Headlines

HOSANAGARA | ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ಬಿ.ಜಿ. ಚಂದ್ರಮೌಳಿ ನೇಮಕ

ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ಬಿ.ಜಿ. ಚಂದ್ರಮೌಳಿ ಅವರನ್ನು ನೇಮಕ ಮಾಡಲಾಗಿದೆ. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ ಬರುವ ಸಾಗರ ವಿಧಾನಸಭೆ ಕ್ಷೇತ್ರದ ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ಜಿ.ಬಿ. ಚಂದ್ರಮೌಳಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ. ಜಿ.ಬಿ. ಚಂದ್ರಮೌಳಿ ಅವರು ತಕ್ಷಣ ಹೊಸನಗರ ಬ್ಲಾಕ್ ಕಾಂಗ್ರೆಸ್‌ನ ಅಧಿಕಾರ ವಹಿಸಿಕೊಂಡು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕೆಂದು ಸೂಚಿಸಲಾಗಿದೆ….

Read More

ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (17-03-2024) ವಿದ್ಯುತ್ ವ್ಯತ್ಯಯ

ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (17-03-2024) ವಿದ್ಯುತ್ ವ್ಯತ್ಯಯ ರಿಪ್ಪನ್ ಪೇಟೆ : ಪಟ್ಟಣ ಹಾಗೂ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 17/03/24 ರಂದು ಬೆಳಿಗ್ಗೆ 10-00 ರಿಂದ ಸಂಜೆ 05 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್‌ಪೇಟೆ ಪಟ್ಟಣದ ಸುತ್ತಮುತ್ತಲಿನಲ್ಲಿ ಕಾಮಗಾರಿಯಿರುವ ಹಿನ್ನಲೆಯಲ್ಲಿ ರಿಪ್ಪನ್‌ಪೇಟೆ ಪಟ್ಟಣ ,ಹೆದ್ದಾರಿಪುರ ಗ್ರಾಪಂ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ ??? ರಿಪ್ಪನ್ ಪೇಟೆ,ಹೆದ್ದಾರಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್…

Read More

HOSANAGARA | ತಾಲೂಕಿನ ಬಹು ಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಗೆ ಶಂಕುಸ್ಥಾಪನೆ

ಹೊಸನಗರ : ಸಂವಿಧಾನವು ದೇಶದ ಬೆನ್ನೆಲುಬು, ಅದನ್ನು ಅರಿಯುವುದು ನಮ್ಮೆಲ್ಲರ ಕರ್ತವ್ಯ ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿಗಳು ಸಂವಿಧಾನದ ಪೀಠಿಕೆ ಓದುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ನೈರ್ಮಲ್ಯ ಇಲಾಖೆ ಹಾಗೂ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್‌ರಾಜ್ ಇಲಾಖೆ ಇಲ್ಲಿನ ಬಸ್ ನಿಲ್ದಾಣದ ಆವರಣದಲ್ಲಿ ಶುಕ್ರವಾರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಡಿಯಲ್ಲಿ ನಡೆಯಲಿರುವ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ…

Read More

ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ – ಕೆ ಎಸ್ ಈಶ್ವರಪ್ಪ ಘೋಷಣೆ | Eshwarappa

ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ – ಕೆ ಎಸ್ ಈಶ್ವರಪ್ಪ ಘೋಷಣೆ | ಶಿವಮೊಗ್ಗ : ನೊಂದ ಬಿಜೆಪಿ ಕಾರ್ಯಕರ್ತರ ದನಿಯಾಗಿ ನಾನು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ನಾನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಮಾಜಿ ಡಿಸಿಎಂ, ಹಿರಿಯ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ಘೋಷಿಸಿದ್ದಾರೆ. ಕೆ.ಇ. ಕಾಂತೇಶ್ ಅವರಿಗೆ ಬಿಜೆಪಿಯಿಂದ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ತಪ್ಪಿದ ವಿಚಾರಕ್ಕೆ ಸಂಬಂಧಿಸಿ ಶಿವಮೊಗ್ಗ ನಗರದ ಬಂಜಾರ್ ಭವನದಲ್ಲಿ ಸ್ವಪ್ರತಿಷ್ಠೆಯ ಪ್ರದರ್ಶನವಲ್ಲ ಸ್ವಾಭಿಮಾನದ ಸಂಘರ್ಷ ಎನ್ನುವ ಘೋಷವಾಕ್ಯದಲ್ಲಿ…

Read More

ರಿಪ್ಪನ್‌ಪೇಟೆಯಲ್ಲಿ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ ಹಾಗೂ ಪೊಲೀಸರಿಂದ ಪಥಸಂಚಲನ | RAF

