ಜಿಲ್ಲಾ ಸುದ್ದಿ:
ಶಿವಮೊಗ್ಗ ವಿಧಾನ ಪರಿಷತ್ ಚುನಾವಣೆ ಬಿಜೆಪಿ ಅಭ್ಯರ್ಥಿ ಡಿ ಎಸ್ ಅರುಣ್ ಜಯಭೇರಿ
ಶಿವಮೊಗ್ಗ : ವಿಧಾನ ಪರಿಷತ್ ಚುನಾವಣಾ ಫಲಿತಾಂಶ ಇಂದು ಘೋಷಣೆಯಾಗಿದ್ದು, ಬಿಜೆಪಿ ಅಭ್ಯರ್ಥಿ ಡಿ.ಎಸ್. ಅರುಣ್ 400 ಮತಗಳ ಅಂತರದಿಂದ ಭರ್ಜರಿ ಜಯಭೇರಿ ಭಾರಿಸಿದ್ದಾರೆ. ಇಂದು ಮುಂಜಾನೆ ಸಹ್ಯಾದ್ರಿ ಕಾಲೇಜಿನಲ್ಲಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ನೇತೃತ್ವದಲ್ಲಿ ಸ್ಟ್ರಾಂಗ್ ರೂಮ್ ತೆರೆದು ಮತ ಎಣಿಕೆ ಆರಂಭಿಸಲಾಯಿತು. 11:30ರ ಸುಮಾರಿಗೆ ಫಲಿತಾಂಶ ಘೋಷಣೆಯಾಗಿದ್ದು, ಅರುಣ್ ಮೊದಲ ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿದ್ದಾರೆ. ಈ ಮೂಲಕ ರಾಜ್ಯದ ಹಿರಿಯ ರಾಜಕಾರಣಿ ಡಿ.ಹೆಚ್. ಶಂಕರಮೂರ್ತಿ ಅವರ ಪುತ್ರ ತಮ್ಮ ಮೊದಲ ಚುನಾವಣೆಯ ಗೆಲುವಿನಿಂದ…
ಶಿವಮೊಗ್ಗದ ಟಿಪ್ಪುನಗರದಲ್ಲಿ ಕೋಟಿ ರೂ ಮೌಲ್ಯದ ಶ್ರೀಗಂಧ ಪತ್ತೆ : ಆರೋಪಿ ಸೈಯದ್ ಅಪ್ಸರ್ ವಶಕ್ಕೆ
ಶಿವಮೊಗ್ಗದ ಟಿಪ್ಪುನಗರದಲ್ಲಿ ನಿನ್ನೆ ಸುಮಾರು ಒಂದು ಸಾವಿರ ಕೆಜಿ ತೂಕದ, ಅಂದಾಜು ಕೋಟಿ ರೂ ಬೆಲೆಬಾಳುವ ಭಾರೀ ಶ್ರೀಗಂಧವನ್ನು ಅರಣ್ಯ ಹಾಗೂ ಪೊಲೀಸ್ ಇಲಾಖೆ ದಾಳಿಯಲ್ಲಿ ವಶಪಡಿಸಿಕೊಂಡಿದೆ. ಅರಣ್ಯ ಇಲಾಖೆಗೆ ದೊರೆತ ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆಯ ಡಿಸಿಎಫ್ ಶಂಕರ್ ಹಾಗೂ ಇತರೆ ಅಧಿಕಾರಿಗಳು,, ಪೊಲೀಸ್ ಇಲಾಖೆಯ ಪ್ಸ್ಪ ಪ್ರಬಾರ ಡಿವೈಎಸ್ ಪಿ, ತುಂಗಾನಗರ ಇನ್ಸ್ ಸ್ಪೆಕ್ಟರ್ ದೀಪಕ್ ಅವರ ತಂಡ ಕೈ ಜೋಡಿಸಿ ದಾಳಿ ನಡೆಸಿದಾಗ ಈ ಶ್ರೀಗಂಧ ಪತ್ತೆಯಾಗಿದೆ. ಟಿಪ್ಪುನಗರ ಸರಹದ್ದಿನ ಅಂಬೇಡ್ಕರ್…
ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ ವಿಧಿವಶ :
ರಾಷ್ಟ್ರ ಕವಿ ಕುವೆಂಪು ಅವರ ಸೊಸೆ, ಪೂರ್ಣಚಂದ್ರ ತೇಜಸ್ವಿ (84) ಅವರ ಪತ್ನಿ ರಾಜೇಶ್ವರಿ ತೇಜಸ್ವಿ ಅವರು ಇಂದು ಬೆಂಗಳೂರಿನ ಖಾಸಗಿ ಅಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೂಡಿಗೆರೆಯ ಹ್ಯಾಂಡ್ ಪೋಸ್ಟ್ ನಲ್ಲಿ ವಾಸವಾಗಿದ್ದ ರಾಜೇಶ್ವರಿ ತೇಜಸ್ವಿ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದ ಕಾರಣ ಬೆಂಗಳೂರಿಗೆ ಆಗಮಿಸಿದ್ದರು.ಕಳೆದ ನಾಲ್ಕು ದಿನಗಳಿಂದ ನಗರದ ರಾಜಲಕ್ಷ್ಮಿ ಮಲ್ಟಿ ಸ್ಪೆಷಾಲಿಟಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ. ಪತಿ ಪೂರ್ಣಚಂದ್ರ ತೇಜಸ್ವಿ ನಿಧನದ ಬಳಿಕ ಮೂಡಿಗೆರೆಯ ಹ್ಯಾಂಡ್ ಪೋಸ್ಟ್ ತೋಟದ…
