Headlines

ಶಾಲೆ ಸಮಯಕ್ಕೆ ಬಸ್ ಬಿಡಿಸಿ ಸರ್: ಸಚಿವ ಮಧು ಬಂಗಾರಪ್ಪ ಬಳಿ ಮಕ್ಕಳ ಮನವಿ|madhu bangarappa

ಶಾಲೆ ಸಮಯಕ್ಕೆ ಬಸ್ ಬಿಡಿಸಿ ಸರ್: ಸಚಿವ ಮಧು ಬಂಗಾರಪ್ಪ ಬಳಿ ಮಕ್ಕಳ ಮನವಿ ಸೊರಬ: ಶಾಲಾ ಅವಧಿಗೆ ಸರಿಯಾರಿ ತಲುಪಲು ಬಸ್ ವ್ಯವಸ್ಥೆ ಕಲ್ಪಿಸುವಂತೆ ವಿದ್ಯಾರ್ಥಿನಿಯರು ಶಿಕ್ಷಣ ಹಾಗೂ ಜಿಲ್ಲಾ ಉಸ್ತವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಿದರು.  ತಾಲೂಕಿನ ತಲಗಡ್ಡೆ ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮಕ್ಕೆ ಸಚಿವರು ಆಗಮಿಸಿದ ವೇಳೆ ವಿದ್ಯಾರ್ಥಿನಿಯರು ಮನವಿ ಸಲ್ಲಿಸಿದರು.  ತಲಗಡ್ಡೆ ಗ್ರಾಮದಿಂದ ಜಡೆ ಗ್ರಾಮಕ್ಕೆ ಶಾಲಾ ಅವಧಿಗೆ ತೆರಳು ಬಸ್ ವ್ಯವಸ್ಥೆ ಇಲ್ಲದೇ ಇಲ್ಲದೇ…

Read More

ಸರ್ವೇ ಇಲಾಖೆಗೆ ದಿಢೀರ್ ಭೇಟಿ ನೀಡಿದ ಶಾಸಕ ಆರಗ ಜ್ಞಾನೇಂದ್ರ|araga

ತೀರ್ಥಹಳ್ಳಿ ತಾಲೂಕಿನಲ್ಲಿ ಇತ್ತೀಚೆಗೆ ನಿರಂತರವಾಗಿ ರೈತರು ಮತ್ತು ಸಾರ್ವಜನಿಕರಿಂದ ತೀರ್ಥಹಳ್ಳಿಯ ಸರ್ವೇ ಅಧಿಕಾರಿಗಳ ಕರ್ತವ್ಯ ಲೋಪದ ವಿರುದ್ಧ ಅನೇಕ ಬಾರಿ ದೂರುಗಳು ಕೇಳಿ ಬಂದ ಮೇರೆಗೆ ಶನಿವಾರ ಸಂಜೆ ಸರ್ವೇ ಇಲಾಖೆಗೆ ಭೇಟಿ ನೀಡಿದ ಶಾಸಕರಾದ ಆರಗ ಜ್ಞಾನೇಂದ್ರ ರೈತರು ಮತ್ತು ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಈ ವೇಳೆ ಅಕ್ರಮ ಭೂ ಮಂಜೂರಾತಿಗೆ ಸರ್ವೇ ಕಚೇರಿಯಲ್ಲಿ ಸಹಕರಿಸಿದ್ದಾರೆ ಎನ್ನುವ ದೂರು ಸ್ಥಳದಲ್ಲಿ ಕೇಳಿ ಬಂದ ಮೇರೆಗೆ ದಾಖಲೆಗಳೊಂದಿಗೆ ಸರ್ವೇ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಸರ್ವೇ ಇಲಾಖೆಯ ಕಮಿಷನ್…

Read More

ರಿಪ್ಪನ್‌ಪೇಟೆ : ಜುಮ್ಮಾ ಮಸೀದಿ‌ ಮುಂಭಾಗದಲ್ಲಿ ಬಾರ್ ತೆರೆಯಲು ಯತ್ನ – ಸ್ಥಳದಲ್ಲಿ ಪ್ರಕ್ಷ್ಯುಬ್ದ ವಾತಾವರಣ|Ripponpet news

