ಜಿಲ್ಲಾ ಸುದ್ದಿ:
ಸಿದ್ದರಾಮಯ್ಯ ಮತ್ತು ಹೆಚ್ ಡಿಕೆ ವಿರುದ್ಧ ವಾಗ್ದಾಳಿ ನಡೆಸಿದ ಗೃಹ ಸಚಿವ ಆರಗ ಜ್ಞಾನೇಂದ್ರ|araga
ಮೈಸೂರಿನ ಸ್ಯಾಂಟ್ರೋ ರವಿ ಪ್ರಕರಣದಲ್ಲಿ ಮಾಜಿ ಮುಖ್ಯ ಮಂತ್ರಿ ಕುಮಾರ ಸ್ವಾಮಿ ಮತ್ತು ಆರ್ ಎಸ್ ಎಸ್ ವಿಚಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ನವರ ಹೇಳಿಕೆ ವಿರುದ್ಧ ಗೃಹ ಸಚಿವ ಆರಗ ಜ್ಞಾನೇಂದ್ರ ಗರಂ ಆಗಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವರು ಮೈಸೂರಿನ ಸ್ಯಾಂಟ್ರೋ ರವಿ ಪ್ರಕರಣದ ವಿಚಾರದಲ್ಲಿ, ಆತನನ್ನು ಬಂಧಿಸಿ ಆತನ ಮೇಲಿರುವ ಎಲ್ಲಾ ಪ್ರಕರಣಗಳ ಬಗ್ಗೆ ಪರಿಶೀಲನೆ ನಡೆಸಲು ಮೈಸೂರು ಕಮಿಷನರಿಗೆ ತಿಳಿಸಿದ್ದೇನೆ ಎಂದರು. ಸ್ಯಾಂಟ್ರೋ ರವಿಯ ಹಿನ್ನೆಲೆ ಆತನ ಮೇಲೆ ಯಾರಾದರೂ…
ಹೆದ್ದಾರಿಪುರ : ಯಡಗುಡ್ಡೆ ಅಂಗನಾವಾಡಿ ಕಟ್ಟಡಕ್ಕಿಲ್ಲ ಉದ್ಘಾಟನೆ ಭಾಗ್ಯ – ಗ್ರಾಮಸ್ಥರ ಆಕ್ರೋಶ|yadagudde
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಯಡಗುಡ್ಡೆ ಗ್ರಾಮದಲ್ಲಿ 16 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾದ ಅಂಗನವಾಡಿ ಕೇಂದ್ರದ ಕಟ್ಟಡ ನಿರ್ಮಾಣ ಕಾಮಗಾರಿ ಪೂರ್ಣಗೊಂಡು 6 ತಿಂಗಳು ಕಳೆದಿದ್ದರೂ ಉದ್ಘಾಟನೆ ಭಾಗ್ಯ ಕಾಣದೆ ಪಾಳು ಬಿದ್ದಂತಾಗಿದೆ.ಹೀಗೇ ದಿನ ಕಳೆದರೆ ಹೊಸ ಕಟ್ಟಡ ಶೀಥಿಲಾವಸ್ಥೆ ತಲುಪುದರಲ್ಲಿ ಅನುಮಾನ ಇಲ್ಲ ಎಂದು ಯಡಗುಡ್ಡೆ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಸ್ತುತ ಅಂಗನವಾಡಿ ಕೇಂದ್ರದ ಮಕ್ಕಳು ಅಂಗನವಾಡಿ ಶಿಕ್ಷಕಿಯ ಮನೆಯಲ್ಲಿ ಕಲಿಕೆಯಲ್ಲಿ ತೊಡಗಿದ್ದಾರೆ.ಲಕ್ಷಾಂತರ ರೂ ವೆಚ್ಚ ಮಾಡಿ ನಿರ್ಮಿಸಿರುವ ಈ…
