ಜಿಲ್ಲಾ ಸುದ್ದಿ:
Thirthahalli | ರಾಷ್ಟ್ರಕವಿ ಕುವೆಂಪು ಓದಿದ ಶಾಲೆಗೆ ಭೇಟಿ ನೀಡಿದ ಶಿಕ್ಷಣ ಸಚಿವ ಮಧುಬಂಗಾರಪ್ಪ
ರಾಷ್ಟ್ರಕವಿ ಕುವೆಂಪು ಓದಿದ ಶಾಲೆಗೆ ಭೇಟಿ ನೀಡಿದ ಶಿಕ್ಷಣ ಸಚಿವ ಮಧುಬಂಗಾರಪ್ಪ ತೀರ್ಥಹಳ್ಳಿಯಲ್ಲಿರುವ ರಾಷ್ಟ್ರ ಕವಿ ಕುವೆಂಪು(kuvempu) ಅವರು ಓದಿದ ಶಾಲೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿದರು. ತೀರ್ಥಹಳ್ಳಿ(Thirthahalli) ಪಟ್ಟಣದ ಗೋಪಾಲಗೌಡ ರಂಗಮಂದಿರದಲ್ಲಿ ಜಿಲ್ಲಾಡಳಿತ, ತಾಲೂಕು ಆಡಳಿತ ಹಾಗೂ ವಿವಿಧ ಇಲಾಖೆಗಳ ಆಶ್ರಯದಲ್ಲಿ ರಾಜ್ಯ ಸರಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶಕ್ಕೂ ಮುನ್ನ ಶಾಲೆಗೆ ಭೇಟಿ ನೀಡಿದರು. ಶಾಲೆಗೆ ಭೇಟಿ ನೀಡುತ್ತಿದ್ದಂತೆ ಶಾಲಾ ಮಕ್ಕಳು ಸಚಿವ ಮಧುಬಂಗಾರಪ್ಪರನ್ನು ಗುಲಾಬಿ ಹೂವು ನೀಡುವುದರ ಮೂಲಕ…
ಫೆ. 16 ರಂದು ಕವಲೇದುರ್ಗ ಮಠದಲ್ಲಿ ಶ್ರೀಮರುಳಸಿದ್ದೇಶ್ವರ ಶಿವಯೋಗ ಮಂದಿರ ಲೋಕಾರ್ಪಣೆ ಮತ್ತು ಧರ್ಮ ಸಮಾರಂಭ
ಫೆ. 16 ರಂದು ಕವಲೇದುರ್ಗ ಮಠದಲ್ಲಿ ಶ್ರೀಮರುಳಸಿದ್ದೇಶ್ವರ ಶಿವಯೋಗ ಮಂದಿರ ಲೋಕಾರ್ಪಣೆ ಮತ್ತು ಧರ್ಮ ಸಮಾರಂಭ ತೀರ್ಥಹಳ್ಳಿ ತಾಲ್ಲೂಕಿನ ಕವಲೇದುರ್ಗ ಕೆಳದಿ ರಾಜಗುರು ಮಹಾಮಹತ್ತಿನ ಭವನಗಿರಿ ಸಂಸ್ಥಾನ ಮಠದಲ್ಲಿ ನೂತನವಾಗಿ ಶ್ರೀವೀರಭದ್ರಸ್ವಾಮಿ ಮತ್ತು ದುರ್ಗಾಂಬಿಕಾ ಅಷ್ಟಬಂಧ ಪ್ರಾಣ ಪ್ರತಿಷ್ಟೆ ಹಾಗೂ ಶ್ರೀ ಮರುಳಸಿದ್ದೇಶ್ವರ ಶಿವಯೋಗ ಮಂದಿರದ ಲೋಕಾರ್ಪಣೆ ಮತ್ತು ಬ್ರಹ್ಮಕಲಶಾರೋಹಣ ಧರ್ಮ ಸಮಾರಂಭವು ಫೆಬ್ರವರಿ 16 ರಂದು ಶುಕ್ರವಾರ ಬೆಳಗ್ಗೆ 9 ಗಂಟೆಗೆ ಶ್ರೀಮದ್ ಉಜ್ಜಯನಿ ಸದ್ಧರ್ಮ ಸಿಂಹಾಸನಾಧೀಶ್ವರ ಶ್ರೀ 1008 ಜಗದ್ಗುರು ಸಿದ್ದಲಿಂಗರಾಜ ದೇಶಿಕೇಂದ್ರ ಶಿವಾಚಾರ್ಯ…
ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (11-02-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…
ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (11-02-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣ ಹಾಗೂ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 11/02/24(ಭಾನುವಾರ) ರಂದು ಬೆಳಿಗ್ಗೆ 09-00 ರಿಂದ ಸಂಜೆ 06 