ಜಿಲ್ಲಾ ಸುದ್ದಿ:
ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ – ನಿಟ್ಟುಸಿರು ಬಿಟ್ಟ ಗ್ರಾಮಸ್ಥರು|leopard
ಶಿವಮೊಗ್ಗ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ಅರಣ್ಯ ಇಲಾಖೆಯಿಟ್ಟಿದ್ದ ಬೋನಿಗೆ ಚಿರತೆಯೊಂದು ಸೆರೆ ಸಿಕ್ಕಿರುವ ಘಟನೆ ನಡೆದಿದೆ. ಕಳೆದ ಕೆಲ ದಿನಗಳಿಂದ ಮಲ್ಲಾಪುರ ಗ್ರಾಮದ ಸುತ್ತಮುತ್ತಲಿನ ಹೊಲಗದ್ದೆ, ತೋಟಗಳಲ್ಲಿ ಎರಡು ಚಿರತೆಗಳು ಓಡಾಡುತ್ತಿದ್ದವು. ಇದು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿತ್ತು. ಚಿರತೆಗಳ ಸೆರೆಗೆ ಅರಣ್ಯ ಇಲಾಖೆಗೆ ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಆಯನೂರು ಅರಣ್ಯ ಇಲಾಖೆ ಸಿಬ್ಬಂದಿಗಳು ಚಿರತೆಗಳು ಓಡಾಡುವ ಸ್ಥಳದಲ್ಲಿ ಬೋನೊಂದನ್ನು ಇರಿಸಿದ್ದರು. ಮುಂಜಾನೆ ಚಿರತೆ ಬೋನಿನಲ್ಲಿ ಬಿದ್ದಿರುವುದು ಬೆಳಕಿಗೆ ಬಂದಿದೆ. ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಬೋನಿನಲ್ಲಿ…
ಹೊಸನಗರ : ಜೇನುನೊಣ ದಾಳಿ – ಒಂದೇ ಕುಟುಂಬದ 6 ಮಂದಿಗೆ ಗಾಯ | ಮೆಗ್ಗಾನ್ ಗೆ ದಾಖಲು
ಹೊಸನಗರ : ಜೇನು ಹುಳುಗಳ ದಾಳಿಯಿಂದ 6 ಜನ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ಸಮೀಪದ ಮಳಲಿ ಗ್ರಾಮದಲ್ಲಿ ನಡೆದಿದೆ. ಕೋಣಂದೂರು ಮೂಲದ ಒಂದೇ ಕುಟುಂಬದ 9 ಜನ ಮಳಲಿ ಗ್ರಾಮದಲ್ಲಿ ಫಿಶಿಂಗ್ ಮಾಡಲು ತೆರಳಿದ್ದಾರೆ.ಮಧ್ಯಾಹ್ನ ಕೆರೆಯ ಏರಿಯ ಮೇಲೆ ಊಟ ಮಾಡುತ್ತಿರುವಾಗ ಏಕಾಏಕಿ ಜೇನುನೊಣಗಳು ದಾಳಿ ಮಾಡಿದ್ದು ಆರು ಜನರಿಗೆ ಗಂಭೀರ ಗಾಯಗಳಾಗಿವೆ. ಕೋಣಂದೂರಿನ ಫಯಾಜ್ ಮತ್ತು ಇಂತಿಯಾಜ್ ಕುಟುಂಬ ಭಾನುವಾರವಾದ ಹಿನ್ನಲೆಯಲ್ಲಿ ಕುಟುಂಬದೊಂದಿಗೆ ಮಳಲಿ ಗ್ರಾಮದಲ್ಲಿ ಫಿಶಿಂಗ್ ಮಾಡಲು ತೆರಳಿದ್ದರು ಎನ್ನಲಾಗುತ್ತಿದೆ. ಗಾಯಾಳುಗಳನ್ನು…
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರ ಕವಿ ಕುವೆಂಪು ಹೆಸರು ಫಿಕ್ಸ್ – ಯಡಿಯೂರಪ್ಪ ಘೋಷಣೆ|airport
