ಜಿಲ್ಲಾ ಸುದ್ದಿ:
ಶಿವಮೊಗ್ಗ – ಬೆಂಗಳೂರು ವಿಮಾನದ ಟಿಕೆಟ್ ಬುಕಿಂಗ್ ಆರಂಭ, ಎಷ್ಟಿದೆ ದರ? ಬುಕ್ ಮಾಡುವುದು ಹೇಗೆ?|Airport
ಬೆಂಗಳೂರು – ಶಿವಮೊಗ್ಗ ನಡುವೆ ವಿಮಾನದ ಟಿಕೆಟ್ ಬುಕಿಂಗ್ ಆರಂಭವಾಗಿದೆ. ಇಂಡಿಗೋ ಸಂಸ್ಥೆ ತನ್ನ ವೆಬ್‌ಸೈಟ್‌ನಲ್ಲಿ ಸೀಟ್ ಕಾಯ್ದಿರಿಸುವ ಅವಕಾಶ ಕಲ್ಪಿಸಿದೆ. ಆ.31ರಿಂದ ಶಿವಮೊಗ್ಗದಿಂದ ವಿಮಾನ ಹಾರಾಟ ಆರಂಭವಾಗಲಿದೆ. ಇಂಡಿಗೋ ವೆಬ್‌ಸೈಟ್‌ನಲ್ಲಿ ಇವತ್ತು ಸಂಜೆಯಿಂದ ಬುಕಿಂಗ್ ಆರಂಭವಾಗಿದೆ. ಆ.31ರಂದು ಬೆಳಗ್ಗೆ 9.50ಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಯಾಣ ಆರಂಭವಾಗಲಿದೆ. ಬೆಳಗ್ಗೆ 11.05ಕ್ಕೆ ವಿಮಾನ ಶಿವಮೊಗ್ಗ ತಲುಪಲಿದೆ. 1 ಗಂಟೆ 15 ನಿಮಿಷದ ನಾನ್ ಸ್ಟಾಪ್ ಫ್ಲೈಟ್ ಇರಲಿದೆ ಎಂದು ಪ್ರಕಟಿಸಲಾಗಿದೆ. ಎರಡು ಬಗೆಯ ಟಿಕೆಟ್ ಮಾದರಿ…
ಕ್ಯಾಂಟೀನ್ ಮಾಲೀಕನಿಗೆ ಬೋಂಡಾ ತಯಾರಿಕೆಯ ಬಗ್ಗೆ ತರಬೇತಿ ನೀಡಿದ ಶಾಸಕ ಬೇಳೂರು ಗೋಪಾಲಕೃಷ್ಣ|beluru
ಕ್ಯಾಂಟೀನ್ ಮಾಲೀಕನಿಗೆ ಬೋಂಡಾ ತಯಾರಿಕೆಯ ಬಗ್ಗೆ ತರಬೇತಿ ನೀಡಿದ ಶಾಸಕ ಬೇಳೂರು ಗೋಪಾಲಕೃಷ್ಣ. ರಿಪ್ಪನ್ ಪೇಟೆ : ಸರಳ ಸಜ್ಜನಿಕೆಯ ಮೂಲಕ ಜನಸಾಮಾನ್ಯರ ಶಾಸಕರಾಗಿ ಆಯ್ಕೆಯಾದ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಬೋಂಡಾ ತಯಾರಿಕೆಯ ಬಗ್ಗೆ ತರಬೇತಿ ನೀಡಿದ ಘಟನೆ ಇಂದು ರಿಪ್ಪನ್ ಪೇಟೆ ಪಟ್ಟಣದಲ್ಲಿ ನಡೆದಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪರ ಅತಿವೃಷ್ಟಿ ಸಮಾಲೋಚನಾ ಸಭೆಯಲ್ಲಿ ಭಾಗವಹಿಸುವುದರ ಸಲುವಾಗಿ ಸಚಿವರು ಬರುವುದಕ್ಕಿಂತ ಮುಂಚಿತವಾಗಿ ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿಗೆ ಆಗಮಿಸಿದ್ದರು.ಈ…
ಆಗುಂಬೆ ಘಾಟಿಯಲ್ಲಿ ಸೆ.15 ರವರೆಗೆ ಭಾರಿ ವಾಹನಗಳ ನಿಷೇಧ
ಭಾರಿ ಮಳೆಯ ಕಾರಣಕ್ಕೆ ಆಗುಂಬೆ ಘಾಟಿ ಪ್ರದೇಶದಲ್ಲಿ ಘನವಾಹನಗಳ ಸಂಚಾರವನ್ನು ಉಡುಪಿ ಜಿಲ್ಲಾಡಳಿತ ನಿರ್ಬಂಧಿಸಿದೆ. ಸೆಪ್ಟೆಂಬರ್ 15ರವರೆಗೆ ಆಗುಂಬೆ ಘಾಟಿ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ ಮಾಡಲಾಗಿದೆ. ಭಾರಿ ಮಳೆ ಮತ್ತು ಭಾರಿ ವಾಹನ ಸಂಚಾರದಿಂದ ರಾಷ್ಟ್ರೀಯ ಹೆದ್ದಾರಿ 169 ಎಯಲ್ಲಿ ಆಗುಂಬೆ ಘಾಟೆಯ 6,7 ಮತ್ತು 11ರಲ್ಲಿ ಬಿರುಕುಗಳು ಕಾಣಿಸಿಕೊಳ್ಳುತ್ತಿದ್ದು ರಸ್ತೆ ಕುಸಿಯುವ ಭೀತಿ ಉಂಟಾಗಿದೆ. ಆದ್ದರಿಂದ ಜುಲೈ 27 ರಿಂದ ಸೆಪ್ಟೆಂಬರ್ 15 ರವರೆಗೆ ಭಾರಿ ವಾಹನ ನಿಷೇಧಿಸಲಾಗಿದೆ. ಈ ಸಂದರ್ಭದಲ್ಲಿ ತೀರ್ಥಹಳ್ಳಿ…
