ಜಿಲ್ಲಾ ಸುದ್ದಿ:
ಸಮಾಜದಲ್ಲಿ ಸಮಾನತೆ ತರುವುದೇ ಕಾಂಗ್ರೇಸ್ ಸಿದ್ದಾಂತ -ಕಾಗೋಡು ತಿಮ್ಮಪ್ಪ|congress
ಸಮಾಜದಲ್ಲಿ ಸಮಾನತೆ ತರುವುದೇ ಕಾಂಗ್ರೇಸ್ ಸಿದ್ದಾಂತ’’ ಕಾಗೋಡು ತಿಮ್ಮಪ್ಪ ರಿಪ್ಪನ್‌ಪೇಟೆ;-ಹೆಣ್ಣು ಮಗಳು ಸ್ವತಂತ್ರವಾಗಿ ವಿಚಾರವಂತರಾಗಿ ಬದುಕುವಂತ ಇಚ್ಚಾಶಕ್ತಿಯನ್ನು ಪ್ರದರ್ಶಿಸಬೇಕು,ಗೇಣಿದಾರರಿಗೆ ಭೂ ಒಡೆತನ ಕೊಡುವುದು ಹೇಗೋ ಹಾಗೆ ಸಮಾಜದಲ್ಲಿ ಹೆಣ್ಣು ಮಗಳಿಗೆ ಪಾಲುದಾರಳು ಆ ಕಾರಣ ಹೆಣ್ಣು ಮಗಳಿಗೆ ಸಮಾನವಾಗಿ ಅಸ್ತಿ ಕೊಡಬೇಕು ಎಂಬ ತತ್ವವನ್ನು ಜಾರಿಗೊಳಿಸಿದ್ದು ಕಾಂಗ್ರೇಸ್ ಪಕ್ಷ ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳು. ಪ್ರಜಾತಂತ್ರ ವ್ಯವಸ್ಥೆಗೆ ನೀವೇ ರಾಜರಾಗುತ್ತೀರಾ ಅಧೀನಾರಾಗುತ್ತೀರಾ ಆ ನಿಟ್ಟಿನಲ್ಲಿ ಪ್ರಜಾತಂತ್ರ ವ್ಯವಸ್ಥೆಯನ್ನು ಬಲಿಷ್ಟಗೊಳಿಸಬೇಕು ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು. ರಿಪ್ಪನ್‌ಪೇಟೆಯ…
ಶಾಸಕ ಹರತಾಳು ಹಾಲಪ್ಪ ವಿರುದ್ದ ಯಡಿಯೂರಪ್ಪ ರವರ ಬಳಿ ದೂರು ಸಲ್ಲಿಸಿದ ಬಿಜೆಪಿ ಮುಖಂಡರು|BJP
ಶಾಸಕ ಹಾಲಪ್ಪ ವಿರುದ್ಧ ಬಿಎಸ್‌ವೈಗೆ ದೂರು ಸಾಗರ ಶಾಸಕ ಹರತಾಳು ಹಾಲಪ್ಪನ ವರಿಗೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ತಪ್ಪಿಸುವ ನಿಟ್ಟಿನಲ್ಲಿ ಬಿಜೆಪಿಯ ಹಲವು ಘಟಾನು ಘಟಿ ನಾಯಕರು, ಸಂಘದ ಹಿರಿಯರು ಸದ್ದಿಲ್ಲದೆ ಕೆಲಸ ಮಾಡುತ್ತಿದ್ದಾರೆ. ಶನಿವಾರ ಶಿಕಾರಿಪುರದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂ ರಪ್ಪ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರರನ್ನು ಭೇಟಿ ಮಾಡಿದ ವಿರೋಧಿ ಬಣ ಬಹಳಷ್ಟು ಹೊತ್ತು ಚರ್ಚೆ ನಡೆಸಿದೆ. ಮುಖ್ಯವಾಗಿ ಎಲ್ಲರ ಮಾತುಗಳನ್ನೂ ಬಿಎಸ್‌ವೈ, ಸಮಾಧಾನ…
ಹೊಂಬುಜ ಜಾತ್ರಾ ಮಹೋತ್ಸವಕ್ಕೆ ಪರಮಪೂಜ್ಯ ಸ್ವಸ್ತಿಶ್ರೀಗಳವರಿಂದ ಚಾಲನೆ|hombuja
ಹೊಂಬುಜ ಜಾತ್ರಾ ಮಹೋತ್ಸವಕ್ಕೆ ಪರಮಪೂಜ್ಯ ಸ್ವಸ್ತಿಶ್ರೀಗಳವರಿಂದ ಚಾಲನೆ ಹೊಂಬುಜ : ಅತಿಶಯ ಶ್ರೀಕ್ಷೇತ್ರ ಹೊಂಬುಜ ಜೈನ ಮಠದಲ್ಲಿ ಪರಂಪರಾನುಗತವಾಗಿ ನಡೆದು ಬಂದಿರುವ ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಹಾಗೂ ಮಹಾಮಾತೆ ಶ್ರೀ ಪದ್ಮಾವತಿ ಅಮ್ಮನವರ ಮಹಾರಥೋತ್ಸಕ್ಕೆ 2023ರ ಮಾರ್ಚ್ 12ರ ಭಾನುವಾರ ಬೆಳಿಗ್ಗೆ ಧ್ವಜಾರೋಹಣ ಮಾಡುವುದರ ಮೂಲಕ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮಿಗಳವರು ಚಾಲನೆ ನೀಡಿದರು. ಸಂಜೆ ನಾಗವಾಹನ ಉತ್ಸವವು ಜರುಗಿತು. ಈ ಎಲ್ಲಾ ಪೂಜಾ ಹಾಗೂ ಉತ್ಸವಗಳಲ್ಲಿ ಧರ್ಮ ಬಾಂಧವರು ಪಾಲ್ಗೊಂಡಿದ್ದರು….
