ಜಿಲ್ಲಾ ಸುದ್ದಿ:
Hombuja | ಯುಗಲ ಮುನಿಶ್ರೀಗಳ ಪಾದಾರ್ಪಣೆ, ಹೊಂಬುಜ ವಾರ್ಷಿಕ ರಥೋತ್ಸವ ಪೂರ್ವ ಧ್ವಜಾರೋಹಣ
ಯುಗಲ ಮುನಿಶ್ರೀಗಳ ಪಾದಾರ್ಪಣೆ, ಹೊಂಬುಜ ವಾರ್ಷಿಕ ರಥೋತ್ಸವ ಪೂರ್ವ ಧ್ವಜಾರೋಹಣ ಅತಿಶಯ ಶ್ರೀಕ್ಷೇತ್ರ ಹೊಂಬುಜ ಭಗವಾನ ಶ್ರೀ ಪಾರ್ಶ್ವನಾಥ ಸ್ವಾಮಿ, ಜಗನ್ಮಾತೆ ಶ್ರೀ ಪದ್ಮಾವತಿ ದೇವಿ ದರ್ಶನಕ್ಕಾಗಿ ಮುನಿಶ್ರೀ 108 ಅಮೋಘಕೀರ್ತಿ ಮಹಾರಾಜರು ಹಾಗೂ ಮುನಿಶ್ರೀ 108 ಅಮರಕೀರ್ತಿ ಮಹಾರಾಜರು ಪಾದಾರ್ಪಣೆ ಮಾಡಿದರು. ಸಾಲಾಂಕೃತ ಮೆರವಣಿಗೆಯಲ್ಲಿ ಮುನಿಶ್ರೀಯವರನ್ನು ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಪರಂಪರಾಗತವಾಗಿ ಸ್ವಾಗತಿಸಿ, ಭರಮಾಡಿಕೊಂಡರು. ಜಿನಮಂದಿರಗಳ ದರ್ಶನ ಪಡೆದ ಮುನಿಶ್ರೀಯವರು ವಾರ್ಷಿಕ ರಥಯಾತ್ರಾ ಮಹೋತ್ಸವದಲ್ಲಿ ದಿವ್ಯ ಸಾನಿಧ್ಯ ನೀಡಲಿರುವರು….
Shivamogga | ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷರಾಗಿ ರಿಪ್ಪನ್‌ಪೇಟೆಯ ಜಿ.ಎಸ್.ವರದರಾಜ್ ನೇಮಕ
Shivamogga | ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷರಾಗಿ ರಿಪ್ಪನ್‌ಪೇಟೆಯ ಜಿ.ಎಸ್.ವರದರಾಜ್ ನೇಮಕ ರಿಪ್ಪನ್‌ಪೇಟೆ : ಪಟ್ಟಣದ ಹಿರಿಯ ರಾಜಕಾರಣಿ ಜಿ ಎಸ್ ವರದರಾಜ್ ರವರನ್ನು ಶಿವಮೊಗ್ಗ ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷರನ್ನಾಗಿ ಶಿವಮೊಗ್ಗ ಜಿಲ್ಲಾ ಜೆಡಿಎಸ್ ಆಧ್ಯಕ್ಷ ಡಾ.ಕಡಿದಾಳ್ ಗೋಪಾಲ್ ನೇಮಕ ಮಾಡಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಜೆಡಿಎಸ್ ಪಕ್ಷ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ಜಿ ಎಸ್ ವರದರಾಜ್ ತಾಲೂಕು ಸಮಿತಿ ಹಾಗೂ ಜಿಲ್ಲಾ ಸಮಿತಿಯ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಜಿಲ್ಲಾ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಜಿ ಎಸ್ ವರದರಾಜ್ ರವರಿಗೆ…
ಕೊಳವೆ ಬಾವಿ ಕೊರೆಯಲು ರೈತರಿಂದ ಹೆಚ್ಚಿನ ದರ ವಸೂಲಿ ಮಾಡಿದ್ರೇ ವಾಹನ ಮಾಲೀಕರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ – ಜಿಲ್ಲಾಧಿಕಾರಿ ಗುರುದತ್ತ ಹೆಗಡೆ | Bore well price hike issue
