Headlines

ಶಿವಮೊಗ್ಗ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷಗಾದಿಗೆ ಚುನಾವಣೆಯಲ್ಲಿ ಡಿ ಮಂಜುನಾಥ್ ಜಯಭೇರಿ :

ಶಿವಮೊಗ್ಗ : ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷಗಾದಿಗೆ ಚುನಾವಣೆಯಲ್ಲಿ ಡಿ ಮಂಜುನಾಥ್ ಜಯಭೇರಿ ಬಾರಿಸಿದ್ದಾರೆಂದು ತಿಳಿದು ಬಂದಿದೆ. ಇಂದು ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷಗಾದಿಗೆ ನಡೆದ ಚುನಾವಣೆಯಲ್ಲಿ ಡಿ ಮಂಜುನಾಥ್ ಜಯಭೇರಿ ಬಾರಿಸಿದ್ದಾರೆ. ಡಿ ಮಂಜುನಾಥ್ ಅವರು ಹಿಂದಿನ ಅವಧಿಯಲ್ಲಿ ಅಧ್ಯಕ್ಷರಾಗಿದ್ದ ಡಿ.ಬಿ. ಶಂಕರಪ್ಪ ಇವರನ್ನು ಪರಾಭವ ಗೊಳಿಸಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

Read More

ಮಳೆಯ ಆರ್ಭಟಕ್ಕೆ ತತ್ತರಿಸಿದ ಮಲೆನಾಡ ರೈತರು : ಕೈಗೆ ಬಂದ ತುತ್ತು ಬಾಯಿಗೆ ಬರದ ಭೀತಿಯಲಿ ಅಡಿಕೆ ಬೆಳೆಗಾರರು !!!

ಶಿವಮೊಗ್ಗ : ಅಕಾಲಿಕ ಮಳೆಗೆ ಶಿವಮೊಗ್ಗ ಜಿಲ್ಲೆಯ ಜನತೆ ತತ್ತರಿಸಿದ್ದು, ಕಳೆದ 20 ದಿನಗಳಲ್ಲಿ 100 ಮಿ.ಮೀಗೂ ಅಧಿಕ ಮಳೆಯಾಗಿದ್ದು ರಾಜ್ಯಾದ್ಯಂತ ಸುರಿಯುತ್ತಿರುವ ಅಕಾಲಿಕ ಮಳೆ,ಗೆ ನೇರವಾಗಿ ಹೊಡೆತ ರೈತಾಪಿ ವರ್ಗಕ್ಕೆ. ಕಷ್ಟಪಟ್ಟು ಬೆಳೆದ ಬೆಳೆಗಳನ್ನು ಮಳೆಯ ಕಾರಣದಿಂದ ಸ್ವಲ್ಪ ಬೆಳೆ ಕೊಯ್ಲು ಮಾಡಿ ಕಟಾವು ಆದ ಬೆಳೆಗಳನ್ನು ಒಣಗಿಸಲೂ ಆಗದೆ, ಸಂಸ್ಕರಿಸಲು ಆಗದೆ, ಇತ್ತ ಹೊಲದಲ್ಲೂ ಬೆಳೆಯನ್ನು ಬಿಡಲೂ ಆಗದೆ ಹಾಳಾಗುವ ಪರಿಸ್ಥಿತಿ ರೈತನದ್ದಾಗಿದೆ. ಭಾರೀ ಮಳೆಯಿಂದಾಗಿ ಕಟಾವಿಗೆ ಬಂದ ಅಧಿಕ ಪ್ರಮಾಣದ ಭತ್ತದ ಬೆಳೆಗೆ…

