ಜಿಲ್ಲಾ ಸುದ್ದಿ:
ರಿಪ್ಪನ್‌ಪೇಟೆಯಲ್ಲಿ ಚಿರತೆ ದಾಳಿ ಪ್ರಕರಣ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಹರತಾಳು ಹಾಲಪ್ಪ|leopard
ರಿಪ್ಪನ್‌ಪೇಟೆ : ಶನಿವಾರ ತಡರಾತ್ರಿ ಪಟ್ಟಣದ ತೀರ್ಥಹಳ್ಳಿ ರಸ್ತೆಯ ಮಳವಳ್ಳಿ ಸಂಪರ್ಕ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷವಾಗಿ ಹಸುವೊಂದನ್ನು ಬಲಿ ಪಡೆದಿತ್ತು. ಮಳವಳ್ಳಿ ಗ್ರಾಮದ ಬಡ ರೈತ ವಿಶ್ವನಾಥ ಎಂಬುವವರ ಜೀವನಕ್ಕೆ ಆಸರೆಯಾಗಿದ್ದ ಹಸುವನ್ನು ಚಿರತೆ ಬಲಿ ಪಡೆದುಕೊಂಡ ಘಟನೆ ನಡೆದಿತ್ತು. ಮಳವಳ್ಳಿ ಗ್ರಾಮದಿಂದ ಶಾಲಾ ಕಾಲೇಜ್‌ಗೆ ಮತ್ತು ದಿನನಿತ್ಯದ ವ್ಯವಹಾರಕ್ಕಾಗಿ ಜನರು ಕಾಲ್ನಡಿಗೆಯಲ್ಲಿ ಬಂದು ಹೋಗುತ್ತಿದ್ದು ಈ ಘಟನೆಯಿಂದಾಗಿ ಗ್ರಾಮಸ್ಥರನ್ನು ಭಯಬೀತರನ್ನಾಗಿಸಿದೆ.ಓಡಾಡಲು ಭಯಪಡುವ ವಾತವರಣ ಸೃಷ್ಟಿಯಾಗಿದೆ. ಈ ಹಿನ್ನಲೆಯಲ್ಲಿ ಘಟನೆಯ ಕುರಿತು ತಕ್ಷಣ ಮಾಹಿತಿ ಪಡೆದುಕೊಂಡ ಸಾಗರ…
ರಿಪ್ಪನ್‌ಪೇಟೆಯಲ್ಲಿ ಚಿರತೆ ಪ್ರತ್ಯಕ್ಷ – ದಾಳಿಗೆ ಬಲಿಯಾದ ಹಸು : ಆತಂಕದಲ್ಲಿ ಗ್ರಾಮಸ್ಥರು|leopard
ರಿಪ್ಪನ್‌ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದಲ್ಲಿ ಶನಿವಾರ ತಡರಾತ್ರಿ ಚಿರತೆ ಪ್ರತ್ಯಕ್ಷವಾಗಿ ಜಾನುವಾರು ಬಲಿ ಪಡೆದುಕೊಂಡ ಘಟನೆ ನಡೆದಿದೆ. ರಿಪ್ಪನ್‌ಪೇಟೆ – ತೀರ್ಥಹಳ್ಳಿ ರಾಜ್ಯ ಹೆದ್ದಾರಿಯ ಸಮೀಪದ ಮಳವಳ್ಳಿ ಗ್ರಾಮದ ಸಂಪರ್ಕ ರಸ್ತೆಯ ಬದಿಯಲ್ಲಿ ತಡರಾತ್ರಿ ಚಿರತೆಯೊಂದು ಹಸುವಿನ ಮೇಲೆ ದಾಳಿ ನಡೆಸಿ, ಸಾಯಿಸಿ ಹಸುವಿನ ಹೊಟ್ಟೆಯೊಳಗಿದ್ದ ಕರುವನ್ನು ಎಳೆದು ಸುಮಾರು ನೂರು ಅಡಿಯಷ್ಟು ದೂರದಲ್ಲಿ ಎಳೆದು ಹಾಕಿ ಹೋಗಿರುವಂತಹ ಹೃದಯಾ ವಿದ್ರಾವಕ ಘಟನೆ ನಡೆದಿದೆ. ಮಳವಳ್ಳಿ ಗ್ರಾಮದ ಬಡ ರೈತ ವಿಶ್ವನಾಥ್…
ಭಾರತ ದೇಶದ ಅಭಿವೃದ್ಧಿಯಲ್ಲಿ ಬ್ರಾಹ್ಮಣ ಸಮಾಜದ ಕೊಡುಗೆ ಅಪಾರ : ಹರತಾಳು ಹಾಲಪ್ಪ|Ripponpet