ರಿಪ್ಪನ್‌ಪೇಟೆ : ಜುಮ್ಮಾ ಮಸೀದಿ‌ ಮುಂಭಾಗದಲ್ಲಿ ಬಾರ್ ತೆರೆಯಲು ಯತ್ನ – ಸ್ಥಳದಲ್ಲಿ ಪ್ರಕ್ಷ್ಯುಬ್ದ ವಾತಾವರಣ ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಮೊಹಿಯುದ್ದೀನ್ ಜುಮ್ಮಾ ಮಸೀದಿ ಮುಂಭಾಗದ ಖಾಸಗಿ ಲಾಡ್ಜ್ ವೊಂದರಲ್ಲಿ ವಿರೋಧದ ನಡುವೆಯೂ ಬಾರ ತೆರೆಯಲು ಹೊರಟಿರುವ ಮಧ್ಯದ ಅಂಗಡಿಗೆ ಸಾರ್ವಜನಿಕರಿಂದ ಬಾರಿ ವಿರೋಧ ವ್ಯಕ್ತವಾಗಿದೆ.ಸ್ಥಳದಲ್ಲಿ ಪ್ರಕ್ಷ್ಯುಬ್ದ ವಾತವರಣ ನಿರ್ಮಾಣವಾಗಿದೆ. ಪಟ್ಟಣದ ಜುಮ್ಮಾ ಮಸೀದಿ ಮುಂಭಾಗದ ಖಾಸಗಿ ಕಟ್ಟಡ ಒಂದರಲ್ಲಿ ನೂತನವಾಗಿ ಸಿ ಎಲ್ 7 ಮದ್ಯದ ಅಂಗಡಿ ತೆರೆಯುವ ಹಿನ್ನೆಲೆಯಲ್ಲಿ ಶನಿವಾರ ಸಂಜೆ…

Read More

ಗಾಯಗೊಂಡಿದ್ದ 12 ಅಡಿ ಉದ್ದದ ಕಾಳಿಂಗ ಸರ್ಪಕ್ಕೆ ಶಸ್ತ್ರ ಚಿಕಿತ್ಸೆ

ತೀರ್ಥಹಳ್ಳಿ : ಪ್ರಾಣಿ, ಪಕ್ಷಿಗಳಿಗೆ ಶಸ್ತ್ರಚಿಕಿತ್ಸೆ ಮಾಡುವುದು ತುಂಬಾ ಕಷ್ಟಕರವಾದ ಕೆಲಸ. ಆದರೆ ತೀರ್ಥಹಳ್ಳಿಯ ಕಾಳಿಂಗ ಫೌಂಡೇಷನ್ ಸದಸ್ಯರು ಗಾಯಗೊಂಡಿದ್ದ 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಿಸಿ ಆಪರೇಷನ್ ನಡೆಸಿ ಆರೋಗ್ಯ ಸುಧಾರಿಸಿದ ಮೇಲೆ ಕಾಡಿಗೆ ಬಿಟ್ಟಿದ್ದಾರೆ. ತೀರ್ಥಹಳ್ಳಿಯ ಕಮ್ಮರಡಿಯ ಮನೆಯೊಂದರ ಬಳಿ ಕಾಳಿಂಗ ಸರ್ಪ ಕಾಣಿಸಿಕೊಂಡಿತ್ತು. ಮಾಹಿತಿ ತಿಳಿಯುತ್ತಿದಂತೆ ಕಾಳಿಂಗ ಫೌಂಡೇಶನ್ ಸದಸ್ಯರು ಭೇಟಿ ನೀಡಿದ್ದರು. ಆಗ ಕಾಳಿಂಗ ಸರ್ಪ ಗಾಯಗೊಂಡಿರುವ ವಿಚಾರ ಗೊತ್ತಾಗಿದೆ. ನಂತರ ಹಾವನ್ನು ಹಿಡಿದು ಮೇಗರವಳ್ಳಿ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿ…

Read More

ಮಲ್ಲಿಕಾರ್ಜುನ ಖರ್ಗೆಯವರನ್ನು ಕೀಳು ಮಟ್ಟದಿಂದ ನೋಡುವ ರಾಜಕಾರಣಿ ನಾನಲ್ಲ – ಆರಗ ಜ್ಞಾನೇಂದ್ರ |araga

ಮಲ್ಲಿಕಾರ್ಜುನ ಖರ್ಗೆಯವರನ್ನು ಕೀಳು ಮಟ್ಟದಿಂದ ನೋಡುವ ರಾಜಕಾರಣಿ ನಾನಲ್ಲ – ಆರಗ ಜ್ಞಾನೇಂದ್ರ  ತೀರ್ಥಹಳ್ಳಿ : ಅರಣ್ಯ ಸಚಿವರ ಹೇಳಿಕೆ ವಿರುದ್ಧ ಪ್ರತಿಭಟನೆ ಮಾಡುವ ಸಂದರ್ಭದಲ್ಲಿ ಆಡಿದಂತಹ ಕೆಲವು ಮಾತುಗಳನ್ನು ಆಡದೇ ಇರುವ ಮಾತುಗಳನ್ನು ಸೇರಿಸಿ ರಾಜಕಾರಣಕ್ಕೆ ಬಳಸಿ ರಾಜ್ಯಾದ್ಯಂತ ಸುದ್ದಿಯಾಗಿದೆ. ಅದರ ಬಗ್ಗೆ ಯಾರಿಗಾದರೂ ಮನಸ್ಸಿಗೆ ಕಸಿವಿಸಿ ಆಗಿದ್ದರೆ ವಿಶೇಷವಾಗಿ ಮಲ್ಲಿಕಾರ್ಜುನ ಖರ್ಗೆಯವರಿಗೆ ಕ್ಷಮೆಯಾಚನೆ ಮಾಡುತ್ತೇನೆ ಎಂದು ಶಾಸಕ, ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ವಿಷಾದ ವ್ಯಕ್ತಪಡಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನೆಡೆಸಿ…