ಸಿನಿಮೀಯ ರೀತಿಯಲ್ಲಿ ಸರಗಳ್ಳನನ್ನು ಬೆನ್ನತ್ತಿ ಹಿಡಿದ ಶಿವಮೊಗ್ಗದ ಟ್ರಾಫಿಕ್ ಪೊಲೀಸ್ ಮುನೇಶಪ್ಪ
ಶಿವಮೊಗ್ಗ: ಪ್ರಾಣದ ಹಂಗು ತೊರೆದು ಸರಗಳ್ಳನನ್ನು ಬಂಧಿಸುವಲ್ಲಿ ಪಶ್ಚಿಮ ಸಂಚಾರ ಪೊಲೀಸ್ ಠಾಣಾ ಸಿಬ್ಬಂದಿ ವಿ.ಹೆಚ್. ಮುನೇಶಪ್ಪ ಯಶಸ್ವಿಯಾಗಿದ್ದು, ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ನಿನ್ನೆ ಮಧ್ಯಾಹ್ನ ಸಮಯದಲ್ಲಿ ಉಷಾ ನರ್ಸಿಂಗ್ ಹೋಂ ಬಳಿ ತಾಯಿ ಮತ್ತು ಮಗಳು ಬಸ್ ಗಾಗಿ ಕಾಯುತ್ತಿದ್ದ ಸಂದರ್ಭದಲ್ಲಿ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಯುವತಿಯ ಕತ್ತಿನಲ್ಲಿದ್ದ ಸರಕ್ಕೆ ಕೈಹಾಕಿದ್ದಾರೆ. ಯುವತಿ ಸರವನ್ನು ಗಟ್ಟಿಯಾಗಿ ಹಿಡಿದುಕೊಂಡಾಗ ಕೈಯಲ್ಲಿದ್ದ ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದ್ದಾರೆ. ಆಗ, ಯುವತಿ…
ಜಿಂಕೆ ಭೇಟೆಯಾಡಿ ಮಾಂಸ ತಯಾರಿಸುತ್ತಿದ್ದ ಇಬ್ಬರ ಬಂಧನ :
ಸಾಗರ: ಅಕ್ರಮವಾಗಿ ಜಿಂಕೆಯನ್ನು ಬೇಟೆಯಾಡಿ ಮಾಂಸ ತಯಾರಿಸುತ್ತಿದ್ದುದನ್ನು ಅರಣ್ಯಾಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಇಬ್ಬರನ್ನು ಬಂಧಿಸಿರುವ ಘಟನೆ ನಡೆದಿದೆ. ಸಾಗರ ತಾಲೂಕಿನ ಉಳ್ಳೂರು ಗ್ರಾಮ ಪಂಚಾಯತಿ ಬಳಸಗೋಡು ಗ್ರಾಮದಲ್ಲಿ ಜಿಂಕೆ ಮಾಂಸ ಸಮೇತ ಆರೋಪಿಗಳನ್ನು ಬಂದಿಸಲಾಗಿದೆ. ಸಾಗರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿ. ಮೋಹನಕುಮಾರ ಹಾಗೂ ಸಾಗರ ACF ಶ್ರೀಧರ್ ಮತ್ತು RFO ಪ್ರಮೋದ್ ರವರ ಮಾರ್ಗದರ್ಶನದಲ್ಲಿ ವಲಯ ಅರಣ್ಯಾಧಿಕಾರಿ ಸುಂದರಮೂರ್ತಿ ತಂಡ ನೇತೃತ್ವದಲ್ಲಿ ದಾಳಿ ನಡೆಸಿದಾಗ ಅಕ್ರಮವಾಗಿ ಜಿಂಕೆಯನ್ನು ಬೇಟೆಯಾಡಿ ಮಾಂಸ…
ಪ್ರೀತಿಸಿದ ಹುಡುಗಿಯ ಮನೆ ಮುಂದೆ ವಿಷ ಕುಡಿದು ಆಸ್ಪತ್ರೆಗೆ ಸೇರಿದ ಪಾಗಲ್ ಪ್ರೇಮಿ.!! ಪ್ರೇಮ್ ಕಹಾನಿ ಮೆ ಪಾಯಿಸನ್ ಸ್ಟೋರಿ !!!