ರಿಪ್ಪನ್ ಪೇಟೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಮಳೆ ಹಾನಿಯ ಬಗ್ಗೆ ಸಮಾಲೋಚನಾ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ|Madhu bangarappa
ರಿಪ್ಪನ್ ಪೇಟೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಮಳೆ ಹಾನಿಯ ಬಗ್ಗೆ ಸಮಾಲೋಚನಾ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ. ರಿಪ್ಪನ್‌ಪೇಟೆ;- ಹೊಸನಗರ ತಾಲೂಕಿನಲ್ಲಿ ಕಳೆದ ಒಂದು ವಾರದಿಂದ ಎಡಬಿಡದೆ ಸುರಿಯುತ್ತಿರುವ ಮಳೆ- ಗಾಳಿಯಿಂದ ಕೆರೆಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ಹಾನಿಗೊಳಗಾದ ನಷ್ಟದ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಕಂದಾಯ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದರು. ಪಟ್ಟಣದ ಗ್ರಾಮ ಪಂಚಾಯತಿ ಯ ಕುವೆಂಪುಸಭಾಭವನದಲ್ಲಿ ಇಂದು ಆಯೋಜಿಸಿದ್ದ ಸಭೆಯಲ್ಲಿ ಅವರು ಮಾತನಾಡಿ, ಮಳೆಯಿಂದ…
ಸಚಿವ ಮಧುಬಂಗಾರಪ್ಪ ವಿರುದ್ದ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರಿಂದ ಕಪ್ಪು ಪಟ್ಟಿ ಪ್ರದರ್ಶನ|protest
ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಳೆ ಹಾನಿ ಸಂಬಂಧ ನಡೆಯುತ್ತಿದ್ದ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪರವರಿಗೆ ಕಪ್ಪು ಪಟ್ಟಿ ಪ್ರದರ್ಶನ ಮಾಡಿದ ಘಟನೆ ನಡೆದಿದೆ. ಜಿಲ್ಲಾ ಪಂಚಾಯತ್ನಲ್ಲಿ ಸಭೆ ಆರಂಭವಾಗುತ್ತಲೇ , ಶಿಕ್ಷಣ ಸಚಿವ ಮಧು ಬಂಗಾರಪ್ಪರನವರ ವಿರುದ್ಧ ಘೋಷಣೆಗಳನ್ನು ಕೂಗುತ್ತ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಭಾಂಗಣದ ಒಳಗೆ ಪ್ರವೇಶ ಮಾಡಿದರು, ವೇದಿಕೆಯ ಸಮೀಪದವರೆಗೂ ಘೋಷಣೆಗಳನ್ನು ಕೂಗುತ್ತಾ ಬಂದ ಪ್ರತಿಭಟನಾಕಾರರು, ಸಭೆಯಲ್ಲಿ ,ಕರಪತ್ರಗಳನ್ನು ಎಸೆದರು. ಅಲ್ಲದೆ ಕಪ್ಪು ಪಟ್ಟಿಗಳನ್ನು ಪ್ರದರ್ಶನ ಮಾಡಿ,…