ಕಾರು ಕಳ್ಳತನ ಪ್ರಕರಣ – ತನಿಖೆ ನಡೆಸಿ ಕಾರು ಮಾಲೀಕನನ್ನೆ ಬಂಧಿಸಿದ ಪೊಲೀಸರು : ವಿಶೇಷ ಪ್ರಕರಣ ಇಲ್ಲಿದೆ ನೋಡಿ…..!!!|theft
ಕಾರು ಕಳ್ಳತನದ ಪ್ರಕರಣವೊಂದರಲ್ಲಿ ದೂರು ನೀಡಿದ ಮಾಲೀಕ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಕಾರಿನ ಮಾಲೀಕ ಕಾರಿನ ಲೋನ್ ಹಣ ಕಟ್ಟದೆ ಫೈನಾನ್ಸ್ ಸಂಸ್ಥೆಗೆ ವಂಚಿಸಲು ಮತ್ತು ಇನ್ಸುರೆನ್ಸ್ ಹಣಕ್ಕಾಗಿ ತನ್ನ ಕಾರಿನ ನಂಬರ್ ಬದಲಾಯಿಸಿ, ಸ್ನೇಹಿತನ ಬಳಿ ಕೊಟ್ಟು ಕಳ್ಳತನದ ದೂರು ನೀಡಿದ್ದ ಎಂಬುದು ತನಿಖೆ ವೇಳೆ ಗೊತ್ತಾಗಿದೆ. ಶಿವಮೊಗ್ಗ ವಿದ್ಯಾನಗರದ ಚಂದ್ರು ಕುಮಾರ (28), ದಾವಣೆಗೆರೆ ಸರಸ್ವತಿ ನಗರದ ಪ್ರಶಾಂತ್ (29) ಬಂಧಿತರು. 14 ಮೇ 2022 ರಂದು ಸೂಳೆಬೈಲು ಸಮೀಪದ ಕುಂಚಿಟಿಗರ…
ಬಿಸಿಯೂಟ ಸೇವಿಸಿದ 15ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ – ಆಸ್ಪತ್ರೆಗೆ ದಾಖಲು|
ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಯ ಅಡಿಯಲ್ಲಿ ಮಾಡಿದಂತ ಊಟವನ್ನು ಸೇವಿಸಿದಂತ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಸಾಗರದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕೋಟೆಕೊಪ್ಪ ಸರ್ಕಾರಿ ಶಾಲೆಯಲ್ಲಿ ಗುರುವಾರ ಮಧ್ಯಾಹ್ನದ ಬಿಸಿಯೂಟವನ್ನು ಮಕ್ಕಳು ಸೇವಿಸಿದ್ದಾರೆ. ಈ ಬಳಿಕ ಮಕ್ಕಳಲ್ಲಿ ವಾಂತಿ, ಬೇಧಿ, ಜ್ವರ ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಸಾಗರದ ತಾಲೂಕು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದೆ. ನಿನ್ನೆಯ ಬಳಿಕ ಇಂದು ಕೂಡ ಕೆಲ ಮಕ್ಕಳಲ್ಲಿ ವಾಂತಿ, ಬೇಧಿ ಕಾಣಿಸಿಕೊಂಡ ಕಾರಣ, ಮತ್ತಷ್ಟು ಮಕ್ಕಳನ್ನು 25…