ಆವಿನಹಳ್ಳಿ ಸಮೀಪದಲ್ಲಿ ರಸ್ತೆ ಅಪಘಾತ – ಗಂಡು ಕಾಡುಕೋಣ ಸಾವು|accident
ರಸ್ತೆ ಅಪಘಾತದಲ್ಲಿ ಕಾಡುಕೋಣ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದ ಹೊರವಲಯದಲ್ಲಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ. ಸಾಗರ ಮತ್ತು ಹೊಸನಗರದ ಸುತ್ತಮುತ್ತ ಕಾಡು ಕೋಣಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಕಾಡುಕೋಣಗಳ ವಲಯವಾಗಿದ್ದರಿಂದ ವಾಹನಗಳಿಗೆ ಸಿಲುಕಿ ಕಾಡು ಪ್ರಾಣಿಗಳು ಸಾವನ್ನಪ್ಪುತ್ತಿರುವ ಘಟನೆ ಹೆಚ್ಚುತಿದೆ. ಸಾಗರ ಮತ್ತು ಸಿಗಂದೂರು ರಸ್ತೆಯಲ್ಲಿ ಸುಮಾರು 5 ವರ್ಷದ ಗಂಡು ಕಾಡುಕೋಣ ರಕ್ತ ಕಾರಿಕೊಂಡು ರಸ್ತೆಯ ಬಲಭಾಗಕ್ಕೆ ಬಿದ್ದಿದೆ. ಲಾರಿ ಅಥವಾ ದೊಡ್ಡ ವಾಹನಗಳೇ ಈ ಕಾಡು ಪ್ರಾಣಿಯ ಸಾವಿಗೆ ಕಾರಣವಿರಬಹುದು ಎಂದು ಅಂದಾಜಿಸಲಾಗಿದೆ. ಆವಿನಹಳ್ಳಿ…
ಅಕ್ರಮ ಮರಳು ಸಾಗಾಣಿಕೆ – 3 ಟಿಪ್ಪರ್ ಲಾರಿ ವಶ|
ಶಿವಮೊಗ್ಗ ಜಿಲ್ಲೆಯ ಸಾಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಮರಳು ಸಾಗಾಣಿಕೆ ವಿಚಾರದಲ್ಲಿ ಮೂರು ಸುಮೋಟೋ ಪ್ರಕರಣ ದಾಖಲಾಗಿವೆ. ಮೂರು ಅಕ್ರಮ ಮರಳು ಪ್ರಕರಣದಲ್ಲಿ ಒಂದೇ ರೀತಿಯ ಪವಾಡ ನಡೆದಿದ್ದು ಜಗತ್ತೆ ಬೆಚ್ಚಿ ಬೀಳುವಂತಾಗಿದೆ..!!!! ಆ ಪವಾಡ ಏನೆಂದರೇ ಪ್ರತ್ಯೇಕ ಪ್ರಕರಣದಲ್ಲಿ ಅಕ್ರಮವಾಗಿ ಮರಳು ಸಾಗಿಸುತಿದ್ದ ಲಾರಿ ಚಾಲಕರು ಒಂದೇ ಶೈಲಿಯಲ್ಲಿ ಪೊಲೀಸರಿದ್ದ ಸ್ಥಳದಿಂದ ಅಣತಿ ದೂರದಲ್ಲಿ ಲಾರಿ ನಿಲ್ಲಿಸಿ ಪರಾರಿಯಾಗಿದ್ದು ಕನ್ನಡದ ಎಸ್ಪಿ ಭಾರ್ಗವಿ ಚಿತ್ರದ ಹಾಡೊಂದನ್ನು ನೆನಪಿಸುವಂತಿದೆ.. ಘಟನೆ 1: ಸಾಗರ ಗ್ರಾಮಾಂತರ ಯಲಗಳಲೆಯ ಬಿಕೆ…
