ಜಿಲ್ಲಾ ಸುದ್ದಿ:
ಸಿದ್ದರಾಮಯ್ಯ ಬೆಂಬಲಿಸಿ ಶಿಕಾರಿಪುರದಲ್ಲಿ ಅಹಿಂದ ಸಂಘಟನೆ ಕರೆ ನೀಡಿದ್ದ ಬಂದ್ ಯಶಸ್ವಿ
ಸಿದ್ದರಾಮಯ್ಯ ಬೆಂಬಲಿಸಿ ಶಿಕಾರಿಪುರದಲ್ಲಿ ಅಹಿಂದ ಸಂಘಟನೆ ಕರೆ ನೀಡಿದ್ದ ಬಂದ್ ಯಶಸ್ವಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಕುತಂತ್ರ ಖಂಡಿಸಿ ಶಿಕಾರಿಪುರ ತಾಲ್ಲೂಕು ಅಹಿಂದ ಸಂಘಟನೆ ಕರೆ ನೀಡಿರುವ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಅಂಗಡಿ ಮುಗ್ಗಟ್ಟುಗಳು ಬಂದ್ ಆಗಿದ್ದು, ಶಿಕಾರಿಪುರ ಪಟ್ಟಣದಲ್ಲಿ ಅಹಿಂದ ಸಂಘಟನೆ ಆಶ್ರಯದಲ್ಲಿ ಮುಖಂಡರು ಪ್ರತಿಭಟನೆ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ದ ಬಿಜೆಪಿ ಕುತಂತ್ರ ರಾಜಕೀಯ ಮಾಡುತ್ತಿದೆ. ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದರು. ಪ್ರತಿಭಟನೆಯಲ್ಲಿ…
HOSANAGARA | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮಾಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ಮುಷ್ಕರ
ಹೊಸನಗರ : ಇತ್ತೀಚೆಗೆ ಚಿತ್ರದುರ್ಗದಲ್ಲಿ ನಡೆದ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಕಾರ್ಯಕಾರಣಿ ಸಭೆಯ ನಿರ್ಣಯದಂತೆ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಲೇಖನಿ ಕೆಳಗಿಟ್ಟು, ಮೊಬೈಲ್ ಆಪ್ ಮತ್ತು ವೆಬ್ ಕಾರ್ಯ ಸ್ಥಗಿತಗೊಳಿಸಿ ಗುರುವಾರ ಇಲ್ಲಿನ ತಾಲೂಕು ಕಚೇರಿ ಎದುರು ಕೈಗೆ ಕಪ್ಪು ಪಟ್ಟಿ ಧರಿಸಿ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮುಂದಾದ ಘಟನೆ ನಡೆದಿದೆ. ಈ ಸಂಧರ್ಭದಲ್ಲಿ ಗ್ರಾಮ ಆಡಳಿತ ಅಧಿಕಾರಿ ಸಂಘದ ಹೊಸನಗರ ತಾಲೂಕು ಅಧ್ಯಕ್ಷ ನವೀನ್ ಕುಮಾರ್ ಮಾತನಾಡಿ, ಕಂದಾಯ…
ಕೆಂಚನಾಲದಲ್ಲಿ ಈದ್ ಮಿಲಾದ್ ಅಂಗವಾಗಿ ಸ್ವಯಂಪ್ರೇರಿತ ರಕ್ತದಾನ ಶಿಬಿರ