ರಿಪ್ಪನ್‌ಪೇಟೆ ಗ್ರಾಪಂ ಪಿಡಿಓ ಚಂದ್ರಶೇಖರ್ ವರ್ಗಾವಣೆ|ನೂತನ ಪಿಡಿಓ ಯಾರು ಗೊತ್ತಾ…???PDO
ರಿಪ್ಪನ್‌ಪೇಟೆ : ಪಟ್ಟಣದ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿ ಕಳೆದ ಹತ್ತು ವರ್ಷಗಳಿಂದ ಕಾರ್ಯ ನಿರ್ವಹಿಸಿದ್ದ ಚಂದ್ರಶೇಖರ್ ವರ್ಗಾವಣೆಯಾಗಿದ್ದು ಅವರ ಸ್ಥಾನಕ್ಕೆ ಶಿಕಾರಿಪುರ ತಾಲೂಕಿನ ತಾಳಗುಂದ ಗ್ರಾಪಂ ನಲ್ಲಿ ಪಿಡಿಓ ಆಗಿ ಕಾರ್ಯ ನಿರ್ವಹಿಸುತ್ತಿರುವ ಮಧುಸೂಧನ್ ಎನ್ ನೇಮಕವಾಗಿದ್ದಾರೆ. ರಿಪ್ಪನ್‌ಪೇಟೆ ಗ್ರಾಪಂ ಗೆ ನೂತನವಾಗಿ ವರ್ಗಾವಣೆಗೊಂಡಿರುವ ಮಧುಸೂಧನ್ ಎನ್ ಮೂಲತಃ ರಿಪ್ಪನ್‌ಪೇಟೆ ಶಬರೀಶ ನಗರದವರಾಗಿದ್ದು ಈ ಹಿಂದೆ ಪಟ್ಟಣದ ಗ್ರಾಮ ಪಂಚಾಯಿತಿಯಲ್ಲಿ ಹಲವಾರು ವರ್ಷಗಳ ಸೇವೆ ಸಲ್ಲಿಸಿದ್ದರು.ವರ್ಗಾವಣೆಗೊಂಡಿರುವ ಪಿಡಿಓ ಚಂದ್ರಶೇಖರ್ ರವರಿಗೆ ಸದ್ಯಕ್ಕೆ ಯಾವುದೇ ಸ್ಥಳ ನಿಯೋಜನೆಯಾಗಿರುವುದಿಲ್ಲ….
ಭಾರಿ ಗಾಳಿ ಮಳೆಗೆ ಮನೆಯ ಗೋಡೆ ಮೇಲ್ಚಾವಣಿ ಕುಸಿತ | ರಿಪ್ಪನ್‌ಪೇಟೆಯ ಹೂವಿನ ವ್ಯಾಪಾರಿ ಪುಷ್ಪಾ ನಿಧನ|Rpet
ರಿಪ್ಪನ್‌ಪೇಟೆ : ಮಲೆನಾಡಿನಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಇದರ ಪರಿಣಾಮ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಆಲುವಳ್ಳಿ ಗ್ರಾಮದ ಕಲ್ಯಾಣಪುರದಲ್ಲಿ ಮನೆಯೊಂದರ ಗೋಡೆ ಹಾಗೂ ಮೇಲ್ಚಾವಣಿ ಕುಸಿತವಾಗಿರುವ ಘಟನೆ ನಡೆದಿದೆ. ಇಂದು ಸುರಿದ ಭಾರಿ ಮಳೆಗೆ ಕಲ್ಯಾಣಪುರ ಗ್ರಾಮದ ಕೃಷ್ಣ ಹೆಗಡೆ ಎಂಬುವವರ ಮನೆಯ ಹಿಂಬದಿಯ ಗೋಡೆ ಹಾಗೂ ಮೇಲ್ಚಾವಣಿ ಕುಸಿದಿದ್ದು ಯಾವುದೇ ಪ್ರಾಣಹಾನಿ ಆಗಿಲ್ಲ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಮುಂದಿನ ಕ್ರಮಕೈಗೊಂಡಿದ್ದಾರೆ. ರಿಪ್ಪನ್‌ಪೇಟೆಯ ಹೂವಿನ ವ್ಯಾಪಾರಿ ಪುಷ್ಪಾ ನಿಧನ…
ರಿಪ್ಪನ್‌ಪೇಟೆಯಲ್ಲಿ ಇನ್ನು ಮುಂದೆ ಪ್ರತಿವರ್ಷ ಅದ್ದೂರಿ ಜಾತ್ರಾ ಮಹೋತ್ಸವ – ರಥ ನಿರ್ಮಾಣಕ್ಕೆ ಸಿದ್ದಿವಿನಾಯಕ ದೇವಸ್ಥಾನ ಸಮಿತಿಯಿಂದ ಮುಂಗಡ ಸಮರ್ಪಣೆ|Rpet