ಕಡುಬಡವರ ಮಕ್ಕಳು ಉನ್ನತ ಅಧಿಕಾರಿಗಳಾಗಿ ದೇಶವನ್ನು ಮುನ್ನಡೆಸಬೇಕು : ಆರಗ ಜ್ಞಾನೇಂದ್ರ|police station
ಕಡುಬಡವರ ಮಕ್ಕಳು ಉನ್ನತ ಅಧಿಕಾರಿಗಳಾಗಿ ದೇಶವನ್ನು ಮುನ್ನಡೆಸಬೇಕು ಆ ನಿಟ್ಟಿನಲ್ಲಿ ನಮ್ಮ ಡಬಲ್ ಇಂಜಿನ್ ಸರ್ಕಾರ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿವೆ ಎಂದು ಕರ್ನಾಟಕ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದಲ್ಲಿ ನೂತನ ಪೊಲೀಸ್ ಠಾಣೆ ಹಾಗೂ ವಸತಿ ಗೃಹಗಳ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು ಪೊಲೀಸ್ ನೂತನ ಕಟ್ಟಡವು ಒಂದು ಕೋಟಿ 80 ಲಕ್ಷ ಹಾಗೂ 12 ಪೊಲೀಸ್ ವಸತಿಗೃಹಗಳನ್ನು 4. ಕೋಟಿ 4…
ಮನೆ ಹಾಗೂ ಕೊಟ್ಟಿಗೆಗೆ ಹೊತ್ತಿಕೊಂಡ ಬೆಂಕಿ : ಒಂದು ಹಸು ಸಾವು – ವ್ಯಕ್ತಿ ಪ್ರಾಣಾಪಾಯದಿಂದ ಪಾರು|fire
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಕಾಸ್ಪಾಡಿಯ ನಂದಿತಳಿ ಗ್ರಾಮದಲ್ಲಿ ಮನೆಯೊಂದರಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿ, ಕೊಟ್ಟಿಗೆ ಮನೆಯಲ್ಲಿದ್ದ ಒಂದು ಹಸು ಮೃತಪಟ್ಟಿದ್ದು, ಉಳಿದ ನಾಲ್ಕು ಹಸುಗಳಿಗೆ ಗಂಭೀರ ಗಾಯಗಳಾಗಿವೆ. ಇದೇ ವೇಳೆ ಮನೆಯಲ್ಲಿ ವ್ಯಕ್ತಿಯೊಬ್ಬರು ಅಪಾಯದಿಂದ ಪಾರಾಗಿದ್ದಾರೆ. ಪ್ರಕಾಶ್ ಆಚಾರ್ ಎಂಬುವವರ ಮನೆಯಲ್ಲಿ ಬೆಂಕಿ ಅವಘಡ ನಡೆದಿದೆ. ಬೆಂಕಿ ಕೊಟ್ಟಿಗೆ ಮನೆ, ವಾಸದ ಮನೆಗೆ ವ್ಯಾಪಿಸಿ ಅಪಾರ ಹಾನಿಯಾಗಿದೆ. ಕೊಟ್ಟಿಗೆಯಲ್ಲಿದ್ದ 5 ಹಸುಗಳಿಗೆ ಬೆಂಕಿ ತಗುಲಿದ್ದು, ಒಂದು ಹಸು ಸುಟ್ಟು ಕರಕಲಾಗಿದ್ದು, ಉಳಿದ 4…
ಹೈಕೋರ್ಟ್ ಮಹತ್ವದ ತೀರ್ಪು : 5 ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷೆ ರದ್ದು!!!!