Read More

ಜಿಲ್ಲೆಯಲ್ಲಿ ಚುರುಕುಗೊಂಡ ಮತದಾನ : ಸಂಜೆಯೇ ಫಲಿತಾಂಶ ಘೋಷಣೆ

ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಮತ್ತು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಇವತ್ತು ಚುನಾವಣೆ ನಡೆಯುತ್ತಿದೆ. ಬೆಳಗ್ಗೆ 8 ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಇವತ್ತು ಸಂಜೆ ವೇಳೆಗೆ ಕಸಾಪ ಶಿವಮೊಗ್ಗ ಘಟಕದ ನೂತನ ಸಾರಥಿ ಯಾರು ಅನ್ನುವುದು ಗೊತ್ತಾಗಲಿದೆ. ಶಿವಮೊಗ್ಗ ಜಿಲ್ಲೆಯಾದ್ಯಂತ 12 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಶಿಕಾರಿಪುರದಲ್ಲಿ 4, ಶಿವಮೊಗ್ಗದಲ್ಲಿ 3, ಉಳಿದ ತಾಲೂಕುಗಳಲ್ಲಿ ತಲಾ ಒಂದು ಮತಗಟ್ಟೆಯನ್ನು ಸ್ಥಾಪಿಸಲಾಗಿದೆ. 9,143 ಮತದಾರರು ಹಕ್ಕು ಚಲಾಯಿಸಲು ಅರ್ಹರಾಗಿದ್ದಾರೆ. ಶಿವಮೊಗ್ಗ ತಾಲೂಕಿನಲ್ಲಿ 2811 ಮತದಾರರಿದ್ದಾರೆ. ಭದ್ರಾವತಿಯಲ್ಲಿ 1202, ತೀರ್ಥಹಳ್ಳಿಯಲ್ಲಿ 730,…

Read More

ನನಗೆ ಜೀರೋ ಟ್ರಾಫಿಕ್ ಅವಶ್ಯಕತೆ ಇಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ : ನನಗೆ ಜೀರೋ ಟ್ರಾಫಿಕ್ ಅವಶ್ಯಕತೆ ಇಲ್ಲ. ನಾಲ್ಕು ಜೀಪು, ಮನೆ ತುಂಬ ಪೊಲೀಸರು ಕೊಟ್ಟಿದ್ದರು. ಅಲಂಕಾರಕ್ಕಾಗಿ ಇದೆಲ್ಲ ಬೇಡ ಎಂದು ನಾನು ಹೇಳಿದ್ದೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ  ಅವರು ಹೇಳಿದರು.  ನಗರದ ಸರ್ಕಾರಿ ಭವನದಲ್ಲಿ ಇಂದು ರಾಜ್ಯ ಸೌಹರ್ದ ಸಂಯುಕ್ತ ಸಹಕಾರಿ ನಿಯಮಿತ ಹಾಗೂ ಸಹ್ಯಾದ್ರಿ ಸೌಹರ್ದ ಸಹಕಾರಿ ಒಕ್ಕೂಟ ಸಂಯುಕ್ತ ಆಶ್ರಯದಲ್ಲಿ ಗೃಹ ಸಚಿವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸನ್ಮಾನ ಸ್ವೀಕರಿಸಿ ಗೃಹ ಸಚಿವರು ಮಾತನಾಡಿದರು. ಬಹಳ ಜನ ನನಗೆ…

Read More

ನಿನ್ನೆ ಆರತಕ್ಷತೆಯಲ್ಲಿ ಊಟ ಮಾಡಿದವರು ಇಂದು ಆಸ್ಪತ್ರೆಗೆ ದಾಖಲು : ಸುಮಾರು 150 ಕ್ಕೂ ಹೆಚ್ಚು ಜನರು ಅಸ್ವಸ್ಥ , ಎಲ್ಲಿ ಗೊತ್ತಾ ??