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್‌ಪೇಟೆ ಪಟ್ಟಣದ ಸಾಗರ ರಸ್ತೆಯಲ್ಲಿ ರಸ್ತೆ ಅಗಲಿಕರಣವಾಗುತ್ತಿರುವ ಹಿನ್ನಲೆಯಲ್ಲಿ ಲೈಟ್ ಕಂಬಗಳನ್ನು ಶಿಫ್ಟ್ ಮಾಡುವ ಕಾಮಗಾರಿಯಿರುವ ಹಿನ್ನಲೆಯಲ್ಲಿ ರಿಪ್ಪನ್‌ಪೇಟೆ ಪಟ್ಟಣ ,ಹೆದ್ದಾರಿಪುರ ,ಜಂಬಳ್ಳಿ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು…
Ripponpete | ಉರಗ ತಜ್ಞ ಸ್ನೇಕ್ ಕಿರಣ್ ಕಳೆದುಕೊಂಡಿದ್ದ ಮೊಬೈಲ್ ನ್ನು ಹಿಂದಿರುಗಿಸಿದ ರಿಪ್ಪನ್‌ಪೇಟೆಯ ಯುವಕ
Ripponpete | ಉರಗ ತಜ್ಞ ಸ್ನೇಕ್ ಕಿರಣ್ ಕಳೆದುಕೊಂಡಿದ್ದ ಮೊಬೈಲ್ ನ್ನು ಹಿಂದಿರುಗಿಸಿದ ಯುವಕ ರಿಪ್ಪನ್‌ಪೇಟೆ : ಜಿಲ್ಲೆಯ ಪ್ರಸಿದ್ದ ಉರಗ ತಜ್ಞ ಸ್ನೇಕ್ ಕಿರಣ್ ರವರು ಕಳೆದುಕೊಂಡಿದ್ದ ಮೊಬೈಲ್ ನ್ನು ಪಟ್ಟಣದ ತನ್ವಿ ಮೊಬೈಲ್ ಶಾಪ್ ನ ಮಾಲೀಕರು ಹಿಂದಿರುಗಿಸಿದ್ದಾರೆ. ಶಿವಮೊಗ್ಗದಲ್ಲಿ ಸೈಬರ್ ಪೊಲೀಸ್ ಠಾಣೆಯ ಅಧಿಕಾರಿಗಳ ಸಮ್ಮುಖದಲ್ಲಿ ಮೊಬೈಲ್ ಶಾಪ್ ಮಾಲೀಕ ತನ್ನು ಅರಸಾಳು ಸ್ನೇಕ್ ಕಿರಣ್ ರವರಿಗೆ ಮೊಬೈಲ್ ನ್ನು ಹಿಂದಿರುಗಿಸಿದ್ದಾರೆ. ಕೆಲವು ದಿನಗಳ ಹಿಂದೆ ಪಟ್ಟಣದ ತನ್ವಿ ಮೊಬೈಲ್ ಶಾಪ್ ಗೆ…
287 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸನಗರಕ್ಕೆ – ಚಕ್ರಾನಗರದಿಂದ ಕುಡಿಯುವ ನೀರು ಯೋಜನೆ ಕಾರ್ಯರೂಪಕ್ಕೆ
287 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸನಗರಕ್ಕೆ – ಚಕ್ರಾನಗರದಿಂದ ಕುಡಿಯುವ ನೀರು ಯೋಜನೆ ಕಾರ್ಯರೂಪಕ್ಕೆ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಶಾಸಕ ಬೇ ಳೂರು ಗೋಪಾಲಕೃಷ್ಣ ಘೋಷಣೆ ಹೊಸನಗರ : ಮುಂದಿನ ವರ್ಷದಿಂದ 287 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸನಗರಕ್ಕೆ – ಚಕ್ರಾನಗರದಿಂದ ಕುಡಿಯುವ ನೀರು ತರುವ ಯೋಜನೆ ಕಾರ್ಯರೂಪಕ್ಕೆ ಬರಲಿದೆ ಎಂದು ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಮಂಡಳಿಯ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಈಡಿಗರ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ…
ಚಕ್ರವರ್ತಿ ಸೂಲಿಬೆಲೆಗೆ ಮತ್ತೊಂದು ಸಂಕಷ್ಟ! ಶಿವಮೊಗ್ಗದಲ್ಲಿ FIR ದಾಖಲು, ಕಾರಣವೇನು?
