ಜಿಲ್ಲಾ ಸುದ್ದಿ:
ರಾಷ್ಟ್ರಮಟ್ಟದ ಕಬ್ಬಡಿ ಪಂದ್ಯಾವಳಿಗೆ ಆಯ್ಕೆಯಾದ ಕು.ಶ್ರೇಯಾ ಮತ್ತು ಕು.ಶ್ರಾವ್ಯ|Kabbadi
ರಿಪ್ಪನ್‌ಪೇಟೆ : ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿಯರಾದ ಶ್ರೇಯಾ ಬಿ ಆರ್ ನಾಯಕ್ ಮತ್ತು ಶ್ರಾವ್ಯ ಹೆಚ್ ಓ ರವರು ಕಬ್ಬಡಿ ಪಂದ್ಯಾವಳಿಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ನ 22 ರ ಮಂಗಳವಾರ ರಾಮನಗರ ಜಿಲ್ಲೆಯ ಮಾಗಡಿಯಲ್ಲಿ ನಡೆದ ರಾಜ್ಯಮಟ್ಟದ 14 ವರ್ಷ ವಯೋಮಿತಿಯೊಳಗಿನ ಬಾಲಕಿಯರ ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಮುಂದಿನ ತಿಂಗಳು ಪಂಜಾಬ್ ನಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕಬ್ಬಡಿ ಪಂದ್ಯಾವಳಿಗೆ ಶ್ರೀ ಶಾರದ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿಯರಾದ ಶ್ರೇಯಾ…
ಬಹುದಿನಗಳ ಬೇಡಿಕೆಯ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಹರತಾಳು ಹಾಲಪ್ಪ|kenchanala
ಕೆಂಚನಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೊನ್ನಕೊಪ್ಪ ಮತ್ತು ಮಾಣಿಕೆರೆ ಮಸರೂರು ಸಂಪರ್ಕದ 60 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕ ಹಾಲಪ್ಪ ಹರತಾಳು ಚಾಲನೆ ನೀಡಿದರು. ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿ, ಹಳ್ಳಿ ಹಳ್ಳಿಗಳ ಅಭಿವೃದ್ಧಿಯಿಂದ ದೇಶದ ಅಭಿವೃದ್ದಿ ಸಾಧ್ಯವಾಗಿದ್ದು ಮೊದಲ ಆಧ್ಯತೆಯಾಗಿ ಗ್ರಾಮಗಳ ಅಭಿವೃದ್ದಿಗೆ ರಾಜ್ಯ ಮತ್ತು ಕೇಂದ್ರ ಸರ್ಕರ ಹೆಚ್ಚು ಒತ್ತು ನೀಡಿವೆ. ಬಹುದಿನಗಳ ಬೇಡಿಕೆಯನ್ನಾದರಿಸಿ ಅಧ್ಯತೆಯ ಮೇಲೆ ಕ್ಷೇತ್ರದ ಕೆರೆಹಳ್ಳಿ ಹೋಬಳಿಯ ಮಸರೂರು, ಮಾಣಿಕೆರೆ ಮತ್ತು ಹೊನ್ನಕೊಪ್ಪ, ಕೆಂಚನಾಲ…
ರಿಪ್ಪನ್‌ಪೇಟೆ : ಅದ್ಧೂರಿ ಕನ್ನಡ ರಾಜ್ಯೋತ್ಸವ ಸಂಭ್ರಮ – ಮೆರವಣಿಗೆಗೆ ಮೆರುಗು ನೀಡಿದ ಎತ್ತಿನಗಾಡಿ|Ripponpet
