ಜಿಲ್ಲಾ ಸುದ್ದಿ:
ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ನಾನು ಪ್ರಬಲ ಟಿಕೆಟ್ ಆಕಾಂಕ್ಷಿ – ಬೇಳೂರು ಗೋಪಾಲಕೃಷ್ಣ|gkb
ಶಿವಮೊಗ್ಗ ಲೋಕಸಭಾ ಚುನಾಣೆಯಲ್ಲಿ ಕಾಂಗ್ರೆಸ್ ನಿಂದ ನಾನು ಪ್ರಬಲ ಟಿಕೆಟ್ ಆಕಾಂಕ್ಷಿ – ಬೇಳೂರು ಗೋಪಾಲಕೃಷ್ಣ ಬೆಂಗಳೂರು : ಈ ಬಾರಿಯ ಲೋಕಸಭೆ ಚುನಾವಣೆ ಹಿನ್ನೆಲೆ ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ಆಗಲು ನಿರ್ಧರಿಸಿದ್ದೇನೆ ಎಂದು ಸಾಗರದ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ. ಶನಿವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದ ಬಿಜೆಪಿಯವರ ದುರಾಡಳಿತ ಕೊನೆ ಮಾಡಲು ನಾನೇ ಸಮರ್ಥ ಅಭ್ಯರ್ಥಿ.ಹಾಗಾಗಿ, ಕ್ಷೇತ್ರಕ್ಕೆ ನಾನು ಕಾಂಗ್ರೆಸ್‍ನಿಂದ ಪ್ರಬಲ ಅಭ್ಯರ್ಥಿ ಆಗಬಲ್ಲೆ.ನನಗೆ ಟಿಕೆಟ್ ಕೊಟ್ಟರೆ ಗೆಲುವು ಸಾಧಿಸಲಿದ್ದೇನೆ ಎಂದು…
ಮಲೆನಾಡಿನಲ್ಲಿ ವೈಭವಪೂರ್ಣವಾಗಿ ಜರುಗಿದ ಭೂಮಿ ಹುಣ್ಣಿಮೆ|fest
ಮಲೆನಾಡಿನ ವ್ಯಾಪ್ತಿಯಲ್ಲಿ ಭೂತಾಯಿಗೆ…………… ವಸುಂಧರೆಗಿಂದು ಸೀಮಂತ ಕಾರ್ಯವು ಶ್ರದ್ದಾಭಕ್ತಿಯ ಸಂಭ್ರಮ ರಿಪ್ಪನ್‌ಪೇಟೆ;-ರೈತಾಪಿ ವರ್ಗ ಭೂಮಿ ಹುಣ್ಣಿಮೆ ಹಬ್ಬವನ್ನು ಸಡಗರ ಸಂಭ್ರಮದೊಂದಿಗೆ ಇಂದು ಶ್ರದ್ದಾಭಕ್ತಿಯಿಂದ ಆಚರಿಸಿದರು. ಗರ್ಭಿಣಿಯಂತೆ ಬೆಳೆಗಳಿಂದ ಮೈತುಂಬಿಕೊಂಡಿರುವ ವಸುಂಧರೆಗಿಂದು ವಿಜೃಂಭಣೆಯಿಂದ ಭೂ ತಾಯಿಗೆ ಗರ್ಭಿಣಿಯ ಸ್ಥಾನದಲ್ಲಿಟ್ಟು ಆಕೆಗೆ ಶ್ರದ್ದಾಭಕ್ತಿಯಿಂದ ಸೀಮಂತದ ಕಾರ್ಯವನ್ನು ನೆರವೇರಿಸಿ ಸಂಭ್ರಮಿಸಿದರು. ಭೂ ತಾಯಿಯ ಬಯಕೆಗಳನ್ನು ಈಡೇರಿಸುವ ಸೀಮಂತದ ಸಂಭ್ರಮ ಭೂಮಿಯಲ್ಲಿ ಉತ್ತಿ ಬಿತ್ತಿದ ಬೆಳೆಗಳು ಕಾಳು ಕಟ್ಟುವ ಸಮಯ ಇದ್ದಾಗಿದ್ದು ಭೂ ತಾಯಿ ಗರ್ಭಿಣಿಯೆಂಬ ನಂಬಿಕೆಯಿಂದ ಅವಳ ಬಯಕೆಗೆ ಅನುಗುಣವಾಗಿ ಉಡಿತುಂಬುತ್ತಾರೆ….