ಕೆಂಚನಾಲದಲ್ಲಿ ಈದ್ ಮಿಲಾದ್ ಅಂಗವಾಗಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಮದ ಜಾಮೀಯಾ ಮಸೀದಿ ಆವರಣದಲ್ಲಿ ಈದ್ ಮಿಲಾದ್ ಸಮಿತಿ ಹಾಗೂ ರಿಪ್ಪನ್‌ಪೇಟೆ ರೋಟರಿ ಕ್ಲಬ್ ಸಹಯೋಗದಲ್ಲಿ ಈದ್ ಮಿಲಾದ್ ಪ್ರಯುಕ್ತ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಕೆಂಚನಾಲ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ಮಾತನಾಡಿ, ರಕ್ತದಾನದಿಂದ ಇನ್ನೊಬ್ಬರ ಜೀವ ಉಳಿಸಬಹುದು.ರಕ್ತಕ್ಕೆ ಪರ್ಯಾಯ ಯಾವುದೇ ವಸ್ತು ಇಲ್ಲ. ರಕ್ತದಾನ ಮಾಡುವುದರಿಂದ ಮೂವರಿಗೆ ಜೀವದಾನ ಮಾಡಿದಂತಾಗುತ್ತದೆ. ಇದರಿಂದ ರಕ್ತದಾನಿಗಳ ಆರೋಗ್ಯವೂ ಸುಧಾರಿಸುತ್ತದೆ ಹಾಗಾಗಿ ಆರೋಗ್ಯವಂತ…
ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ತನಿಖೆ ಎದುರಿಸಲಿ ; ಶಾಸಕ ಆರಗ ಜ್ಞಾನೇಂದ್ರ ಆಗ್ರಹ
ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ತನಿಖೆ ಎದುರಿಸಲಿ ; ಶಾಸಕ ಆರಗ ಜ್ಞಾನೇಂದ್ರ ಆಗ್ರಹ ಹೊಸನಗರ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಶಾಸಕ ಆರಗಜ್ಞಾನೇಂದ್ರ ಆಗ್ರಹಿಸಿದರು. ಇಲ್ಲಿನ ಬಿಜೆಪಿ ಕಛೇರಿಯಲ್ಲಿ ಬುಧವಾರ ಅವರು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಡಾ ಹಗರಣದ ತನಿಖೆಗೆ ರಾಜ್ಯಪಾಲರು ನೀಡಿದ ಅನುಮತಿಯನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಸಿದ್ದರಾಮಯ್ಯ ಅವರ ಅರ್ಜಿ ವಜಾ ಆಗಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ…
RIPPONPETE | ಈದ್ ಮಿಲಾದ್ ಕಾರ್ಯಕ್ರಮಕ್ಕೆ ಸಕಲ ಸಿದ್ದತೆ | ಗುರುವಾರ ಸೌಹಾರ್ದ ಸಮ್ಮಿಲನ ಕಾರ್ಯಕ್ರಮ , ಶಾಸಕರುಗಳಿಗೆ ಸನ್ಮಾನ
RIPPONPETE | ಈದ್ ಮಿಲಾದ್ ಕಾರ್ಯಕ್ರಮಕ್ಕೆ ಸಕಲ ಸಿದ್ದತೆ | ಗುರುವಾರ ಸೌಹಾರ್ದ ಸಮ್ಮಿಲನ ಕಾರ್ಯಕ್ರಮ , ಶಾಸಕರುಗಳಿಗೆ ಸನ್ಮಾನ ರಿಪ್ಪನ್‌ಪೇಟೆ : ಈದ್ ಮಿಲಾದ್ ಹಬ್ಬದ ಅಂಗವಾಗಿ ಗುರುವಾರ ಸೌಹಾರ್ದ ಸಮಾವೇಶ ಹಾಗೂ ಶಾಸಕರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾದ ನಾಸೀರ್ ಹಮೀದ್ ಸಾಬ್ ಪತ್ರೀಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಗುರುವಾರ ಮೊಹಿಯುದ್ದೀನ್ ಜುಮ್ಮಾ ಮಸೀದಿ,ಮೆಕ್ಕಾ ಮಸೀದಿ ,ಈದ್ ಮಿಲಾದ್ ಸಮಿತಿ ,ತಾಅಜಿಜುಲ್ ಅರಬ್ಬಿಕ್ ಮದರಸ ,ಬದ್ರಿಯಾ ಮದರಸ ಗವಟೂರು ,SYS…
ಪ್ರಿಯಕರನ ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ – ಪ್ರೇಯಸಿ ಸೇರಿದಂತೆ ಆರು ಜನರ ಬಂಧನ