ರಿಪ್ಪನ್‌ಪೇಟೆ : ಭವ್ಯ ಭಾರತ ದೇಶದ ಅಭಿವೃದ್ಧಿಯಲ್ಲಿ ಬ್ರಾಹ್ಮಣ ಸಮಾಜದ ಕೊಡುಗೆ ಅಪಾರವಾಗಿದೆ ಎಂದು ಸಾಗರ-ಹೊಸನಗರ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ಪಟ್ಟಣದ ಸಾಗರ ರಸ್ತೆಯಲ್ಲಿನ ಬ್ರಾಹ್ಮಣ ಸಮಾಜದ ಶ್ರೀರಾಮಮಂದಿರದ ಸಮುದಾಯ ಭವನದ ಮೇಲಂತಸ್ತು ಕಟ್ಟಡದ ಕಾಮಗಾರಿಯನ್ನು ವೀಕ್ಷಿಸಿ ನಂತರ ಬ್ರಾಹ್ಮಣ ಸಮಾಜದ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ದೇಶದ ಅಭಿವೃದ್ಧಿಯಲ್ಲಿ ಬ್ರಾಹ್ಮಣ ಸಮಾಜದ ಕೊಡುಗೆ ಅಪಾರವಾಗಿದೆ.ಧಾರ್ಮಿಕ ,ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿರುವ ಈ ಸಮಾಜ ದೇಶದ ಪ್ರಗತಿಯಲ್ಲಿ…
ಅಂಗನವಾಡಿ ಕಾರ್ಯಕರ್ತೆರಿಗೆ ಮತ್ತು ಸಹಾಯಕಿಯರಿಗೆ ಮನೆ ಮತ್ತು ಬಿಪಿಎಲ್ ಕಾರ್ಡ್ ಕಡ್ಡಾಯ ನೀಡುವಂತೆ ಸರ್ಕಾರಕ್ಕೆ ಒತ್ತಡ ಹೇರಲಾಗುವುದು : ಹರತಾಳು ಹಾಲಪ್ಪ|Ripponpet
ರಿಪ್ಪನ್‌ಪೇಟೆ : ಜಗತ್ತನ್ನು ವ್ಯಾಪಿಸಿದ್ದ ಕೊರೋನಾ ಮಹಾಮಾರಿ ರೋಗದ ಸಂದರ್ಭದಲ್ಲಿ ಅಂಗನವಾಡಿ ಆಶಾ ಮತ್ತು ಅರೋಗ್ಯ ಕಾರ್ಯಕರ್ತೆಯರು ತಮ್ಮ ಜೀವದ ಹಂಗು ತೊರೆದು ಶ್ರಮಿಸಿರುವುದು ಪ್ರಸಂಶನೀಯವಾಗಿದೆ ಅದರೆ ಅವರಿಗೆ ಕನಿಷ್ಟ ವೇತನವಿಲ್ಲದೆ ಪರದಾಡುವ ಸ್ಥಿತಿ ಇದ್ದರೂ ಕರ್ತವ್ಯವನ್ನು ಪ್ರಮಾಣಿಕವಾಗಿ ನಿರ್ವಹಿಸುತ್ತಿದ್ದಾರೆ ಇವರಿಗೆ ಇದೇ 19 ರಿಂದ ಅರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ನ್ಯಾಯಯುತ ಬೇಡಿಕೆಗೆ ಸ್ಪಂದಿಸಿ ಸರ್ಕಾರದ ಗಮನಸೆಳೆಯುವುದರೊಂದಿಗೆ ಪರಿಹಾರ ಕಲ್ಪಿಸುವ ಭರವಸೆಯನ್ನು ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ವ್ಯಕ್ತಪಡಿಸಿದರು. ರಿಪ್ಪನ್‌ಪೇಟೆಯ ಜ್ಯೋತಿಮಾಂಗಲ್ಯ…
ತೀರ್ಥಹಳ್ಳಿಯಲ್ಲಿ ಸಿನಿಹಬ್ಬ ಕಿರುಚಿತ್ರೋತ್ಸವ ಯಶಸ್ವಿ – ರಿಪ್ಪನ್‌ಪೇಟೆ ಮೂಲದ ಯುವ ನಿರ್ದೇಶಕ ಜಿಲ್ಸನ್ ನಿರ್ದೇಶನದ ಕಿರುಚಿತ್ರ ಪ್ರದರ್ಶನ|Short films
