ಜಿಲ್ಲಾ ಸುದ್ದಿ:
ಗೋಪಾಲಕೃಷ್ಣ ಬೇಳೂರನ್ನು ಮೆಚ್ಚಿಸಲು ನಮ್ಮ ಉಚ್ಚಾಟನೆ; ಡಾ.ರಾಜನಂದಿನಿ ವ್ಯಂಗ್ಯ|sagara
ಸಾಗರ : ಬಿಜೆಪಿ ಸೇರುವ ಮೊದಲು ನಾನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದೇನೆ. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್ ನನ್ನನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಿರುವುದಾಗಿ ನೀಡಿರುವ ಹೇಳಿಕೆ ಹಾಸ್ಯಾಸ್ಪದವಾಗಿದೆ ಎಂದು ಬಿಜೆಪಿ ಪಕ್ಷದ ತಾಲೂಕು ಪ್ರಮುಖರಾದ ಡಾ.ರಾಜನಂದಿನಿ ತಿಳಿಸಿದರು. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿದ್ದು ಬಿಜೆಪಿ ಪರ ಕೆಲಸ ಮಾಡಿದ್ದರೆ ಉಚ್ಚಾಟನೆಗೆ ಒಂದು ಅರ್ಥ ಬರುತ್ತಿತ್ತು. ಆದರೆ ಪಕ್ಷಕ್ಕೆ ರಾಜಿನಾಮೆ ನೀಡಿ ಎರಡು ತಿಂಗಳ ನಂತರ ಉಚ್ಚಾಟನೆ ಮಾಡಿದ್ದಾಗಿ…
ನಿರಾಶಾದಾಯಕ ಬಜೆಟ್ – ಅರ್ ಎ ಚಾಬುಸಾಬ್|budget 23-24
ಸಿದ್ದರಾಮಯ್ಯ ಮಂಡಿಸಿರುವ ಈ ಬಾರಿಯ ಬಜೆಟ್ ಅತ್ಯಂತ ನಿರಾಶಾದಾಯಕ ಬಜೆಟ್ ಆಗಿದ್ದು, ಅತಿ ಮುಖ್ಯವಾಗಿ ಶಿಕ್ಷಣ ಮತ್ತು ಆರೋಗ್ಯ ಇಲಾಖೆಗೆ ಹೆಚ್ಚಿನ ಒತ್ತು ನಿಡುವಲ್ಲಿ ಎಡವಿದ್ದಾರೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಅರ್ ಎ ಚಾಬುಸಾಬ್ ವಿಶ್ಲೇಷಿಸಿದ್ದಾರೆ. ಪಟ್ಟದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ರಾಜ್ಯದ ಕೈಗಾರಿಕಾ ಕ್ಷೇತ್ರಕ್ಕೆ ಯಾವುದೇ ಪ್ರೋತ್ಸಾಹವಿಲ್ಲದ ಪ್ರಗತಿಹೀನ ಬಜೆಟ್ ಆಗಿದ್ದು ರಾಜ್ಯದ ಪ್ರಗತಿಗೆ ಪೂರಕ ಅಂಶಗಳು ಈ ಬಜೆಟ್‍ನಲ್ಲಿ ಇಲ್ಲವೇ ಇಲ್ಲ. ತಮ್ಮ ಚುನಾವಣಾ ಗೆಲುವಿಗೆ ಬೇಕಾದ ಗ್ಯಾರಂಟಿ ಮೂಲಕ ಏನೇನು…
ಕೋಣಂದೂರು : ಮಳೆಯಲ್ಲೇ ಶವ ಸಂಸ್ಕಾರ – ಮಾಜಿ ಗೃಹಸಚಿವರ ಸ್ವ ಕ್ಷೇತ್ರದಲ್ಲಿ ಇದೆಂತಹ ಅಮಾನವೀಯ ಘಟನೆ !!!!cremation