ಪ್ರಿಯಕರನ ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ – ಪ್ರೇಯಸಿ ಸೇರಿದಂತೆ ಆರು ಜನರ ಬಂಧನ ಮದುವೆ ಮಾತುಕತೆಯೊಂದು ಯುವಕನ ಸಹೋದರನ ಕೊಲೆಯಲ್ಲಿ ಅಂತ್ಯ ಕಂಡಿರುವ ಘಟನೆ ಕಲಬುರಗಿ ನಗರದ ಹೊರ ವಲಯ ನಾಗನಹಳ್ಳಿಯಲ್ಲಿ ನಡೆದಿದ್ದು, ಘಟನೆ ಸಂಬಂಧ ಪ್ರೀತಿಸಿದ ಯುವತಿ ಸೇರಿ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಗುಲ್ಬರ್ಗ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯ ನಾಗನಹಳ್ಳಿಯ ಸಚಿನ್ ಹಾಗೂ ಉಷಾ ಅಲಿಯಾಸ್ ವೈಷ್ಣವಿ ಪ್ರೀತಿಸುತ್ತಿದ್ದರಂತೆ.ಈ ಹಿನ್ನೆಲೆಯಲ್ಲಿ ಉಷಾ ಸಹೋದರ ವರುಣಕುಮಾರ ಹಾಗೂ ಇತರರೊಂದಿಗೆ ಸಚಿನ್ ಮನೆಗೆ ಮದುವೆ…
ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶ ಎತ್ತಿ ಹಿಡಿದ ಹೈಕೋರ್ಟ್, ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ..!
ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶ ಎತ್ತಿ ಹಿಡಿದ ಹೈಕೋರ್ಟ್, ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ..! ಬೆಂಗಳೂರು : ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಅಭಿಯೋಜನೆಗೆ ಅನುಮತಿ ನೀಡಿದ್ದ ರಾಜ್ಯಪಾಲರ ನಿಲುವನ್ನು ಎತ್ತಿಹಿಡಿದಿರುವ ಕರ್ನಾಟಕ ಹೈಕೋರ್ಟ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಿಟ್ ಅರ್ಜಿಯನ್ನು ವಜಾಗೊಳಿಸಿದೆ. ಸುದೀರ್ಘ ವಾದ, ಪ್ರತಿವಾದದ ಬಳಿಕ ಪ್ರಕರಣದ ತನಿಖೆಯ ಅಗತ್ಯವಿದೆ ಎಂದು ಪ್ರತಿಪಾದಿಸಿರುವ ಹೈಕೋರ್ಟ್‌ನ ಏಕ ಸದಸ್ಯ ಪೀಠದ ನ್ಯಾ. ನಾಗಪ್ರಸನ್ನ ಅವರು, ಭ್ರಷ್ಟಾಚಾರ ನಿಗ್ರಹ ಕಾಯ್ದೆ 17ಎ ಮತ್ತು ಭಾರತೀಯ ನ್ಯಾಯಸಂಹಿತೆ 218ರಡಿ ರಾಜ್ಯಪಾಲರು ನೀಡಿದ್ದ…
RIPPONPETE | ಮುನಿರತ್ನರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಿ ತಾಲೂಕ್ ಒಕ್ಕಲಿಗ ಸಂಘದಿಂದ ಪ್ರತಿಭಟನೆ