ತೀರ್ಥಹಳ್ಳಿ : ಡಿಸೆಂಬರ್ 15 ರಂದು ತೀರ್ಥಹಳ್ಳಿ “ಸಿನಿ ಹಬ್ಬ” ಕಿರು ಚಿತ್ರೋತ್ಸವ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮವನ್ನು ತೀರ್ಥಹಳ್ಳಿಯ ಕುರ್ಕುರೆ ಕ್ರಿಯೇಷನ್ಸ್ ತಂಡ ಆಯೋಜಿಸಿದ್ದು , ಶಿವಮೊಗ್ಗ ಸಿನಿಮಾಸ್ ಅಡ್ಡ ಹಾಗೂ ಸತ್ಯ ಪಿಚ್ಚರ್ಸ್ ಅವರು ಭಾಗಿಯಾಗಿದ್ದರು, ಕಾರ್ಯಕ್ರಮದಲ್ಲಿ ರಿಪ್ಪನ್‌ಪೇಟೆ ಮೂಲದ ಯುವ ನಿರ್ದೇಶಕ ಜಿಲ್ಸನ್ ಜೊಸೇಫ್ ನಿರ್ದೇಶನದ ಸಂಭಾಷಣೆ ಇಲ್ಲದ ಸಮಾಜಕ್ಕೆ ಉತ್ತಮ ಸಂದೇಶ ನೀಡುವಂತಹ ಕಿರುಚಿತ್ರ “ಎಕ್ಸಿಬಿಷನಿಸಂ ” ಸೇರಿದಂತೆ 6 ಕಿರು ಚಿತ್ರಗಳ ಪ್ರದರ್ಶನವನ್ನು ಮಾಡಲಾಗಿತ್ತು. ರಾಮಾ ರಾಮಾ ರೇ…
ಜೆಡಿಎಸ್ ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ಅರ್ ಎ ಚಾಬುಸಾಬ್ ನೇಮಕ|jds
ಜೆಡಿಎಸ್ ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ನಿವಾಸಿ ಆರ್. ಎ. ಚಾಬುಸಾಬ್ ಅವರನ್ನು ನೇಮಿಸಿ ಇಂದಿನಿಂದಲೇ ಕಾರ್ಯಪ್ರವೃತ್ತರಾಗಿ ಪಕ್ಷ ಸಂಘಟನೆಗೆ ಅಣಿಯಾಗುವಂತೆ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಆದೇಶ ನೀಡಿದ್ದಾರೆ. ಸುಮಾರು 30 ವರ್ಷಗಳಿಗೂ ಹೆಚ್ಚು ಕಾಲ ಜೆಡಿಎಸ್ ಪಕ್ಷದ ಕಟ್ಟಾಳಾಗಿ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿರುವ ಚಾಬುಸಾಬ್ ಅವರು ಎರಡನೇ ಬಾರಿಗೆ ರಾಜ್ಯ ಕಾರ್ಯದರ್ಶಿ ಹುದ್ದೆ ಅಲಂಕರಿಸುತ್ತಿದ್ದಾರೆ. ಮೊದಲಿಗೆ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಅಸ್ತಿತ್ವವೇ ಇಲ್ಲದೇ ಇರುವಾಗ ಪಕ್ಷ…
ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಉತ್ತಮ ವೇದಿಕೆ : ಹರತಾಳು ಹಾಲಪ್ಪ|Gfgc