ರಿಪ್ಪನ್‌ಪೇಟೆ ಜಿಪಂ ಮತ್ತು ಹೊಸನಗರ ಜಿಪಂ ಕ್ಷೇತ್ರ ಮರುವಿಂಗಡಣೆ ಫ಼ುಲ್ ಕನ್ಫ್ಯೂಸ್ – ಪಟ್ಟಿ ಇಲ್ಲಿದೆ ನೋಡಿ|ZP
ರಿಪ್ಪನ್‌ಪೇಟೆ : ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಕರಡು ಪ್ರಕಟಿಸಿದೆ. ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಸಂಖ್ಯೆಯನ್ನು 31ಕ್ಕೆ ಸೀಮಿತಗೊಳಿಸಿದೆ. 2021ರಲ್ಲಿ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮರು ವಿಂಗಡಣೆ ಮಾಡಲಾಗಿತ್ತು. ಆಗ 5 ಕ್ಷೇತ್ರಗಳನ್ನು ಹೊಸದಾಗಿ ಸೇರ್ಪಡೆ ಮಾಡಲಾಗಿತ್ತು. ಸದ್ಯ ರಿಪ್ಪನ್‌ಪೇಟೆ ಹಾಗೂ ಹೊಸನಗರ ಜಿಪಂ ಸೀಮಾ ಗಡಿ ಗೊಂದಲಮಯವಾಗಿದ್ದು ಎತ್ತಣ ಮಾಮರ ಎತ್ತಣದ ಕೋಗಿಲೆ ಎಂಬಂತೆ ರಿಪ್ಪನ್ ಪೇಟೆ ಜಿಪಂ ಕ್ಷೇತ್ರವು ಸಾಗರ ಸಮೀಪದ ಹೆಬ್ಬೈಲು ಗ್ರಾಮಕ್ಕೆ ತಗುಲಿಕೊಂಡಿದ್ದು…
ಲಂಚ ಪಡೆಯುವಾಗ ಸಿಕ್ಕಿ ಬಿದ್ದಿದ್ದ ಪಟ್ಟಣ ಪಂಚಾಯತಿ ಸದಸ್ಯನ ಸದಸ್ಯತ್ವ ವಜಾ|dismiss
ಕೋಳಿ ಅಂಗಡಿ ಮಾಲೀಕರೊಬ್ಬರಿಂದ ಇತ್ತೀಚೆಗೆ ಲಂಚ ಪಡೆಯುವಾಗ ರೆಡ್‍ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಕಾರ್ಗಲ್-ಜೋಗ ಪಟ್ಟಣ ಪಂಚಾಯಿತಿ ಸದಸ್ಯ ಕೆ.ಸಿ. ಹರೀಶ್ ಗೌಡ ಸದಸ್ಯತ್ವವನ್ನು ವಜಾಗೊಳಿಸಲಾಗಿದೆ. ಜೋಗದ 8ನೇ ವಾರ್ಡ್ ಸದಸ್ಯ ಹರೀಶ್ ಗೌಡ ಬಜಾರ್ ಲೈನ್‍ನ ಕೋಳಿ ಅಂಗಡಿ ಮಾಲೀಕ ಅಹ್ಮದ್ ಅಬ್ದುಲ್ ಬಾಕಿ ಎಂಬುವವರಿಗೆ ಪರವಾನಿಗೆ ಮಾಡಿಸಿಕೊಡುವುದಾಗಿ 50 ಸಾವಿರ ರೂ.ಲಂಚ ಕೇಳಿದ್ದರು. ಮನೆಯಲ್ಲಿ ಲಂಚದ ಹಣ ಸ್ವೀಕರಿಸುವ ಸಂದರ್ಭದಲ್ಲಿ ಲೋಕಾಯುಕ್ತರು ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಗಾಬರಿಗೊಳಗಾದ ಹರೀಶ್ ಗೌಡ ಹಣವನ್ನು…
