ಜಿಲ್ಲಾ ಸುದ್ದಿ:
Shivamogga | ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ವರ್ಗಾವಣೆ ,ನೂತನ ಜಿಲ್ಲಾಧಿಕಾರಿ ಯಾರು ಗೊತ್ತಾ.? ಈ ಸುದ್ದಿ ನೋಡಿ
ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ವರ್ಗಾವಣೆ ,ನೂತನ ಜಿಲ್ಲಾಧಿಕಾರಿ ಯಾರು ಗೊತ್ತಾ.? ಈ ಸುದ್ದಿ ನೋಡಿ ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಱ್ ನೂತನ ಜಿಲ್ಲಾಧಿಕಾರಿಯಾಗಿ ಗುರುದತ್ತ ಹೆಗಡೆ ಅವರನ್ನು ನೇಮಿಸಲಾಗಿದೆ. ಡಾ.ಸೆಲ್ವಮಣಿ ಅವರನ್ನು ಬೆಂಗಳೂರಿನ ಸೆಂಟರ್ ಫಾರ್ ಇ ಗವರ್‌ನೆನ್ಸ್‌ನ ಸಿಇಒ ಆಗಿ ನೇಮಿಸಲಾಗಿದೆ. 2022ರ ಜನವರಿಯಲ್ಲಿ ಶಿವಮೊಗ್ಗದ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಪ್ರಸ್ತುತ ಧಾರವಾಡ ಜಿಲ್ಲಾಧಿಕಾರಿಯಾಗಿರುವ ಗುರುದತ್ತ ಹೆಗಡೆ ಅವರನ್ನು ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ವರ್ಗಾಯಿಸಲಾಗಿದೆ. 2014ರ ಬ್ಯಾಚ್‌ನ…
Ripponpete | ಚತುಷ್ಪಥ ರಸೆ ಕಾಮಗಾರಿ ಹಣವಿಲ್ಲದೇ ಕುಂಠಿತವಾಗಿತ್ತು – ವಿಶೇಷ ಆಸಕ್ತಿಯಿಂದ ಸರ್ಕಾರದಿಂದ ಹಣ ಬಿಡುಗಡೆಗೊಳಿಸಿ ಕಾಮಗಾರಿ ಶೀಘ್ರ ಮುಗಿಸುವಂತೆ ಸೂಚಿಸಿದ್ದೇನೆ – ಶಾಸಕ ಬೇಳೂರು
ಚತುಷ್ಪಥ ರಸೆ ಕಾಮಗಾರಿ ಹಣವಿಲ್ಲದೇ ಕುಂಠಿತವಾಗಿತ್ತು – ವಿಶೇಷ ಆಸಕ್ತಿಯಿಂದ ಸರ್ಕಾರದಿಂದ ಹಣ ಬಿಡುಗಡೆಗೊಳಿಸಿ ಕಾಮಗಾರಿ ಶೀಘ್ರ ಮುಗಿಸುವಂತೆ ಸೂಚಿಸಿದ್ದೇನೆ – ಶಾಸಕ ಬೇಳೂರು ಸುಮಾರು 5.50 ಕೋಟಿ ರೂ. ವೆಚ್ಚದಲ್ಲಿ ರಿಪ್ಪನ್‌ಪೇಟೆಯ ಸಾಗರ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಯನ್ನು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಮತ್ತು ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ವೀಕ್ಷಿಸಿದರು. ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ ಪಟ್ಟಣದ ನಾಗರೀಕರ ಬಹುದಿನಗಳ ಬೇಡಿಕೆಯ ಚತುಷ್ಫಥ ರಸ್ತೆ…
Ripponpete| “ಕಡುಬಡವರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು “: ಶಾಸಕ ಗೋಪಾಲಕೃಷ್ಣ ಬೇಳೂರು
“ಕಡುಬಡವರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು “: ಶಾಸಕ ಗೋಪಾಲಕೃಷ್ಣ ಬೇಳೂರು ರಿಪ್ಪನ್‌ಪೇಟೆ;-ಕೂಲಿ ಕಾರ್ಮಿಕರ ಮತ್ತು ಕಡುಬಡವರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು,ಉನ್ನತ ವ್ಯಾಸಂಗಮಾಡಲು ಉತ್ತಮ ಅವಕಾಶಗಳಿವೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಶನಿವಾರ ಪಟ್ಟಣದಸರ್ಕಾರಿ ಪದವಿ ಪೂರ್ವ ಕಾಲೇಜ್‌ನ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು ಹಿಂದೆ ಶ್ರೀಮಂತರ ಮಕ್ಕಳಿಗೆ ಮಾತ್ರ ಉನ್ನತ ಶಿಕ್ಷಣ ಪಡೆಯುತ್ತಿದ್ದರು ಅದರೆ ಕೂಲಿಕಾರ್ಮಿಕರ ಮಕ್ಕಳು ಇದರಿಂದ ವಂಚಿತರಾಗುವ ಕಾಲವೊಂದು ಇತ್ತು ಈಗಿನ ಸರ್ಕಾರಗಳು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ…
Ripponpete | ಸರ್ಕಾರಿ ಶಾಲೆಗಳಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘ ರಚಿಸಿ ಆ ಮೂಲಕ ಶಾಲೆಗಳ ಶ್ರೇಯೋಭಿವೃದ್ದಿಗೆ ಶ್ರಮಿಸಬೇಕು – ಪಿಎಸ್‌ಐ ಪ್ರವೀಣ್ ಎಸ್ ಪಿ
ರಿಪ್ಪನ್‌ಪೇಟೆ : ಸರ್ಕಾರಿ ಕನ್ನಡ ಶಾಲೆಗಳಲ್ಲಿ ಹಳೆ ವಿದ್ಯಾರ್ಥಿಗಳ ಸಂಘವನ್ನು ರಚಿಸಿ ಆ ಮೂಲಕ ಶಾಲೆಗಳ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕು ಎಂದು ರಿಪ್ಪನ್ ಪೇಟೆ ಪಿಎಸ್ಐ ಪ್ರವೀಣ್ ಎಸ್ ಪಿ ಕರೆ ನೀಡಿದರು. ರಿಪ್ಪನ್‌ಪೇಟೆ ಪಟ್ಟಣದ ಹಳೇ ಸಂತೆ ಮಾರುಕಟ್ಟೆ ರಸ್ತೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಸ್ಟ್ ಮ್ಯಾನ್ ಸುದ್ದಿ ಬಳಗ ಆಯೋಜಿಸಿದ್ದ “ಸರ್ಕಾರಿ ಶಾಲೆ ಅಭಿಮಾನ – ಸುಣ್ಣ ಬಣ್ಣ ಅಭಿಯಾನ” ಕ್ಕೆ ಚಾಲನೆ ನೀಡಿ, ಶ್ರಮದಾನ ನೆರವೇರಿಸಿ ಮಾತನಾಡಿದ ಅವರು ಸರ್ಕಾರಿ ಶಾಲೆಗಳಲ್ಲಿ ಮೂಲ…
Hombuja | ಧರ್ಮಸಾಮರಸ್ಯ, ಸ್ವಾವಲಂಬನೆ, ಕರ್ತವ್ಯ ತತ್ಫರತೆಯಿಂದ ಭಾರತ ರಾಷ್ಟ್ರದ ಔನತ್ಯ ಶತಃಸಿದ್ಧ | ಹೊಂಬುಜ ಶ್ರೀಗಳು
ಧರ್ಮಸಾಮರಸ್ಯ, ಸ್ವಾವಲಂಬನೆ, ಕರ್ತವ್ಯ ತತ್ಫರತೆಯಿಂದ ಭಾರತ ರಾಷ್ಟ್ರದ ಔನತ್ಯ ಶತಃಸಿದ್ಧ | ಹೊಂಬುಜ ಶ್ರೀಗಳು ಪ್ರತಿಯೋರ್ವರೂ ಭಾರತದ ಸಂವಿಧಾನದ ಪರಿವ್ಯಾಪ್ತಿಯಲ್ಲಿ ರಾಷ್ಟ್ರದ ಭಾವೈಕ್ಯತೆ, ಸಮಗ್ರತೆಯನ್ನು ಗೌರವಯುತವಾಗಿ ಸಂರಕ್ಷಿಸಬೇಕು. ಪ್ರಜಾಪ್ರಭುತ್ವವು ರಾಷ್ಟ್ರದ ಆಡಳಿತ ನಿರ್ವಹಣೆಗೆ ಮಾತ್ರ ಸೀಮಿತವಾಗಿರದೇ ಧರ್ಮ ಸಹಿಷ್ಣುತೆ, ಅಹಿಂಸಾತ್ಮಕ ಜೀವನ ಮೌಲ್ಯಗಳನ್ನು ರೂಢಿಸಿಕೊಳ್ಳಲು ದಾರಿದೀಪವಾಗಿದೆ ಎಂದು ಹೊಂಬುಜ ಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರು ಶುಭ ಸಂದೇಶ ನೀಡಿದರು. ದೇಶದ ಸಮಗ್ರತೆ, ಸಶಕ್ತ ಭಾರತೀಯರೆಲ್ಲರ ಆರೋಗ್ಯದಾಯಕ ಸಾಮಾಜಿಕ,…