ರಿಪ್ಪನ್‌ಪೇಟೆ: ಪಟ್ಟಣದ ಕಲಾ ಕೌಸ್ತುಭ ಕನ್ನಡ ಸಂಘ ಶುಕ್ರವಾರ ಆಯೋಜಿಸಿದ್ದ 67ನೇ ಕರ್ನಾಟಕ ರಾಜ್ಯೋತ್ಸವದ ಅದ್ಧೂರಿ ಕನ್ನಡ ಸಂಭ್ರಮ ಆಕರ್ಷಕ ಜಾನಪದ ಕಲಾ ಪ್ರಕಾರ ಗಳು ಹಾಗೂ ಜಟಕಾ ಬಂಡಿ ಭವ್ಯ ಮೆರವಣಿಗೆಗೆ ಮೆರಗು ನೀಡಿತ್ತು . ಕಲಾ ಕೌಸ್ತುಭ ಕನ್ನಡ ಸಂಘದ ಮಾಜಿ ಅಧ್ಯಕ್ಷರಾದ ರಾಮಚಂದ್ರ (ಗ್ಯಾರೇಜ್ ರಾಮು) ಕನ್ನಡ ಧ್ವಜಾರೋಹಣ ನೆರವೇರಿಸಿದರು. ಬೆಳಿಗ್ಗೆ ಭುವನೇಶ್ವರಿ ದೇವಿಯ ಭವ್ಯ ಶೋಭಾ ಯಾತ್ರೆಗೆ ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷ ನಿರೂಪ್ ಕುಮಾರ್ ಚಾಲನೆ ನೀಡಿದರು.ಈ ಮೆರವಣಿಗೆಯಲ್ಲಿ…
ನಾಳೆ ಶಿವಮೊಗ್ಗಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ|CM
ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ನಾಳೆ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ಮಧ್ಯಾಹ್ನದ ವೇಳೆಗೆ ಶಿವಮೊಗ್ಗಕ್ಕೆ ಆಗಮಿಸಿ ಸಂಜೆ ಬೆಂಗಳೂರಿಗೆ ನಿರ್ಗಮಿಸುತ್ತಿದ್ದಾರೆ. ನವೆಂಬರ್ 25 ರ ಮಧ್ಯಾಹ್ನ 12.30 ಕ್ಕೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಟು ಮಧ್ಯಾಹ್ನ 1.50 ಕ್ಕೆ ಶಿವಮೊಗ್ಗದ ಸಕ್ರ್ಯೂಟ್ ಹೌಸ್ ಹೆಲಿಪ್ಯಾಡ್ ತಲುಪುವರು. ನಂತರ ಬಿಜೆಪಿ ವತಿಯಿಂದ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಂಜೆ 4.15 ಕ್ಕೆ ಸಕ್ರ್ಯೂಟ್ ಹೌಸ್ ಹೆಲಿಪ್ಯಾಡ್‍ನಿಂದ ಹೊರಟು ಸಂಜೆ 5.35 ಕ್ಕೆ ಬೆಂಗಳೂರಿನ ಹೆಚ್‍ಎಎಲ್ ವಿಮಾನ ನಿಲ್ದಾಣ ತಲುಪುವರು…
ಜನಾಕ್ರೋಶ ಪಾದಯಾತ್ರೆ ಡಬಲ್ ಇಂಜಿನ್ ಸರ್ಕಾರಕ್ಕೆ ಎಚ್ಚರಿಕೆಯ ಗಂಟೆಯಾಗಲಿದೆ : ಕಲಗೋಡು ರತ್ನಾಕರ್|Congress
ರಿಪ್ಪನ್‌ಪೇಟೆ : ಇದೇ 28 ರಂದು ಅಯನೂರಿನಿಂದ ಶಿವಮೊಗ್ಗಕ್ಕೆ ಹತ್ತು ಹಲವು ಸಮಸ್ಯೆಗಳ ಪರಿಹಾರಕ್ಕಾಗಿ ಜನಾಕ್ರೋಶ ಪಾದಯಾತ್ರೆ ಹಾಗೂ ಬೃಹತ್ ಸಮಾವೇಶವನ್ನು ಕೇಂದ್ರ ಮತ್ತು ರಾಜ್ಯದ ಡಬಲ್ ಇಂಜಿನ್ ಸರ್ಕಾರಕ್ಕೆ ಎಚ್ಚರಿಕೆಯ ಗಂಟೆಯಾಗಲಿದೆ ಎಂದು ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಕಲಗೋಡು ರತ್ನಾಕರ್ ಹೇಳಿದರು. ಉಳುವವನೇ ಹೊಲದೊಡೆಯ ಹೋರಾಟದ ಹಿನ್ನಲೆಯ ರಾಜ್ಯದ ಹಿರಿಯ ಸಮಾಜವಾದಿ ನಾಯಕ ಕಾಗೋಡು ತಿಮ್ಮಪ್ಪನವರ ಅಧ್ಯಕ್ಷತೆಯಲ್ಲಿ ನಡೆಯುವ ಜನಾಕ್ರೋಶ ಪಾದಯಾತ್ರೆ ಕುರಿತು ಬೆಳ್ಳೂರು, ಅರಸಾಳು ಹಾಗೂ ಕೆಂಚನಾಲ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ…