ಮಳೆಯಲ್ಲೇ ಶವ ಸಂಸ್ಕಾರ – ಮಾಜಿ ಗೃಹಸಚಿವರ ಸ್ವ ಕ್ಷೇತ್ರದಲ್ಲಿ ಇದೆಂತ ಅಮಾನವೀಯ ಘಟನೆ !? ತೀರ್ಥಹಳ್ಳಿ : ತಾಲೂಕಿನ ಕೋಣಂದೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ದೊಡ್ಡ ಕೆರೆ ಗ್ರಾಮದಲ್ಲಿರುವ ಸ್ಮಶಾನದಲ್ಲಿ ಗ್ರಾಮಪಂಚಾಯಿತಿಯ ಬೇಜವಾಬ್ದಾರಿಯಿಂದ ಸ್ಮಶಾನದ ಮೇಲ್ಭಾಗದ ಶೀಟುಗಳು ಇದ್ದರೂ ಸೋರುತ್ತಿದ್ದು ಅದರಲ್ಲೇ ಮೃತಪಟ್ಟ ವ್ಯಕ್ತಿಯೋರ್ವರ ಶವವನ್ನು ಕುಟುಂಬವರ್ಗ ಹಾಗೂ ಸ್ಥಳೀಯರು ಮಳೆ ನೀರಿನಲ್ಲಿ ಸಂಸ್ಕಾರ ನೆಡೆಸುತ್ತಿರುವ ಅಮಾನವೀಯ ಘಟನೆ ಮಾಜಿ ಗೃಹಸಚಿವರ ಸ್ವ ಕ್ಷೇತ್ರದಲ್ಲಿ ಶುಕ್ರವಾರ ನೆಡೆದಿದೆ. ಸ್ಮಶಾನದಲ್ಲಿ ಸೂಕ್ತ ವ್ಯವಸ್ಥೆ ಹಾಗೂ ನಿರ್ವಹಣೆ ಇಲ್ಲದೆ ಇರುವುದರಿಂದ…
ಯುವಕನ ಕೊಲೆ ಪ್ರಕರಣ – ನಾಲ್ವರಿಗೆ ಜೀವಾವಧಿ ಶಿಕ್ಷೆ|court
ಯುವಕನ ಕೊಲೆ ಪ್ರಕರಣ – ನಾಲ್ವರಿಗೆ ಜೀವಾವಧಿ ಶಿಕ್ಷೆ ಶಿವಮೊಗ್ಗ: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಪರಾಧಿಗಳಿಗೆ ಶಿವಮೊಗ್ಗ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. 2017 ಫೆ.8 ರಂದು ಶಿವಮೊಗ್ಗದ ಅಣ್ಣಾನಗರದಲ್ಲಿ ಯುವಕ ಅಯಾತ್ ಹುಮಾಯುನ್ ನನ್ನು ಕ್ಷುಲ್ಲಕ ಕಾರಣಕ್ಕೆ ಅರ್ಬಾಜ್, ಶಾರುಖ್ ಖಾನ್, ಶಾಬಾದ್ ಹಾಗು ಅಲ್ಯಾಜ್ ಎಂಬ ನಾಲ್ವರು ಕೊಲೆ ಮಾಡಿದ್ದರು. ಘಟನೆ ನಂತರ ಹತ್ಯೆಯಾದ ಯುವಕನ ಕುಟುಂಬಸ್ಥರು ದೊಡ್ಡಪೇಟೆ ಠಾಣೆಯಲ್ಲಿ ನಾಲ್ವರ ವಿರುದ್ಧ ದೂರು ದಾಖಲಿಸಿದ್ದರು. ಪ್ರಕರಣದ ಬೆನ್ನತ್ತಿದ್ದ…
ರಿಪ್ಪನ್‌ಪೇಟೆ : ಮಳೆ ಕೊರತೆ ನಡುವೆಯೂ ಬಿರುಸುಗೊಂಡ ಕೃಷಿ ಚಟುವಟಿಕೆ|Agricultural activity
ಹೊಸನಗರ ತಾಲ್ಲೂಕಿನಲ್ಲಿ 9300 ಹೆಕ್ಟೇರ್ ಕೃಷಿ ಭೂ ಪ್ರದೇಶದಲ್ಲಿ ಕಬ್ಬು, ಮೆಕ್ಕೆಜೋಳ ಮತ್ತು ಭತ್ತ ಬೆಳೆಯುವ ಭೂಮಿ ಇದ್ದು ಜೂನ್ ಅಂತ್ಯದೊಳಗೆ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು ಕೃಷಿ ಬಿತ್ತನೆ ಕಾರ್ಯದಲ್ಲಿ ವಿಳಂಬವಾಗಿದೆ ಎಂದು ಹೊಸನಗರ ತಾಲ್ಲೂಕು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಸಚಿನ್ ಹೆಗಡೆ ತಿಳಿಸಿದರು. ರಿಪ್ಪನ್‌ಪೇಟೆ ರೈತ ಸಂಪರ್ಕ ಕೇಂದ್ರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ತಾಲ್ಲೂಕಿನಲ್ಲಿ ಭತ್ತ ಬಿತ್ತನೆಗೆ 8600 ಹೆಕ್ಟೇರ್ ಗುರಿ ಹೊಂದಿದ್ದು ಮಳೆ ವಿಳಂಬದ ಕಾರಣ ಭತ್ತದ ಸಸಿಮಡಿ ತಯಾರಿ ಪ್ರಗತಿಯಲ್ಲಿದೆ. ಅಲ್ಲದೆ ಮೆಕ್ಕೆಜೋಳ…
