ಜಿಲ್ಲಾ ಸುದ್ದಿ:
ತೀರ್ಥಹಳ್ಳಿಯ ಮಾಳೂರು ಪೊಲೀಸ್ ಠಾಣೆ ಎದುರು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಪ್ರತಿಭಟನೆ|kimmane
ತೀರ್ಥಹಳ್ಳಿ : ಮನೆ ಮುಂದೆ ನಿಲ್ಲಿಸಿದ್ದ ಪಿಕಪ್ ವಾಹನಕ್ಕೆ ಪೊಲೀಸರೆ ಮರಳು ತುಂಬಿ ವಾಹವನ್ನು ಸೀಜ್ ಮಾಡಿ ಪ್ರಕರಣ ದಾಖಲಿಸಿದ್ದಾರೆ ಎಂದು ಆರೋಪಿಸಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು, ‘ಹೆದ್ದೂರು ಬಳಿ ಮನೆಯೊಂದರ ಮುಂದೆ ಪಿಕಪ್ ವಾಹನಕ್ಕೆ ಪೊಲೀಸರೆ ಮರಳು ತುಂಬಿದ್ದಾರೆ. ಅದನ್ನು ತಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪಿಕಪ್ ವಾಹನಕ್ಕೆ ಮರಳು ತುಂಬಿದ ಪೊಲೀಸರನ್ನು ಕೂಡಲೆ ಅಮಾನತು ಮಾಡಬೇಕು. ಬಿಜೆಪಿಯವರು…
ಹೊಬುಜಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು – ಆರಗ ಜ್ಞಾನೇಂದ್ರ|hombuja
ಹೊಂಬುಜ ಕ್ಷೇತ್ರದ ಸರ್ವಾಂಗಿಣ ಅಭಿವೃದ್ಧಿಗೆ ಒತ್ತು – ಆರಗ ಜ್ಞಾನೇಂದ್ರ ರಿಪ್ಪನ್ ಪೇಟೆ : ಜೈನರ ಪ್ರಸಿದ್ಧ ಯಾತ್ರಾಸ್ಥಳವಾದ ಹೊಂಬುಜ ಕ್ಷೇತ್ರದ ಸರ್ವಾಂಗಿಣ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಭಾನುವಾರ ಶ್ರೀ ಕ್ಷೇತ್ರ ಹೊಂಬುಜದ ಮಠದ ಆಸುಪಾಸಿನ ರಸ್ತೆ ಹಾಗೂ ಒಳಚರಂಡಿ ಯೋಜನೆಯ ರೂ ಎರಡು ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಮಾತೆ ಪದ್ಮಾವತಿ ದೇವಿ ನೆಲೆ ನಿಂತಿರುವ ಮಲೆನಾಡಿನ ಪ್ರಸಿದ್ಧ…
ಶಿವಮೊಗ್ಗ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಕೋಮು ಗಲಾಟೆ – ನಾಲ್ವರಿಗೆ ಗಾಯ|crime
ಶಿವಮೊಗ್ಗ ಮತ್ತು ಶಿರಾಳಕೊಪ್ಪದಲ್ಲಿ ಅನ್ಯಕೋಮಿನ ಯುವಕರ ಮಧ್ಯ ಗಲಾಟೆ ನಡೆದಿದೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು ನಾಲ್ವರು ಯುವಕರಿಗೆ ಗಾಯಗಳಾಗಿವೆ. ಶಿವಮೊಗ್ಗದಲ್ಲಿ ಈಜಲು ಹೋಗಿದ್ದಾಗ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ ನಡೆಸಲಾಗಿದೆ. ಕ್ಷುಲ್ಲಕ ಕಾರಣಕ್ಕೆ ಅನ್ಯಕೋಮಿನ ಯುವಕರು ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ಅಪ್ರಾಪ್ತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಶಿವಮೊಗ್ಗದ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿಕಾರಿಪುರ ತಾಲ್ಲೂಕಿನ ಶಿರಾಳಕೊಪ್ಪದಲ್ಲಿ ಅನ್ಯಕೋಮಿನವರಿಂದ ಹಲ್ಲೆ ನಡೆದಿದೆ. ವೇಗವಾಗಿ ಹಾಗೂ ನಿರ್ಲಕ್ಷದಿಂದ…