ಸಾವಿರಾರು ಗರ್ಭಿಣಿಯರ ಪಾಲಿನ ಮಹಾದೇವತೆ ರಿಪ್ಪನ್‌ಪೇಟೆಯ ಸೂಲಗಿತ್ತಿ ಜಯಮ್ಮ- ಸಾವಿರಾರು ಹೆರಿಗೆ ಮಾಡಿಸಿರುವ ಗಟ್ಟಿಗಿತ್ತಿಗೆ ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆಯಿಂದ ಸನ್ಮಾನ|Ripponpet
ರಿಪ್ಪನ್‌ಪೇಟೆ : ಅದೆಷ್ಟೋ ಜನರ ಪಾಲಿಗೆ ಆಕೆ ಮಹಾತಾಯಿ. ಸಾವಿರಾರು ಪುಟ್ಟ ಕಂದಮ್ಮಗಳಿಗೆ ಕೈಯೊಡ್ಡಿದ ಮಹಾಮಾತೆ. ಹೌದು ಅವರೇ ನಮ್ಮ ರಿಪ್ಪನ್‌ಪೇಟೆ ಪಟ್ಟಣದ ಹೆಮ್ಮೆಯ ಸೂಲಗಿತ್ತಿ ಜಯಲಕ್ಷ್ಮಿ. ಆಪತ್ಕಾಲದಲ್ಲಿ ಗರ್ಭಿಣಿ ಮಹಿಳೆಯರ ಸಹಾಯಕ್ಕೆ ಬರುವ ಈ ಸೂಲಗಿತ್ತಿಯ ಹೆಸರು ಜಯಲಕ್ಷ್ಮಿ,ಇವರು ಸುತ್ತಮುತ್ತಲಿನ ಹಳ್ಳಿಗಳಲ್ಲಿ ಸೂಲಗಿತ್ತಿ ಜಯಮ್ಮ ಅಂತಾನೇ ಫೇಮಸ್. ಸರಿಯಾಗಿ ವಿದ್ಯುತ್, ರಸ್ತೆ, ಆಸ್ಪತ್ರೆ ಇಲ್ಲದ ಕಾಲದಲ್ಲಿ ಕಾಡು-ಮೇಡು ದಾಟಿ ಪ್ರಸವ ವೇದನೆ ನಿವಾರಿಸುತ್ತಿದ್ದ ಗಟ್ಟಿಗಿತ್ತಿ. ಜಯಮ್ಮ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ಹೊಸನಗರ…
ಸಾಗರ : ಹರತಾಳು ಹಾಲಪ್ಪರ ಜಾಗ ಒತ್ತುವರಿ ಮಾಡಲು ಬಿಜೆಪಿ ಕಡೆ ಮುಖ ಮಾಡಿದರಾ ಪ್ರಶಾಂತ್ !?Sagara
ಹರತಾಳು ಹಾಲಪ್ಪರ ಜಾಗ ಒತ್ತುವರಿ ಮಾಡಲು ಬಿಜೆಪಿ ಕಡೆ ಮುಖ ಮಾಡಿದ್ರಾ ಕೆ ಎಸ್ ಪ್ರಶಾಂತ್ !? ಸಾಗರ : ರಾಜ್ಯ ವಿಧಾನಸಭೆ ಚುನಾವಣೆಗೆ ಈಗಾಗಲೇ ಪಕ್ಷಾಂತರ ಪರ್ವ ಪ್ರಾರಂಭವಾಗಿದೆ. ಕಳೆದ ವಾರ ಶಿಕಾರಿಪುರದ ಜೆಡಿಎಸ್ ಮುಖಂಡ ಹೆಚ್ ಟಿ ಬಳಿಗಾರ್ ಅವರು ಮಾಜಿ ಸಿಎಂ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು. ಈಗ ಮಾಜಿ ಸಂಸದ ಕೆ ಜಿ ಶಿವಪ್ಪ ಅವರ ಸುಪುತ್ರ ಕೆ ಎಸ್ ಪ್ರಶಾಂತ್ ಅವರು ಸಂಘ ಪರಿವಾರವಾದ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕ್ರಮದಲ್ಲಿ…
ಕಸ್ತೂರಿ ಕನ್ನಡ ಸಂಘದ ಆರೋಪ ರಾಜಕೀಯ ಪ್ರೇರಿತ – ನಿರೂಪ್ ಕುಮಾರ್|Ripponpet