ರಿಪ್ಪನ್‌ಪೇಟೆ : ಇಂದಿನ ವಿದ್ಯಾರ್ಥಿಗಳು ಕೀಳರೀಮೆಯನ್ನು ಬಿಟ್ಟು ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಂಡು ಸಮಾಜದ ಮುಖ್ಯ ವಾಹಿನಿಗೆ ಬರಬೇಕೆಂದು ಶಾಸಕ ಹರತಾಳು ಹಾಲಪ್ಪ ಹೇಳಿದರು. ರಿಪ್ಪನ್‌ಪೇಟೆಯ ಸರ್ಕಾರಿ ಪ್ರಥಮದರ್ಜೆ ಕಾಲೇಜ್‌ನಲ್ಲಿ ಆಯೋಜಿಸಲಾದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸನಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದೆ ಹಳ್ಳಿಯ ವಿದ್ಯಾರ್ಥಿಗಳು ಪಟ್ಟಣದ ಮತ್ತು ಶ್ರೀಮಂತರ ಹಾಗೂ ಕಾನ್ವಂಟ್ ಮಕ್ಕಳ ಮುಂದೆ ಕೀಳರೀಮೆಯಿಂದ ನಡೆದುಕೊಳ್ಳದೇ ಕಠಿಣ ಶ್ರಮ ವಹಿಸಿ ಅಭ್ಯಾಸ ಮಾಡಿದಾಗ ಮಾತ್ರ ಉತ್ತಮ ವ್ಯಕ್ತಿತ್ವದ ವಿದ್ಯಾರ್ಥಿಯಾಗಲು ಸಾಧ್ಯವಾಗುವುದೆಂದ ಅವರು…
H D ಕುಮಾರಸ್ವಾಮಿ ಮತ್ತೊಮ್ಮೆ ಮುಖ್ಯಮಂತ್ರಿಯಾಗಲೆಂದು ವರಸಿದ್ದಿ ವಿನಾಯಕನಲ್ಲಿ ಸಂಕಲ್ಪ ಪೂಜೆ :|jds
ರಿಪ್ಪನ್‌ಪೇಟೆ : ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರು ಮೊತ್ತೊಮ್ಮ ರಾಜ್ಯದ ಮುಖ್ಯಮಂತ್ರಿಯಾಗುವಂತೆ ಅವರ ಹುಟ್ಟುಹಬ್ಬದ ಅಂಗವಾಗಿ ರಿಪ್ಪನ್‌ಪೇಟೆಯ ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಅಭಿಮಾನಿಗಳು ಕಾರ್ಯಕರ್ತರು ಹಾಗೂ ಜೆಡಿಎಸ್ ಪಕ್ಷದ ಮುಖಂಡರು ಸಂಕಲ್ಪ ಪೂಜೆ ನೆರವೇರಿಸಿದರು. ಸಂಕಲ್ಪ ಪೂಜೆಯ ನಂತರ ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಆರ್.ಎ.ಚಾಬುಸಾಬ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಕುಮಾರಸ್ವಾಮಿ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ರೈತರ ಸಾಲ ಮನ್ನಾ ಯೋಜನೆ ಸೇರಿದಂತೆ ಹತ್ತು ಹಲವು ಜನಹಿತ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸುವುದರೊಂದಿಗೆ ಜನಾನುರಾಗಿಯಾಗಿದ್ದು…