ರಿಪ್ಪನ್‌ಪೇಟೆಯಲ್ಲಿ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ ಹಾಗೂ ಪೊಲೀಸರಿಂದ ಪಥಸಂಚಲನ | RAF ರಿಪ್ಪನ್‌ಪೇಟೆ : ಲೋಕಸಭಾ ಚುನಾವಣೆ ಹಿನ್ನೆಲೆ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ (RAPID ACTION FORCE) ವತಿಯಿಂದ ಪಟ್ಟಣದ ನಾಲ್ಕು ರಸ್ತೆಗಳಲ್ಲಿ ಪಥ ಸಂಚಲನ (ROUTE MARCH) ನಡೆಸಲಾಯಿತು. ಆರ್.ಎ.ಎಫ್ ಸಿಬ್ಬಂದಿ ಮತ್ತು ಪೊಲೀಸ್ ಸಿಬ್ಬಂದಿಗಳು ವಿವಿಧೆಡೆ ಪಥ ಸಂಚನಲ ನಡೆಸಿದರು. ಲೋಕಸಭಾ ಚುನಾವಣೆ ಹಿನ್ನೆಲೆ ಆರ್.ಎ.ಎಫ್ ಕಂಪನಿಗಳಿಗೆ ಪಟ್ಟಣದ ಪ್ರಮುಖ ಮತ್ತು ಸೂಕ್ಷ್ಮ ಪ್ರದೇಶಗಳ ಪರಿಚಯಕ್ಕಾಗಿ (Area Familiarization) ಪಥ ಸಂಚಲನ (ROUTE MARCH)…

Read More

ಪುತ್ರನಿಗೆ ತಪ್ಪಿದ ಟಿಕೆಟ್ – ಬಿಎಸ್ವೈ ಪುತ್ರನ ವಿರುದ್ದವೇ ಸ್ಪರ್ಧಿಸುತ್ತಾರ ಕೆ ಎಸ್ ಈಶ್ವರಪ್ಪ .!!??| Parliament Election

ಪುತ್ರನಿಗೆ ತಪ್ಪಿದ ಟಿಕೆಟ್ – ಬಿಎಸ್ವೈ ಪುತ್ರನ ವಿರುದ್ದವೇ ಸ್ಪರ್ಧಿಸುತ್ತಾರ ಕೆ ಎಸ್ ಈಶ್ವರಪ್ಪ .!!?? ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಬಿಎಸ್ ವೈ ಪುತ್ರ ಹಾಲಿ ಸಂಸದ ರಾಘವೇಂದ್ರ ಸ್ಪರ್ಧಿಸುತ್ತಿರುವ ಕ್ಷೇತ್ರದಲ್ಲೇ ಈಗ ಈಶ್ವರಪ್ಪ ಸ್ಪರ್ಧೆ ಮಾಡಬೇಕೆನ್ನುವ ಅವರ ಅಭಿಮಾನಿಗಳು ಮತ್ತು ಬೆಂಬಲಿಗರು ಒತ್ತಡ ಹೇರುತ್ತಿದ್ದಾರೆ. ಈ ಮೂಲಕ ಶಿವಮೊಗ್ಗ ಲೋಕಸಭಾ ಕ್ಷೇತ್ರ ಎಲ್ಲರ ಗಮನ ಸೆಳೆಯುತ್ತಿದೆ. ಈಶ್ವರಪ್ಪ ಅವರು ಪುತ್ರನಿಗೆ ಕೈತಪ್ಪಿರುವ ಟಿಕೆಟ್ ಬಳಿಕ ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೆ ಎನ್ನುವುದು ಸದ್ಯ ರಾಜ್ಯ ರಾಜಕೀಯದಲ್ಲಿ ತೀವ್ರ…

Read More

Ripponpet | ಕೃಷಿ ಉತ್ಪನ್ನಗಳ ಮಾರಾಟಕ್ಕೆ ಸರ್ಕಾರ ಒತ್ತು ನೀಡುತ್ತಿದೆ : ಶಾಸಕ ಗೋಪಾಲಕೃಷ್ಣ ಬೇಳೂರು

ಕೃಷಿ ಉತ್ಪನ್ನಗಳ ಮಾರಾಟಕ್ಕೆ ಸರ್ಕಾರ ಒತ್ತು ನೀಡುತ್ತಿದೆ : ಶಾಸಕ ಗೋಪಾಲ ಕೃಷ್ಣ ಬೇಳೂರು  ರಿಪ್ಪನ್‌ಪೇಟೆ;-ರಾಜ್ಯದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ  ಎಪಿಎಂಸಿ ಕಾಯ್ದಿಯನ್ನು ತಿದ್ದುಪಡಿಗೊಳಿಸುವ ಮೂಲಕ ರೈತರಿಗೆ ಹೆಚ್ಚು ಉಪಯುಕ್ತವಾದ ಕೃಷಿ ಉತ್ಪನ್ನಗಳ ಮಾರಾಟಕ್ಕೆ ಒತ್ತು ನೀಡಲಾಗಿದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಪಟ್ಟಣದ ಸಾಗರ ರಸ್ತೆಯಲ್ಲಿರುವ ಎಪಿಎಂಸಿ ಮಾರುಕಟ್ಟೆಯಲ್ಲಿ  ಸುಸಜ್ಜಿತ ರಸ್ತೆ ಇನ್ನಿತರ ಮೂಲಭೂತ ಸೌಲಭ್ಯಗಳಿಗೆ ೨.೫೦ ಕೋಟಿ ವೆಚ್ಚದ ಅಭಿವೃಧ್ಧಿ ಕಾಮಗಾರಿಗೆ …