ರಿಪ್ಪನ್‌ಪೇಟೆ : ಪಟ್ಟಣದ ಕಸ್ತೂರಿ ಕನ್ನಡ ಸಂಘದವರು ಕಳೆದ 28 ವರ್ಷಗಳಿಂದ ನಾಡು- ನುಡಿ ಜಲಕ್ಕೆ ಶ್ರಮಿಸಿದ ಕಲಾ ಕೌಸ್ತುಭ ಕನ್ನಡ ಸಂಘದ ಮೇಲೆ ಆರೋಪಿಸಿರುವುದು ರಾಜಕೀಯ ಪ್ರೇರಿತ ಎಂದು ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷ ನಿರೂಪ್ ಕುಮಾರ್ ಹೇಳಿದರು. ಇಂದು ಪಟ್ಟಣದ ಕುವೆಂಪು ಸಭಾಂಗಣದಲ್ಲಿ ಪತ್ರೀಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಕಸ್ತೂರಿ ಕನ್ನಡ ಸಂಘದವರು ಇಂದು ಪತ್ರೀಕಾ ಗೋಷ್ಟಿ ನಡೆಸಿ ಕಲಾ ಕೌಸ್ತುಭ ಕನ್ನಡ ಸಂಘವು ಅನ್ಯ ಭಾಷೆಗಳ ವೈಭವಿಕರಿಸುತ್ತಿದೆ ಎಂದು ಹೇಳಿರುವುದು…
ರಿಪ್ಪನ್‌ಪೇಟೆ : ಮದನ್ ಗೋಪಾಲ್ ವರದಿ ಯಥಾವತ್ ಅನುಷ್ಟಾನಕ್ಕೆ ಮಧು ಬಂಗಾರಪ್ಪ ಆಗ್ರಹ|Congress
ರಿಪ್ಪನ್‌ಪೇಟೆ;-ಈ ಹಿಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರ ಅವಧಿಯಲ್ಲಿ ಬಗರ್‌ಹುಕುಂ ರೈತರ ಮತ್ತು ಶರಾವತಿ ಮುಳಗಡೆ ಸಂತ್ರಸ್ಥ ರೈತರಿಗೆ ಭೂ ಒಡೆತನ ನೀಡುವ ಮಧನ್‌ಗೋಪಾಲ ವರದಿಯನ್ನು ರಾಜ್ಯ ಸರ್ಕಾರ ಯಥಾವತ್ ಜಾರಿಗೊಳಿಸಬೇಕು ಎಂದು ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಮಧುಬಂಗಾರಪ್ಪ ಅಗ್ರಹಿಸಿದರು. ರಿಪ್ಪನ್‌ಪೇಟೆಯ ಜ್ಯೋತಿ ಮಾಂಗಲ್ಯ ಮಂದಿರದಲ್ಲಿ ಅಯೋಜಿಸಲಾದ ಶರಾವತಿ ಮುಳುಗಡೆ ಸಂತ್ರಸ್ಥರಿಗೆ ಹಕ್ಕು ಪತ್ರ ಹಾಗೂ ಬಗರ್‌ಹುಕುಂ ರೈತರಿಗೆ ಹಕ್ಕು ಪತ್ರ ಸೇರಿದಂತೆ ಮಲೆನಾಡಿ ರೈತರ ಜನಾಕ್ರೋಶ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ…
ನವೆಂಬರ್ ತಿಂಗಳಿನಲ್ಲಿ ಅನ್ಯಭಾಷೆಗಳ ವೈಭವೀಕರಣ ಸಲ್ಲ – ಮೆಣಸೆ ಆನಂದ್|Ripponpet
ನವೆಂಬರ್ ತಿಂಗಳಲ್ಲಿ ಅನ್ಯ ಭಾಷೆಗಳ ವೈಭವೀಕರಣ ಸಲ್ಲ ರಿಪ್ಪನ್‌ಪೇಟೆ : ಕನ್ನಡ ಕಲರವದ ತಿಂಗಳಾದ ನವೆಂಬರ್ ನಲ್ಲಿ ಕನ್ನಡದ ಕಂಪು ರಾಜ್ಯಾದ್ಯಂತ ಮೇಳೈಸುತ್ತಿರುತ್ತದೆ.ಇಂತಹ ಸಂಧರ್ಭದಲ್ಲಿ ಕನ್ನಡ ಪರ ಸಂಘಟನೆಗಳು ಅನ್ಯ ಭಾಷೆಗಳ ವೈಭವಿಕರಿಸಿದರೆ ಕನ್ನಡದ ಅಸ್ತಿತ್ವಕ್ಕೆ ಧಕ್ಕೆ ಬಂದಂತಾಗುತ್ತದೆ ಎಂದು ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷ ಆನಂದ್ ಮೆಣಸೆ ಹೇಳಿದರು. ಇಂದು ಪಟ್ಟಣದ ಕುವೆಂಪು ಸಭಾಂಗಣದಲ್ಲಿ ಪತ್ರೀಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ನೆಲ ಜಲ ಉಳಿವಿಗಾಗಿ ಹೋರಾಟ ಮಾಡುವುದು ಎಲ್ಲಾ ಕನ್ನಡ ಸಂಘಗಳ ಉದ್ದೇಶ. ಕಲಾ ಕೌಸ್ತುಭ…