ಶಿವಮೊಗ್ಗ : ಇಲ್ಲಿನ ಸಮೀಪದ ಹರಮಘಟ್ಟದ ಆಲದಹಳ್ಳಿಯಲ್ಲಿ ನಿನ್ನೆ ಮದುವೆಯೊಂದರ ಆರತಕ್ಷತೆ ಕಾರ್ಯಕ್ರಮದಲ್ಲಿ ಊಟ ಮಾಡಿದ್ದ ಸುಮಾರು 60 ಕ್ಕೂ ಹೆಚ್ಚು ಜನರಿಗೆ ಫುಡ್ ಪಾಯಿಸನ್ ಆಗಿದ್ದು ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ  21 ಜನ ದಾಖಲಾಗಿದ್ದಾರೆ. ನಿನ್ನೆ ಆಲದಹಳ್ಳಿ ದೊಡ್ಡೇರಿ ಕುಟುಂಬದವರ ಎರಡು ಜೋಡಿ ಮದುವೆಯ ಆರತಕ್ಷತೆಗೆ ಹಾಜರಾದ ಹರಮಘಟ್ಟ ಮತ್ತು ಆಲದಹಳ್ಳಿ ಗ್ರಾಮಸ್ಥರು ನಿನ್ನೆ ರಾತ್ರಿ ಊಟ ಮಾಡಿದ್ದಾರೆ.ಮರುದಿನ ಮಧ್ಯಾಹ್ನದಿಂದ ರಿಯಾಕ್ಷನ್ ಆಗಲು ಆರಂಭವಾಗಿದೆ.ಕೆಲ ಗ್ರಾಮಸ್ಥರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಕೆಲವರು ಹೊಳೆಹೊನ್ನೂರು…

Read More

ಸಕ್ರೆಬೈಲಿನಲ್ಲಿ ಮರಿ ಆನೆಗೆ ಪುನೀತ್ ರಾಜ್ ಕುಮಾರ್ ಹೆಸರು ಇಡಲು ಕಾರಣವೇನು ? ಕಳೆದ ಬಾರಿ ಪುನೀತ್ ಆ ಮರಿ ಆನೆಯನ್ನು ಮುದ್ದಾಡಿದ್ದೇಕೆ? ಶರಾವತಿ ಇನ್ನುಮುಂದೆ ಪುನೀತ್ ರಾಜ್ ಕುಮಾರ್ !!!

ಶಿವಮೊಗ್ಗ : ಸಕ್ರೆಬೈಲು ಬಿಡಾರದ ಮರಿ ಆನೆಯೊಂದಕ್ಕೆ ನಟ ಪುನೀತ್ ರಾಜಕುಮಾರ್ ಅವರ ಹೆಸರು ಇಡಲಾಗಿದೆ. ಇವತ್ತು ವೀನಿಂಗ್ ಪ್ರಕ್ರಿಯೆ ವೇಳೆ ಮರಿ ಆನೆಗೆ ಪುನೀತ್ ಹೆಸರು ನಾಮಕರಣ ಮಾಡಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಸಕ್ರೆಬೈಲು ಬಿಡಾರದ ನೇತ್ರಾವತಿ ಅನೆಯ ಮರಿಗೆ ಪುನೀತ್ ರಾಜಕುಮಾರ್ ಅವರ ಹೆಸರನ್ನು ಇಡಲಾಗಿದೆ. ಡಾಕ್ಯೂಮೆಂಟರಿ ಒಂದರ ಚಿತ್ರೀಕರಣಕ್ಕಾಗಿ ನಟ ಪುನೀತ್ ರಾಜಕುಮಾರ್ ಅವರು ಸಕ್ರೆಬೈಲು ಬಿಡಾರಕ್ಕೆ ಭೇಟಿ ನೀಡಿದ್ದರು. ಆಗ ನೇತ್ರಾವತಿಯ ಮರಿ ಜೊತೆಗೆ ನಟ ಪುನೀತ್ ಕೆಲವು…