ಶಿವಮೊಗ್ಗದ ಭೂಪಾಳಂ ನಿವಾಸದಲ್ಲಿ ಅಗ್ನಿ ಅವಘಡ – ಯುವ ಉದ್ಯಮಿ ಸಾವು|fire accident
ಶಾರ್ಟ್ ಸರ್ಕಿಟ್ ನಿಂದಾಗಿ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಒಳಗೆ ಸಿಲುಕಿಕೊಂಡಿದ್ದ ಯುವ ಉದ್ಯಮಿ ದಟ್ಟ ಹೊಗೆಯಿಂದಾಗಿ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಕಛೇರಿ ಮುಂಭಾಗ ಇರುವ ಭೂಪಾಳಂ ನಿವಾಸದಲ್ಲಿ ಘಟನೆ ಸಂಭವಿಸಿದೆ. ಯುವ ಉದ್ಯಮಿ ಭೂಪಾಳಂ ಶರತ್ ಅವರು ಅಸ್ವಸ್ಥಗೊಂಡಿದ್ದು, ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾತ್ರಿ ಭೂಪಾಳಂ ನಿವಾಸದಲ್ಲಿ ಶಾರ್ಟ್ ಸರ್ಕಿಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿತ್ತು. ಬೆಂಕಿಯ ಜೊತೆಗೆ ಮನೆಯಲ್ಲಿ ದಟ್ಟ ಹೊಗೆಯುವ ಆವರಿಸಿಕೊಂಡಿತ್ತು. ಮನೆ ಒಳಗಿದ್ದ ಭೂಪಾಳಂ ಶಶಿಧರ್ ಸೇರಿದಂತೆ ನಾಲ್ವರು ಹೊರಗೆ ಬಂದಿದ್ದರು….
ರೈತರಿಗೆ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ವಿವಿಧ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ|farmer loan
2022-23 ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ತೋಟಗಾರಿಕೆ ರೈತರ ಆದಾಯವನ್ನು ದ್ವಿಗುಣಗೊಳಿಸಲು, ರೈತರನ್ನು ಬೆಳೆಗಳ ಗುಣಮಟ್ಟದ ಉತ್ಪಾದನೆಗೆ ಉತ್ತೇಜಿಸಲು ಹಾಗೂ ತೋಟಗಾರಿಕೆಯಲ್ಲಿ ಕೊಯ್ಲೋತ್ತರ ನಿರ್ವಾಹಣಾ ಚಟುವಟಿಕೆಗಳ ಕಾರ್ಯಕ್ರಮಗಳಡಿಯಲ್ಲಿ ನೀರಿನಲ್ಲಿ ಕರಗುವ ರಸಗೊಬ್ಬರ, ಲಘು ಪೋಷಕಾಂಶಗಳು , ಮೋಹಕ ಕೀಟ ಬಲೆಗಳು/ಜಿಗುಟಾದ ಬಲೆಗಳು, ಸೌರ ಶಕ್ತಿ. ಕೃತಕ ಬುದ್ದಿಯ ಕೀಟ ನಿಯಂತ್ರಕ ಬಲೆಗಳು, ಸೋಲಾರ್ ಪಂಪ್ ಸೆಟ್, ಪ್ಲಾಸ್ಟಿಕ್ ಕ್ರೇಟ್ಸ್ ಮತ್ತು ಕೊರುಗೇಟೆಡ್ ಬಾಕ್ಸ್‍ಗಳ ಖರೀದಿಸಲು ಸಾಮಾನ್ಯ…