ಕಾಗೋಡು ತಿಮ್ಮಪ್ಪ ಪುತ್ರಿ ಡಾ ರಾಜಾನಂದಿನಿ ಕಾಂಗ್ರೆಸ್ ನಿಂದ ಉಚ್ಚಾಟನೆ|Expulsion
ಸಾಗರ : ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಪುತ್ರಿ ಡಾ. ರಾಜನಂದಿನಿ ಸೇರಿದಂತೆ 13 ಜನರನ್ನು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಆಡಳಿತ ಉಸ್ತುವಾರಿ ಸಿ.ಎಸ್.ಚಂದ್ರಭೂಪಾಲ್ ಉಚ್ಛಾಟನೆ ಮಾಡಿದ್ದಾರೆ. ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಮುಖರು ಪಕ್ಷವನ್ನು ಬಿಟ್ಟು ಇನ್ನಿತರ ಪಕ್ಷಗಳಿಗೆ ಪಕ್ಷಾಂತರ ಮಾಡಿರುವುದು ಮತ್ತು ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವ ಹಿನ್ನೆಲೆಯಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಶಿಫಾರಸ್ಸಿನಂತೆ ಆರು ವರ್ಷಗಳ ಕಾಲ ಪಕ್ಷದ ಪ್ರಾಥಮಿಕ…
ಭಾರಿ ಮಳೆಗೆ ಕುಸಿದು ಬಿದ್ದ ಶಾಲೆಯ ಕಾಂಪೌಂಡ್ – ತಪ್ಪಿದ ಭಾರಿ ಅನಾಹುತ|Rain
ಸಾಗರ : ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ನೆಹರೂ ನಗರದಲ್ಲಿರುವ ಅರಳಿಕಟ್ಟೆ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಕಾಂಪೌಂಡ್ ಗುರುವಾರ ಕುಸಿದು ಬಿದ್ದಿದ್ದು ಯಾವುದೇ ವಿದ್ಯಾರ್ಥಿಗಳಿಗೆ ತೊಂದರೆಯಾಗಿಲ್ಲ.ಹದಿನೈದು ದಿನಗಳ ಹಿಂದೆ ಶಾಲೆಯ ಮೇಲ್ಛಾವಣಿ ಕುಸಿದು ಬಿದ್ದಿತ್ತು. ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ಸಂದರ್ಭದಲ್ಲಿ ಪೋಷಕರು ಶಾಲೆಯ ದುಸ್ಥಿತಿ ಬಗ್ಗೆ ಅಧಿಕಾರಿಗಳಿಗೆ ಮನವಿ ಮಾಡಿದ್ದರು. ಪೋಷಕರು, ಶಾಲಾಭಿವೃದ್ಧಿ ಸಮಿತಿ ಅಧಿಕಾರಿಗಳಿಗೆ ಮನವಿ ಮಾಡಿದ್ದಾಗ್ಯೂ…
ಹಲವು ವರ್ಷಗಳ ಹಿಂದೆ ಮಳೆಗಾಗಿ ಪ್ರಾರ್ಥಿಸಿ ಡ್ಯಾಮ್ ಗೆ ಬಿಟ್ಟಿದ್ದ ದೇವರ ಮೂರ್ತಿ ದಿಡೀರ್ ಪ್ರತ್ಯಕ್ಷ|linganamakki