ರಿಪ್ಪನ್‌ಪೇಟೆಯ ವಿವಿಧೆಡೆ 75ನೇ ಗಣರಾಜ್ಯೋತ್ಸವ ಸಂಭ್ರಮ
ರಿಪ್ಪನ್‌ಪೇಟೆ : 75ನೇ ಗಣರಾಜ್ಯೋತ್ಸವ ಕಾರ್ಯಕ್ರಮವು ರಿಪ್ಪನ್‌ಪೇಟೆಯ ವಿವಿಧೆಡೆಯಲ್ಲಿ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಜರುಗಿತು. ಗ್ರಾಮ ಪಂಚಾಯ್ತಿ ಕಛೇರಿಯಲ್ಲಿ ಗ್ರಾಮಾಧ್ಯಕ್ಷೆ ಧನಲಕ್ಷ್ಮಿ ಧ್ವಜಾರೋಹಣ ನೆರವೇರಿಸಿ ಧ್ವಜ ವಂದನೆ ಸ್ವಿಕರಿಸಿದರು. ಪೊಲೀಸ್ ಠಾಣೆಯಲ್ಲಿ ಪಿ.ಎಸ್.ಐ ಪ್ರವೀಣ್‌ಕುಮಾರ್ ಎಸ್.ಪಿ, ನಾಡಕಛೇರಿಯಲ್ಲಿ ಉಪತಹಶೀಲ್ದಾರ್ ಹುಚ್ಚರಾಯಪ್ಪ, ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಗಳು, ಕೆನರಾ ಬ್ಯಾಂಕ್‌ನಲ್ಲಿ ಬ್ಯಾಂಕ್ ವ್ಯವಸ್ಥಾಪಕ ದೇವರಾಜ್, ಜುಮ್ಮಾ ಮಸೀದಿಯಲ್ಲಿ ಧರ್ಮಗುರುಗಳು, ಕೃಷಿ ಇಲಾಖೆಯಲ್ಲಿ ಸಹಾಯಕ ಕೃಷಿ ಅಧಿಕಾರಿಗಳು, ಬಿ.ಸಿ.ಎಂ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಧನಲಕ್ಷ್ಮಿ,…
Ripponpete | ಸರ್ಕಾರಿ ಶಾಲೆಯ ಜೀರ್ಣೋದ್ಧಾರಕ್ಕಾಗಿ ಸಮವಸ್ತ್ರ ಕಳಚಿ ಶ್ರಮದಾನಕ್ಕೆ ಮುಂದಾದ ಪೊಲೀಸರು
Ripponpete | ಸರ್ಕಾರಿ ಶಾಲೆಯ ಜೀರ್ಣೋದ್ಧಾರಕ್ಕಾಗಿ ಸಮವಸ್ತ್ರ ಕಳಚಿ ಶ್ರಮದಾನಕ್ಕೆ ಮುಂದಾದ ಪೊಲೀಸರು ರಿಪ್ಪನ್‌ಪೇಟೆ : ಪಟ್ಟಣದ ಬರುವೆ ಸರ್ಕಾರಿ ಶಾಲಾ ಆವರಣದಲ್ಲಿ ಇಂದು ನಡೆದ ಸುಣ್ಣಬಣ್ಣ ಅಭಿಯಾನವು ಐತಿಹಾಸಿಕ ಘಟನೆಗಳಿಗೆ ಸಾಕ್ಷಿಯಾಗಿದೆ. ಹೌದು… ಕಾನೂನು ಸುವ್ಯವಸ್ಥೆಗಾಗಿ ಹಗಲಿರುಳು ಶ್ರಮಿಸುತ್ತಿರುವ ಪಟ್ಟಣದ ಪೊಲೀಸ್ ಸಿಬ್ಬಂದಿಗಳು ಇಂದು ಬೆಳಿಗ್ಗೆ ಠಾಣೆಯಲ್ಲಿ ಗಣರಾಜ್ಯೋತ್ಸವ ನಿಮಿತ್ತ ಧ್ವಜಾರೋಹಣ ನೆರವೇರಿಸಿ ಸಮವಸ್ತ್ರ ಕಳಚಿಟ್ಟು ಏಳು ದಶಕಗಳ ಇತಿಹಾಸವಿರುವ ಸರ್ಕಾರಿ ಶಾಲೆಯ ಪುನರ್ ನವೀಕರಣಕ್ಕಾಗಿ ಶ್ರಮದಾನ ಮಾಡುವ ಮೂಲಕ ಸಾರ್ವಜನಿಕರ ಪ್ರಶಂಸೆಗೆ ಭಾಜನರಾಗಿದ್ದಾರೆ. ಪಟ್ಟಣದ…
ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಆದೇಶ –
ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಆದೇಶ – 32 ಜನರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ರವರಿಗೆ ಅರಣ್ಯ ಮತ್ತು ಕೈಗಾರಿಕೆ ಮಂಡಳಿ ಅಧ್ಯಕ್ಷ ಸ್ಥಾನ ದೊರಕಿದೆ. ಗಣರಾಜ್ಯೋತ್ಸವದ ದಿನದಂದೇ ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ಪಟ್ಟಿ ಪ್ರಕಟವಾಗಿದೆ. ಯಾವೆಲ್ಲ ಶಾಸಕರಿಗೆ ಸ್ಥಾನ ಸಿಕ್ಕಿದೆ ಇಲ್ಲಿದೆ ಮಾಹಿತಿ ಬೇಳೂರು ಗೋಪಾಲಕೃಷ್ಣ…
Thirthahalli | ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷವನ್ನು ತ್ಯಜಿಸಿ ಬಿಜೆಪಿಗೆ ಬಂದಿರುವುದು ಸ್ವಾಗತಾರ್ಹ- ಆರಗ ಜ್ಞಾನೇಂದ್ರ
ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷವನ್ನು ತ್ಯಜಿಸಿ ಬಿಜೆಪಿಗೆ ಬಂದಿರುವುದು ಸ್ವಾಗತರ್ಹ – ಆರಗ ಜ್ಞಾನೇಂದ್ರ ತೀರ್ಥಹಳ್ಳಿ : ಕಾಂಗ್ರೆಸ್ ಪಕ್ಷವನ್ನು ತ್ಯಜಿಸಿ ಬಿಜೆಪಿಗೆ ಬಂದಿರುವುದನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತ ಮಾಡುತ್ತೇನೆ. ಜಗದೀಶ್ ಶೆಟ್ಟರ್ ಎಂಬುವವರು ಕಾಂಗ್ರೆಸ್ ಸಂಸ್ಕೃತಿಯನ್ನು ಹೊಂದಾಣಿಕೆ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ, ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ಗುರುವಾರ ಪಟ್ಟಣದಲ್ಲಿ ಮಾತನಾಡಿ ಜಗದೀಶ್ ಶೆಟ್ಟರ್ ಹುಟ್ಟಿನಿಂದ ಬಿಜೆಪಿ ಹಾಗೂ ಆರ್ ಎಸ್ ಎಸ್ ನಲ್ಲಿ ಬೆಳೆದು ಬಂದವರು, ಎಲ್ಲಾ ಸ್ಥಾನಮಾನಗಳು ಗೌರವಗಳು ಅವರಿಗೆ…
Hosanagara | ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಕಾರ್ಯಾಂಗದ ಪಾತ್ರ ಹಿರಿದು : ಶಾಸಕ ಬೇಳೂರು ಗೋಪಾಲಕೃಷ್ಣ
ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಕಾರ್ಯಾಂಗದ ಪಾತ್ರ ಹಿರಿದು : ಶಾಸಕ ಬೇಳೂರು ಗೋಪಾಲಕೃಷ್ಣ ಹೊಸನಗರ : ಸರ್ಕಾರಿ ಯೋಜನೆಗಳನ್ನು ಜಾರಿ ಮಾಡಿ ಯಶಸ್ವಿಗೊಳಿಸುವ ಹೊಣೆಗಾರಿಕೆ ಇಲಾಖಾ ನೌಕರರ ಮೇಲಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಅವರು ಇಲ್ಲಿನ ಈಡಿಗರ ಭವನದಲ್ಲಿ ಏರ್ಪಡಿಸಿದ್ದ ರಾಜ್ಯ ಸರ್ಕಾರಿ ನೌಕರರ ತಾಲೂಕು ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿ, ನನ್ನ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ಸಮಸ್ಯೆಗಳಿಗೆ ಸ್ಪಂದಿಸಲು ನಾನು ಸಿದ್ದನಿದ್ದೇನೆ. ಅವರ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ನಡೆಸುತ್ತೇನೆ….