ಸಿದ್ದರಾಮಯ್ಯ ಮತ್ತು ಹೆಚ್ ಡಿಕೆ ವಿರುದ್ಧ ವಾಗ್ದಾಳಿ ನಡೆಸಿದ ಗೃಹ ಸಚಿವ ಆರಗ ಜ್ಞಾನೇಂದ್ರ|araga
ಮೈಸೂರಿನ ಸ್ಯಾಂಟ್ರೋ ರವಿ ಪ್ರಕರಣದಲ್ಲಿ ಮಾಜಿ ಮುಖ್ಯ ಮಂತ್ರಿ ಕುಮಾರ ಸ್ವಾಮಿ ಮತ್ತು ಆರ್ ಎಸ್ ಎಸ್ ವಿಚಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ನವರ ಹೇಳಿಕೆ ವಿರುದ್ಧ ಗೃಹ ಸಚಿವ ಆರಗ ಜ್ಞಾನೇಂದ್ರ ಗರಂ ಆಗಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವರು ಮೈಸೂರಿನ ಸ್ಯಾಂಟ್ರೋ ರವಿ ಪ್ರಕರಣದ ವಿಚಾರದಲ್ಲಿ, ಆತನನ್ನು ಬಂಧಿಸಿ ಆತನ ಮೇಲಿರುವ ಎಲ್ಲಾ ಪ್ರಕರಣಗಳ ಬಗ್ಗೆ ಪರಿಶೀಲನೆ ನಡೆಸಲು ಮೈಸೂರು ಕಮಿಷನರಿಗೆ ತಿಳಿಸಿದ್ದೇನೆ ಎಂದರು. ಸ್ಯಾಂಟ್ರೋ ರವಿಯ ಹಿನ್ನೆಲೆ ಆತನ ಮೇಲೆ ಯಾರಾದರೂ…
ಹೆದ್ದಾರಿಪುರ : ಯಡಗುಡ್ಡೆ ಅಂಗನಾವಾಡಿ ಕಟ್ಟಡಕ್ಕಿಲ್ಲ ಉದ್ಘಾಟನೆ ಭಾಗ್ಯ – ಗ್ರಾಮಸ್ಥರ ಆಕ್ರೋಶ|yadagudde
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಯಡಗುಡ್ಡೆ ಗ್ರಾಮದಲ್ಲಿ 16 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾದ ಅಂಗನವಾಡಿ ಕೇಂದ್ರದ ಕಟ್ಟಡ ನಿರ್ಮಾಣ ಕಾಮಗಾರಿ ಪೂರ್ಣಗೊಂಡು 6 ತಿಂಗಳು ಕಳೆದಿದ್ದರೂ ಉದ್ಘಾಟನೆ ಭಾಗ್ಯ ಕಾಣದೆ ಪಾಳು ಬಿದ್ದಂತಾಗಿದೆ.ಹೀಗೇ ದಿನ ಕಳೆದರೆ ಹೊಸ ಕಟ್ಟಡ ಶೀಥಿಲಾವಸ್ಥೆ ತಲುಪುದರಲ್ಲಿ ಅನುಮಾನ ಇಲ್ಲ ಎಂದು ಯಡಗುಡ್ಡೆ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಸ್ತುತ ಅಂಗನವಾಡಿ ಕೇಂದ್ರದ ಮಕ್ಕಳು ಅಂಗನವಾಡಿ ಶಿಕ್ಷಕಿಯ ಮನೆಯಲ್ಲಿ ಕಲಿಕೆಯಲ್ಲಿ ತೊಡಗಿದ್ದಾರೆ.ಲಕ್ಷಾಂತರ ರೂ ವೆಚ್ಚ ಮಾಡಿ ನಿರ್ಮಿಸಿರುವ ಈ…
ಕಾರು ಕಳ್ಳತನ ಪ್ರಕರಣ – ತನಿಖೆ ನಡೆಸಿ ಕಾರು ಮಾಲೀಕನನ್ನೆ ಬಂಧಿಸಿದ ಪೊಲೀಸರು : ವಿಶೇಷ ಪ್ರಕರಣ ಇಲ್ಲಿದೆ ನೋಡಿ…..!!!|theft
ಕಾರು ಕಳ್ಳತನದ ಪ್ರಕರಣವೊಂದರಲ್ಲಿ ದೂರು ನೀಡಿದ ಮಾಲೀಕ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಕಾರಿನ ಮಾಲೀಕ ಕಾರಿನ ಲೋನ್ ಹಣ ಕಟ್ಟದೆ ಫೈನಾನ್ಸ್ ಸಂಸ್ಥೆಗೆ ವಂಚಿಸಲು ಮತ್ತು ಇನ್ಸುರೆನ್ಸ್ ಹಣಕ್ಕಾಗಿ ತನ್ನ ಕಾರಿನ ನಂಬರ್ ಬದಲಾಯಿಸಿ, ಸ್ನೇಹಿತನ ಬಳಿ ಕೊಟ್ಟು ಕಳ್ಳತನದ ದೂರು ನೀಡಿದ್ದ ಎಂಬುದು ತನಿಖೆ ವೇಳೆ ಗೊತ್ತಾಗಿದೆ. ಶಿವಮೊಗ್ಗ ವಿದ್ಯಾನಗರದ ಚಂದ್ರು ಕುಮಾರ (28), ದಾವಣೆಗೆರೆ ಸರಸ್ವತಿ ನಗರದ ಪ್ರಶಾಂತ್ (29) ಬಂಧಿತರು. 14 ಮೇ 2022 ರಂದು ಸೂಳೆಬೈಲು ಸಮೀಪದ ಕುಂಚಿಟಿಗರ…