ಇದೇ ಮಾ.13 ರಿಂದ ಆರಂಭವಾಗಬೇಕಿದ್ದ 5, 8ನೇ ತರಗತಿಯ ಪಬ್ಲಿಕ್ ಪರೀಕ್ಷೆ ರದ್ದುಪಡಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಎಂದಿನಂತೆ ಸಾಮಾನ್ಯ ವಾರ್ಷಿಕ ಪರೀಕ್ಷೆ ನಡೆಸಬೇಕು. ಶಾಲಾ ಮಟ್ಟದಲ್ಲೇ ಮೌಲ್ಯಮಾಪನ ಮಾಡಬೇಕು ಎಂದು ಸೂಚಿಸಿದೆ. ಹೈಕೋರ್ಟ್ ನ್ಯಾ. ಪ್ರದೀಪ್ ಸಿಂಗ್ ಯೆರೂರ್ ಅವರ ನೇತೃತ್ವದ ಏಕಸದಸ್ಯ ಪೀಠವು ಶುಕ್ರವಾರ ಈ ಆದೇಶ ಹೊರಡಿಸಿದೆ. ನಿಯಮಗಳಿಗನುಸಾರ ಮುಂದಿನ ಶೈಕ್ಷಣಿಕ ವರ್ಷದಿಂದ ಪಬ್ಲಿಕ್ ಪರೀಕ್ಷೆ ನಡೆಸಬಹುದು ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಈ ವರ್ಷದಿಂದಲೇ ಶಾಲಾ…
ಹೊಸನಗರ : ಅಗ್ನಿ ಅವಘಡ – 600 ಅಡಿಕೆ ಗಿಡಗಳು ಸುಟ್ಟು ಭಸ್ಮ!!!!!
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಕಾಳಿಕಾಪುರ ಗ್ರಾಮದ ಸರ್ವೆನಂಬರ್ 32/1ರಲ್ಲಿ ಬಿ. ಸೀನಪೂಜಾರಿ ಬಿನ್ ಮಾಚಪೂಜಾರಿಯವರ ಅಡಿಕೆ ಮರಕ್ಕೆ ಬೆಂಕಿ ತಗುಲಿ ಸುಮಾರು 600 ಅಡಿಕೆ ಮರಗಳು ಸುಟ್ಟು ಕರಕಲಾದ ಘಟನೆ ವರದಿಯಾಗಿದೆ. ಸೀನಪೂಜಾರಿಯವರು ತಮ್ಮ ಸ್ವಂತ ಜಾಗದಲ್ಲಿ ಸುಮಾರು 600 ಅಡಿಕೆ ಸಸಿಗಳನ್ನು ನೆಟ್ಟಿದ್ದು ಅದಕ್ಕೆ ಡ್ರಿಪ್ ಪೈಪ್ ಹಾಕಲಾಗಿತ್ತು. ಏಕಾಏಕಿ ಗಾಳಿಯ ಮೂಲಕ ಬೆಂಕಿ ತಗಲಿದ್ದರಿಂದ 600 ಅಡಿಕೆ ಮರಗಳು ಸುಟ್ಟು ಕರಕಲಾಗುವ ಜೊತೆಗೆ ನೀರಿನ ಸೌಲಭ್ಯಕ್ಕಾಗಿ ಮಾಡಿದ ಡ್ರಿಪ್ ಪೈಪ್ ಸಹ ಸುಟ್ಟು…
ಮಾ.09 ರಿಂದ 15 ರವರೆಗೆ ಶ್ರೀ ಕ್ಷೇತ್ರ ಹೊಂಬುಜದಲ್ಲಿ ಜಗನ್ಮಾತೆ ಪದ್ಮಾವತಿ ದೇವಿಯ ಮಹಾರಥೋತ್ಸವ…
ರಿಪ್ಪನ್ ಪೇಟೆ: ಜೈನರ ದಕ್ಷಿಣ ಕಾಶಿಯೆಂದೇ ಪ್ರಖ್ಯಾತಿ ಪಡೆದಿರುವ ಹೊಂಬುಜ ಅತಿಶಯ ಮಹಾಕ್ಷೇತ್ರದಲ್ಲಿ ಮಾ. 9ರಿಂದ 15 ರವರೆಗೆ ಭಗವಾನ್ ಪಾರ್ಶ್ವನಾಥ ತೀರ್ಥಂಕರರ ಮತ್ತು ಮಹಾಮಾತೆ ಪದ್ಮಾವತಿ ದೇವಿ ಅಮ್ಮನವರ ವಾರ್ಷಿಕ ರಥ ಯಾತ್ರಾ ಮಹೋತ್ಸವವು ಜಗದ್ಗುರು ಡಾ.ದೇವೇಂದ್ರ ಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ಏರ್ಪಡಿಸಲಾಗಿದೆ ಎಂದು ಮಠದ ಆಡಳಿತಾಧಿಕಾರಿಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಗುರುವಾರ (ಮಾ. 9) ಶ್ರೀ ಮಠದ ಬಸದಿಯಲ್ಲಿ ಶ್ರೀ ನೇಮಿನಾಥ ಸ್ವಾಮಿ ಬಸದಿ ಗಣಧರವಲಯ ಆರಾಧನೆ, 10ರಂದು ಮಕ್ಕಳ ಬಸದಿಯಲ್ಲಿ ಶ್ರೀ…