ಹೊಸನಗರ : ಎಂಟು ವರ್ಷದ ಪ್ರೀತಿಯನ್ನು ಪ್ರಿಯತಮೆ ನಿರಾಕರಿಸಿದ್ದಕ್ಕೆ ಯುವತಿಯ ಮನೆಯ ಮುಂದೆಯೇ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ ನಡೆದಿದೆ. ಯುವಕನ ವರ್ತನೆಗೆ ರೋಸತ್ತು,ಬೇಸರವಾಗಿ ಯುವತಿಯ ತಾಯಿ ಹೊಸನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಖಾಸಗಿ ಬ್ಯಾಂಕ್ ನಲ್ಲಿ ಕೆಲಸ ಮಾಡಿಕೊಂಡಿದ್ದ ಯುವಕನಿಗೆ 8 ವರ್ಷದ ಹಿಂದೆ ಜಯನಗರ ಯುವತಿಯೊಂದಿಗೆ ಪ್ರೀತಿ ಹುಟ್ಟಿದೆ. ಆರಂಭದಲ್ಲಿ ಇಬ್ವರಿಗೂ ಚೆನ್ನಾಗಿದ್ದ ಪ್ರೀತಿ ಕಾಲಕ್ರಮೇಣ ಯುವತಿಗೆ ಬೇಸರವೆನಿಸಿದೆ. ಯುವಕನ ವಿಪರೀತಿ ಕುಡಿತ ಹಾಗೂ ಆತನ ಇತರೆ ಚಟುವಟಿಕೆಗಳಿಗೆ ಯವತಿ ರೋಸತ್ತಿ…
ಕಾರಿನಲ್ಲಿ ಆಂಧ್ರದಿಂದ ಶಿವಮೊಗ್ಗ ಸಾಗಿಸುತ್ತಿದ್ದ 21 ಕೆ.ಜಿ ಗಾಂಜಾ ವಶಕ್ಕೆ: ನಾಲ್ವರ ಬಂಧನ
ಶಿವಮೊಗ್ಗ: ಆಂಧ್ರದಿಂದ ಶಿವಮೊಗ್ಗಕ್ಕೆ ಸಾಗಿಸಲಾಗುತ್ತಿದ್ದ 21 ಕೆ.ಜಿ ಗಾಂಜಾವನ್ನು ವಶಕ್ಕೆ ಪಡೆದಿರುವ ತುಂಗಾ ನಗರ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ನಗರಕ್ಕೆ ಗಾಂಜಾ ಸಾಗಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರ ಕಾರ್ಯಾಚರಣೆ ನಡೆದಿದೆ. ಶಿವಮೊಗ್ಗ ತಾಲೂಕಿನ ಹಾಲಲಕ್ಕವಳ್ಳಿ ಗ್ರಾಮದ ಬಳಿ ಪೊಲೀಸರು ದಾಳಿ ನಡೆಸಿದ್ದಾರೆ. ಇನ್ನೋವಾ ಕಾರಿನಲ್ಲಿ ಗಾಂಜಾವನ್ನು ಶಿವಮೊಗ್ಗಕ್ಕೆ ತರಲಾಗುತ್ತಿತ್ತು. ಕಾರಿನಲ್ಲಿದ್ದ ದೌಲತ್ ಅಲಿಯಾಸ್ ಗುಂಡು, ಮುಜೀಬ್ ಖಾನ್ ಅಲಿಯಾಸ್ ಬ್ರಸ್ಟ್, ಶೋಯೆಬ್ ಅಲಿಯಾಸ್ ಚೂಡಿ ಹಾಗೂ ಜಪ್ರುಲ್ಲಾ ಎಂಬುವರನ್ನು ಬಂಧಿಸಲಾಗಿದೆ. ಗಾಂಜಾ ಮೌಲ್ಯವು ಅಂದಾಜು 6…
ಬಸ್ ನಲ್ಲಿ ಶೃಂಗೇರಿ ಮೂಲದ ಮುಸ್ಲಿಂ ಯುವಕ, ಹಿಂದೂ ಯುವತಿಯ ರೋಮ್ಯಾನ್ಸ್ ; ಸಾರ್ವಜನಿಕರಿಂದ ತರಾಟೆ
ಶೃಂಗೇರಿ : ತಾಲೂಕು ಹಾಗೂ ತೀರ್ಥಹಳ್ಳಿ ಗಡಿಭಾಗದ ಬಿದರಗೋಡು ಗ್ರಾಮದ ಯುವಕನೊಬ್ಬ ಉಡುಪಿ ಮೂಲದ ಹಿಂದೂ ಯುವತಿಯಳೊಡನೆ ಅಸಭ್ಯವಾಗಿ ವರ್ತಿಸಿ ಹಿಂದೂ ಸಂಘಟಕರ ಕೈಗೆ ಸಿಕ್ಕಿಬಿದ್ದ ಘಟನೆ ನಡೆದಿದೆ. ಬಿದರಗೋಡಿನ ಸುನೈಫ್ ಇಬ್ರಾಹಿಂ ಎಂಬಾತ ಉಡುಪಿ-ಮಂಗಳೂರು ಬಸ್ ನಲ್ಲಿ ಉಡುಪಿ ಮೂಲದ ಹಿಂದೂ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ. ಇದನ್ನು ಗಮನಿಸಿದ ಸಾರ್ವಜನಿಕರು ಹಾಗೂ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡು, ಥಳಿಸಿದ್ದಾರೆ. ಈ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸದ್ದು ಮಾಡಿದೆ. ಲವ್ ಜಿಹಾದ್ ಆರೋಪ;…
ಯೋಧರ ಸಾವು ಸಂಭ್ರಮಿಸುತ್ತಿರುವ ವಿಕೃತರಿಗೆ ನಡು ರಸ್ತೆಯಲ್ಲಿಯೇ ಗುಂಡಿಟ್ಟರು ತಪ್ಪಿಲ್ಲ ಎಂದ ಶಿವಮೊಗ್ಗ ಗ್ರಾಮಾಂತರ ಶಾಸಕ..
ಶಿವಮೊಗ್ಗ : ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದ ಸಶಸ್ತ್ರ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಇತರೆ ಯೋಧರ ಸಾವಿನ ಕುರಿತಂತೆ, ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಫೋಸ್ಟ್ ಮಾಡಿದವರ ವಿರುದ್ದ, ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ.ಅಶೋಕನಾಯ್ಕ್ ಗರಂ ಆಗಿದ್ದಾರೆ. ಇಂತಹ ವಿಕೃತರನ್ನು ನಡು ರಸ್ತೆಯಲ್ಲಿಯೇ ಗುಂಡಿಟ್ಟು ಕೊಂದರು ತಪ್ಪಿಲ್ಲ..! ಎಂದು ಟ್ವೀಟ್ ಮಾಡಿದ್ದಾರೆ. ಈ ಕುರಿತಂತೆ ಶುಕ್ರವಾರ ತಮ್ಮ ಅದಿಕೃತ ಟ್ವಿಟರ್ ಖಾತೆಯಲ್ಲಿ ಕೆ.ಬಿ.ಅಶೋಕನಾಯ್ಕ್ ಪೋಸ್ಟ್ ಒಂದನ್ನು ಹಾಕಿದ್ದಾರೆ.ರಕ್ಷಣಾ ವ್ಯವಸ್ಥೆಯಲ್ಲಿ ಮಹತ್ತರವಾದ ಪಾತ್ರವಹಿಸಿ ದೇಶಕ್ಕಾಗಿ ತಮ್ಮ ಜೀವನ ಮುಡುಪಾಗಿಟ್ಟಿರುವ…
ಮತಾಂತರ ನಿಷೇಧ ಕಾಯ್ದೆಯನ್ನು ಜಾರಿ ಮಾಡಿಯೇ ತೀರುತ್ತೇವೆ : ಸಚಿವ ಕೆ ಎಸ್ ಈಶ್ವರಪ್ಪ
ಶಿವಮೊಗ್ಗ: ಮತಾಂತರ ಕಾಯ್ದೆ ಜಾರಿಗೆ ತರಲಿಕ್ಕಾದರೂ ವಿಧಾನ ಪರಿಷತ್ ನಲ್ಲಿ ಬಿಜೆಪಿಗೆ ಬಹುಮತ ಬೇಕು ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ಅವರು ಇಂದು ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಡಿ.ಎಸ್. ಅರುಣ್ ಗೆಲುವಿಗೆ ಕೋಟೆ ಚಂಡಿಕಾ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಅದ್ಯಾವ ಬುದ್ದಿ ಇದೆಯೋ ಗೊತ್ತಿಲ್ಲ. ಹಿಂದೂ ಧರ್ಮದ ಅವನತಿ ನಡೆಯುತ್ತಿದ್ದರೂ ಕೂಡ ಕೇವಲ ವೋಟಿನ ರಾಜಕಾರಣಕ್ಕಾಗಿಯೇ ಧರ್ಮ ವಿರೋಧ…