ಕೊಳವೆ ಬಾವಿ ಕೊರೆಯಲು ರೈತರಿಂದ ಹೆಚ್ಚಿನ ದರ ವಸೂಲಿ ಮಾಡಿದ್ರೇ ವಾಹನ ಮಾಲೀಕರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ – ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಬರಗಾಲದ ಹಿನ್ನೆಲೆ ಮಾನವೀಯತೆ ದೃಷಿಯಿಂದ ರೈತರಿಗೆ ಎಸ್‍ಆರ್ ದರದಂತೆ ಕೊಳವೆ ಬಾವಿಗಳನ್ನು ಕೊರೆದುಕೊಡಬೇಕು. ಹೆಚ್ಚಿನ ದರಗಳನ್ನು ವಿಧಿಸಿ ರೈತರಿಂದ ಹಣ ಪಡೆಯುವ ಕುರಿತು ದೂರುಗಳು ಬಂದಲ್ಲಿ, ಅಂತಹ ಕೊಳವೆಬಾವಿ ವಾಹನ ಮಾಲೀಕರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಎಚ್ಚರಿಕೆ ನೀಡಿದ್ದಾರೆ. ಸರ್ಕಾರದ ಇಲಾಖೆಗಳ ವಿವಿಧ ಯೋಜನೆಗಳಡಿ ಹಾಗೂ…
ಶಿವರಾಜ್ಕುಮಾರ್ ಸಿನಿಮಾಗಳನ್ನು ಬ್ಯಾನ್ ಮಾಡಲು ಆಗ್ರಹ – ಚುನಾವಣಾ ಆಯೋಗ ಹೇಳಿದ್ದೇನು..??? | Election
ಶಿವರಾಜ್ಕುಮಾರ್ ಸಿನಿಮಾಗಳನ್ನು ಬ್ಯಾನ್ ಮಾಡಲು ಆಗ್ರಹ – ಚುನಾವಣಾ ಆಯೋಗ ಹೇಳಿದ್ದೇನು..??? ನಟ ಶಿವರಾಜ್ಕುಮಾರ್ ಅವರ ಸಿನಿಮಾಗಳು ಮತ್ತು ಜಾಹೀರಾತುಗಳು ಖಾಸಗಿ ಟಿವಿ ಚಾನೆಲ್ಗಳಲ್ಲಿ ಪ್ರಸಾರವಾಗುವುದನ್ನು ನಿಷೇಧಿಸಲು ಸಾಧ್ಯವಿಲ್ಲ, ದೂರದರ್ಶನದಲ್ಲಿ ಮಾತ್ರ ಪ್ರಸಾರವನ್ನು ನಿರ್ಬಂಧಿಸಬಹುದು ಎಂದು ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ. ಶಿವಮೊಗ್ಗ ಕ್ಷೇತ್ರದಿಂದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಹಾಗೂ ಹಾಲಿ ಸಂಸದ ಬಿ.ವೈ. ರಾಘವೇಂದ್ರ ಅವರ ವಿರುದ್ಧ ಮಾಜಿ ಸಿಎಂ ದಿವಂಗತ ಬಂಗಾರಪ್ಪ ಅವರ ಪುತ್ರಿ ಹಾಗೂ ನಟ ಶಿವರಾಜ್ಕುಮಾರ್ ಅವರ…
Shivamogga | ಮಾ.30ರಂದು ‘ಉದ್ಯೋಗ ಮೇಳ’ ಆಯೋಜನೆ, ನೇರ ಸಂದರ್ಶನ
ಮಾ.30ರಂದು ‘ಉದ್ಯೋಗ ಮೇಳ’ ಆಯೋಜನೆ, ನೇರ ಸಂದರ್ಶನ ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮಾ.30 ರ ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪೆÇ್ಲಮೋ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್…
Hosanagara | ಜಿಲ್ಲೆಯ ಜನರ ಬಳಿ ಮತ ಕೇಳುವ ನೈತಿಕತೆ ಕಾಂಗ್ರೆಸ್ ಅಭ್ಯರ್ಥಿಗಿಲ್ಲ – ವೀರೇಶ್ ಆಲುವಳ್ಳಿ