Read More

ಎಂಎಲ್ಸಿ ಚುನಾವಣೆ :: ಸಾರ್ವತ್ರಿಕ ಚುನಾವಣೆ ಮಾದರಿಯಲ್ಲಿ ನೀತಿ ಸಂಹಿತೆ ಕಟ್ಟುನಿಟ್ಟಿನಿಂದ ಜಾರಿ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಶಿವಮೊಗ್ಗ : ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯರ ದ್ವೈ ವಾರ್ಷಿಕ ಚುನಾವಣೆಯಲ್ಲಿ ಸಾರ್ವತ್ರಿಕ ಮತದಾನ ರೀತಿಯಲ್ಲಿ ಮಾದರಿ ನೀತಿ ಸಂಹಿತೆ ಅನ್ವಯವಾಗಲಿದ್ದು, ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೂಚನೆ ನೀಡಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ ನೀತಿ ಸಂಹಿತೆ ತಕ್ಷಣದಿಂದ ಜಾರಿಗೆ ಬಂದಿದ್ದು, ಡಿಸೆಂಬರ್ 16ರವರೆಗೆ ಜಾರಿಯಲ್ಲಿರುತ್ತದೆ ಎಂದು ಹೇಳಿದರು. ಮಾದರಿ ನೀತಿ ಸಂಹಿತೆ ಜನಪ್ರತಿನಿಧಿಗಳಿಗೆ ಮಾತ್ರವಲ್ಲದೆ ಅಧಿಕಾರಿಗಳು ಸೇರಿದಂತೆ ಪ್ರತಿಯೊಬ್ಬರಿಗೂ ಅನ್ವಯವಾಗುತ್ತದೆ. ನೀತಿ ಸಂಹಿತೆಗೆ…

Read More

ಚಲಿಸುತ್ತಿದ್ದ ರೈಲಿನಿಂದ ಬಿದ್ದ ಮಹಿಳೆ: ರೈಲ್ವೆ ಪೊಲೀಸರ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ..!

ಶಿವಮೊಗ್ಗ: ಚಲಿಸುತ್ತಿದ್ದ ರೈಲಿನಿಂದ ಮಹಿಳೆ ಆಯತಪ್ಪಿ ಬಿದ್ದ ಘಟನೆ ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಸಂಬಂಧಿಕರನ್ನು ಬಿಡಲು ರೈಲ್ವೆ ನಿಲ್ದಾಣಕ್ಕೆ ಬಂದಿದ್ದ ಮಹಿಳೆ ತಾಳಗುಪ್ಪದಿಂದ ಬೆಂಗಳೂರಿಗೆ ತೆರಳುವ ಇಂಟರ್‌ಸಿಟಿ ರೈಲಿನ ಒಳಗೆ ಪ್ರಯಾಣಿಕರೊಂದಿಗೆ ಹತ್ತಿದ್ದಾರೆ. ಬಳಿಕ ರೈಲು ಚಲಿಸಲು ಆರಂಭವಾಗುತ್ತಿದ್ದಂತೆ ಕೆಳಗೆ ಇಳಿಯಲು ಪ್ರಯತ್ನಿಸಿದ್ದು, ಈ ವೇಳೆ ಆಯತಪ್ಪಿ ರೈಲಿನಿಂದ ಬಿದ್ದಿದ್ದಾರೆ. ಕೂಡಲೇ ಸ್ಥಳದಲ್ಲಿದ್ದ ಆರ್‌ಪಿಎಫ್ ಸಿಬ್ಬಂದಿ ಜಗದೀಶ್, ರೈಲ್ವೆ ಪೊಲೀಸ್ ಅಣ್ಣಪ್ಪ ಹಾಗೂ ಸಂತೋಷ್ ಮಹಿಳೆಯನ್ನು ರಕ್ಷಿಸಿದ್ದಾರೆ. ರೈಲ್ವೆ ಪೊಲೀಸರ ಸಮಯ ಪ್ರಜ್ಞೆ ಅದೃಷ್ಟವಶಾತ್​ ಯಾವುದೇ…