ಶಿಕಾರಿಪುರ : ಮಲೆನಾಡಿನಲ್ಲಿ ಮಳೆಯ ಕೊರತೆ ಹಿನ್ನೆಲೆ ಲಿಂಗನಮಕ್ಕಿ ಒಡಲು ಬರಿದಾಗಿದ್ದು ಮಾಲಿಕಾಂಬ ದೇವರ ಮೂರ್ತಿ ಲಿಂಗನಮಕ್ಕಿ ಹಿನ್ನೀರಿನಲ್ಲಿ ಕಾಣಿಸಿಕೊಂಡಿದೆ. ಮಾಲಿಕಾಂಬ ದೇವರ ಮೂರ್ತಿ ಶಿಕಾರಿಪುರದ ಚಿಕ್ಕ ಸಾಲೂರು ಗ್ರಾಮದ ಗ್ರಾಮ ದೇವತೆಯಾಗಿದೆ. ಕಳೆದ 12 ವರ್ಷಗಳ ಹಿಂದೆ ಮಾಲೀಕಾಂಬ ದೇವತೆಯ ಮೂರ್ತಿಯನ್ನ ಹಿನ್ನಿರಿನಲ್ಲಿ ಬಿಡಲಾಗಿತ್ತು. ಹಿನ್ನಿರಿನಲ್ಲಿ ನೀರು ಬರಿದಾದ ಹಿನ್ನೆಲೆ ದೇವರ ಮೂರ್ತಿ ಗೋಚರಗೊಂಡಿದೆ. 12 ವರ್ಷ ಕಳೆದರೂ ಸಹ ಯಾವುದೇ ಹಾನಿಯಾಗದೆ ಮಾಲಿಕಾಂಬ ದೇವರ ಮೂರ್ತಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಗ್ರಾಮಸ್ಥರು…
ಸಂಸದ ಬಿವೈ ರಾಘವೇಂದ್ರ ಮನೆಗೆ ಯುವ ಕಾಂಗ್ರೆಸ್ ನಿಂದ ಮುತ್ತಿಗೆ ಯತ್ನ – ಕಾರ್ಯಕರ್ತರು ವಶಕ್ಕೆ|protest
ಶಿವಮೊಗ್ಗ : ರಾಜ್ಯ ಕಾಂಗ್ರೆಸ್ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡಲು ಕೇಂದ್ರ ಬಿಜೆಪಿ ಸರ್ಕಾರ ನಿರಾಕರಿಸಿದೆ ಎಂದು ಆರೋಪಿಸಿ ಜಿಲ್ಲಾ ಯುವ ಕಾಂಗ್ರೆಸ್‌ನಿಂದ ಸಂಸದ ಬಿ ವೈ ರಾಘವೇಂದ್ರ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದೆ. ಈ ವೇಳೆ 35ಕ್ಕೂ ಹೆಚ್ಚು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. 9 ವರ್ಷದಿಂದ ಕೇಂದ್ರದಲ್ಲಿ ಅಧಿಕಾರ ನಡೆಸುವ ಬಿಜೆಪಿ ಸರ್ಕಾರ ದ್ವೇಷ ರಾಜಕಾರಣವನ್ನು ಮಾಡುತ್ತಾ ಬಂದಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನೀಡಿದ 650ಕ್ಕೂ ಹೆಚ್ಚು ಭರವಸೆಗಳನ್ನು ಈಡೇರಿಸದೆ…
ಭರ್ತಿಯಾದ ಗಾಜನೂರಿನ ತುಂಗಾ ಡ್ಯಾಂ – ಸಂಜೆಯೊಳಗೆ ಗೇಟ್ ಓಪನ್ : ನದಿಪಾತ್ರದ ಜನರಿಗೆ ಎಚ್ಚರಿಕೆ|tunga
ಶಿವಮೊಗ್ಗ : ಮುಂಗಾರು ಮಳೆಯ ಅವಧಿಯಲ್ಲಿ ರಾಜ್ಯದಲ್ಲಿ ಮೊದಲಿಗೆ ಭರ್ತಿಯಾಗುವ ಹಾಗೂ ಕಡಿಮೆ ವ್ಯಾಪ್ತಿ – ವಿಸ್ತೀರ್ಣ ಹೊಂದಿರುವ, ಶಿವಮೊಗ್ಗ ತಾಲೂಕಿನ ಗಾಜನೂರಿನಲ್ಲಿರುವ ತುಂಗಾ ಜಲಾಶಯವು ಗರಿಷ್ಠ ಮಟ್ಟಕ್ಕೆ ಬಂದಿದೆ. ಬುಧವಾರ ಬೆಳಿಗ್ಗೆ 8.30 ರ ಮಾಹಿತಿಯಂತೆ, ಡ್ಯಾಂ ಗರಿಷ್ಠ ಮಟ್ಟವಾದ 588.24 ಅಡಿ ತಲುಪಲು ಇನ್ನೂ ಕೇವಲ 2 ಅಡಿಯಷ್ಟು ನೀರು ಹರಿದು ಬರಬೇಕಾಗಿದೆ. ಪ್ರಸ್ತುತ 4830 ಕ್ಯೂಸೆಕ್ ನೀರು ಡ್ಯಾಂಗೆ ಹರಿದು ಬರುತ್ತಿದೆ. ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ, ಒಳಹರಿವಿನ ಪ್ರಮಾಣದಲ್ಲಿ ನಿರಂತರ ಏರಿಕೆ…