ಜಿಲ್ಲಾ ಸುದ್ದಿ:
ಬೇಳೂರು ಗೋಪಾಲಕೃಷ್ಣ ರನ್ನು ಗೆಲ್ಲಿಸುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕು – ಕಾಗೋಡು ತಿಮ್ಮಪ್ಪ|Sagara
ಶಿವಮೊಗ್ಗ ಜಿಲ್ಲೆಯ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಲು ಏಳು ಜನ ಆಕಾಂಕ್ಷಿಗಳು ಹೈಕಮಾಂಡ್ ಗೆ ಮನವಿ ಸಲ್ಲಿಸಿದ್ದರು ಅದರಲ್ಲಿ ಹಿರಿಯ ಮುತ್ಸದಿ ಕಾಗೋಡು ತಿಮ್ಮಪ್ಪ ಹಾಗೂ ಅವರ ಮಗಳು ಡಾ.ರಾಜನಂದಿನಿ ಪ್ರಬಲ ಆಕಾಂಕ್ಷಿಯಾಗಿದ್ದರು. ಕೊನೆಯಲ್ಲಿ ಹೈಕಮಾಂಡ್ ಪಕ್ಷದ ಆಂತರಿಕ ಸಮೀಕ್ಷೆಗೆ ಮನ್ನಣೆ ನೀಡಿ ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ರವರನ್ನು ಹೈಕಮಾಂಡ್ ಅಂತಿಮಗೊಳಿಸಿದ್ದು ಕಾಂಗ್ರೆಸ್ ಕಾರ್ಯಕರ್ತರ ಹುಮ್ಮಸ್ಸು ಇಮ್ಮಡಿಯಾಗಿಸಿತ್ತು. ಆದರೆ ಕ್ಷೇತ್ರದ ಕಾಂಗ್ರೆಸ್ ಪಕ್ಷದಲ್ಲಿ ಅನೇಕ ಬಣಗಳಿವೆ…
ಶಿಕಾರಿಪುರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ|144 ಸೆಕ್ಷನ್ ಜಾರಿ
ಮೀಸಲಾತಿ ಪ್ರಮಾಣ ಕಡಿಮೆ ಮಾಡಿರುವುದನ್ನು ಖಂಡಿಸಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದಲ್ಲಿ ಬಂಜಾರ ಸೇರಿದಂತೆ ವಿವಿಧ ಸಮುದಾಯದ ವತಿಯಿಂದ ಪ್ರತಿಭಟನೆ ನಡೆಸಿದರು.ಈ ವೇಳೆ ಕಲ್ಲು ತೂರಾಟ ನಡೆಸಿ ಟೈರ್‌ಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಾ.ಅಂಬೇಡ್ಕರ್ ಸರ್ಕಲ್‌ನಿಂದ ತಾಲೂಕು ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಈ ವೇಳೆ ಕೆಲವರು ಮಾಜಿ ಸಿಎಂ ಯಡಿಯೂರಪ್ಪ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಶಿಕಾರಿಪುರದ ಮಿನಿ ವಿಧಾನಸೌಧ, ಬಸ್ ನಿಲ್ದಾಣದ ಬಳಿ ಬಂಜಾರ ಸಮುದಾಯದ ಯುವಕರು ಪ್ರತಿಭಟನೆ ನಡೆಸಿದರು….
ರಿಪ್ಪನ್‌ಪೇಟೆ – 4.86 ಕೋಟಿ ರೂ ವೆಚ್ಚದ ಬಾಲಕರ ವಸತಿ ನಿಲಯ ಲೋಕಾರ್ಪಣೆಗೊಳಿಸಿದ ಶಾಸಕ ಹರತಾಳು ಹಾಲಪ್ಪ
ರಿಪ್ಪನ್‌ಪೇಟೆ : ದೇಶದಲ್ಲಿ ವಿದ್ಯಾರ್ಜನೆಗೆ ಪ್ರಸ್ತುತ ಸಂಧರ್ಭದಲ್ಲಿ ವಿಫುಲವಾದ ಅವಕಾಶವಿದ್ದು ಅದನ್ನು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳಬೇಕಾಗಿದೆ,ನಮ್ಮ ದೇಶ ನಾಗಲೋಟದಲ್ಲಿ ಅಭಿವೃದ್ದಿಯತ್ತ ಸಾಗುತ್ತಿದೆ ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ಅವರು ಇಂದು ಪಟ್ಟಣದಲ್ಲಿ 4 ಕೋಟಿ 86 ಲಕ್ಷ ರೂ ವೆಚ್ಚದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ ತಮ್ಮ ಅಧಿಕಾರಾವಧಿಯಲ್ಲಿ ಸಾಗರ ಹೊಸನಗರ ಕ್ಷೇತ್ರದಲ್ಲಿ ಹಿಂದೆಂದೂ ಕಾಣದಷ್ಟು ಅಭಿವೃದ್ಧಿ ಕಾರ್ಯಗಳು…