ಜಿಲ್ಲೆಯ ಜನರ ಬಳಿ ಮತ ಕೇಳುವ ನೈತಿಕತೆ ಕಾಂಗ್ರೆಸ್ ಅಭ್ಯರ್ಥಿಗಿಲ್ಲ – ವೀರೇಶ್ ಆಲುವಳ್ಳಿ ಹೊಸನಗರ: 5 ವರ್ಷಗಳ ಹಿಂದೆ ಶಿವಮೊಗ್ಗ ಜಿಲ್ಲೆಗೆ ತಾವು ಲೋಕಸಭೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾಗಿ ಕಣಕ್ಕೆ ಇಳಿಯುತ್ತಿದ್ದೀರಿ ಸುಮಾರು 2 ಲಕ್ಷಕ್ಕಿಂತಲೂ ಹೆಚ್ಚು ಮತಗಳು ತಮಗೆ ಬಂದಿದೆ. ಆ ಎರಡು ಲಕ್ಷ ಜನರಿಗೆ ನೀವು ಕಷ್ಟ-ಸುಖಗಳಿಗೆ ಬಂದು ಸ್ಪಂದಿಸದೇ ಈ ಬಾರಿ ನನಗೆ ಲೋಕಸಭೆ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿ ಎಂದು ಯಾವ ರೀತಿ ಮತದಾರರ ಬಳಿ ಹೋಗಿ ಮತ ಕೇಳುತ್ತೀರಿ ?…
Hosanagara | ನಾಗೋಡಿ ಚೆಕ್ ಪೋಸ್ಟ್ ನಲ್ಲಿ ಲಕ್ಷಾಂತರ ರೂ ಮೌಲ್ಯದ ಅಕ್ರಮ ಮದ್ಯ,ತಂಬಾಕು ಚೀಲ ನಗದು ವಶ
Hosanagara | ನಾಗೋಡಿ ಚೆಕ್ ಪೋಸ್ಟ್ ನಲ್ಲಿ ಲಕ್ಷಾಂತರ ರೂ ಮೌಲ್ಯದ ಅಕ್ರಮ ಮದ್ಯ,ತಂಬಾಕು ಚೀಲ ನಗದು ವಶ ಹೊಸನಗರ : ಶಿವಮೊಗ್ಗ ಲೋಕಸಭಾ ಮತ ಕ್ಷೇತ್ರಗಳ ವ್ಯಾಪ್ತಿಯ ಹೊಸನಗರ ತಾಲೂಕಿನ ನಾಗೋಡಿ ಚೆಕ್ ಪೋಸ್ಟ್ ಗಳಲ್ಲಿ ಖಾಸಗಿ ಬಸ್ ದುರ್ಗಶಕ್ತಿ ಕುಂದಾಪುರ ದಿಂದ ಬೆಂಗಳುರಿಗೆ ತೆರಳುವ ಬಸ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು ರೂ. 384000 ಮೌಲ್ಯದ ತಂಬಾಕಿನ ಚೀಲದ ಬ್ಯಾಗ್ ಗಳು ಸೇರಿದಂತೆ 8,010 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಹೊಸನಗರ ಸರ್ಕಲ್ ಇನ್ಸ್ ಪೆಕ್ಟರ್…
ವಿದ್ಯಾರ್ಥಿಗಳ ತಪ್ಪು ಉತ್ತರಕ್ಕೆ ಶಿಕ್ಷಕನಿಗೆ ದಂಡನೆ…!! ವಿನೂತನ ಪ್ರಯೋಗದಿಂದ ಮಕ್ಕಳನ್ನು ಜಾಣರನ್ನಾಗಿಸಿದ ಶಿಕ್ಷಕರೊಬ್ಬರ ಸ್ಟೋರಿ – ಮಿಸ್ ಮಾಡದೇ ನೋಡಿ
ವಿದ್ಯಾರ್ಥಿಗಳ ತಪ್ಪು ಉತ್ತರಕ್ಕೆ ಪ್ರತಿಫಲ ಶಿಕ್ಷಕನಿಗೆ ದಂಡನೆ…!! ವಿನೂತನ ಪ್ರಯೋಗದಿಂದ ಮಕ್ಕಳನ್ನು ಜಾಣರನ್ನಾಗಿಸಿದ ಶಿಕ್ಷಕರೊಬ್ಬರ ಸ್ಟೋರಿ – ಮಿಸ್ ಮಾಡದೇ ನೋಡಿ ಶಿಕ್ಷೆಯೇ ಶಿಕ್ಷಣದ ಮಾನದಂಡ ಎಂಬಂತೆ ವರ್ತಿಸುವ ಖಾಸಗಿ ಶಾಲೆಗಳ ವ್ಯಾಮೋಹಕ್ಕೆ ಮರುಳಾಗಿ, ದೂರದಿಂದಲೇ ಸರ್ಕಾರಿ ಶಾಲೆಗಳ ಕಾರ್ಯವೈಕರಿಯ ಬಗ್ಗೆ ಅಸಡ್ಡೆ ತೋರುವವರೆ ಹೆಚ್ಚು , ಇದಕ್ಕೆ ಅಪವಾದ ಎಂಬಂತೆ ಶಿವಮೊಗ್ಗ ಹೊಸನಗರ ತಾಲೂಕಿನ ಅಮೃತ ಗ್ರಾಮ ಪಂಚಾಯತಿ ವ್ಯಾಪ್ತಿಯ ಪುಟ್ಟ ಹಳ್ಳಿಯ ಹಾಲಂದೂರಿನ ಸರ್ಕಾರಿ ಶಾಲೆ ಸಾಕ್ಷಿಕರಿಸಿದೆ. ಇಲ್ಲಿನ ಶಿಕ್ಷಕ ಗೋಪಾಲ್ ಹೆಚ್. ಎಸ್….