RIPPONPETE | ಮುನಿರತ್ನರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಿ ತಾಲೂಕ್ ಒಕ್ಕಲಿಗ ಸಂಘದಿಂದ ಪ್ರತಿಭಟನೆ ರಿಪ್ಪನ್‌ಪೇಟೆ :ಒಕ್ಕಲಿಗ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಮುನಿರತ್ನನನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಿ ಹೊಸನಗರ ತಾಲೂಕ್ ಒಕ್ಕಲಿಗರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ವಿನಾಯುಕ ವೃತ್ತದಿಂದ ಮೆರವಣಿಗೆ ತೆರಳಿ ಗ್ರಾಮ ಪಂಚಾಯತ್ ಆವರಣದಲ್ಲಿ ಶಾಸಕ ಮುನಿರತ್ನ ವಿರುದ್ಧ ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಪ್ರತಿಭಟನೆ ನಡೆಸಿ ಉಪತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಮುಖಂಡರಾದ ಎಂ ಎಂ ಪರಮೇಶ್ ಮಾತನಾಡಿ,…
ಶಿವಮೊಗ್ಗದಿಂದ ಸ್ಪೈಸ್ ಜೆಟ್ ಹಾರಾಟ – ವೇಳಾಪಟ್ಟಿ ಹೀಗಿದೆ ನೋಡಿ
ಶಿವಮೊಗ್ಗದಿಂದ ಸ್ಪೈಸ್ ಜೆಟ್ ಹಾರಾಟ – ವೇಳಾಪಟ್ಟಿ ಹೀಗಿದೆ ನೋಡಿ ಸ್ಪೈಸ್ ಜೆಟ್ ವಿಮಾನಯಾನ ಸಂಸ್ಥೆ ಶಿವಮೊಗ್ಗ – ಹೈದರಾಬಾದ್ ಮತ್ತು ಶಿವಮೊಗ್ಗ – ಚೆನ್ನೈ ವಿಮಾನಯಾನ ಸೇವೆ ಆರಂಭಗೊಳ್ಳುತ್ತಿದೆ . ಅ.10ರಿಂದ ಶಿವಮೊಗ್ಗದಿಂದ ಮೂರನೆ ವಿಮಾನಯಾನ ಸಂಸ್ಥೆ ಹಾರಾಟ ನಡೆಸಲಿದೆ. ಚೆನ್ನೈಯಿಂದ ಶಿವಮೊಗ್ಗ: ಬೆಳಗ್ಗೆ 10:40ಕ್ಕೆ ಹೊರಟು, ಮಧ್ಯಾಹ್ನ 12:10ಕ್ಕೆ ತಲುಪಲಿದೆ. ಶಿವಮೊಗ್ಗದಿಂದ ಹೈದರಾಬಾದ್: ಮಧ್ಯಾಹ್ನ 12:35ಕ್ಕೆ ಹೊರಟು, ಮಧ್ಯಾಹ್ನ 2:05ಕ್ಕೆ ತಲುಪಲಿದೆ. ಹೈದರಾಬಾದ್‌ನಿಂದ ಶಿವಮೊಗ್ಗ: ಮಧ್ಯಾಹ್ನ 2:40ಕ್ಕೆ ಹೊರಟು, ಸಂಜೆ 4:10ಕ್ಕೆ ತಲುಪಲಿದೆ. ಶಿವಮೊಗ್ಗದಿಂದ…
ಕಾಡಾನೆ ದಾಳಿಗೆ ಬೆಳೆ ನಾಶ – ರೈತರ ಆಕ್ರೋಶ
ಕಾಡಾನೆ ದಾಳಿಗೆ ಬೆಳೆ ನಾಶ – ರೈತರ ಆಕ್ರೋಶ ಮಲೆನಾಡಿನಲ್ಲಿ ಕಾಡಾನೆಗಳ ಹಾವಳಿ ಮುಂದುವರೆದಿದ್ದು ಭಾನುವಾರ (ಸೆ. 22) ತಡರಾತ್ರಿ ಎರಡು ಕಾಡಾನೆಗಳು ದಾಳಿ ನಡೆಸಿ ರೈತರ ಬೆಳೆಗಳನ್ನು ಸಂಪೂರ್ಣ ನಾಶ ಮಾಡಿರುವ ಘಟನೆ ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ನಡೆದಿದೆ. ಪುರದಾಳು ಗ್ರಾಮದ ರಾಜೇಶ್ ಹಾಗೂ ಬೀರಪ್ಪ, ನಾಗರಾಜ್ ಎಂಬುವರ ತೋಟ -ಹೊಲಗಳಿಗೆ ಭಾನುವಾರ (ಸೆ.22) ರಾತ್ರಿ ಎರಡು ಕಾಡಾನೆಗಳು ದಾಳಿ ಮಾಡಿ ಅಡಿಕೆ ಹಾಗೂ ತೆಂಗಿನ ಮರಗಳನ್ನು ಬುಡಮೇಲು ಮಾಡಿದ್ದು ಜೊತೆಗೆ ಜೋಳ ಹಾಗೂ…