Read More

ಧರ್ಮಸ್ಥಳದ ಹೆಗ್ಗಡೆಯವರ ತೇಜೋವಧೆ ಖಂಡನೀಯ – ಹೊಂಬುಜ ಶ್ರೀ|hombuja

  ಧರ್ಮಸ್ಥಳದ ಹೆಗ್ಗಡೆಯವರ ತೇಜೋವಧೆ ಖಂಡನೀಯ ಹೊಂಬುಜ : 2012ರಲ್ಲಿ ನಡೆದ ಸೌಜನ್ಯ ಕೊಲೆ ಪ್ರಕರಣವನ್ನು ಮುಂದಿಟ್ಟುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವರು ಬಹಿರಂಗವಾಗಿ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ತೇಜೋವಧೆ ಮಾಡುತ್ತಿರುವುದು ಖಂಡನೀಯ ಎಂದು ಹೊಂಬುಜ ಜೈನ ಮಠದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ತಿಳಿಸಿದ್ದಾರೆ. ಕಾನೂನಿನ ಮೂಲಕ ನ್ಯಾಯಕ್ಕಾಗಿ ಸರ್ಕಾರವನ್ನು ಆಗ್ರಹಿಸಿರುವ ಸಂತ್ರಸ್ಥರು ಕಾನೂನಿನ ಮೇಲೆ ನಂಬಿಕೆಯಿಟ್ಟು ತೀರ್ಮಾನ ಬರುವವರೆಗೆ ತಾಳ್ಮೆಯಿಂದ ಇರಬೇಕು. ಸಂತ್ರಸ್ಥರು ನ್ಯಾಯಾಂಗ ತನಿಖೆಗೆ…

Read More

ಆರಗ ಜ್ಞಾನೇಂದ್ರ ರವರ ಮೇಲೆ ಪೊಲೀಸರು ಸುಮೋಟೋ ಕೇಸ್ ದಾಖಲಿಸಲಿ – ಆರ್ ಎಂ ಮಂಜುನಾಥ್ ಗೌಡ|RMM

ಆರಗ ಜ್ಞಾನೇಂದ್ರ ರವರ ಮೇಲೆ ಪೊಲೀಸರು ಸುಮೋಟೋ ಕೇಸ್ ದಾಖಲಿಸಲಿ – ಆರ್ ಎಂ ಮಂಜುನಾಥ್ ಗೌಡ ತೀರ್ಥಹಳ್ಳಿ : ಶಾಸಕರಾಗಿ ಅಥವಾ ಸಚಿವರಾದ ನಂತರ ಸಂವಿಧಾನದ ವಿಧಿ ವಿಧಾನಗಳಿಗೆ ಬದ್ಧವಾಗಿ ನಡೆದುಕೊಳ್ಳುತ್ತೇವೆ ಎಂದು ಪ್ರಮಾಣ ಮಾಡುತ್ತೇವೆ. ಆದರೆ ಇವರು ಸಂವಿಧಾನದ ವಿರುದ್ಧವಾಗಿ ಮಾತನಾಡಿದ್ದಾರೆ. ಎಲ್ಲವನ್ನು ಗೃಹ ಸಚಿವರಾದ ನಂತರ ಪ್ರಾರಂಭ ಮಾಡಿದ್ದರು. ಗೃಹ ಸಚಿವರಾದ ಸ್ವಲ್ಪ ದಿನದಲ್ಲೇ ಮೈಸೂರಿನ ಮಹಿಳೆಯೊಬ್ಬರ ಬಗ್ಗೆ ಮಾತನಾಡಿದ್ದರು. ಈಗ ರಾಷ್ಟ್ರ ಕಂಡಂತಹ ಎತ್ತರದ ಮನುಷ್ಯನ ಬಗ್ಗೆ  ವೈಯಕ್ತಿಕವಾಗಿ ನಿಂದನೆ ಮಾಡಿದ್ದಾರೆ…