ಹೊಂಬುಜ : ಶ್ರವಣಬೆಳಗೊಳದ ಪರಮಪೂಜ್ಯ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರಿಗೆ ಶ್ರದ್ಧಾಂಜಲಿ|hombuja
ಶ್ರವಣಬೆಳಗೊಳದ ಪರಮಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರಿಗೆ ಶ್ರದ್ಧಾಂಜಲಿಯ ನುಡಿನಮನಗಳು ಆಧುನಿಕ ಬೆಳಗೊಳದ ಶಿಲ್ಪಿ, ಅತಿಶಯ ಶ್ರೀಕ್ಷೇತ್ರ ಶ್ರವಣಬೆಳಗೊಳದ ಪರಮಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು 54 ವರ್ಷ ಜನಸಮುದಾಯ ಹಾಗೂ ಶ್ರೀಮಠವನ್ನು ಮುನ್ನಡೆಸಿದ ಪ್ರಾತಃ ಸ್ಮರಣೀಯರು ಹಾಗೂ ಮಾರ್ಗದರ್ಶಕರೂ ಆಗಿದ್ದ ಅವರ ನೇತೃತ್ವವನ್ನು ಕಳೆದುಕೊಂಡ ನಮ್ಮ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಪೂಜ್ಯರು ತಮ್ಮ ಬಾಲ್ಯ ಜೀವನದ ವಿದ್ಯಾಭ್ಯಾಸವನ್ನು ಶ್ರೀಕ್ಷೇತ್ರ ಹೊಂಬುಜದ ಶ್ರೀಮಠದ ಗುರುಕುಲದಲ್ಲಿ ಮಾಡಿದ್ದರು ಎಂಬುದು ನಮ್ಮೆಲ್ಲರ ಹೆಮ್ಮೆಯ ಸಂಗತಿಯಾಗಿದೆ….
ಸೇನಾ ಹೆಲಿಕಾಪ್ಟರ್ ನಲ್ಲಿ ಶಿವಮೊಗ್ಗಕ್ಕೆ ಆಗಮಿಸಿ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಿದ ಪ್ರಧಾನಿ ಮೋದಿ|modi
ಜನಸಂಕಲ್ಪ ಮಹಾಸಂಗಮ ಸಮಾವೇಶಕ್ಕೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಸೇನಾ ಹೆಲಿಕಾಪ್ಟರ್ ಮೂಲಕ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಅಲ್ಲಿಂದ ವಿಶೇಷ ವಿಮಾನದಲ್ಲಿ ನವದೆಹಲಿಗೆ ಪ್ರಯಾಣ ಬೆಳೆಸಿದರು. ಪ್ರಧಾನಿ ನರೇಂದ್ರ ಮೋದಿ, ಅವರ ಸಿಬ್ಬಂದಿಗಳು ಹಾಗೂ ಭದ್ರತಾ ಸಿಬ್ಬಂದಿಗಳು ಮೂರು ಸೇನಾ ಹೆಲಿಕಾಪ್ಟರ್’ನಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಸಂಸದ ಬಿ.ವೈ. ರಾಘವೇಂದ್ರ, ಗೃಹ ಸಚಿವ ಆರಗ ಜ್ಞಾನೇಂದ್ರ, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ಶಾಸಕರಾದ ಹಲತಾಳು ಹಾಲಪ್ಪ, ಎಂಎಲ್’ಸಿಗಳಾದ ಡಿ.ಎಸ್. ಅರುಣ್,…
ಕಳಪೆ ಕಾಮಗಾರಿಗೆ ಆರಗ ಜ್ಞಾನೇಂದ್ರ ಉಗ್ರಾವತಾರ – ಬೆಚ್ಚಿ ಬಿದ್ದ ಅಧಿಕಾರಿಗಳು|ಪರ್ಸೆಂಟೇಜ್ ತಿಂದು ನಮಗೆ ಕೆಟ್ಟ ಹೆಸರು ತರ್ತೀರಾ!!|araga
