಡಿ.ಎಂ.ಸಿ.ಅಧ್ಯಕ್ಷ ಪ್ರಕಾಶ್ ರಾಷ್ಟ್ರ ಧ್ವಜಾರೋಹಣ ನಡೆಸಿದರು. ಗ್ರಾ.ಪಂ.ಸದಸ್ಯ ಅಣ್ಣಪ್ಪ ಶೆಟ್ಟಿ ಸ್ವಾತಂತ್ರ್ಯ ಜಾಥಾಕ್ಕೆ ಚಾಲನೆ ನೀಡಿದರು. ಚಿಕ್ಕಜೇನಿ ಗ್ರಾ.ಪಂ. ಅಧ್ಯಕ್ಷ ರಾಜು ಎನ್.ಪಿ.ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಮಕ್ಕಳು ದೇಶದ ಭವ್ಯ ಇತಿಹಾಸ ತಿಳಿದುಕೊಳ್ಳಬೇಕು ಎಂದರು.ಶಾಲೆಯ ಸಮಗ್ರ ಪ್ರಗತಿಗೆ ಗ್ರಾ. ಪಂ.ಸದಾ ಸಿದ್ಧವಿದೆ…
ರಿಪ್ಪನ್ ಪೇಟೆ ಪಟ್ಟಣದಲ್ಲಿ ಸಡಗರ ಸಂಭ್ರಮದಿಂದ 78ನೇ ಸ್ವಾತಂತ್ರ್ಯೋತ್ಸವ ಆಚರಣೆ
ರಿಪ್ಪನ್ ಪೇಟೆ ಪಟ್ಟಣದಲ್ಲಿ ಸಡಗರ ಸಂಭ್ರಮದಿಂದ 78ನೇ ಸ್ವಾತಂತ್ರ್ಯೋತ್ಸವ ಆಚರಣೆ ರಿಪ್ಪನ್‌ಪೇಟೆ: ಪಟ್ಟಣದ ವಿವಿಧೆಡೆಗಳಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಇಂದು ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರ ಸಂಭ್ರಮದಿಂದ ಆಚರಿಸಿದರು. ಪಟ್ಟಣದ ಗ್ರಾಮ ಪಂಚಾಯತಿ, ನಾಡಕಛೇರಿ, ಪೊಲೀಸ್ ಠಾಣೆ, ಪ್ರಾಥಮಿಕ ಆರೋಗ್ಯ ಕೇಂದ್ರ, ರೈತಸಂಪರ್ಕ ಕೇಂದ್ರ, ಸರ್ಕಾರಿ ಬಿಸಿಎಂ ವಸತಿ ನಿಲಯ, ಪ್ರಥಮದರ್ಜೆ, ಪದವಿಪೂರ್ವ ಕಾಲೇಜು, ಪ್ರೌಢಶಾಲೆ, ಸರ್ಕಾರಿ ಮತ್ತು ಖಾಸಗಿ ಪ್ರಾಥಮಿಕ ಹಿರಿಯ, ಕಿರಿಯ ಶಾಲೆ, ಮೆಸ್ಕಾಂ, ಪಶುವೈದ್ಯಕೀಯ ಆಸ್ಪತ್ರೆ, ಬ್ಯಾಂಕ್‌ಗಳು, ಅರಣ್ಯ ಇಲಾಖೆ, ಮೊಹಿಯುದ್ದೀನ್ ಜುಮ್ಮಾ ಮಸೀದಿ,ಗುಡ್…