Read More

ಓವರ್ ಟೇಕ್ ಮಾಡುವಾಗ KSRTC ಬಸ್ ಗೆ ಖಾಸಗಿ ಬಸ್ ಡಿಕ್ಕಿ

ಓವರ್ ಟೇಕ್ ಮಾಡುವಾಗ KSRTC ಬಸ್ ಗೆ ಖಾಸಗಿ ಬಸ್ ಡಿಕ್ಕಿ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಗಿಳಾಲಗುಂಡಿ ಸಮೀಪ ಖಾಸಗಿ ಬಸ್ಸೊಂದು ಕೆಎಸ್​ಆರ್​ಟಿಸಿ ಬಸ್​ಗೆ ಸೈಡ್​ನಿಂದ ಡಿಕ್ಕಿಹೊಡೆದ ಘಟನೆ ಸಂಭವಿಸಿದೆ.  ಸಾಗರ-ಶಿವಮೂಗ್ಗ ರೂಟ್​ನಲ್ಲಿ KSRTC  ಹಾಗೂ ಖಾಸಗಿ ಬಸ್​ ಸಂಚರಿಸುತ್ತಿತ್ತು. ಈ ವೇಳೆ ಸೀಟ್​ ಹಾಕುವ ವಿಚಾರಕ್ಕೆ ಖಾಸಗಿ ಬಸ್, ಕೆಎಸ್​ಆರ್​ಟಿಸಿ ಬಸ್​ನ್ನ ಓವರ್​ ಟೇಕ್​ ಮಾಡಲು ಮುಂದಾಗಿದ್ದು, ಈ ವೇಳೆ ಬಸ್​ನ ಹಿಂಬದಿ ಕೆಎಸ್​ಆರ್​ಟಿಸಿ ಬಸ್​ಗೆ ಡಿಕ್ಕಿಯಾಗಿದೆ.  ಒಂದೇ ರೂಟ್​ನಲ್ಲಿ, ಹೆಚ್ಚು ಕಮ್ಮಿ ಒಂದೇ…

Read More

ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ – ಬಸ್ ಗೆ ವಿದ್ಯುತ್ ಪ್ರವಹಿಸಿ 35 ಪ್ರಯಾಣಿಕರು ಆಸ್ಪತ್ರೆಗೆ ದಾಖಲು – ಇಬ್ಬರು ವಿದ್ಯಾರ್ಥಿಗಳು ಮೆಗ್ಗಾನ್ ಗೆ..!!!

ಖಾಸಗಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ – 35 ಪ್ರಯಾಣಿಕರು ಆಸ್ಪತ್ರೆಗೆ ದಾಖಲು ಸಾಗರ :  ಸಿಗಂದೂರು ಹೊಳೆಬಾಗಿಲಿನಿಂದ ಸಾಗರಕ್ಕೆ ಬರುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಗೆಣಸಿಕುಣಿ ಸಮೀಪ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ. ವಿದ್ಯುತ್ ಕಂಬಕ್ಕೆ ಗುದ್ದಿದ ಪರಿಣಾಮ ವಿದ್ಯುತ್ ವೈರ್ ಬಸ್ ಗೆ ತಾಗಿ ಒಟ್ಟು 45 ಪ್ರಯಾಣಿಕರಲ್ಲಿ 35 ಪ್ರಯಾಣಿಕರಿಗೆ ವಿದ್ಯುತ್ ಶಾಕ್ ಹೊಡೆದಿದೆ. ಈ ಬಸ್ ನಲ್ಲಿ ಒಟ್ಟು 45 ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು,…

Read More

ಹೊಸನಗರ ಸಿಪಿಐ ಬಿ ಸಿ ಗಿರೀಶ್ ಸೇರಿದಂತೆ ಜಿಲ್ಲೆಯ ಏಳು ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ :|transfer

ಹೊಸನಗರ ಸಿಪಿಐ ಬಿ ಸಿ ಗಿರೀಶ್ ಸೇರಿದಂತೆ ಜಿಲ್ಲೆಯ ಏಳು ಪಿ ಐ ಗಳ ವರ್ಗಾವಣೆ : ಹೊಸನಗರ ಸರ್ಕಲ್ ಇನ್ಸ್ ಪೆಕ್ಟರ್ ಗಿರೀಶ್ ಬಿ ಸಿ ಸೇರಿದಂತೆ ಜಿಲ್ಲೆಯ  ಏಳು ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಮಾಡಲಾಗಿದೆ. ಸಿಪಿಐ ಗಿರೀಶ್ ರವರು ತುಮಕೂರು ಜಿಲ್ಲೆ ಪಾವಗಡ ಗ್ರಾಮಾಂತರ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಹೊಸನಗರದಲ್ಲಿ ಈ ಹಿಂದೆ ಕಾರ್ಯ ನಿರ್ವಹಿಸಿದ್ದ ಗುರಣ್ಣ ಎಸ್ ಹೆಬ್ಬಾಳ್ ನೂತನ ಸಿಪಿಐ ಆಗಿ ವರ್ಗಾವಣೆಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯಿಂದ ವರ್ಗಾವಣೆಯಾದವರು ; ಗಿರೀಶ್‌…

Read More