ತೀರ್ಥಹಳ್ಳಿ : ಶಾಸಕರು, ಸಚಿವರು ಸರ್ಕಾರದ ಮಟ್ಟದಲ್ಲಿ ವಿವಿಧ ಕಾಮಗಾರಿಗಳನ್ನು ಮಾಡಲು ಹಣ ಮಂಜುರಾತಿ ಮಾಡಿಸಿಕೊಂಡು ಬರುತ್ತಾರೆ. ಆದರೆ, ಆ ಅನುದಾನದಲ್ಲಿ ಸಮರ್ಪಕವಾಗಿ ಕೆಲಸ ಮಾಡದಿದ್ದರೇ ಯಾರಿಗಾದರೂ ಸಿಟ್ಟು ಬಂದೆ ಬರುತ್ತದೆ.ತೀರ್ಥಹಳ್ಳಿ ಆರಗ ಜ್ಞಾನೇಂದ್ರರವರು ಸಹ ಇದೇ ಕಾರಣಕ್ಕೆ ಸಿಟ್ಟುಮಾಡಿಕೊಂಡ ಘಟನೆ ನಡೆದಿದೆ. ತೀರ್ಥಹಳ್ಳಿಯ ಬಾಳೆ ಕೂಡ್ಲು, ಗುಡ್ಡೆಪಾಲ್ ರಸ್ತೆ ಕಳಪೆಯಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದರು,ಅಲ್ಲದೆ ಇದೇ ವಿಚಾರವನ್ನು ಸಚಿವ ಆರಗ ಜ್ಞಾನೇಂದ್ರರವರ ಗಮನಕ್ಕೆ ತಂದಿದ್ದರು. ಹೀಗಾಗಿ ಗುಣಮಟ್ಟವನ್ನ ಖುದ್ದು ವೀಕ್ಷಿಸುವ ಸಲುವಾಗಿ ಸಚಿವರು ಸ್ಥಳಕ್ಕೆ ದೌಡಾಯಿಸಿದ್ಧಾರೆ. …
ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ – ಜಿಲ್ಲೆಯ 3 ಕ್ಷೇತ್ರಕ್ಕೆ ಅಭ್ಯರ್ಥಿ ಪ್ರಕಟ | ಬೇಳೂರು ಸ್ಪರ್ಧೆಗೆ ಗ್ರೀನ್ ಸಿಗ್ನಲ್
ವಿಧಾನ ಸಭೆ ಚುನಾವಣೆಗೆ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಮೊದಲ ಹಂತದಲ್ಲಿ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಲಾಗಿದೆ. ಈ ಪೈಕಿ ಶಿವಮೊಗ್ಗ ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಗಿದೆ. ನಿರೀಕ್ಷೆಯಂತೆ ಸೊರಬ ವಿಧಾನಸಭೆ ಕ್ಷೇತ್ರದಿಂದ ಮಧು ಬಂಗಾರಪ್ಪ, ಭದ್ರಾವತಿಯಿಂದ ಬಿ.ಕೆ.ಸಂಗಮೇಶ್ವರ, ಸಾಗರದಿಂದ ಬೇಳೂರು ಗೋಪಾಲಕೃಷ್ಣ ಅವರ ಹೆಸರನ್ನು ಪ್ರಕಟಿಸಲಾಗಿದೆ. ಮೂರು ಕ್ಷೇತ್ರದ ಅಭ್ಯರ್ಥಿಗಳನ್ನು ಪ್ರಕಟಿಸಿರುವುದು ಪಕ್ಷದ ಕಾರ್ಯಕರ್ತರ ಹುಮ್ಮಸ್ಸು ಹೆಚ್ಚಿಸಿದೆ. ಸಾಗರ ಕ್ಷೇತ್ರದಲ್ಲಿ ಬೇಳೂರು ಗೋಪಾಲಕೃಷ್ಣ ರವರಿಗೆ ಟಿಕೆಟ್ ನೀಡಿರುವುದು ಕಾರ್ಯಕರ್ತರಲ್ಲಿ ಹುಮ್ಮಸ್ಸು…
ರಿಪ್ಪನ್‌ಪೇಟೆ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಕೊಟ್ಟಿಗೆ ಸುಟ್ಟು ಭಸ್ಮ – ಅಪಾರ ಹಾನಿ|fire
ಹೊಸನಗರ ತಾಲೂಕಿನ ಬಾಳೂರು ಗ್ರಾಪಂ ವ್ಯಾಪ್ತಿಯ ಮಾದಾರದಿಂಬದಲ್ಲಿ ಗುರುವಾರ ಮಧ್ಯರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿ ಕೊಟ್ಟಿಗೆ ಮನೆಯೊಂದು ಸಂಪೂರ್ಣ ಭಸ್ಮಗೊಂಡು ಅದರಲ್ಲಿದ್ದ ಮರ-ಮುಟ್ಟು ಕೃಷಿ ಉಪಕರಣ ಸೇರಿದಂತೆ ಸಾವಿರಾರು ರೂ ನಷ್ಟ ಉಂಟಾಗಿದೆ. ಮಾದಾರದಿಂಬ ಗ್ರಾಮದ ಕೃಷಿಕ ಷಣ್ಮುಖಪ್ಪ ಗೌಡರ ಕೊಟ್ಟಿಗೆ ಮನೆಯಲ್ಲಿ ಮದ್ಯರಾತ್ರಿ ಬೆಂಕಿ ಕಾಣಿಸಿ ಕೊಂಡಿದೆ. ಬಳಿಕ ಕೆಲವೇ ಕ್ಷಣಗಳಲ್ಲಿ ಬೆಂಕಿ ಕೆನ್ನಾಲಿಗೆ ಕೊಟ್ಟಿಗೆ ತುಂಬಾ ಆವರಿಸಿದೆ.ತಕ್ಷಣ ಕೊಟ್ಟಿಗೆಯಲ್ಲಿದ್ದ ದನಗಳನ್ನು ಹೊರತರಲಾಯಿತು ಆದರೂ ಕೆಲವು ದನಗಳಿಗೆ ಸುಟ್ಟ ಗಾಯಗಳಾಗಿವೆ….
ವಸ್ತುನಿಷ್ಠ ವರದಿಗೆ ಅಡ್ಡಿ, ಪತ್ರಕರ್ತರ ಸ್ವಾತಂತ್ರ್ಯ ಹರಣಕ್ಕೆ ಯತ್ನ – ಶಾಸಕ ಹರತಾಳು ಹಾಲಪ್ಪ ವಿರುದ್ದ ದೂರು|halappa
ಸಾಗರದಲ್ಲಿ ವರದಿಯೊಂದಕ್ಕೆ ಸಂಬಂಧಿಸಿದಂತೆ ಶಾಸಕರು ಪತ್ರಕರ್ತರೊಬ್ಬರ ಜೊತೆ ನಡೆಸಿದ ಸಂಭಾಷಣೆ, ಅವಮಾನ, ಧಮ್ಕಿ ಹಾಕಿದಂತೆ ಇದ್ದು, ನಿರ್ಭಯವಾಗಿ ವರದಿ ಮಾಡಲು ಪತ್ರಕರ್ತರಿಗೆ ಸೂಕ್ತ ರಕ್ಷಣೆ ಮತ್ತು ವಾತಾವರಣ ನಿರ್ಮಿಸಬೇಕೆ ಆಗ್ರಹಿಸಿ ರಾಜ್ಯ ಕಾರ್ಯನಿರತ ಪತ್ರಕರ್ತ ಸಂಘ ಇಂದು ಸಾಗರ ಶಾಖೆ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿತು. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಾಗರ ಕಾರ್ಯ ನಿರತ ಪತ್ರಕರ್ತರ ಸಂಘ ಇಂದು ಸಾಗರದ ಉಪ ವಿಭಾಗಧಿಕಾರಿಗಳ ಕಛೇರಿ ಎದುರು ಮೌನ ಪ್ರತಿಭಟನೆ ನೆಡೆಸಿ ಮನವಿ ಸಲ್ಲಿಸಲಾಯಿತು. ನಂತರ ಶಾಸಕ ಹರತಾಳು…
“ಮೋದಿ ರಾಂಗ್ ನಂಬರ್”-“ಬಿಜೆಪಿ ರಾಂಗ್ ನಂಬರ್ ” : ವಿನೂತನ ಪ್ರತಿಭಟನೆಗೆ ಮುಂದಾದ ವಿದ್ಯಾರ್ಥಿ ಸಂಘಟನೆ|modi-wrong-number
ಶಿವಮೊಗ್ಗ : ಬೆಲೆ ಏರಿಕೆ, ಭ್ರಷ್ಠಾಚಾರ, ಕಳಪೆ ಕಾಮಗಾರಿ, ಜಾತಿ ಧರ್ಮದ ನಡುವಿನ ವೈಷಮ್ಯ ಕುರಿತು ವಿದ್ಯಾರ್ಥಿ ಸಂಘಟನೆ ವಿನೂತನ ಪ್ರತಿಭಟನೆಗೆ ಮುಂದಾಗಿದೆ. ಚುನಾವಣೆ ಹಿನ್ನಲೆಯಲ್ಲಿ ಈ ಪ್ರತಿಭಟನೆ ಮಹತ್ವ ಪಡೆದುಕೊಂಡಿದೆ. ಇಂದು ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿದ್ಯಾರ್ಥಿ ಸಂಘಟನೆಯ ಸಂಸ್ಥಾಪಕರ ಅಧ್ಯಕ್ಷ ವಿನಯ್ ಕೆ ಸಿ ರಾಜವತ್ “ಮೋದಿ ರಾಂಗ್ ನಂಬರ್” “ಬಿಜೆಪಿ ರಾಂಗ್ ನಂಬರ್ ” ಎಂಬ ಘೋಷಣೆ ಅಡಿ ಮಾ.30 ರಂದು ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು. ರಾಜ್ಯ ಸರ್ಕಾರ ಹಾಗೂ ಕೇಂದ್ರ…