ಬಿಸಿಯೂಟ ಸೇವಿಸಿದ 15ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ – ಆಸ್ಪತ್ರೆಗೆ ದಾಖಲು|
ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಯ ಅಡಿಯಲ್ಲಿ ಮಾಡಿದಂತ ಊಟವನ್ನು ಸೇವಿಸಿದಂತ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಸಾಗರದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕೋಟೆಕೊಪ್ಪ ಸರ್ಕಾರಿ ಶಾಲೆಯಲ್ಲಿ ಗುರುವಾರ ಮಧ್ಯಾಹ್ನದ ಬಿಸಿಯೂಟವನ್ನು ಮಕ್ಕಳು ಸೇವಿಸಿದ್ದಾರೆ. ಈ ಬಳಿಕ ಮಕ್ಕಳಲ್ಲಿ ವಾಂತಿ, ಬೇಧಿ, ಜ್ವರ ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಸಾಗರದ ತಾಲೂಕು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದೆ. ನಿನ್ನೆಯ ಬಳಿಕ ಇಂದು ಕೂಡ ಕೆಲ ಮಕ್ಕಳಲ್ಲಿ ವಾಂತಿ, ಬೇಧಿ ಕಾಣಿಸಿಕೊಂಡ ಕಾರಣ, ಮತ್ತಷ್ಟು ಮಕ್ಕಳನ್ನು 25…
ರಿಪ್ಪನ್‌ಪೇಟೆ ಜಿಪಂ ಮತ್ತು ಹೊಸನಗರ ಜಿಪಂ ಕ್ಷೇತ್ರ ಮರುವಿಂಗಡಣೆ ಫ಼ುಲ್ ಕನ್ಫ್ಯೂಸ್ – ಪಟ್ಟಿ ಇಲ್ಲಿದೆ ನೋಡಿ|ZP
ರಿಪ್ಪನ್‌ಪೇಟೆ : ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಕರಡು ಪ್ರಕಟಿಸಿದೆ. ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಸಂಖ್ಯೆಯನ್ನು 31ಕ್ಕೆ ಸೀಮಿತಗೊಳಿಸಿದೆ. 2021ರಲ್ಲಿ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮರು ವಿಂಗಡಣೆ ಮಾಡಲಾಗಿತ್ತು. ಆಗ 5 ಕ್ಷೇತ್ರಗಳನ್ನು ಹೊಸದಾಗಿ ಸೇರ್ಪಡೆ ಮಾಡಲಾಗಿತ್ತು. ಸದ್ಯ ರಿಪ್ಪನ್‌ಪೇಟೆ ಹಾಗೂ ಹೊಸನಗರ ಜಿಪಂ ಸೀಮಾ ಗಡಿ ಗೊಂದಲಮಯವಾಗಿದ್ದು ಎತ್ತಣ ಮಾಮರ ಎತ್ತಣದ ಕೋಗಿಲೆ ಎಂಬಂತೆ ರಿಪ್ಪನ್ ಪೇಟೆ ಜಿಪಂ ಕ್ಷೇತ್ರವು ಸಾಗರ ಸಮೀಪದ ಹೆಬ್ಬೈಲು ಗ್ರಾಮಕ್ಕೆ ತಗುಲಿಕೊಂಡಿದ್ದು…