ಅಂತರ್ ವಿಶ್ವವಿದ್ಯಾಲಯ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್‌ಪೇಟೆಯ ವಿದ್ಯಾರ್ಥಿಗಳು ಆಯ್ಕೆ|volleyball
ರಿಪ್ಪನ್‌ಪೇಟೆ : ತಮಿಳುನಾಡಿನಲ್ಲಿ ನಡೆಯುವ ಅಂತರ್ ವಿಶ್ವವಿದ್ಯಾಲಯದ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಡಿಸೆಂಬರ್ 23 ರಿಂದ 27 ರವರೆಗೆ ತಮಿಳುನಾಡಿನ ಚೆನ್ನೈನಲ್ಲಿ ನಡೆಯುವ ದಕ್ಷಿಣ ವಲಯದ ಅಂತರ್ ವಿಶ್ವವಿದ್ಯಾಲಯದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವ ಕುವೆಂಪು ವಿಶ್ವವಿದ್ಯಾಲಯದ ತಂಡಕ್ಕೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ತೃತೀಯ ಬಿಕಾಂ ವಿದ್ಯಾರ್ಥಿಗಳಾದ ಪ್ರಜ್ವಲ್ ಎನ್ ಎಂ ಮತ್ತು ಮಹಮ್ಮದ್ ಅರ್ಬಾಜ಼್ ಆಯ್ಕೆಯಾಗಿದ್ದಾರೆ. ವಿದ್ಯಾನಗರದ ನಿವಾಸಿಗಳಾದ ಮಹೇಶ್ವರಾಚಾರಿ ಮತ್ತು ಮೀನಾಕ್ಷಿ ದಂಪತಿಗಳ ಪುತ್ರನಾದ…
ಕುಗ್ರಾಮಗಳಲ್ಲಿ ಪತ್ರಕರ್ತರ ವಾಸ್ತವ್ಯ : ಗ್ರಾಮದ ಅಭಿವೃದ್ಧಿ ಕುರಿತು ಸರ್ಕಾರಕ್ಕೆ ಸಮಗ್ರ ವರದಿ|village stay
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಸ್ತಿತ್ವಕ್ಕೆ ಬಂದಾಗಿನಿಂದಲೂ ನೂತನ ಕಾರ್ಯಕ್ರಮಗಳಿಗೆ ನಾಂದಿ ಹಾಡಿದ್ದು, ಇದರ ಮುಂದುವರಿದ ಭಾಗವಾಗಿ ಜಿಲ್ಲೆಯಲ್ಲಿರುವ ಕುಗ್ರಾಮಗಳನ್ನು ಗುರುತಿಸಿ ಅಲ್ಲಿ ಗ್ರಾಮ ವಾಸ್ತವ್ಯವನ್ನು ಮಾಡುವ ಮೂಲಕ ಅಲ್ಲಿಯ ಸಮಸ್ಯೆಗಳನ್ನು ಸರ್ಕಾರಕ್ಕೆ ಮುಟ್ಟಿಸುವ ವಿಶೇಷ ಕಾರ್ಯಕ್ರಮವನ್ನು ರೂಪಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಗೋಪಾಲ್ ಎಸ್.ಯಡಗೆರೆ ಹೇಳಿದರು. ಇಲ್ಲಿನ ಪ್ರೆಸ್ ಟ್ರಸ್ಟ್ ನಲ್ಲಿ ಗುರುವಾರ (ಡಿ.೧೫) ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ನಮ್ಮ ನಡೆ ಸಮಾಜದ ಕಡೆ ಘೋಷಣೆಯಡಿ ಸಂಗವು ಈ ಕಾರ್ಯವನ್ನು ಕೈಗೆತ್ತಿಕೊಂಡಿದ್ದು, ಜಿಲ್ಲೆಯ ಅತ್ಯಂತ…