ನಿಟ್ಟೂರು ಶ್ರೀ ನಾರಾಯಣ ಗುರು ಮಹಾಸಂಸ್ಥಾನದ ಶ್ರೀಗಳಿಂದ ಮುಖ್ಯಮಂತ್ರಿಗಳ ಭೇಟಿ – ಆರ್ಯ ಈಡಿಗ ನಿಗಮ ಸ್ಥಾಪನೆಗೆ ಒತ್ತಾಯ|CM
ರಿಪ್ಪನ್ ಪೇಟೆ : ಆರ್ಯ ಈಡಿಗ ನಿಗಮ ಸ್ಥಾಪಿಸುವಂತೆ ಒತ್ತಾಯಿಸಿ ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ರವರನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಶ್ರೀ ನಾರಾಯಣ ಗುರು ಮಹಾಸಂಸ್ಥಾನ ಮಠದ ಶ್ರೀ ರೇಣುಕಾನಂದ ಸ್ವಾಮೀಜಿಗಳು ಭೇಟಿ ಮಾಡಿ ಮನವಿ ಸಲ್ಲಿಸಿದರು. ರಾಜ್ಯದಲ್ಲಿರುವ ಆರ್ಯ ಈಡಿಗ ಜನಾಂಗದ ಸರ್ವತೋಮುಖ ಅಭಿವೃದ್ಧಿಗೆ ಆರ್ಯ ಈಡಿಗ ನಿಗಮ ಸ್ಥಾಪಿಸುವಂತೆ ಮನವಿ ಸಲ್ಲಿಸಲಾಯಿತು. ಶ್ರೀ ನಾರಾಯಣ ಗುರು ಮಹಾ ಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ರೇಣುಕಾನಂದ ಸ್ವಾಮೀಜಿ, ಸೋಲೂರು ಮಠದ ಪೀಠಾಧ್ಯಕ್ಷರಾದ ವಿಕ್ಯಾತನಂದ ಸ್ವಾಮೀಜಿ …
ಕಾರು ಅಪಘಾತ – ಸಹಾಯ ಮಾಡುವ ಮೂಲಕ ಕರ್ತವ್ಯ ಪ್ರಜ್ಞೆ ಮೆರೆದ ಗೃಹ ಸಚಿವ ಆರಗ|accident
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಕುಡುಮಲ್ಲಿಗೆ ಸಮೀಪ ಅಪರಿಚಿತ ಕಾರೊಂದು ಅಪಘಾತಕ್ಕೀಡಾಗಿತ್ತು. ಕಾರಿನಲ್ಲಿದ್ದ ಶಿವಮೊಗ್ಗದ ನಿವಾಸಿಗಳು ಕಾರ್ಕಳಕ್ಕೆ ಹೋಗುತ್ತಿದ್ದರು. ಮಕ್ಕಳ ಪರೀಕ್ಷೆ ಬರೆಸುವ ಕಾರಣಕ್ಕೆ ಶಿವಮೊಗ್ಗದ ಕುಟುಂಬ ಹೋಗುತ್ತಿತ್ತು. ಈ ವೇಳೆ ಅಚಾನಕ್ಕಾಗಿ ರಸ್ತೆ ಪಕ್ಕದ ಚರಂಡಿಗೆ ಅವರ ಕಾರು ಇಳಿದು, ಅದನ್ನು ಮೇಲೆ ತರಲಾಗದೇ ಒದ್ದಾಡುತ್ತಿದ್ದರು. ಈ ಸಂದರ್ಭದಲ್ಲಿ, ಇದೇ ಮಾರ್ಗವಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದರು. ದಾರಿಯಲ್ಲಿ ಕಾರು ಅಪಘಾತವಾಗಿದ್ದ ದೃಶ್ಯ ಕಂಡ ತಕ್ಷಣ ತಮ್ಮ ಕಾರು ನಿಲ್ಲಿಸಲು ಡ್ರೈವರ್…