ಶಿವಮೊಗ್ಗದ ಸೋಗಾನೆಯಲ್ಲಿ ನಿರ್ಮಾಣವಾಗಿರುವ ವಿಮಾನ ನಿಲ್ಧಾಣಕ್ಕೆ ರಾಷ್ಟ್ರಕವಿ ಕುವೆಂಪುರವರ ಹೆಸರನ್ನು ಇಡಲಾಗುವುದು ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಘೋಷಿಸಿದ್ಧಾರೆ. ಈ ಸಂಬಂಧ ಶಿವಮೊಗ್ಗದಲ್ಲಿ ಮಾತನಾಡಿದ ಮಾಜಿ ಸಿಎಂ ಬಿಎಸ್ವೈ ಫೆಬ್ರವರಿ 27 ರಂದು ಪ್ರಧಾನಿ ನರೇಂದ್ರ ಮೋದಿ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ..ಈ ಸಂಬಂಧ ವಿಮಾನ ನಿಲ್ಧಾಣಕ್ಕೆ ರಾಷ್ಟ್ರಕವಿ ಕುವೆಂಪುರವರ ಹೆಸರನ್ನು ಇಡಲು ತೀರ್ಮಾನಿಸಿದ್ದೇವೆ. ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ಸರ್ವಾನುಮತದ ತೀರ್ಮಾನವನ್ನು ಕೈಗೊಂಡು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳಿಸಲಾಗುವುದು. ನರೇಂದ್ರ ಮೋದಿಯವರೇ ಈ ಹೆಸರನ್ನು ಘೋಷಿಸಲಿದ್ಧಾರೆ…
ಪ್ರೀತಿ ಮತ್ತು ಕ್ಷಮೆಯಿಂದ ಜಗತ್ತನ್ನೇ ಗೆಲ್ಲಬಹುದು – ಧರ್ಮಗುರು ರೋಷನ್ ಪಿಂಟೋ|church
ಪ್ರೀತಿ ಮತ್ತು ಕ್ಷಮೆಯಿಂದ ಜಗತ್ತನ್ನೇ ಗೆಲ್ಲಬಹುದು – ಧರ್ಮಗುರು ರೋಷನ್ ಪಿಂಟೋ ರಿಪ್ಪನ್‌ಪೇಟೆ : ಪ್ರೀತಿ ಮತ್ತು ಕ್ಷಮೆಯಿಂದ ಜಗತ್ತನ್ನೇ ಗೆಲ್ಲಬಹುದು ಎಂದು ತೋರಿಸಿಕೊಟ್ಟ ಪ್ರಭು ಏಸು ಸ್ವಾಮಿಯವರ ಶುಭ ಸಂದೇಶ ಇಂದಿಗೂ ಪ್ರಸ್ತುತ ಎಂದು ಶಿವಮೊಗ್ಗ ಮಲ್ಟಿಪಲ್ ಸೋಷಿಯಲ್ ಸರ್ವಿಸ್ ನಿರ್ದೇಶಕರಾದ ಧರ್ಮಗುರು ರೋಷನ್ ಪಿಂಟೋ ಹೇಳಿದರು. ಪಟ್ಟಣದ ಗುಡ್ ಶೆಪರ್ಡ್ ಚರ್ಚ್ ನ ವಾರ್ಷಿಕ ಹಬ್ಬದ ಅಂಗವಾಗಿ ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಶುಭ ಸಂದೇಶವನ್ನು ನೀಡಿದ ಅವರು ಸಮಾಜದಲ್ಲಿನ ಪ್ರತಿಯೊಬ್ಬರು ಪ್ರೀತಿಯನ್ನು…
ಶಿವಮೊಗ್ಗ ವಿಮಾನನಿಲ್ದಾಣಕ್ಕೆ ರಾಷ್ಟ್ರ ಕವಿ ಕುವೆಂಪು ಹೆಸರಿಡುವಂತೆ ಜೆಡಿಎಸ್ ಆಗ್ರಹ|airport
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರ ಕವಿ ಕುವೆಂಪು ಹೆಸರಿಡುವಂತೆ ಜೆಡಿಎಸ್ ಆಗ್ರಹ ರಿಪ್ಪನ್‌ಪೇಟೆ : ಇದೇ 27 ರಂದು ಪ್ರಧಾನಿ ನರೇಂದ್ರ ಮೋದಿ ಯಿಂದ ಲೋಕಾರ್ಪಣೆಗೊಳ್ಳಲಿರುವ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರ ಕವಿ ಕುವೆಂಪು ಹೆಸರಿಡುವುದು ಸೂಕ್ತ ಎಂದು ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಆರ್.ಎ.ಚಾಬುಸಾಬ್ ಸರ್ಕಾರವನ್ನು ಆಗ್ರಹಿಸಿದ್ದಾರೆ. ರಿಪ್ಪನ್‌ಪೇಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ರಾಜ್ಯದ ಮುಖ್ಯಮಂತ್ರಿಗಳಿಗೆ ಈ ಬಗ್ಗೆ ಪತ್ರ ಬರೆಯಲಾಗಿದ್ದು, ರಾಷ್ಟ್ರ ಕವಿ ಕುವೆಂಪು ಶಿವಮೊಗ್ಗ ಜಿಲ್ಲೆಯ ಮಲೆನಾಡಿನ ಪರ್ವತ ಶ್ರೇಣಿ ತಪ್ಪಲಿನ ತೀರ್ಥಹಳ್ಳಿಯವರಾಗಿದ್ದು…