ನ.01 ರಂದು ರಿಪ್ಪನ್ ಪೇಟೆಯಲ್ಲಿ ಆದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಸಕಲ ಸಿದ್ದತೆ
ರಿಪ್ಪನ್ ಪೇಟೆಯಲ್ಲಿ ಆದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಸಕಲ ಸಿದ್ದತೆ ರಿಪ್ಪನ್‌ಪೇಟೆ;- ಪಟ್ಟಣದ ಕಸ್ತೂರಿ ಕನ್ನಡ ಸಂಘ ಮತ್ತು ದಿ.ಪುನೀತ್‌ರಾಜ್ ಆಭಿಮಾನಿ ಬಳಗದ ೩ ನೇ ವರ್ಷದ ವಾರ್ಷೀಕೋತ್ಸವ ಮತ್ತು ನವಂಬರ್ ೧ ರಂದು ಕನ್ನಡ ರಾಜ್ಯೋತ್ಸವವನ್ನು ಈ ಭಾರಿ ಆದ್ದೂರಿಯಾಗಿ ಆಚರಿಸುವ ಬಗ್ಗೆ ನಿರ್ಧರಿಸಲಾಗಿದ್ದು ಅದರನ್ವಯ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಇದರೊಂದಿಗೆ ದಿ.ಪುನೀತ್‌ರಾಜ್ ಪುಣ್ಯ ಸ್ಮರಣೆಯ ಕಾರ್ಯಕ್ರಮವು ಸಿದ್ದಿವಿನಾಯಕ ವೃತ್ತದಲ್ಲಿ ಏರ್ಪಡಿಸಲಾಗಿದೆ ಎಂದು ಕಸ್ತೂರಿ ಕನ್ನಡ ಸಂಘದ ಆಧ್ಯಕ್ಷರಾದ ಉಲ್ಲಾಸ್ ತೆಂಕೋಲ್ ಮತ್ತು ಆರ್.ಎ.ಚಾಬುಸಾಬ್ ಹಾಗೂ…
ರಿಪ್ಪನ್‌ಪೇಟೆ – ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ|Highcourt
ರಿಪ್ಪನ್‌ಪೇಟೆ – ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ ರಿಪ್ಪನ್‌ಪೇಟೆ – ಇಲ್ಲಿನ ತಾಲೂಕ್ ಒಕ್ಕಲಿಗರ ಸಂಘದ ನಿರ್ದೇಶಕ ಸ್ಥಾನಕ್ಕೆ 29|10|2023 ರಂದು ನಡೆಯಬೇಕಿದ್ದ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ ಎಂದು ಸಂಘದ ನಿರ್ದೇಶಕ ಹಾಗೂ ದೂರುದಾರ ಪುರುಷೋತ್ತಮ್ ಹೆಚ್ ಹೆಚ್ ಪತ್ರೀಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. 29|10|2023 ರಂದು ಹೊಸನಗರ ತಾಲೂಕ್ ಒಕ್ಕಲಿಗರ ಸಂಘ ರಿಪ್ಪನ್‌ಪೇಟೆಯ 19 ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆಸಲು ತೀರ್ಮಾನಿಸಲಾಗಿತ್ತು. ಈ ಸಂಬಂಧ ಸಂಘದ ಹಾಲಿ ನಿರ್ದೇಶಕರುಗಳಾದ ಹಾಲುಗುಡ್ಡೆಯ ಪುರುಷೋತ್ತಮ್ ಹೆಚ್…
ಹೊಸನಗರ : ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸುವಂತೆ ಎಬಿವಿಪಿ ಕಾರ್ಯಕರ್ತರ ಆಗ್ರಹ|abvp
ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸುವಂತೆ ಎಬಿವಿಪಿ ಕಾರ್ಯಕರ್ತರ ಆಗ್ರಹ ಹೊಸನಗರ : ಹಿಂದುಳಿದ ವರ್ಗಗಳ ಇಲಾಖೆ ಕೃಷಿ ಇಲಾಖೆ ಸಮಾಜ ಕಲ್ಯಾಣ ಇಲಾಖೆ ಆಯುಷ್ಯ ಇಲಾಖೆ ತಾಂತ್ರಿಕ ಶಿಕ್ಷಣ ಇಲಾಖೆ ಹಾಗೂ ಇನ್ನಿತರ ಇಲಾಖೆಗಳ ಅಡಿಯಲ್ಲಿ ನೀಡುತ್ತಿರುವ ವಿದ್ಯಾರ್ಥಿವೇತನಗಳನ್ನು ರಾಜ್ಯ ಸರ್ಕಾರ ಈಗ ತಡೆಹಿಡಿದಿದ್ದು ಈ ಪ್ರಕ್ರಿಯೆಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಮಾರಕವಾಗಿದ್ದ ಕಾರಣ ರಾಜ್ಯ ಸರ್ಕಾರ ತಕ್ಷಣ ಸ್ಪಂದಿಸಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಹೊಸನಗರ ಘಟಕದವರು ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜಿನಿಂದ ತಾಲೂಕು ಕಚೇರಿವರೆಗೆ ಜಾಥ…
ಕಸ ವಿಲೇವಾರಿ ವಿಚಾರದಲ್ಲಿ ಸ್ಥಳೀಯರಿಂದ ಗ್ರಾಪಂ ಅಧ್ಯಕ್ಷನ ಮೇಲೆ ಹಲ್ಲೆ|assault
ಕಸ ವಿಲೇವಾರಿ ವಿಚಾರದಲ್ಲಿ ಸ್ಥಳೀಯರಿಂದ ಗ್ರಾಪಂ ಅಧ್ಯಕ್ಷನ ಮೇಲೆ ಹಲ್ಲೆ ಶಿವಮೊಗ್ಗ : ಕಸ ವಿಲೇವಾರಿ ವಿಚಾರದಲ್ಲಿ ಸ್ಥಳೀಯರಿಂದಲೇ ಗ್ರಾಪಂ ಅಧ್ಯಕ್ಷರ ಮೇಲೆ ಹಲ್ಲೆ ನಡೆದಿದೆ. ಹಲ್ಕೆಯ ಸಂಬಂಧ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಶಿವಮೊಗ್ಗ ತಾಲೂಕು ಹೊಳೆಬೆನವಳ್ಳಿ ಗ್ರಾಮ ಪಂಚಾಯ್ತಿ, ಅಧ್ಯಕ್ಷರಾದ ಜಗದೀಶ್ , ತಮ್ಮ ಊರಿನಲ್ಲಿ ಸ್ವಚ್ಛತಾ ಕಾರ್ಯ ಮಾಡಿಸಿದ್ದು, ಸ್ವಚ್ಛತಾ ಕೆಲಸ ಮಾಡಿದ ಕಸವನ್ನು 2 ದಿನಗಳ ನಂತರ ವಿಲೇವಾರಿ ಮಾಡಲು ಯೋಚಿಸಿದ್ದರು. ದಸರಾ ಹಬ್ಬದ ಪ್ರಯುಕ್ತ ಊರಿನಲ್ಲಿ ಟ್ರಾಕ್ಟರ್ ಸಿಗದೇ ಇದ್ದುದರಿಂದ…
ಪಿಎಂಜಿಎಸ್‌ವೈ ಯೋಜನೆಯಡಿ ಜಿಲ್ಲೆಗೆ ಕೋಟ್ಯಾಂತರ ರೂ ಅನುದಾನ ; ಸಂಸದ ಬಿ ವೈ ರಾಘವೇಂದ್ರ|byr
ಪಿಎಂಜಿಎಸ್‌ವೈ ಯೋಜನೆಯಡಿ ಜಿಲ್ಲೆಗೆ ಕೋಟ್ಯಾಂತರ ರೂ ಅನುದಾನ ; ಸಂಸದ ಬಿ ವೈ ರಾಘವೇಂದ್ರ ರಿಪ್ಪನ್‌ಪೇಟೆ: ಅಟಲ್ ಬಿಹಾರಿ ವಾಜಪೇಯಿ ಅವರು ಜಾರಿಗೊಳಿಸಿದ ಗ್ರಾಮ ಸಡಕ್ ಯೋಜನೆಯಡಿ ಗ್ರಾಮೀಣ ಭಾಗದ ಸಂಪರ್ಕ ರಸ್ತೆಗಳ ಅಭಿವೃದ್ಧಿಗಾಗಿ ನಂತರದಲ್ಲಿ ಬಂದ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಪಿಎಂಜಿಎಸ್‌ವೈ ಯೋಜನೆಯಿಂದಾಗಿ ಶಿವಮೊಗ್ಗ ಜಿಲ್ಲೆ ವ್ಯಾಪ್ತಿಯ 200 ಕಿ.ಮೀ ರಸ್ತೆಗೆ 200 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿಸುವ ಮೂಲಕ ಅಭಿವೃದ್ದಿ ಪಡಿಸುವ ಮೂಲಕ ಪ್ರಗತಿ ಹೊಂದಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು….