Read More

ಮೆಗ್ಗಾನ್ ಆಸ್ಪತ್ರೆ ಐಸಿಯು ಮಕ್ಕಳ ವಿಭಾಗದಲ್ಲಿ ಬೆಂಕಿ ಅವಘಡ : ತಪ್ಪಿದ ಭಾರಿ ಅನಾಹುತ

ಶಿವಮೊಗ್ಗ : ಶಾರ್ಟ್ ಸರ್ಕ್ಯೂಟ್ ನಿಂದ ಶಿವಮೊಗ್ಗ ಸರ್ಕಾರಿ ಮೆಗ್ಗಾನ್ ಆಸ್ಪತ್ರೆ ಮಕ್ಕಳ ವಿಭಾಗದ ಐಸಿಯುನಲ್ಲಿ ಬೆಂಕಿ ಹತ್ತಿಕೊಂಡ ಘಟನೆ ನಡೆದಿದೆ. ನವಜಾತ ಶಿಶುಗಳ ವಾರ್ಡ ನ ಐಸಿಯು ವಿಭಾಗದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಅಲ್ಲಿದ್ದ ರೋಗಿಗಳನ್ನು ಪಕ್ಕದ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ. ಸದ್ಯ ಯಾವುದೇ ಪ್ರಾಣಾಪಾಯವಾಗಿಲ್ಲ.ಐಸಿಯು ನಲ್ಲಿ ಮೂರು ಜನ ಹಾಗೂ ಜನರಲ್ ವಾರ್ಡಿನಲ್ಲಿ 10 ರಿಂದ 15 ಜನ ಇದ್ದರು ಎಂದು ಹೇಳಲಾಗುತ್ತಿದೆ. ಬೆಂಕಿ ಅವಘಡದಲ್ಲಿ ರೋಗಿಗಳಿಗೆ ತಪಾಸಣೆ ಮಾಡುವ ಹಾಗೂ ಚಿಕಿತ್ಸೆ ನೀಡುತ್ತಿದ್ದ…

Read More

ಶಿವಮೊಗ್ಗಕ್ಕೆ ಆಗಮಿಸಿದ್ದ ನಟ ರಮೇಶ್ ಅರವಿಂದ್ : ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್

ಶಿವಮೊಗ್ಗ : ನಟ, ನಿರ್ದೇಶಕ ರಮೇಶ್ ಅರವಿಂದ್ ಇಂದು ಶಿವಮೊಗ್ಗದ ಶೋ ರೂಂ ಉದ್ಘಾಟನೆಗಾಗಿ ಆಗಮಿಸಿದ್ದರು. ಈ ವಿಷಯ ತಿಳಿಯುತ್ತಿದ್ದಂತೆ ಅವರ ಜೊತೆಗೆ ಸೆಲ್ಫಿ ತೆಗೆದುಕೊಳ್ಳಲು ಫ್ಯಾನ್ಸ್ ಗಳು ಮುಗಿಬಿದ್ದರು.  ಶೋ ರೂಂ ಉದ್ಘಾಟನೆ ನಂತರ ಮಾಧ್ಯಮದ ಜೊತೆ ಮಾತನಾಡಿ ಪುನೀತ್ ರಾಜಕುಮಾರ್ ಅವರನ್ನು ಕಳೆದುಕೊಂಡು ಅತೀ ದೊಡ್ಡ ನಷ್ಟ ಅನುಭವಿಸುತ್ತಿದ್ದೇವೆ. ನಮ್ಮೆಲ್ಲರೊಂದಿಗೆ ಅವರ ನೆನಪುಗಳಿವೆ. ನ. 16 ರಂದು ಅಪ್ಪು ವಿಗೆ ವಾಣಿಜ್ಯ ಮಂಡಳಿಯಿಂದ ನಮನ ಸಲ್ಲಿಸುವ ಕಾರ್ಯಕ್ರಮ ಇದೆ ಎಂದರು.  ಇನ್ನು ಬಿಡುಗಡೆಗೆ ಸಿದ್ದವಾಗಿರುವ…

Read More