ಶಿಕ್ಷಣ ಸಂಸ್ಥೆಗಳ ಸೇವಾ ಚಟುವಟಿಕೆಯಿಂದ ಮಕ್ಕಳಲ್ಲಿ ಮೌಲ್ಯ ಹೆಚ್ಚುತ್ತದೆ – ಚಿದಂಬರ|gurukula
ಶಿಕ್ಷಣ ಸಂಸ್ಥೆಗಳ ಸೇವಾ ಚಟುವಟಿಕೆಯಿಂದ ಮಕ್ಕಳಲ್ಲಿ ಮೌಲ್ಯ ಹೆಚ್ಚುತ್ತದೆ – ಚಿದಂಬರ ಹೊಸನಗರ : ಮಕ್ಕಳಲ್ಲಿ ಮಾನವೀಯ ಮೌಲ್ಯ ಹೆಚ್ಚಿಸಲು ಶಿಕ್ಷಣ ಸಂಸ್ಥೆಗಳು ಸೇವಾ ಚಟುವಟಿ ಹೆಚ್ಚಿಸಬೇಕು ಎಂದು ಮಾರುತಿಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಚಿದಂಬರ ಅಭಿಪ್ರಾಯಪಟ್ಟರು. ಇಂದು ತಾಲ್ಲೂಕಿನ ಬಟ್ಟೆಮಲ್ಲಪ್ಪ ಶ್ರೀ ವ್ಯಾಸ ಮಹರ್ಷಿ ಗುರುಕುಲದ ತ್ರಯೋದಶ ಪ್ರದರ್ಶಿನಿ ಕಾರ್ಯಕ್ರಮದ ಎರಡನೇ ಸೇವಾ ಚಟುವಟಿಕೆ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳ ಇಂದಿನ ಶಿಕ್ಷಣದಲ್ಲಿ ಮಾನವೀಯ ಮೌಲ್ಯ ಹೆಚ್ಚಿಸುವ ಪಠ್ಯ ಕೊರತೆ ಹೆಚ್ಚುತ್ತಿದೆ. ಮತ್ತೊಂದೆಡೆ…
ಬಡ ಬಾಲಕನ ಚಿಕಿತ್ಸೆಗೆ ವ್ಯವಸ್ಥೆ – ಮಾನವೀಯತೆ ಮೆರೆದ ಸಂಸದ ಬಿ ವೈ ರಾಘವೇಂದ್ರ|BYR
ಲೋ ಶುಗರ್ ಹಾಗೂ ಗ್ರೋತ್ ಆರ್ಗನ್ ಸಮಸ್ಯೆಯಿಂದ ಬಳಲುತ್ತಿದ್ದ 5 ವರ್ಷದ ಬಾಲಕನಿಗೆ ನಿರಂತರ ಚಿಕಿತ್ಸೆಗೆ ವ್ಯವಸ್ಥೆ ಮಾಡುವ ಮೂಲಕ ಸಂಸದ ಬಿ.ವೈ. ರಾಘವೇಂದ್ರ ಮಾನವೀಯತೆ ಮೆರೆದಿದ್ದಾರೆ. ಶಿವಮೊಗ್ಗ ತಾಲ್ಲೂಕಿನ ಇಟ್ಟಿಗೆ ಹಳ್ಳಿ ಗ್ರಾಮದಲ್ಲಿ ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ರಾಘವೇಂದ್ರ ಹಾಗೂ ಅಶ್ವಿನಿ ದಂಪತಿಗೆ ಇಬ್ಬರು ಮಕ್ಕಳು. ಮೊದಲನೆಯವನು ಎಲ್ಲರಂತೆಯೇ ಇದ್ದರೂ ಎರಡನೆಯ ಮಗು ಶ್ರೇಯಸ್‍ಗೆ 6 ತಿಂಗಳಿನಿಂದಲೇ ವಿಚಿತ್ರ ಸಮಸ್ಯೆ ಕಾಣಿಸಿಕೊಂಡಿತ್ತು. ಲೋ ಶುಗರ್‌ನಿಂದ ಬಳಲುತ್ತಿದ್ದ. ಜೊತೆಗೆ ಗ್ರೋತ್ ಆರ್ಗನ್ ಸಮಸ್ಯೆ ಕೂಡ…
ರಿಪ್ಪನ್‌ಪೇಟೆ : ಕರ್ಕಶ ಶಬ್ದ ಮಾಡುತಿದ್ದ ಬೈಕ್ ಸೈಲೆನ್ಸರ್ ಗಳನ್ನು ಸೈಲೆಂಟ್ ಮಾಡಿದ ಪೊಲೀಸರು|silencers
ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಡಿಫೆಕ್ಟಿವ್ ಸೈಲೆನ್ಸರ್ ಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತಿತ್ತು. ಈ ಹಿನ್ನೆಲೆ ಕರ್ಕಶ ಸೈಲೆನ್ಸರ್‌ಗಳನ್ನು ಅಳವಡಿಸಿಕೊಂಡಿರುವ ಬೈಕ್ ಗಳನ್ನು ವಶಪಡಿಸಿಕೊಂಡ ಪೊಲೀಸರು ಸೈಲೆನ್ಸರ್ ಬದಲಾಯಿಸಿ ಭಾರಿ ದಂಡದ ಬಿಸಿ ಮುಟ್ಟಿಸಿದ್ದಾರೆ. ವಾಹನಗಳ ಸೈಲೆನ್ಸರ್‌ಗಳನ್ನು ಮಾರ್ಪಾಡು ಮಾಡಿ ಬಳಸುವುದರಿಂದ ವಾಹನಗಳ ಮೈಲೇಜ್ ಕೂಡ ಕಡಿಮೆಯಾಗುತ್ತದೆ. ಆರ್‌ಟಿಒ ನಿಯಮಗಳ ಅನುಸಾರ ಇದು ತಪ್ಪ ಕೂಡ. ಶಬ್ದ ಹೆಚ್ಚು ಬರುವುದರಿಂದ ಶಬ್ದ ಮಾಲಿನ್ಯದ ಜೊತೆಗೆ ವೃದ್ಧರು, ರೋಗಿಗಳಿಗೆ ತೊಂದರೆ ಆಗುತ್ತೆ. ಆದರೂ ಇದರ ಬಳಕೆ ಮಾತ್ರ…