ಶಿವಮೊಗ್ಗ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎಂ. ಶ್ರೀಕಾಂತ್ ಕಾಂಗ್ರೆಸ್ ಸೇರ್ಪಡೆ!|Shrikanth
ಶಿವಮೊಗ್ಗ : ಆಯನೂರು ಮಂಜುನಾಥ್, ಮಧು ಬಂಗಾರಪ್ಪ, ಆರ್. ಎಂ. ಮಂಜುನಾಥ ಗೌಡ ಬಳಿಕ ಶಿವಮೊಗ್ಗದ ಮತ್ತೊಬ್ಬ ಜೆಡಿಎಸ್ ನಾಯಕ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ಮಧು ಬಂಗಾರಪ್ಪ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್‌ನಿಂದ ಸೊರಬದಲ್ಲಿ ಗೆದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಶಿಕ್ಷಣ ಸಚಿವರಾಗಿದ್ದಾರೆ. ಬುಧವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೆಡಿಎಸ್ ಪಕ್ಷದ ಶಿವಮೊಗ್ಗ ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್, ತುಮಕೂರು ಮಾಜಿ ಶಾಸಕ ಎಸ್. ಶಫಿ ಅಹ್ಮದ್ ಸೇರಿದಂತೆ ಹಲವು ನಾಯಕರು ಕಾಂಗ್ರೆಸ್ ಪಕ್ಷ…
ಸಂಸದ ಬಿ ವೈ ರಾಘವೇಂದ್ರ ರವರ ವಾಟ್ಸಾಪ್ ಚಾನೆಲ್ ಲೋಕಾರ್ಪಣೆ|byr
ಶಿವಮೊಗ್ಗ : ಸಂಸದ ಬಿ.ವೈ ರಾಘವೇಂದ್ರ ಅವರ ಅಧಿಕೃತ ವಾಟ್ಸಪ್ ಚಾನೆಲ್ ನ್ನ ಲೋಕಾರ್ಪಣೆ ಮಾಡಲಾಯಿತು. ನಗರದ ರಾಯಲ್ ಆರ್ಕಿಡ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವಾಟ್ಸಪ್ ಚಾನೆಲ್ ಗೆ ಚಾಲನೆ ನೀಡಲಾಯಿತು. ಈ ವೇಳೆ ಮಾತನಾಡಿದ ಅವರು, ಡಿಜಿಟಲ್ ವಿಶ್ವವಿದ್ಯಾಲಯ, ಡಿಜಿಟಲೀಕರಣದ ಸಾಮಾಜಿಕ ಮಾಧ್ಯಮಗಳಲ್ಲಿ ಜನ ಸಂಪರ್ಕ ಮಾಡಲು ಈ ವಾಟ್ಸಪ್ ಚಾನೆಲ್ ಅನುಕೂಲವಾಗಿದೆ.ಪ್ರಧಾನಿಗಳು ಸಹ ವಾಟ್ಸಪ್ ಚಾನೆಲ್ ನ್ನ ಅಧಿಕೃತ ಚಾನೆಲ್ ಆರಂಭಿಸಿದ್ದಾರೆ. ಮೂಲ ಉದ್ದೇಶ, ಸಾರ್ವಜನಿಕರು ಸ್ಪಂಧನೆಗೆ ಈ ಚಾನೆಲ್ ಅನುಕೂಲವಾಗಲಿದೆ. ಸಾರ್ವಜನಿಕ ಬದುಕನ್ನ…
ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಡಗರದಿಂದ ನಡೆದ ಆಯುಧ ಪೂಜೆ – ಡಿವೈಎಸ್ ಪಿ ಭಾಗಿ|dasara
ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಡಗರದಿಂದ ನಡೆದ ಆಯುಧ ಪೂಜೆ – ಡಿವೈಎಸ್ ಪಿ ಭಾಗಿ ರಿಪ್ಪನ್‌ಪೇಟೆ : ನಾಡಹಬ್ಬ ದಸರಾ ಹಿಂದಿನ ದಿನವಾದ ಇಂದು ಆಯುಧ ಪೂಜೆಯನ್ನು ಪಟ್ಟಣದ ಹಲವಾರು ಕಡೆಗಳಲ್ಲಿ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಸರ್ಕಾರಿ ವಾಹನಗಳು, ಖಾಸಗಿ ವಾಹನಗಳಿಗೆ ಪೂಜೆ ಸಲ್ಲಿಸಿ ಸಂಭ್ರಮದಿಂದ ಹಬ್ಬ ಆಚರಣೆ ಮಾಡಲಾಯಿತು. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಚಾಮುಂಡೇಶ್ವರಿ ದೇವಿಯ ಫೋಟೋ ಪ್ರತಿಷ್ಠಾಪನೆ ಮಾಡಿ ವಾಹನಗಳಿಗೆ ಪೂಜೆ ಸಲ್ಲಿಸಿ ಬಂದೂಕು ಮತ್ತು ರಿವಾಲ್ವರ್ ಗಳಿಗೆ ಪೂಜೆ ಮಾಡಲಾಯಿತು. ಈ…