ಶಿವಮೊಗ್ಗದ (Shivamogga) ನಗರದ ಜಯನಗರ ಪೊಲೀಸ್ ಠಾಣೆಯಲ್ಲಿ ವಾಗ್ಮಿ ಚಕ್ರವರ್ತಿ ಸೂಲಿಬೆಲೆ (Chakravarti Sulibele) ವಿರುದ್ಧ ಎಫ್ ಐ ಆರ್ ದಾಖಲು ಮಾಡಲಾಗಿದೆ. SSLC ಪೂರಕ ಪರೀಕ್ಷೆ ವಿಚಾರವಾಗಿ ಚಕ್ರವರ್ತಿ ಸೂಲಿಬೆಲೆ ಸಾಮಾಜಿಕ ಜಾಲ ತಾಣಗಳಲ್ಲಿ (Social Media) ಹಾಕಿದ ಪೋಸ್ಟ್ ವಿಚಾರವಾಗಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಸದಸ್ಯರು ನೀಡಿದ ದೂರಿನ ಮೇರೆಗೆ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧ ಐಪಿಸಿ 1860 ರ 505/1ಬಿ 505/1ಸಿ 505/2 ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ….
ಕೃಷಿ ಉತ್ಪಾದನೆಯ ಮೇಲೆ ಹವಾಮಾನ ಬದಲಾವಣೆಯ ಪ್ರಭಾವ -ಇರುವಕ್ಕಿ ಕೃಷಿ ವಿವಿ ವಿದ್ಯಾರ್ಥಿಗಳಿಂದ ಗುಂಪು ಚರ್ಚೆ | Iruvakki
ಕೃಷಿ ಉತ್ಪಾದನೆಯ ಮೇಲೆ ಹವಾಮಾನ ಬದಲಾವಣೆಯ ಪ್ರಭಾವ -ಇರುವಕ್ಕಿ ಕೃಷಿ ವಿವಿ ವಿದ್ಯಾರ್ಥಿಗಳಿಂದ ಗುಂಪು ಚರ್ಚೆ ಕೋಡೂರು : ಅತಿಯಾದ ಮಳೆ , ಮಳೆ ಕೊರತೆ, ಅಕಾಲಿಕ ಮಳೆ, ಪ್ರವಾಹ ಮತ್ತು ಬರಗಾಲ ಮುಂತಾದ ಹವಾಮಾನ ಬದಲಾವಣೆಗಳು ಇತ್ತೀಚಿನ ದಿನಮಾನಗಳಲ್ಲಿ ಸರ್ವೇಸಾಮಾನ್ಯವಾಗಿದ್ದು , ಕೃಷಿ ಕ್ಷೇತ್ರದ ಮೇಲೆ ವಿಪರೀತ ಪರಿಣಾಮ ಬೀರಿದೆ. ಈ ಬದಲಾವಣೆಯಿಂದಾಗಿ ಭೂಮಿಯು ತನ್ನ ಸಮತೋಲನವನ್ನು ಕಳೆದುಕೊಂಡು, ಕೃಷಿ ಉತ್ಪಾದನೆಯು ಕುಂಠಿತಗೊಂಡಿದೆ ಎಂದು ಗುಂಪು ಚರ್ಚೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತಿ. ಕೆಳದಿ ಶಿವಪ್ಪ ನಾಯಕ ಕೃಷಿ…
BJP ರಾಜ್ಯಾಧ್ಯಕ್ಷ ವಿಜಯೇಂದ್ರ ಮನೆಗೆ ಮುತ್ತಿಗೆ ಯತ್ನ. NSUI ಕಾರ್ಯಕರ್ತರ ಬಂಧನ
BJP ರಾಜ್ಯಾಧ್ಯಕ್ಷ ವಿಜಯೇಂದ್ರ ಮನೆಗೆ ಮುತ್ತಿಗೆ ಯತ್ನ – NSUI ಕಾರ್ಯಕರ್ತರ ಬಂಧನ ಶಿವಮೊಗ್ಗ – ತೆರಿಗೆ ಹಂಚಿಕೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಮಲತಾಯಿ ಧೋರಣೆ ಖಂಡಿಸಿ ಎನ್‌ಎಸ್ ಯೂ ಐ ಕಾರ್ಯಕರ್ತರಿಂದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ. ತೆರಿಗೆ ಹಂಚಿಕೆಯಲ್ಲಿ ಕೇಂದ್ರ ರಾಜ್ಯಕ್ಕೆ ಮಾಡಿರುವ ಮಲತಾಯಿ ಧೋರಣೆಯನ್ನು ಖಂಡಿಸಿ ಶಿವಮೊಗ್ಗದಲ್ಲಿ ಎನ್‌ಎಸ್ ಯೂಐ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು ಈ ವೇಳೆ ಶಿವಮೊಗ್ಗದ ಬೈಪಾಸ್ ರಸ್ತೆಯಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮನೆಗೆ…
Ripponpete | ಕೆಂಚನಾಲ ಮಾರಿಕಾಂಬಾ ಜಾತ್ರೆಗೆ ಹರಿದು ಬಂದ ಭಕ್ತಸಾಗರ
Ripponpete | ಕೆಂಚನಾಲ ಮಾರಿಕಾಂಬಾ ಜಾತ್ರೆಗೆ ಹರಿದು ಬಂದ ಭಕ್ತಸಾಗರ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ ಬೇಸಿಗೆ ಜಾತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ರಾಜ್ಯದ ಹಲವೆಡೆಯಿಂದ, ನೆರೆ ರಾಜ್ಯ ಹಾಗೂ ಜಿಲ್ಲೆಯ ವಿವಿಧಡೆಯಿಂದ ಆಗಮಿಸಿ ದೇವಿಯ ದರ್ಶನ ಪಡೆದರು. ಭಕ್ತಾಧಿಗಳು ಬೆಳಿಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು. ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ ಇತಿಹಾಸ-ಪುರಾಣ ಪ್ರಸಿದ್ಧ ಜಾತ್ರೆ ಆಗಿದೆ. ನೂರಾರು ವರ್ಷಗಳ ಇತಿಹಾಸವಿರುವ ಈ…
ಗ್ರಾಮ ಒನ್ ಕೇಂದ್ರ ತೆರೆಯಲು ಅರ್ಜಿ ಆಹ್ವಾನ -Grama One
ಗ್ರಾಮ ಒನ್ ಕೇಂದ್ರ’ ತೆರೆಯಲು ಅರ್ಜಿ ಆಹ್ವಾನ ಶಿವಮೊಗ್ಗ ಜಿಲ್ಲೆಯಲ್ಲಿ ಗ್ರಾಮ ಒನ್ ಕೇಂದ್ರಗಳಿಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸೇವೆ ನೀಡಲು ಆಸಕ್ತಿ ಇರುವ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮ ಒನ್ ಯೋಜನೆ ಸರ್ಕಾರದ ಮಹತ್ವಕಾಂಕ್ಷಿಯ ಯೋಜನೆಯಾಗಿದ್ದು ಗ್ರಾಮೀಣ ಜನತೆಗೆ ವಿವಿಧ ಸೇವೆಗಳನ್ನು ಒದಗಿಸಲು ಏಕಗವಾಕ್ಷಿ ವ್ಯವಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ. ಸರ್ಕಾರಿ ಸೇವೆಗಳನ್ನು ಪಡೆಯಲು ಗ್ರಾಮೀಣ ಭಾಗದ ಜನರ ಅಲೆದಾಟ ತಪ್ಪಿಸುವ ನಿಟ್ಟಿನಲ್ಲಿ ಗ್ರಾಮ ಮಟ್ಟದಲ್ಲಿ ಆರಂಭಗೊಂಡ ಗ್ರಾಮ ಒನ್ ಯೋಜನೆಯು ಶಿವಮೊಗ್ಗ ಜಿಲ್ಲೆಯಲ್ಲಿ ಉತ್ತಮವಾಗಿ…