ಹೊಸನಗರದ ಪ್ರಸನ್ನ ಭಟ್ ಮನೆಗೆ ಸಂಸದ ಬಿ ವೈ ರಾಘವೇಂದ್ರ ಭೇಟಿ – ಸಾಂತ್ವಾನ : ಪ್ರಸನ್ನ ಭಟ್ ಹೆಸರಲ್ಲಿ ಯೂತ್ ಐಕಾನ್ ಸ್ಮರಣಿಕೆ ಮಾಡುವ ಚಿಂತನೆ|byr
ಭಾನುವಾರ ರಾಮನಗರದಲ್ಲಿ ಆಕಸ್ಮಿಕ ನೀರಿಗೆ ಬಿದ್ದು ನಿಧನರಾಗಿದ್ದ ಪ್ರಸನ್ನ ಆರ್ ಭತ್ ರವರ ಮನೆಗೆ ಶಿವಮೊಗ್ಗ ಜಿಲ್ಲೆಯ ಸಂಸದರಾದ ಬಿ.ವೈ ರಾಘವೇಂದ್ರರವರು ಭೇಟಿ ನೀಡಿ ಅವರ ಕುಟುಂಬ ವರ್ಗಕ್ಕೆ ಸಾಂತ್ವನ ಹೇಳಿದರು. ಪ್ರಸನ್ನ ಆರ್ ಭಟ್‌ರವರು ತುಂಬಾ ಸ್ವಾಭಿಮಾನಿ. ನನ್ನ ಜೊತೆಗೆ 3 ವರ್ಷಗಳಿಂದ ಛಾಯ ಗ್ರಾಹಕನಾಗಿದ್ದುಕೊಂಡು ನನಗೆ ಅರ್ಧದಷ್ಟು ಕೆಲಸವನ್ನು ಕಡಿಮೆ ಮಾಡುತಿದ್ದ ಅವರ ಅಗಲಿಕೆಯಿಂದ ತುಂಬಾ ದುಃಖವಾಗಿದೆ. ನಮ್ಮ ಕುಟುಂಬಕ್ಕೆ ಮನೆ ಮಗನಾಗಿ ಎಲ್ಲರೊಂದಿಗೂ ತಮ್ಮ ಸಂತೋಷದಿಂದ ಕೆಲಸ ನಿರ್ವಹಿಸುತ್ತಿದ್ದವರು ಏಕಾಏಕಿ ಈ ರೀತಿ…
ಬಿದರಹಳ್ಳಿ ಶಾಲೆಯ ಶಿಕ್ಷಕನ ದಿಡೀರ್ ವರ್ಗಾವಣೆ – ಶಾಲೆಯ ಗೇಟ್ ಗೆ ಬೀಗ ಜಡಿದು ಗ್ರಾಮಸ್ಥರು ಹಾಗೂ ಪೋಷಕರ ಪ್ರತಿಭಟನೆ|bidarahalli
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಿದರಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕ ದಿನೇಶ್ ರವರನ್ನು ದಿಡೀರ್ ವರ್ಗಾವಣೆ ಮಾಡಿರುವುದನ್ನು ವಿರೋಧಿಸಿ ಗ್ರಾಮಸ್ಥರು, ಪೋಷಕರು ಹಾಗೂ ವಿದ್ಯಾರ್ಥಿಗಳು ಶಾಲೆಯ ಗೇಟ್ ಗೆ ಬೀಗ ಜಡಿದು ಪ್ರತಿಭಟನೆ ನಡೆಸುತಿದ್ದಾರೆ. ಮಲೆನಾಡ ಗಾಂಧಿ ಎಚ್.ಜಿ. ಗೋವಿಂದೇಗೌಡ ಹೆಸರಿನ ರಾಜ್ಯಮಟ್ಟದ ಅತ್ಯುತ್ತಮ ಸರ್ಕಾರಿ ಶಾಲೆ ಪ್ರಶಸ್ತಿ ಹಾಗೂ ಇನ್ನಿತರ ರಾಜ್ಯ ಮಟ್ಟದ ಪ್ರಶಸ್ತಿಯನ್ನು ಪಡೆಯುವ ಮೂಲಕ ಮಲೆನಾಡಿನ ಹಳ್ಳಿಯೊಂದು ರಾಜ್ಯದಲ್ಲಿ ಗುರುತಿಸಿಕೊಂಡು ಇತ್ತೀಚಿಗೆ ಈ ಶಾಲೆಗೆ ರಾಜ್ಯ ಶಿಕ್ಷಣ ಸಚಿವ ಬಿ ಸಿ ನಾಗೇಶ್…