ರಿಪ್ಪನ್‌ಪೇಟೆಯಲ್ಲಿ ಇನ್ನೂ ಪ್ರತಿವರ್ಷ ಅದ್ದೂರಿ ಜಾತ್ರಾ ಮಹೋತ್ಸವ – ರಥ ನಿರ್ಮಾಣಕ್ಕೆ ಸಿದ್ದಿವಿನಾಯಕ ದೇವಸ್ಥಾನ ಸಮಿತಿಯಿಂದ ಮುಂಗಡ ಸಮರ್ಪಣೆ’’ ರಿಪ್ಪನ್‌ಪೇಟೆ : ಪಟ್ಟಣದ ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ದೇವಸ್ಥಾನದಲ್ಲಿ ರಥೋತ್ಸವ ಮತ್ತು ಜಾತ್ರಾ ಮಹೋತ್ಸವ ನೆರವೇರಿಸುವ ಹಿನ್ನಲೆಯಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ವತಿಯಿಂದ ಸುಮಾರು 31 ಲಕ್ಷ ರೂ ವೆಚ್ಚದ ರಥ ನಿರ್ಮಾಣಕ್ಕೆ ಮುಂಗಡ ಹಣ ನೀಡಲಾಯಿತು. ಪಟ್ಟಣದ ಶ್ರೀ ಸಿದ್ದಿವಿನಾಯಕ ವ್ಯವಸ್ಥಾಪನಾ ಸಮಿತಿ ಹಾಗೂ ಸಿದ್ದಿವಿನಾಯಕ ಸೇವಾ ಸಂಸ್ಥೆ ಭಕ್ತಾಧಿಗಳ ಬಹು ದಿನಗಳ ಬೇಡಿಕೆಯಂತೆ ಈ…
ಗ್ರಾಮೀಣ ಪ್ರದೇಶದ ಅಭಿವೃದ್ದಿಗೆ ನನ್ನ ಮೊದಲ ಆದ್ಯತೆ – ಬೇಳೂರು ಗೋಪಾಲಕೃಷ್ಣ |beluru
ಗ್ರಾಮೀಣ ಪ್ರದೇಶದ ಅಭಿವೃದ್ದಿಗೆ ನನ್ನ ಮೊದಲ ಆದ್ಯತೆ – ಬೇಳೂರು ಗೋಪಾಲಕೃಷ್ಣ ಹರತಾಳುವಿನಲ್ಲಿ ಗ್ರಾಮಸ್ಥರ ಬಹುವರ್ಷದ ಬೇಡಿಕೆಯನ್ನು ಈಡೇರಿಸಿದ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಗ್ರಾಮೀಣ ಪ್ರದೇಶದ ಅಭಿವೃದ್ಧಿಯೇ ನನ್ನ ಮೊದಲ ಆದ್ಯತೆ ಆ ನಿಟ್ಟಿನಲ್ಲಿ ಬಟ್ಟೆಮಲ್ಲಪ್ಪ – ರಿಪ್ಪನ್‌ಪೇಟೆ ಗೆ ಕೆ ಎಸ್ ಆರ್ ಟಿಸಿ ಬಸ್ ಸೌಲಭ್ಯ ಕಲ್ಪಿಸಿದ್ದೇನೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಮಾಜಿ ಸಚಿವ ಹರತಾಳು ಹಾಲಪ್ಪನವರ ಸ್ವಗ್ರಾಮದ ಗ್ರಾಮಸ್ಥರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ದೂರದ ರಿಪ್ಪನ್‌ಪೇಟೆ ಆನಂದಪುರ…
ಮುದ್ದೇಬಿಹಾಳದಲ್ಲಿ ಜು. 25 ರಂದು ಪತ್ರಿಕಾ ದಿನಾಚರಣೆ,ವಿಕಲಚೇತನರಿಗೆ ಸೌಲಭ್ಯಗಳ ವಿತರಣೆ
ಜು. 25 ರಂದು ಪತ್ರಿಕಾ ದಿನಾಚರಣೆ,ವಿಕಲಚೇತನರಿಗೆ ಸೌಲಭ್ಯಗಳ ವಿತರಣೆ ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ನೇತೃತ್ವದಲ್ಲಿ ಜು.25 ರಂದು ಬೆಳಗ್ಗೆ 10.30 ಕ್ಕೆ ರಾಘವೇಂದ್ರ lಮಂಗಲ ಭವನದಲ್ಲಿ ಪತ್ರಿಕಾ ದಿನಾಚರಣೆ, ಪದಾಧಿಕಾರಿಗಳ ಪದಗ್ರಹ ಹಾಗೂ ವಿಕಲಚೇತನರಿಗೆ ಸೌಲಭ್ಯಗಳ ವಿತರಣಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ತಾಲೂಕಾಧ್ಯಕ್ಷ ಶಂಕರ ಹೆಬ್ಬಾಳ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ,ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಕುಂಟೋಜಿ ಸಂಸ್ಥಾನ ಹಿರೇಮಠದ ಚೆನ್ನವೀರ ದೇವರು,ತಾಳಿಕೋಟಿ ಖಾಸ್ಗತೇಶ್ವರ ಮಠದ…