Ripponpete | ಅಪ್ಪನಿಗೆ ಅವಮಾನಿಸಿದರು ವಿರೋಧಿಸದ ಮಕ್ಕಳು ಬೇಕಾ – ಅಯನೂರು ಮಂಜುನಾಥ್
ಅಪ್ಪನಿಗೆ ಅವಮಾನಿಸಿದರು ವಿರೋಧಿಸದ ಮಕ್ಕಳು ಬೇಕಾ – ಅಯನೂರು ರಿಪ್ಪನ್‌ಪೇಟೆ;-ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರು ಮಾತು ಮಾತಿಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಬಗ್ಗೆ ಹಗುರವಾಗಿ ಟೀಕಿಸುತ್ತಿದ್ದರೂ ಕೂಡಾ ಅದನ್ನು ಖಂಡಿಸದೇ ಇರುವ ಮಕ್ಕಳು ಬೇಕಾ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ ಹೇಳಿದರು. ರಿಪ್ಪನ್‌ಪೇಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ನಿಮ್ಮ ತಂದೆಯವರಿಗೆ ಹೀಗೆ ಯಾರಾದರೂ ಹೇಳಿದರೆ ಸುಮ್ಮನಿರುತ್ತೀರಾ ಎಂದು ಮಾಧ್ಯಮದವರನ್ನು ಕೇಳಿದ ಅವರು ಅಂತಹ ಜಾಯಾಮಾನ ನಮ್ಮದಲ್ಲ ಎಂದು ಹೇಳುತ್ತಾ ರಾಜ್ಯಾಧ್ಯಕ್ಷ…
Shivamogga | ಹಿಂದುಳಿದವರ ಮತ ವಿಭಜನೆಗಾಗಿ ಯಡಿಯೂರಪ್ಪನವರೇ ಈಶ್ವರಪ್ಪರನ್ನು ಚುನಾವಣೆಗೆ ನಿಲ್ಲಿಸುತಿದ್ದಾರೆ – ಆಯನೂರು ಮಂಜುನಾಥ್
ಹಿಂದುಳಿದವರ ಮತ ವಿಭಜನೆಗಾಗಿ ಯಡಿಯೂರಪ್ಪನವರೇ ಈಶ್ವರಪ್ಪರನ್ನು ಚುನಾವಣೆಗೆ ನಿಲ್ಲಿಸುತಿದ್ದಾರೆ – ಆಯನೂರು ಮಂಜುನಾಥ್ ಹಿಂದುಳಿದವರ ಮತ ವಿಭಜನೆ ಆದಲ್ಲಿ ಪುತ್ರ ಬಿ.ವೈ.ರಾಘವೇಂದ್ರ ಗೆಲುವು ಸುಲಭ ಎಂಬ ಕಾರಣಕ್ಕೆ ಕೆ.ಎಸ್. ಈಶ್ವರಪ್ಪ ಅವರನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯನ್ನಾಗಿ ಬಿಜೆಪಿ ಮುಖಂಡ ಬಿ.ಎಸ್. ಯಡಿಯೂರಪ್ಪ ಅವರೇ ಚುನಾವಣೆಗೆ ನಿಲ್ಲಿಸುತ್ತಿದ್ದಾರೆ’ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಆರೋಪಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಡಮ್ಮಿ’ ಎಂಬ ಕೆ.ಎಸ್. ಈಶ್ವರಪ್ಪ ಹೇಳಿಕೆಗೆ ಅವರು ಸುದ್ದಿಗೋಷ್ಠಿಯಲ್ಲಿ ತಿರುಗೇಟು ನೀಡಿದರು….