Read More

ರಿಪ್ಪನ್‌ಪೇಟೆಯಲ್ಲಿ ಭಾರತ್ ಬ್ರ್ಯಾಂಡ್ ಅಕ್ಕಿ ವಿತರಣೆ – ಅಕ್ಕಿ ಖರೀದಿಗೆ ಮುಗಿಬಿದ್ದ ಜನತೆ | Bharth Brand

ರಿಪ್ಪನ್‌ಪೇಟೆಯಲ್ಲಿ ಭಾರತ್ ಬ್ರ್ಯಾಂಡ್ ಅಕ್ಕಿ ವಿತರಣೆ – ಅಕ್ಕಿ ಖರೀದಿಗೆ ಮುಗಿಬಿದ್ದ ಜನತೆ | Bharth Brand ರಿಪ್ಪನ್‌ಪೇಟೆ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮುಂದಿನ ದಿನಗಳಲ್ಲಿ ಜನರಿಗೆ ಭಾರತ್ ಬ್ರಾೃಂಡ್ ಅಕ್ಕಿ ಜೊತೆಗೆ ಬೇಳೆಕಾಳನ್ನು ಕೂಡ ವಿತರಿಸಲಿದ್ದಾರೆ ಎಂದು ಗ್ರಾಪಂ ಉಪಾಧ್ಯಕ್ಷ ಹಾಗೂ ತಾಲೂಕ್ ಬಿಜೆಪಿ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿ ಸುಧೀಂದ್ರ ಪೂಜಾರಿ ಹೇಳಿದರು. ಪಟ್ಟಣದ ಸಿದ್ದಿವಿನಾಯಕ ದೇವಸ್ಥಾನದ ಹಿಂಭಾಗದಲ್ಲಿ ಭಾರತ್ ಬ್ರಾೃಂಡ್ ಅಕ್ಕಿ ವಿತರಣ ಕಾರ್ಯಕ್ರಮದ ಹಿನ್ನಲೆಯಲ್ಲಿ ಪೋಸ್ಟ್ ಮ್ಯಾನ್…

Read More

ಜಿಲ್ಲಾ ಆರೋಗ್ಯ ಅಧಿಕಾರಿ(DHO) ರಾಜೇಶ್ ಸುರಗಿಹಳ್ಳಿ ವರ್ಗಾವಣೆ

ಜಿಲ್ಲಾ ಆರೋಗ್ಯ ಅಧಿಕಾರಿ(DHO) ರಾಜೇಶ್ ಸುರಗಿಹಳ್ಳಿ ವರ್ಗಾವಣೆ ಶಿವಮೊಗ್ಗ: ಕಳೆದ ಆರು ವರ್ಷಗಳಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಲ್ಯಾಣ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಡಾಕ್ಟರ್ ರಾಜೇಶ್ ಸುರ್ಗಿಹಳ್ಳಿ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಅವರ ಸ್ಥಾನಕ್ಕೆ ತೀರ್ಥಹಳ್ಳಿ ತಾಲೂಕ್ ಕಲ್ಯಾಣ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಡಾ. ನಟರಾಜ್ ಕೆಎನ್ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯಾಗಿ ಯಶಸ್ವಿಯಾಗಿ…

Read More

ಮಾರ್ಚ್ 17ಕ್ಕೆ ಶಿವಮೊಗ್ಗಕ್ಕೆ ಬರಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ

ಮಾರ್ಚ್ 17ಕ್ಕೆ ಶಿವಮೊಗ್ಗಕ್ಕೆ ಬರಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗ ಲೋಕಸಭೆ ಚುನಾವಣೆಯ ಕಣ ಕುತೂಹಲಕ್ಕೆ ಕಾರಣವಾಗಿದೆ. ಚುನಾವಣಾ ಕಾವನ್ನು ಮತ್ತಷ್ಟು ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ವಾರಾಂತ್ಯದಲ್ಲಿ ಆಗಮಿಸಲಿದ್ದಾರೆ. ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ ತವರು ಜಿಲ್ಲೆಯಲ್ಲಿ ಬೃಹತ್ ಸಮಾವೇಶ ನಡೆಯಲಿದೆ.ಮಾರ್ಚ್‌ 15ರಿಂದ ಮೂರು ದಿನಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದಲ್ಲಿ ಚುನಾವಣಾ ಪ್ರಚಾರವನ್ನು ನಡೆಸಲಿದ್ದಾರೆ. ಮಾರ್ಚ್ 17ರ ಭಾನುವಾರ ಮೋದಿ ಯಡಿಯೂರಪ್ಪ ತವರು ಜಿಲ್ಲೆಯಲ್ಲಿ ಪ್ರಚಾರ ನಡೆಸಿ ಮತಯಾಚನೆ ಮಾಡಲಿದ್ದಾರೆ….

Read More