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಹನೀಯರ ಹೆಸರಿಡಿ – ನನ್ನದು ಕೇವಲ ಅಳಿಲು ಸೇವೆ – ಬಿ ಎಸ್ ಯಡಿಯೂರಪ್ಪ|BSY
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರು ಇಡುವುದು ಬೇಡ ಎಂದು ಮತ್ತೊಮ್ಮೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನಿರಾಕರಿಸಿದ್ದಾರೆ. ಈ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಶಿವಮೊಗ್ಗಕ್ಕೆ ಬಂದಾಗ, ವಿಮಾನ ನಿಲ್ಧಾಣಕ್ಕೆ ಬಿಎಸ್ವೈ ಹೆಸರನ್ನು ಇಟ್ಟು ದೆಹಲಿಗೆ ಪ್ರಸ್ತಾವನೆ ಕಳಿಸಲಾಗುವುದು ಎಂದು ತಿಳಿಸಿದ್ದರು. ಇದರ ಬೆನ್ನಲ್ಲೆ ಇದೀಗ ಶಿವಮೊಗ್ಗ ಏರ್‌ಪೋರ್ಟ್‌ಗೆ ತಮ್ಮ ಹೆಸರಿಡದಂತೆ ಬಿ.ಎಸ್.ಯಡಿಯೂರಪ್ಪ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರು ಇಡಲು ಮಾಡಿದ ನಿರ್ಧಾರವನ್ನು ಪುನರ್ ಪರಿಶೀಲಿಸುವಂತೆ ಹಾಗೂ…
ಫೆ.27 ಕ್ಕೆ ಶಿವಮೊಗ್ಗಕ್ಕೆ ಪ್ರಧಾನಿ ಮೋದಿ ಆಗಮನ – ಯಾವ್ಯಾವ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಗೊತ್ತಾ..??? ಈ ಸುದ್ದಿ ನೋಡಿ
ವಿಮಾನ ನಿಲ್ದಾಣ ಲೋಕಾರ್ಪಣೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಫೆಬ್ರವರಿ ೨೭ರಂದು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಸಿದ್ಧತೆಗಳ ಬಗ್ಗೆ ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ಗುರುವಾರ ಅಧಿಕಾರಿಗಳ ಪೂರ್ವಸಿದ್ಧತಾ ಸಭೆ ನಡೆಸಿದರು. ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಫೆಬ್ರವರಿ ೨೭ರಂದು ಪ್ರಧಾನಿ ಅವರು ಶಿವಮೊಗ್ಗ ಆಗಮಿಸುತ್ತಿದ್ದು, ವಿಮಾನ ನಿಲ್ದಾಣ ಲೋಕಾರ್ಪಣೆ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮ ಸುಸೂತ್ರವಾಗಿ ನಡೆಯಲು ಎಲ್ಲಾ ಇಲಾಖೆಗಳು ಸಮನ್ವ ಯದಿಂದ ಕಾರ್ಯನಿರ್ವಹಿಸಬೇಕು ಎಂದರು. ಪ್ರಧಾನಿ…